Breaking News

ಸಾವರ್ಕರ್ ಫೋಟೋ ವಿವಾದ: ವಿಧಾನಸಭೆ ಆವರಣದಲ್ಲಿ ಕಾಂಗ್ರೆಸ್ ಪ್ರತಿಭಟನೆ

ಬೆಳಗಾವಿ, ಡಿ. 19: ಚಳಿಗಾಲದ ಅಧಿವೇಶನ ಸೋಮವಾರದಿಂದ ಆರಂಭವಾಗಿದ್ದು, ವಿಡಿ ಸಾವರ್ಕರ್ ಭಾವಚಿತ್ರ ವಿವಾದ ಪ್ರತಿಭಟನೆಯ ಕಿಡಿ ಹೊತ್ತಿಸಿದೆ. ಮೊದಲ ದಿನವೇ ಕಾಂಗ್ರೆಸ್ ಬಿಜೆಪಿ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ ಮುಟ್ಟಿಸಲು ಪ್ರಯತ್ನಿಸಿದೆ. ವಿಧಾನಸಭೆ ಸಭಾಂಗಣದಲ್ಲಿ ವಿಡಿ ಸಾವರ್ಕರ್ ಅವರ ಭಾವಚಿತ್ರವನ್ನು ಅನಾವರಣಗೊಳಿಸಿರುವುದನ್ನು ವಿರೋಧಿಸಿ ವಿಧಾನಸಭೆಯ ಹೊರಗೆ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಇತರ ಕಾಂಗ್ರೆಸ್ ಶಾಸಕರು ಸುವರ್ಣಸೌಧದ ವಿಧಾನಸೌಧದ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಜವಾಹರ್ …

Read More »

ದರ್ಶನ್ ಮೇಲೆ ಚಪ್ಪಲಿ ಎಸೆತ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಚಿತಾ ರಾಮ್ ನಟನೆಯ ಕ್ರಾಂತಿ ಚಿತ್ರದ ಎರಡನೇ ಹಾಡು ‘ಬೊಂಬೆ ಬೊಂಬೆ’ಯನ್ನು ಬಳ್ಳಾರಿಯ ಹೊಸಪೇಟೆ ಪಟ್ಟಣದಲ್ಲಿ ಬಿಡುಗಡೆ ಮಾಡಲಾಯಿತು. ಅಲ್ಲಿನ ಡ್ಯಾಮ್ ರಸ್ತೆಯಲ್ಲಿರುವ ವಾಲ್ಮೀಕಿ ವೃತ್ತದಲ್ಲಿ ಹಾಡು ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.   ಕಾರ್ಯಕ್ರಮ ಆರಂಭವಾಗುವ ಮುನ್ನವೇ ಹೊಸಪೇಟೆಯಲ್ಲಿ ಪುನೀತ್ ರಾಜ್ ಕುಮಾರ್ ಹಾಗೂ ದರ್ಶನ್ ಅಭಿಮಾನಿಗಳ ನಡುವೆ ವಾರ್ ಶುರುವಾಗಿತ್ತು. ಕ್ರಾಂತಿ ಹಾಡು ಬಿಡುಗಡೆ ಸಮಾರಂಭದಲ್ಲಿ ಜಮಾಯಿಸಿದ್ದ ಪುನೀತ್ ಫ್ಯಾನ್ಸ್ ಅಪ್ಪು ಕಟ್ …

Read More »

