Breaking News

ಖಾತೆಗೆ 5 ಸಾವಿರ ರೂ. ವರ್ಗಾವಣೆಗೆ ಇಂದು ಸಿಎಂ ಚಾಲನೆ; ನೇಕಾರ ಸಮ್ಮಾನ್ ಯೋಜನೆಯಡಿ ನೆರವು

ಬೆಂಗಳೂರು: ಕೈಮಗ್ಗ ನೇಕಾರರಿಗೆ ತಲಾ 5000 ರೂ. ಖಾತೆಗೆ ಜಮಾ ಮಾಡಲಾಗುವುದು. ನೇಕಾರ ಸಮ್ಮಾನ್ ಯೋಜನೆಯಡಿ ಈ ವರ್ಷದ ಹಣ ವರ್ಗಾವಣೆಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು, ನೇರ ನಗದು ವರ್ಗಾವಣೆಯ ಮೂಲಕ ಕೈಮಗ್ಗ ನೇಕಾರರಿಗೆ ವಾರ್ಷಿಕ ಆರ್ಥಿಕ ನೆರವು ತಲಾ 5000 ರೂ. ನಂತೆ 23.43 ಕೋಟಿ ರೂ. ಮೊತ್ತವನ್ನು ಬ್ಯಾಂಕ್ ಖಾತೆಗಳಿಗೆ …

Read More »

ಪ್ರತಿಷ್ಠಿತ ಬ್ಯಾಂಕ್​​ನಲ್ಲಿಟ್ಟಿದ್ದ ಚಿನ್ನ ಮಾಯ

ಕಳ್ಳಕಾಕರ ಭಯದಿಂದ ಜನಸಾಮಾನ್ಯರು ತಮ್ಮ ಹಣ ಹಾಗೂ ಚಿನ್ನ ಸುರಕ್ಷಿತವಾಗಿರುತ್ತೆ ಅಂತ ಬ್ಯಾಂಕ್​ನಲ್ಲಿಡುತ್ತಾರೆ. ಆದ್ರೆ ಆ ಬ್ಯಾಂಕ್​ನಲ್ಲಿಟ್ಟ ಹಣವೇ ಮಂಗಮಾಯವಾದ್ರೆ.. ಇಂಥ ಶಾಕಿಂಗ್ ಸುದ್ದಿಯಿಂದ ಕುಟುಂಬವೊಂದು ಕಂಗಾಲಾಗಿದೆ. ಬ್ಯಾಂಕ್ ಅಂದ್ರೆ ಜನಸಾಮಾನ್ಯರ ದುಡ್ಡಿನ ಹಾಗೂ ಚಿನ್ನದ ಸೆಕ್ಯೂರಿಟಿ ಗಾರ್ಡ್. ಕಷ್ಟ ಪಟ್ಟು ದುಡಿದು ಸಂಪಾದಿಸಿದ ಹಣ ಅಥವಾ ಕೊಂಡುಕೊಂಡ ಚಿನ್ನವನ್ನ ಮನೆಯಲ್ಲಿಟ್ರೆ ಯಾವಾಗ ಅದ್ಯಾವ ಖದೀಮರು ಮನೆಗೆ ನುಗ್ಗಿ ಎಸ್ಕೇಪ್ ಮಾಡಿಬಿಡ್ತಾರೋ ಅನ್ನೋ ಭಯಕ್ಕೆ ಜನ ಬ್ಯಾಂಕ್​ಗಳಲ್ಲಿ ಠೇವಣಿ ಇಡ್ತಾರೆ. …

Read More »

ಕಳ್ಳರು ಕದ್ದ ಬಂಗಾರವನ್ನು ಖರೀದಿ ಮಾಡುತ್ತಿರುವ ಆರೋಪ ಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಅರೆಸ್ಟ್

ಬೆಂಗಳೂರು: ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಬಾಬು ಅವರನ್ನು ಆಂಧ್ರ ಪ್ರದೇಶ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಕಳ್ಳರು ಕದ್ದ ಬಂಗಾರವನ್ನು ಖರೀದಿ ಮಾಡುತ್ತಿರುವ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಬಾಬು ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಹೈಗ್ರೌಂಡ್ ಠಾಣಾ ವ್ಯಾಪಿಯಲ್ಲಿರುವ ಅಟ್ಟಿಕಾ ಗೋಲ್ಡ್ ಬಾಬು ನಿವಾಸದಲ್ಲಿ ಸಿಸಿಬಿ ಪೊಲೀಸರ ಸಹಾಯದೊಂದಿಗೆ ಆಂಧ್ರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ವಿಚಾರಣೆಗಾಗಿ ಬಂಧಿಸಿ ಆಂಧ್ರಪ್ರದೇಶಕ್ಕೆ ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.

