ಬೆಳಗಾವಿ : ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಸಂಬಂಧ ಕಳೆದ ವಾರ ಬೆಳಗಾವಿಗೆ ಭೇಟಿ ನೀಡಬೇಕಿದ್ದ ಮಹಾರಾಷ್ಟ್ರ ಸಚಿವ ಚಂದ್ರಕಾಂತ ಪಾಟೀಲ್ ಮುಖಕ್ಕೆ ವ್ಯಕ್ತಿಯೊಬ್ಬ ಮಸಿ ಬಳಿದಿರುವ ಘಟನೆ ನಡೆದಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಮಹಾತ್ಮ ಜ್ಯೋತಿಬಾ ಫುಲೆ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ಪುಣೆಯ ಪಿಂಪ್ರಿ-ಚಿಂಚ್ವಾಡ್ನಲ್ಲಿ ಶನಿವಾರ ಅಪರಿಚಿತ ವ್ಯಕ್ತಿಯೊಬ್ಬ ಮಹಾರಾಷ್ಟ್ರ ಸಚಿವ ಚಂದ್ರಕಾಂತ್ ಪಾಟೀಲ್ ಅವರ ಮೇಲೆ ಮಸಿ ಎರಚಿದ್ದಾನೆ. ಪಿಂಪ್ರಿ-ಚಿಂಚ್ವಾಡ್ನಲ್ಲಿ ಸಂಜೆ ಕಾರ್ಯಕ್ರಮವೊಂದರಲ್ಲಿ …
Read More »BJP, JDSಗೂ ಮೊದಲೇ ಪಟ್ಟಿ ರಿಲೀಸ್ ಮಾಡಿದ ಕಾಂಗ್ರೆಸ್
ಬೆಂಗಳೂರು: ರಾಜ್ಯ ಚುನಾವಣೆಗೆ ಆಗಲೇ ವೇದಿಕೆ ಸಿದ್ದವಾಗುತ್ತಿದ್ದು, ಎಲ್ಲಾ ಪಕ್ಷಗಳಿಗಿಂತಲೂ ಮೊದಲೇ ಕಾಂಗ್ರೆಸ್ ಪಕ್ಷವು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ದಪಡಿಸಿದೆ ಎನ್ನಲಾಗುತ್ತಿದೆ. ಈ ಪಟ್ಟಿಯಲ್ಲಿ ಮೂರ್ನಾಲ್ಕು ಹಾಲಿ ಶಾಸಕರನ್ನು ಹೊರತುಪಡಿಸಿ ಉಳಿದ ಎಲ್ಲಾ ಹಾಲಿ ಶಾಸಕರಿಗೆ ಬಹುತೇಕ ಟಿಕೆಟ್ ಸಿಗುವುದು ಖಚಿತವಾಗಿದೆ.ಕೆಲವೊಂದು ಕ್ಷೇತ್ರಗಳಲ್ಲಿ ನಾಲ್ಕೈದು ರಿಂದ ಹಿಡಿದು ೧೦,೧೫ ಆಕಾಂಕ್ಷಿಗಳು ಅರ್ಜಿಗಳನ್ನು ಸಲ್ಲಿಸಿದ್ದಾರೆ ಎನ್ನಲಾಗಿದೆ ಬೆಂಗಳೂರು ನಗರ ಕ್ಷೇತ್ರಗಳಲ್ಲಿ ಯಾರಿಗೆಲ್ಲಾ ಸಿಗಲಿದೆ ಟಿಕೆಟ್? ಗಾಂಧಿನಗರ- ದಿನೇಶ್ ಗುಂಡೂರಾವ್ ಬ್ಯಾಟರಾಯನಪುರ- ಕೃಷ್ಣಬೈರೇಗೌಡ ಸರ್ವಜ್ಙನಗರ- …
Read More »ಶಾಲಾ ಪ್ರವಾಸದ ವೇಳೆ ಕಾಲು ಜಾರಿ ಬಿದ್ದು ವಿದ್ಯಾರ್ಥಿನಿ ಸಾವು
ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ಕೆ ಬೆಳಗಲ್ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವತಿಯಿಂದ ಕೈಗೊಳ್ಳಲಾಗಿದ್ದ ಪ್ರವಾಸ ಸಮಯದಲ್ಲಿ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿದ್ದಾಳೆ. 