ಬೆಳಗಾವಿ ಪ್ರವೇಶಕ್ಕೆ ಯತ್ನಿಸಿದ ಮಹಾರಾಷ್ಟ್ರದ ಕಾರ್ಯಕರ್ತರಿಗೆ ತಡೆ

ಬೆಳಗಾವಿ: ಮಹಾರಾಷ್ಟ್ರದಿಂದ ನಗರಕ್ಕೆ ಬರುತ್ತಿದ್ದ ವಿವಿಧ ಪಕ್ಷಗಳ ಕಾರ್ಯಕರ್ತರನ್ನು ನಿಪ್ಪಾಣಿ ತಾಲ್ಲೂಕಿನ ಕೊಗನೊಳ್ಳಿ ಚೆಕ್ ಪೋಸ್ಟ್ ಬಳಿ ಜಿಲ್ಲಾ ಪೊಲೀಸರು ಸೋಮವಾರ ತಡೆದಿದ್ದಾರೆ. ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕೆ ಪರ್ಯಾಯವಾಗಿ ಬೆಳಗಾವಿಯಲ್ಲಿ ಎಂಇಎಸ್ ಆಯೋಜಿಸಲು ಮುಂದಾಗಿದ್ದ ಮಹಾಮೇಳಾವದಲ್ಲಿ ಭಾಗವಹಿಸಲು ಕಾರ್ಯಕರ್ತರು ಬರುತ್ತಿದ್ದರು. ಆದರೆ, ಜಿಲ್ಲಾಡಳಿತ ಮಹಾಮೇಳಾವ್ ನಡೆಸಲು ಅನುಮತಿ ನಿರಾಕರಿಸಿದೆ. ಪೊಲೀಸರ ಎಚ್ಚರಿಕೆ ಹಿನ್ನೆಲೆಯಲ್ಲಿ ಎಂಇಎಸ್ ಕಾರ್ಯಕರ್ತರು ತಾವೇ ವೇದಿಕೆ ತೆರವುಗೊಳಿಸಿದ್ದಾರೆ‌. ಜಿಲ್ಲೆಯ ಗಡಿಯಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ

Read More »

21 ರಂದು ದಿಗಂಬರ ಜೈನ ಸಮಾಜದ ವತಿಯಿಂದ ಮೌನ ಪ್ರತಿಭಟನಾ ಮೆರವಣಿಗೆ

ಜಾರ್ಖಾಂಡ ರಾಜ್ಯದ ಗಿರಡಿ ಜಿಲ್ಲೆಯಲ್ಲಿರುವ ಜೈನರ ಪರಮೋಚ್ಚ ತೀರ್ಥ ಕ್ಷೇತ್ರ ಶ್ರೀ ಸಮ್ಮೇದಗಿರಿ ಉಳಿಸಿ, ಪ್ರವಾಸಿ ತಾಣವೆಂದು ಘೋಷಣೆ ರದ್ದುಪಡಿಸಿ ಜೈನ ಪವಿತ್ರ ಕ್ಷೇತ್ರವಾಗಿ ಘೋಷಿಸುವಂತೆ ಒತ್ತಾಯಿಸಿ ಡಿ. 21 ರಂದು ದಿಗಂಬರ ಜೈನ ಸಮಾಜದ ವತಿಯಿಂದ ಮೌನ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗುವುದು ಎಂದು ಜೈನ ಮುಖಂಡರಾದ ಮಹೇಂದ್ರ ಸಿಂಘಿ ಹೇಳಿದರು. ನಗರದಲ್ಲಿಂದು ಮಾದ್ಯಮ ವರದಿಗಾರರೊಂದಿಗೆ ಮಾತನಾಡಿದ ಅವರು, ಪಾರಸನಾಥ ಪರ್ವತ ಶ್ರೀ ಸಮ್ಮೇದಗಿರಿಯನ್ನು ಮತ್ತು ಸುತ್ತಲಿನ ಮಧುಬನ ಪ್ರದೇಶವನ್ನು …

Read More »

ಪಂ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ

ರಾಜ್ಯ ಗ್ರಾಪಂ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಪಂ ನೌಕರರ ಶ್ರೇಯೋಭಿವೃದ್ಧಿ ಸಂಘ ಸೋಮವಾರ ಸುವರ್ಣ ವಿಧಾನಸೌಧದ ಎದುರಿನ ಕೊಂಡುಸಕೊಪ್ಪ ಗ್ರಾಮದಲ್ಲಿ ಪ್ರತಿಭಟನೆ ನಡೆಸಿ‌ ಸರಕಾರಕ್ಕೆ ಒತ್ತಾಯಿಸಿದರು. ಗ್ರಾಪಂ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕ್ಲಕ್೯, ಬಿಲ್ ಕಲೆಕ್ಟರ್ ಹಾಗೂ ಡಾಟಾ ಎಂಟ್ರಿ ಆಪರೇಟರ್ ಗಳನ್ನು ಸಿ ದರ್ಜೆಯ ಮೇಲ್ದರ್ಜೆಗೆ ಏರಿಸಬೇಕು‌ ಮತ್ತು ಅಟೆಂಡರ್, ಕ್ಲೀನರ್ಸ್, ವಾಟರ್ ಮ್ಯಾನ್ ಮೊದಲಾದ ಹುದ್ದೆಯನ್ನು ಡಿ ದರ್ಜೆಯ ಮೇಲ್ದರ್ಜೆಗೇರಿಸುವ ಮೂಲಕ …

