ದಾವಣಗೆರೆ : ನಗರದೊಳಗಿನ ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಸೇವೆ ಸುಲಭದಲ್ಲಿ ಸಿಗುವಂತಾಗಲು ‘ನಮ್ಮ ಕ್ಲಿನಿಕ್’ ತೆರೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ದಾವಣಗೆರೆಯ ಆವರಗೆರೆಯಲ್ಲಿ ಜಿಲ್ಲೆಯ ಮೊದಲ ‘ನಮ್ಮ ಕ್ಲಿನಿಕ್’ ಉದ್ಘಾಟನೆಗೆ ಸಿದ್ಧವಾಗಿದೆ. ಎಂಬಿಬಿಎಸ್ ವೈದ್ಯರು ಒಬ್ಬರು, ಶುಶ್ರುಷಕರೊಬ್ಬರು, ಲ್ಯಾಬ್ ಟೆಕ್ನಿಷಿಯನ್ ಒಬ್ಬರು, ಡಿ ಗ್ರೂಪ್ ನೌಕರರೊಬ್ಬರು ಒಟ್ಟು ನಾಲ್ವರು ಈ ‘ನಮ್ಮ ಕ್ಲಿನಿಕ್’ನಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಸೋಮವಾರದಿಂದ ಶನಿವಾರದ ವರೆಗೆ ಬೆಳಿಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ, ಮಧ್ಯಾಹ್ನ 1.45ರಿಂದ ಸಂಜೆ 4.30ರವರೆಗೆ ಈ …
Read More »ಪ್ರಯಾಣಿಕರಿಗೆ ಬಿಗ್ ಶಾಕ್ : ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮತ್ತೆ ‘KSRTC’ ನೌಕರರ ಪ್ರತಿಭಟನೆ..!
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಗೆಕೆ ಆಗ್ರಹಿಸಿ ಮತ್ತೆ ‘KSRTC’ ನೌಕರರು ಪ್ರತಿಭಟನೆ ನಡೆಸಲು ನಿರ್ಧಾರ ಮಾಡಿದ್ದು, ಮತ್ತೆ ಪ್ರಯಾಣಿಕರಿಗೆ ಬಸ್ ಮುಷ್ಕರದ ಬಿಸಿ ತಟ್ಟಲಿದೆ ಎನ್ನಲಾಗಿದೆ. ಹೌದು, ವಿವಿಧ ಬೇಡಿಕೆಗಳ ಈಡೇರಿಗೆಕೆ ಆಗ್ರಹಿಸಿ ಮತ್ತೆ ‘KSRTC’ ನೌಕರರು ಪ್ರತಿಭಟನೆಗೆ ಸಿದ್ಧತೆ ನಡೆಸಲು ಮುಂದಾಗಿದ್ದು, ವಿವಿಧ ಬೇಡಿಕೆಗಳೊಂದಿಗೆ ರಾಜ್ಯವ್ಯಾಪಿ ಮುಷ್ಕರ ನಡೆಸಲು ಸಾರಿಗೆ ಸಿಬ್ಬಂದಿ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಬೆಳಗಾವಿಯ ಚಳಿಗಾಲದ ಅಧಿವೇಶನದ ವೇಳೆ ನಾಲ್ಕು ನಿಗಮದ ಸಾವಿರಾರು ನೌಕರರು ಉಪವಾಸ …
Read More »ಮುರುಘಾ ಶರಣರ ಜಾಮೀನು ಅರ್ಜಿ ಸೆಷನ್ಸ್ ಕೋರ್ಟ್‌ಗೆ?
ಬೆಂಗಳೂರು: ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮಂಗಳವಾರಕ್ಕೆ (ಡಿ.13) ಮುಂದೂಡಿದೆ. ಈ ಸಂಬಂಧ ಶಿವಮೂರ್ತಿ ಶರಣರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ …
Read More »ಜಲಸಂಪನ್ಮೂಲ: ನಕಲಿ ಅಭ್ಯರ್ಥಿಗಳ ಮೇಲುಗೈ?