10ನೇ ತರಗತಿಯಲ್ಲಿ ಓದುತ್ತಿದ್ದ ನಾಗಲಕ್ಷ್ಮಿ(16) ಮೃತ ವಿದ್ಯಾರ್ಥಿನಿ. ಶ್ರವಣಬೆಳಗೊಳದಲ್ಲಿ ಮೆಟ್ಟಿಲು ಹತ್ತುವಾಗ ಕಾಲು ಜಾರಿ ಬಿದ್ದು ತಲೆಗೆ ಪೆಟ್ಟಾಗಿದ್ದರಿಂದ ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ಬಿ.ಇ.ಒ ಗುರಪ್ಪ ತಿಳಿಸಿದ್ದಾರೆ. ಶಿಕ್ಷಣ ಇಲಾಖೆಯ ಅಧಿಕಾರಿಗಳು ಕೆ.ಬೆಳಗಲ್ ಗ್ರಾಮಕ್ಕೆ ತೆರಳಿ ಘಟನೆ ಕುರಿತು ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಂದ …
Read More »ಅದ್ಧೂರಿಯಾಗಿ ಜರುಗಿದ ಅಭಿ-ಅವಿವಾ ನಿಶ್ಚಿತಾರ್ಥ
ಸ್ಯಾಂಡಲ್‌ವುಡ್‌ನಲ್ಲಿ ಈಗ ಸಾಲು ಸಾಲು ಮದುವೆ ಸಂಭ್ರಮಗಳು ನಡೆಯುತ್ತಿವೆ. ಇತ್ತೀಚೆಗಷ್ಟೇ ಅದಿತಿ ಪ್ರಭುದೇವ ಅವರು ಮದುವೆ ಅದ್ಧೂರಿಯಾಗಿ ಜರುಗಿತ್ತು. ಕಳೆದ ಕೆಲ ದಿನಗಳ ಹಿಂದೆ ಹರಿಪ್ರಿಯಾ ವಸಿಷ್ಠ ಸಿಂಹ ಅವರ ನಿಶ್ಚಿತಾರ್ಥ ಮಾಡಿಕೊಂಡರು. ಇದೀಗ ರೆಬೆಲ್ ಸ್ಟಾರ್ ಅಂಬರೀಶ್ ಮತ್ತು ಸಂಸದೆ ಸುಮಲತಾ ಅವರ ಪುತ್ರ ಅಭಿಷೇಕ್ ಅಂಬರೀಶ್ ಅವರ ನಿಶ್ಚಿತಾರ್ಥ ಅವಿವಾ ಬಿದ್ದಪ್ಪ ಜೊತೆ ಅದ್ಧೂರಿಯಾಗಿ ನೆರವೇರಿತು. ಬೆಂಗಳೂರಿನ ಐಷಾರಾಮಿ ಹೋಟೆಲ್‌ನಲ್ಲಿಅಭಿಷೇಕ್ ಮತ್ತು ಅವಿವಾ ಎಂಗೇಜ್ಮೆಂಟ್‌ಅದ್ಧೂರಿಯಾಗಿ ನಡೆಯುತ್ತಿದೆ. ಕುಟುಂಬಸ್ಥರ …
Read More »‘ಕ್ರಾಂತಿ’ ವಿರುದ್ಧ ಶುರು ಬಾಯ್‌ಕಾಟ್ ಟ್ರೆಂಡ್!
ಕ್ರಾಂತಿ ಚಿತ್ರದ ಬಿಡುಗಡೆ ದಿನಾಂಕ ಸಮೀಪಿಸುತ್ತಿದ್ದಂತೆ ಚಿತ್ರತಂಡ ಒಂದೆಡೆ ಹಾಡುಗಳನ್ನು ಬಿಡುಗಡೆಗೊಳಿಸುತ್ತಾ ಚಿತ್ರದ ಮೇಲಿನ ಹೈಪ್ ಹೆಚ್ಚಿಸುವ ಕೆಲಸವನ್ನು ಮಾಡುತ್ತಿದ್ದರೆ, ಮತ್ತೊಂದೆಡೆ ಸ್ವತಃ ಚಾಲೆಂಜಿಂಗ್ ದರ್ಶನ್ ಅವರೇ ಸಂದರ್ಶನಗಳಲ್ಲಿ ಪಾಲ್ಗೊಂಡು ಚಿತ್ರದ ಪ್ರಚಾರ ಕೆಲಸಗಳನ್ನು ನಿರ್ವಹಿಸುತ್ತಿದ್ದಾರೆ. ಹೀಗೆ ಸಂದರ್ಶನಗಳಲ್ಲಿ ಭಾಗವಹಿಸುತ್ತಿರುವ ದರ್ಶನ್ ಅವರು ಕೆಲ ಸಂದರ್ಶನಗಳಲ್ಲಿ ನೀಡಿದ ಒಂದು ನಿರ್ದಿಷ್ಟ ಹೇಳಿಕೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ಎದುರಿಸುತ್ತಿದೆ. ಹೌದು, ಚಿತ್ರರಂಗದಲ್ಲಿ ನಿರ್ಮಾಪಕರು ಸಿಗುವುದು ಕಷ್ಟ, ಅಂತಹ ಅವಕಾಶ …