Read More »

ಅಂಬೇಡ್ಕರ್ ಕುರಿತು ಅವಹೇಳನ : ಮಸಿ ದಾಳಿಗೆ ಭೀತಿಗೆ ಫೇಸ್ ಶೀಲ್ಡ್ ಧರಿಸಿದ ಬಿಜೆಪಿ ಸಚಿವ

ಮುಂಬೈ, ಡಿ. 18: ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಜ್ಯೋತಿಬಾ ಫುಲೆ ಅವರ ಬಗ್ಗೆ ಹಗುರವಾಗಿ ಮಾತನಾಡಿ ಅವಮಾನ ಮಾಡಿದ್ದಾರೆ ಎಂದು ಮಹಾರಾಷ್ಟ್ರ ಸಚಿವರ ಮೇಲೆ ಕಳೆದ ವಾರ ಮಸಿ ದಾಳಿ ನಡೆಸಲಾಗಿತ್ತು. ಇದರಿಂದ ಎಚ್ಚೆತ್ತುಕೊಂಡಿರುವ ಶಿಕ್ಷಣ ಸಚಿವ ಚಂದ್ರಕಾಂತ್ ಪಾಟೀಲ್ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸುವಾಗ ಫೇಸ್ ಶೀಲ್ಡ್ ಧರಿಸಿ ಅಚ್ಚರಿ ಮೂಡಿಸಿದ್ದಾರೆ.   ಮಹಾರಾಷ್ಟ್ರದ ಉನ್ನತ ಶಿಕ್ಷಣ ಸಚಿವ ಚಂದ್ರಕಾಂತ್ ಪಾಟೀಲ್ ಪಿಂಪ್ರಿ ಚಿಂಚ್‌ವಾಡ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ …

Read More »

ಜನವರಿ 1 ರೊಳಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧ

ಬೆಳಗಾವಿ, ಡಿಸೆಂಬರ್ 19: ಜನವರಿ 1 ರೊಳಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನ ಪ್ರಕಟಿಸಲು ಸಿದ್ದಪಡಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮುನ್ನ ಪಕ್ಷದ ಆಧಾರ ಸ್ಥಂಭವಾಗಿರುವ ಬ್ಲಾಕ್ ಕಾಂಗ್ರೆಸ್, ಜಿಲ್ಲಾ ಕಾಂಗ್ರೆಸ್ ಹಾಗೂ ವಿವಿಧ ಘಟಕಗಳ ಮುಖಂಡರ ಜೊತೆ ಚರ್ಚೆ ಮಾಡಿ ಅವರ ಅಭಿಪ್ರಾಯ ಪಡೆಯಲಾಗುವುದು. ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಧ್ವನಿ ಪಕ್ಷದ …

Read More »

ಮಹಾ ಅಧಿವೇಶನದಲ್ಲಿ ಬೆಳಗಾವಿ ವಿವಾದ ಪ್ರತಿಧ್ವನಿಸುವ ನಿರೀಕ್ಷೆ

ಮುಂಬೈ: ಸೋಮವಾರದಿಂದ ನಾಗ್ಪುರದಲ್ಲಿ ಆರಂಭವಾಗಲಿರುವ ಮಹಾರಾಷ್ಟ್ರ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಕುರಿತು ರಾಜ್ಯಪಾಲ ಭಗತ್‌ಸಿಂಗ್‌ ಕೋಶಿಯಾರಿ ಅವರ ಹೇಳಿಕೆ ಪ್ರತಿಧ್ವನಿಸುವ ನಿರೀಕ್ಷೆ ಇದೆ.   “ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದ ಪ್ರಸ್ತಾವನೆಯನ್ನು ಚಳಿಗಾಲದ ಅಧಿವೇಶನದಲ್ಲಿ ಅಂಗೀಕರಿಸಲಾಗುವುದು,’ ಎಂದು ಡಿಸಿಎಂ ದೇವೇಂದ್ರ ಫ‌ಡ್ನವೀಸ್‌ ಹೇಳಿದ್ದಾರೆ. ಇದೇ ವೇಳೆ, “ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೊಂದಿಗೆ ನಡೆಸಿರುವ ಮಾತುಕತೆಯನ್ನು …