Read More »

ಕುಷ್ಟಗಿ: ಶಾಸಕ ಬಯ್ಯಾಪುರ ಹುಟ್ಟುಹಬ್ಬಕ್ಕೆ ಸಿದ್ದು, ಡಿಕೆಶಿ ಒಂದೇ ಹೆಲಿಕಾಪ್ಟರ್ ನಲ್ಲಿ ಆಗಮನ

ಕುಷ್ಟಗಿ: ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ ಅವರ 69ನೇ ಹುಟ್ಟುಹಬ್ಬದ ಪ್ರಯುಕ್ತ ಶುಕ್ರವಾರ ಕಾಂಗ್ರೆಸ್ ಬಲ ಪ್ರದರ್ಶನಕ್ಕೆ ಸಜ್ಜಾಗಿದೆ. ಮುಂದಿನ ಚುನಾವಣೆ ಗಮನದಲ್ಲಿಟ್ಟುಕೊಂಡು ಶಾಸಕ ಬಯ್ಯಾಪುರ ಅವರ ಹುಟ್ಟುಹಬ್ಬದ ಆಚರಣೆ ಹಾಗೂ ಕೈ ಕಾರ್ಯಕರ್ತರ ಸಮಾವೇಶ ಹಮ್ಮಿಕೊಂಡಿದೆ.   ಈ ಕಾರ್ಯಕ್ರಮದ ಮುಖ್ಯ ಆಕರ್ಷಣೆಯ ಕೇಂದ್ರ ಬಿಂದು ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅದ್ಯಕ್ಷ ಡಿ.ಕೆ.ಶಿವಕುಮಾರ ಆಗಿದ್ದಾರೆ. ಇವರಿಬ್ಬರೂ ಬೆಂಗಳೂರಿನ ಜಕ್ಕೂರುನಿಂದ ಹೆಲಿಕಾಪ್ಟರ್ ಮೂಲಕ ಕುಷ್ಟಗಿ ಸಮೀಪದ ಬೀರಲದಿನ್ನಿ …

Read More »

ಚಿನ್ನಾಭರಣ ಮರಳಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುದ್ದೇಬಿಹಾಳ ಸಾರಿಗೆ ಘಟಕದ ಚಾಲಕ ಕಂ ನಿರ್ವಾಹಕ ಸಿ.ಆರ್.ಪತ್ತೇಪೂರ ಅವರು ಪ್ರಯಾಣಿಕರೊಬ್ಬರು ಬಸ್‍ನಲ್ಲಿ ಬಿಟ್ಟು ಹೋಗಿದ್ದ ಅಂದಾಜು 3 ಲಕ್ಷ ಮೌಲ್ಯದ ಚಿನ್ನದ ಸಾಮಗ್ರಿ ಇರುವ ಬ್ಯಾಗ್ ಅನ್ನು ವಾರಸುದಾರರಿಗೆ ಮರಳಿಗೆ ಪ್ರಾಮಾಣಿಕತೆ ಮೆರೆದ ಘಟನೆ ನಡೆದಿದೆ. ಮುದ್ದೇಬಿಹಾಳ- ನಾಲತವಾಡ-ನಾರಾಯಣಪುರ ತಡೆ ರಹಿತ ಬಸ್‍ಗೆ ಪತ್ತೇಪೂರ ಅವರು ಚಾಲಕ ಕಂ ನಿರ್ವಾಹಕರಾಗಿ ಕರ್ತವ್ಯದಲ್ಲಿದ್ದರು. ಸಂಜೆ 6 ಗಂಟೆ ಸುಮಾರಿಗೆ ಮುದ್ದೇಬಿಹಾಳದಿಂದ ನಾಲತವಾಡಕ್ಕೆ ಪ್ರಯಾಣಿಸಿದ್ದ …

Read More »