ಬೆಂಗಳೂರು: ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇದ್ದ 182 ಬ್ಯಾಕ್‌ಲಾಗ್ ಹುದ್ದೆಗಳಿಗೆ ನಡೆಯುತ್ತಿರುವ ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ದಾಖಲಾತಿ ಪರಿಶೀಲನೆಗೆ ಸಿದ್ಧಪಡಿಸಿದ 1:2 ಪಟ್ಟಿಯಲ್ಲೇ ಶೇ 50ಕ್ಕಿಂತ ಹೆಚ್ಚು ಪುನರಾವರ್ತಿತ, ನಕಲಿ ಅಭ್ಯರ್ಥಿಗಳೇ ಇದ್ದಾರೆ ಎಂದು ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ದೂರಿದ್ದಾರೆ. ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಉಳಿದಿದ್ದ ಗ್ರೂಪ್-ಸಿ ವೃಂದದ ದ್ವಿತೀಯ ದರ್ಜೆ ಸಹಾಯಕರ ಪರಿಶಿಷ್ಟ ಜಾತಿ ಬ್ಯಾಕ್‌ಲಾಗ್‌ನ ಹುದ್ದೆಗಳ ನೇಮಕಾತಿಗೆ ಇದೇ ವರ್ಷದ ಸೆ.23ರಂದು ಜಲ ಸಂಪನ್ಮೂಲ ಅಭಿವೃದ್ಧಿ ಸಂಸ್ಥೆಯ …
Read More »ಆಕ್ಟರ್ ಆಗ್ಬೇಕು ಅಂತ ಭಾಳ ಹುಚೈತ್ರಿ.: ಶಿವಪುತ್ರಪ್ಪ, ಮಲ್ಲು
ಬೆಂಗಳೂರು : ಟ್ಯಾಲೆಂಟ್ ಯಾರಪ್ಪನ ಮನೆಯ ಆಸ್ತಿ ಅಲ್ಲ ಎನ್ನುವ ಮಾತು ಎಷ್ಟು ನಿಜ ಅಲ್ವಾ. ನಿಮ್ಮ ಹತ್ರ ಪ್ರತಿಭೆ ಇತ್ತು ಅಂದ್ರೆ ಸಾಧನೆ ಮಾಡುವುದರಿಂದ ನಿಮ್ಮನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಸಾಧನೆ ಮಾಡಲು ಬಡತನ, ಶ್ರೀಮಂತಿಕೆ ಅಂತ ಭೇದ ಭಾವ ಇಲ್ಲ. ಆತ್ಮ ವಿಶ್ವಾಸ ಬಹಳ ಮುಖ್ಯ ಅಷ್ಟೆ. ಅದೇ ರೀತಿ ಉತ್ತರ ಕರ್ನಾಟಕ ಪ್ರತಿಭೆ ಶಿವಪುತ್ರಪ್ಪ, ಮಲ್ಲು ಜಮಖಂಡಿ ಕೂಡ. ತಮ್ಮದೆ ಶೈಲಿಯಲ್ಲಿ ವಿಡಿಯೋ ಮಾಡಿ ಇಂದು ಖ್ಯಾತಿ …
Read More »ಸಿದ್ದರಾಮಯ್ಯ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಅಭಿಮಾನಿಗಳು ಗರಂ!