Read More »

ಇಂದಿನಿಂದ ಬೆಳಗಾವಿ ಸುವರ್ಣಸೌಧದಲ್ಲಿ ವಿಧಾನಮಂಡಲ ಕಲಾಪ

ಬೆಳಗಾವಿ: ಕುಂದನಗರಿಯ ಸುವರ್ಣಸೌಧದಲ್ಲಿ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಬೆಳಗಾವಿ ಗಡಿ ವಿವಾದ, ಮತದಾರರ ಮಾಹಿತಿ ಕಳವು, 40 ಪರ್ಸೆಂಟ್‌ ಕಮಿಷನ್‌, ಕುಕ್ಕರ್‌ ಬ್ಲಾಸ್ಟ್‌ ವಿವಾದಾತ್ಮಕ ಹೇಳಿಕೆ, ಕಬ್ಬು ಬೆಳೆಗಾರರ ಪ್ರತಿಭಟನೆ ಬಲವಾದ ಸದ್ದು ಮಾಡುವ ಲಕ್ಷಣಗಳು ಕಂಡುಬರುತ್ತಿವೆ.   ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ನಡೆ ಯುತ್ತಿರುವ ಈ ಬಾರಿಯ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ರಾಜಕೀಯ ಜಿದ್ದಾ ಜಿದ್ದಿ ವಿಚಾರಗಳೇ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಬೆಳಗಾವಿ ಗಡಿಯಲ್ಲಿ ಮಹಾರಾಷ್ಟ್ರದ ಕಿರಿಕಿರಿ, ಮತದಾರರ ಮಾಹಿತಿ …

Read More »

ಮರಾಠಿ ಮಹಾಮೇಳಾವ್ ಗೆ ಅನುಮತಿ ನಿರಾಕರಣೆ: ವೇದಿಕೆ ತೆರವುಗೊಳಿಸಿದ ಅಲೋಕ ಕುಮಾರ್

ಬೆಳಗಾವಿ: ವಿಧಾನ ಮಂಡಲ ಚಳಿಗಾಲ ಅಧಿವೇಶನದಂದು ಕರ್ನಾಟಕ ಸರ್ಕಾರಕ್ಕೆ ಸಡ್ಡು ಹೊಡೆಯಲು ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜಿಸಿದ್ದ ಮರಾಠಿ ಮಹಾಮೇಳಾವಕ್ಕೆ ಪೊಲೀಸರು ಅನುಮತಿ ನಿರಾಕರಿಸಿದ್ದು, ಇಂದು ನಡೆಯಬೇಕಿದ್ದ ಮಹಾಮೇಳಾವ ರದ್ದುಗೊಂಡಿದೆ.   ನಗರದ ವ್ಯಾಕ್ಸಿನ್ ಡಿಪೋ ಮೈದಾನದಲ್ಲಿ ಹಮ್ಮಿಕೊಂಡಿದ್ದ ಮಹಾಮೇಳಾವ್ ವೇದಿಕೆಯನ್ನು ತೆರವುಗೊಳಿಸಲಾಯಿತು. ಎಡಿಜಿಪಿ ಅಲೋಕ ಕುಮಾರ್ ಹಾಗೂ ಬೆಳಗಾವಿ ನಗರ ಡಿಸಿಪಿ ರವೀಂದ್ರ ಗಡಾದಿ ಸ್ಥಳಕ್ಕೆ ಭೇಟಿ ನೀಡಿ ವೇದಿಕೆಯನ್ನು ತೆರವುಗೊಳಿಸಿದರು. ಯಾವುದೇ ಸಭೆ ಸಮಾರಂಭ ಆಯೋಜಿಸದಂತೆ ತಾಕೀತು …

Read More »