ಬಿಸಿಯೂಟ ಅಡುಗೆ ಸಿಬಂದಿಗೂ ವಿಶೇಷ ತರಬೇತಿಗೆ ಇಲಾಖೆ ಸಿದ್ಧತೆ

ದಾವಣಗೆರೆ: ರಾಜ್ಯ ಸರಕಾರದ ಕರ್ನಾಟಕ ಮೌಲ್ಯಮಾಪನ ಪ್ರಾಧಿಕಾರ ಹಾಗೂ ಸಾಮಾಜಿಕ ಪರಿಶೋಧನ ನಿರ್ದೇಶನಾಲಯವು ಶಾಲೆಗಳಲ್ಲಿ ಮಧ್ಯಾಹ್ನದ ಉಪಹಾರ ಯೋಜನೆಗೆ ಸಂಬಂಧಿಸಿ ಶುಚಿತ್ವ-ವ್ಯವಸ್ಥಿತ ನಿರ್ವಹಣೆ ಕುರಿತು ನೀಡಿದ ಮಹತ್ವದ ಶಿಫಾರಸುಗಳಿಗೆ ಪೂರಕವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ, ರಾಜ್ಯದ ಎಲ್ಲ ಶಾಲೆಗಳ ಬಿಸಿಯೂಟ ಯೋಜನೆಯ ಅಡುಗೆ ಸಿಬಂದಿಗೆ ವಿಶೇಷ ತರಬೇತಿ ನೀಡಲು ಮುಂದಾಗಿದೆ.   ಶಾಲಾ ಅಡುಗೆ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಸಿಬಂದಿಗೆ ಪ್ರಸಕ್ತ ತಿಂಗಳಲ್ಲೇ ಒಂದು ದಿನದ ತರಬೇತಿ ನೀಡಲು ರಾಜ್ಯದ ಎಲ್ಲ ಶೈಕ್ಷಣಿಕ …

Read More »

ಗೋವಾದಲ್ಲಿ ಕ್ರಿಸ್‍ಮಸ್ ಸಿದ್ಧತೆ ; ಭಾರಿ ಸಂಖ್ಯೆಯ ಪ್ರವಾಸಿಗರ ನಿರೀಕ್ಷೆ

ಪಣಜಿ: ಗೋವಾದಲ್ಲಿ ಕ್ರಿಸ್‍ಮಸ್ ಹಬ್ಬವನ್ನು ಅದ್ದೂರಿಯಿಂದ ಆಚರಿಸಲಾಗುತ್ತದೆ. ಹಬ್ಬಕ್ಕೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು ಚರ್ಚ್ ಗಳಿಗೆ ಬಣ್ಣ ಬಡಿದು ಸಿಂಗರಿಸಲಾಗುತ್ತಿದ್ದು, ಕ್ರೈಸ್ತ ಬಾಂಧವರ ಮನೆಗಳಲ್ಲಿಯೂ ಸಿದ್ಧತಾ ಕಾರ್ಯ ಭರದಿಂದ ಸಾಗಿದೆ. ಕ್ರಿಸ್‍ಮಸ್ ಹಬ್ಬದೊಂದಿಗೆ ಹೊಸ ವರ್ಷ ಸಂಭ್ರಮಾಚರಣೆ ಕೂಡ ಆರಂಭಗೊಳ್ಳಲಿರುವುದರಿಂದ ಲಕ್ಷಾಂತರ ಸಮಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ನಿರೀಕ್ಷೆಯನ್ನು ಗೋವಾದ ಪ್ರವಾಸೋದ್ಯಮ ಇಲಾಖೆ ಹೊಂದಿದೆ. ಮಾರುಕಟ್ಟೆಗಳಲ್ಲಿ ಕ್ರಿಸ್‍ಮಸ್ ಟ್ರಿ, ಸ್ಟಾರ್ ಗಳು, ಜಿಂಗಲ್‍ಬೆಲ್, ಸಾಂತಾಕ್ಲಾಸ್‍ಗಳು ಪ್ರಮುಖ ಆಕರ್ಷಣೆಯಾಗಿದೆ. ಮನೆ ಮನೆಯ ಮುಂದೆ …

Read More »