ಕಲಬುರಗಿ : ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಕಾಂಗ್ರೆಸ್ ನಲ್ಲಿ ಬಣಬಡಿದಾಟ ಹೆಚ್ಚಾಗಿದ್ದು, ಇದೀಗ ಕಲಬುರಗಿ ಕಾಂಗ್ರೆಸ್ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಭಿಮಾನಿಗಳು ಗರಂ ಆಗಿದ್ದಾರೆ. ಡಿಸೆಂಬರ್ 10 ರಂದು ಕಲಬುರಗಿಯಲ್ಲಿ ನಡೆದಿದ್ದ ಕಲ್ಯಾಣ ಕ್ರಾಂತಿ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಬೇಕಂತಲೇ ಸಿದ್ದರಾಮಯ್ಯ ಅವರು ಅಗೌರವ ತೋರಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಅಭಿಮಾನಿಗಳು ಅಸಮಾಧಾನ …
Read More »ಮಧ್ಯಾಹ್ನದ ‘ಬಿಸಿಯೂಟ’ ವೇಳಾಪಟ್ಟಿಯಲ್ಲಿ ಮಹತ್ವದ ಮಾರ್ಪಾಡು; ಇಲ್ಲಿದೆ ವಿವರ
ಶಾಲಾ ಮಕ್ಕಳ ಮಧ್ಯಾಹ್ನದ ಬಿಸಿಯೂಟ ವೇಳಾಪಟ್ಟಿಯಲ್ಲಿ ಮಹತ್ವದ ಮಾರ್ಪಾಡು ಮಾಡಲಾಗಿದ್ದು, ಇದರ ವಿವರ ಇಲ್ಲಿದೆ. ಏಕಕಾಲದಲ್ಲಿ ಮಕ್ಕಳ ದಟ್ಟಣೆ ಆಗುವುದನ್ನು ತಡೆಗಟ್ಟುವ ಸಲುವಾಗಿ 1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಹಾಗೂ 6 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಸಮಯವನ್ನು ನಿಗದಿಪಡಿಸಲಾಗಿದೆ. ಈ ವೇಳಾಪಟ್ಟಿ ಅನ್ವಯ 1ರಿಂದ 5ನೇ ತರಗತಿ ವಿದ್ಯಾರ್ಥಿಗಳು ಮಧ್ಯಾಹ್ನ 1 ಗಂಟೆಯಿಂದ 1.45 ರ ವರೆಗೆ ಬಿಸಿಯೂಟ ಸ್ವೀಕರಿಸಲಿದ್ದರೆ, 6 ರಿಂದ 10 ನೇ …
Read More »ರಾಷ್ಟ್ರ ಧ್ವಜಗಳ ಬಾಕಿ ಪಾವತಿಗೆ ಡಿ.ಸಿ.ಗಳಿಗೆ ಪತ್ರ
ಬಳ್ಳಾರಿ: ಸ್ವಾತಂತ್ರ್ಯದ ಸುವರ್ಣ ಮಹೋತ್ಸವದ ಸಂದರ್ಭದಲ್ಲಿ ನಡೆದ ಮೂರು ದಿನಗಳ ‘ಹರ್ ಘರ್ ತಿರಂಗಾ ಅಭಿಯಾನ’ಕ್ಕೆ ಕೇಂದ್ರ ಸರ್ಕಾರ ಪೂರೈಸಿದ್ದ ರಾಷ್ಟ್ರಧ್ವಜಗಳ ₹ 4,39,92,843 ಬಾಕಿಯನ್ನು ತಕ್ಷಣ ಪಾವತಿಸುವಂತೆ ತಾಕೀತು ಮಾಡಿ ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗಳಿಗೆ ಎರಡನೇ ಪತ್ರ ಬರೆದಿದೆ. ಆಗಸ್ಟ್ 13ರಿಂದ 15ರವರೆಗೆ ಮನೆಗಳು, ಕಚೇರಿಗಳು ಹಾಗೂ ವಾಹನಗಳ ಮೇಲೆ ರಾಷ್ಟ್ರ ಧ್ವಜ ಹಾರಾಡಿದ್ದವು. ‘ಏಳು ದಶಕಗಳಿಂದ ಬಳಸುತ್ತಿದ್ದ ಖಾದಿ ಬಟ್ಟೆಯ ತ್ರಿವರ್ಣ ಧ್ವಜಗಳಿಗೆ ಇತಿಶ್ರೀ ಹೇಳಿ, ತೆಳು …
Read More »ವ್ಯಾಪಾರಿ ಅಪಹರಿಸಿ ಹಣ ಲೂಟಿ: ಏಳು ಮಂದಿ ಬಂಧನ
ಬೆಳಗಾವಿ: ಹೋಟೆಲ್ ವ್ಯಾಪಾರಿಯೊಬ್ಬರನ್ನು ಅಪಹರಣ ಮಾಡಿ ₹ 1 ಲಕ್ಷ ವಸೂಲಿ ಮಾಡಿದ್ದ ಏಳು ಆರೋಪಿಗಳನ್ನು ಮುರಗೋಡ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಬಾಳೇಶ ಹೊಂಡಪ್ಪನವರ, ಶ್ರೀಶೈಲ ಹೊಂಡಪ್ಪನವರ, ಬಂದೇನವಾಜ್ ಅತ್ತಾರ್, ರಮೇಶ ಚಂದರಗಿ, ಮಲ್ಲಪ್ಪ ಕೋಮರ್, ಇಮ್ರಾನ್ ಮುಲ್ಲಾ, ನಾಗಪ್ಪ ರಂಗಣ್ಣನವರ ಬಂಧಿತರು. ಜಿಲ್ಲೆಯ ಯರಗಟ್ಟಿ ತಾಲ್ಲೂಕಿನ ಸೊಪ್ಪಾಡ್ಲ ಗ್ರಾಮದ ಸಾಬಣ್ಣ ಮೆಗಾಡಿ ಅವರನ್ನು ವಾರದ ಹಿಂದೆ ಸಾಬಣ್ಣ ಅವರನ್ನು ಯರಗಟ್ಟಿಯಲ್ಲಿ ಅಪಹರಿಸಿದ ಆರೋಪಿಗಳು, ಬೈಲಹೊಂಗಲ ತಾಲ್ಲೂಕಿನ ನೇಸರಗಿಗೆ …
Read More »ಖಾನಾಪುರ | ಕಾಡಾನೆ ಹಿಂಡು ದಾಳಿ: ಅಪಾರ ಬೆಳೆ ಹಾನಿ
ಖಾನಾಪುರ: ತಾಲ್ಲೂಕಿನ ಭೂರಣಕಿ ಮತ್ತು ಕರೀಕಟ್ಟಿ ಗ್ರಾಮಗಳ ಸುತ್ತಲಿನ ಕೃಷಿ ಜಮೀನುಗಳಲ್ಲಿ ಶನಿವಾರ ನಸುಕಿನಜಾವ 16 ಕಾಡಾನೆಗಳ ಹಿಂಡು ದಾಳಿ ಮಾಡಿದ್ದು, ಅಪಾರ ಪ್ರಮಾಣದ ಬೆಳೆ ತಿಂದು, ತುಳಿದು ನಾಶ ಮಾಡಿವೆ. ಇದರಿಂದ ಗ್ರಾಮಗಳಲ್ಲಿ ಆತಂಕದ ವಾತಾವರಣ ಮನೆ ಮಾಡಿದೆ. ಶುಕ್ರವಾರ ರಾತ್ರಿಯೇ ದಾಂಡೇಲಿ ಅರಣ್ಯದಿಂದ ಬಂದ ನಾಲ್ಕು ಮರಿ ಹಾಗೂ 12 ದೊಡ್ಡ ಆನೆಗಳು ತಾವರಗಟ್ಟಿ, ಚುಂಚವಾಡ ಮಾರ್ಗವಾಗಿ ಭೂರಣಕಿ ಗ್ರಾಮದ ಕಡೆ ಬಂದವು. ಮಧ್ಯರಾತ್ರಿಯಿಂದ ಶನಿವಾರ ನಸುಕಿನಜಾವದವರೆಗೆ …
Read More »