ಕೌಜಲಗಿ: ಸಾಯಿ ಮಂದಿರ ವಾರ್ಷಿಕೋತ್ಸವ

ಕೌಜಲಗಿ: ಪಟ್ಟಣದ ಕಳ್ಳಿಗುದ್ದಿ ರಸ್ತೆಯಲ್ಲಿರುವ ಸಾಯಿಬಾಬಾ ಮಂದಿರದ ಪ್ರಥಮ ವಾರ್ಷಿಕೋತ್ಸವ ಗುರುವಾರ ಅತ್ಯಂತ ಶ್ರದ್ಧೆ-ಭಕ್ತಿಯಿಂದ ಜರುಗಿತು. ಕೌಜಲಗಿ ಸಾಯಿ ಸೇವಾ ಸಮಿತಿ ಹಾಗೂ ಸಮಸ್ತ ಭಕ್ತರ ಆಶ್ರಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಪ್ರಾತಃಕಾಲದಲ್ಲಿ ಸಾಯಿಬಾಬಾಗೆ ಮಹಾರುದ್ರಾಭಿಷೇಕ ಜರುಗಿತು. ಕೌಜಲಗಿ ಪ್ರದೇಶ ಅಭಿವೃದ್ಧಿ ಹಾಗೂ ಪ್ರಾಣಿಗಳ ಸಾಂಕ್ರಾಮಿಕ ಕಾಯಿಲೆ ನಿವಾರಣೆಗಾಗಿ ಪ್ರಾರ್ಥಿಸಿ ಈರಯ್ಯ ಶಾಸ್ತ್ರಿಗಳ ನೇತೃತ್ವದಲ್ಲಿ ಹೋಮ- ಹವನಗಳು ಜರುಗಿದವು. ಅನಂತರ ಸಾಯಿಬಾಬಾ ಪಲ್ಲಕ್ಕಿ ಉತ್ಸವ ನಡೆಯಿತು. ಪಲ್ಲಕ್ಕಿಯು ಭಕ್ತ ಕನಕದಾಸ …

Read More »

ಗೋಕಾಕ: ಬಿಜೆಪಿ ಯುವ ಮೋರ್ಚಾ ನಗರ ಹಾಗೂ ಗ್ರಾಮೀಣ ಮಂಡಲಗಳ ಕಾರ್ಯಕಾರಿಣಿ ಸಭೆಯನ್ನು ಶಾಸಕ ರಮೇಶ ಜಾರಕಿಹೊಳಿ ಉದ್ಘಾಟಿಸಿದರು.

ಗೋಕಾಕ: ಬಿಜೆಪಿ ಪಕ್ಷ ಕೇಂದ್ರ ಹಾಗೂ ರಾಜ್ಯದಲ್ಲಿ ಅನೇಕ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಕಾರ್ಯಕರ್ತರು ತಮ್ಮಲ್ಲಿರುವ ವೈಮನಸ್ಸುಗಳನ್ನು ಬದಿಗಿಟ್ಟು ಸರಕಾರದ ಸಾಧನೆಗಳನ್ನು ಮನೆ ಮನಗಳಿಗೆ ತಲುಪಿಸುವ ಕಾರ್ಯ ಯುವ ಮೋರ್ಚಾ ಕಾರ್ಯಕರ್ತರು ಮಾಡಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ನಗರದ ತಮ್ಮ ಗೃಹ ಕಚೇರಿಯಲ್ಲಿ ಬಿಜೆಪಿ ಯುವ ಮೋರ್ಚಾ ನಗರ ಹಾಗೂ ಗ್ರಾಮೀಣ ಮಂಡಲಗಳ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಬಿಜೆಪಿ ಸರಕಾರ ಬಡವರ ದೀನ ದಲಿತರ …

Read More »

ಬೆಳಗಾವಿ | ಕುಂದು ಕೊರತೆ: ಎರಡು ವರ್ಷದಿಂದ ನೀರು ಪೋಲು!

ಬೆಳಗಾವಿ: ಇಲ್ಲಿನ ಆದರ್ಶ ನಗರದ ಮುಖ್ಯರಸ್ತೆಯಲ್ಲಿ, ಕರ್ನಾಟಕ ಬ್ಯಾಂಕ್‌ ಇರುವ ಸ್ಥಳದಲ್ಲಿ ಕುಡಿಯುವ ನೀರಿನ ಪೈಪ್‌ಲೈನ್‌ ಒಡೆದು ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ. ಇದು ಇಂದು ನಿನ್ನೆಯದಲ್ಲ; ಬರೋಬ್ಬರಿ ಎರಡು ವರ್ಷಗಳಿಂದ ಪೋಲಾಗುತ್ತಲೇ ಇದೆ. ಈ ಬಗ್ಗೆ ಹಲವು ಬಾರಿ ಮಹಾನಗರ ಪಾಲಿಕೆ, ನೀರು ಪೂರೈಸುವ ಎಲ್‌ ಆಯಂಡ್‌ ಟಿ ಕಂಪನಿಯ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಈ ಕೊಳವೆ ಮಾರ್ಗದಿಂದ ನಗರದ ಬಹುಪಾಲು ಕಡೆ ನೀರು ಹರಿಯುತ್ತದೆ. ಹಾಗಾಗಿ, …

Read More »