Read More »10 ತಿಂಗಳ ಮಗುವನ್ನು ಕ್ಯಾಬ್‌ನಿಂದ ಹೊರಗೆಸೆದು ಕೊಂದು ತಾಯಿಯ ಮೇಲೆ ಸಾಮೂಹಿಕ ಅತ್ಯಾಚಾರ
ಮುಂಬೈ: ಹತ್ತು ತಿಂಗಳ ಮಗುವನ್ನು ಕ್ಯಾಬ್‌ನಿಂದ ಹೊರಗೆಸೆದು ಸಾಯಿಸಿ, ಮಗುವಿನ ತಾಯಿಯ ಮೇಲೆ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಶನಿವಾರ ಬೆಳಗ್ಗೆ ಮಹಾರಾಷ್ಟ್ರದ ಪಾಲ್ಘರ್ ಬಳಿ ಇರುವ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ನಡೆದಿದೆ. ಮಹಿಳೆ ಮತ್ತು ಮಗು ಇತರ ಪ್ರಯಾಣಿಕರು ಹಂಚಿಕೊಂಡ ಕ್ಯಾಬ್‌ನಲ್ಲಿ ಪೆಲ್ಹಾರ್‌ನಿಂದ ಪೊಶೆರೆಗೆ ಹಿಂತಿರುಗುತ್ತಿದ್ದರು. ಈ ನಡುವೆ ಟ್ಯಾಕ್ಸಿ ಚಾಲಕ ಹಾಗೂ ಇತರೆ ಪ್ರಯಾಣಿಕರು ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಆಕೆ ವಿರೋಧಿಸಿದಾಗ ಮಗುವನ್ನು ಕ್ಯಾಬ್‌ನಿಂದ ಹೊರಕ್ಕೆ ಎಸೆದಿದ್ದಾರೆ. ಇದರ …
Read More »ಬೆಳಗುಂದಿ ಗ್ರಾಮದಲ್ಲಿ ಮರಾಠಿ ಸಾಹಿತ್ಯ ಸಮ್ಮೇಳನ..
ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದಲ್ಲಿ ಮರಾಠಿ ಸಾಹಿತ್ಯ ಸಮ್ಮೇಳನ ಅದ್ದೂರಿಯಾಗಿ ಜರುಗಿತು. ಭಾನುವಾರ ದಂದು ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದಲ್ಲಿ ರವಳನಾಥ ಪಂಚಕ್ರೋಶಿ ಸಾಹಿತ್ಯ ಅಕಾಡೆಮಿ ವತಿಯಿಂದ ಮರಾಠಿ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿತ್ತು.ಬೆಳಿಗ್ಗೆ ಸಮ್ಮೇಳನದ ಅಧ್ಯಕ್ಷರು ಗ್ರಂಥ ದಿಂಡಿಗೆ ಚಾಲನೆ ನೀಡುವ ಮೂಲಕ ಸಾಹಿತ್ಯ ಸಮ್ಮೇಳೆಕ್ಕೆ ಅಧಿಕೃತವಾಗಿ ಉದ್ಘಾಟಿಸಿದರು.ನಂತರ ಗ್ರಂಥದಿಂಡಿಯು ಗ್ರಾಮದ ವಿವಿಧ ಬೀದಿಗಳಲ್ಲಿ ಸಂಚರಿಸಿತು.ಚಿಕ್ಕಮಕ್ಕಳು ಆಕರ್ಷಕ ವೇಷಭೂಷಣದೊಂದಿಗೆ ಮೆರವಣಿಗೆಯಲ್ಲಿ ಭಾಗವಹಿಸಿ ಮೆರುಗು ತಂದರು. ನಂತರ ವೇದಿಕೆ ಕಾರ್ಯಕ್ರಮ ನೆರವೇರಿತು.ರಾಮಚಂದ್ರ …
Read More »ಗ್ರಾಮೀಣ ಕ್ಷೇತ್ರದ ಬಿಜೆಪಿ ಟೀಕೆಟ್ ಆಕಾಂಕ್ಷಿ ಶಾಸಕ ರಮೇಶ ಜಾರಕಿಹೊಳಿ ಅವರೊಂದಿಗೆ ನಾಗಪೂರಕ್ಕೆ
ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಟೀಕೆಟ್ ಆಕಾಂಕ್ಷಿ ಎಂದು ಹೇಳಲಾಗುತ್ತಿರುವ ನಾಗೇಶ ಮನ್ನೋಳಕರ ಅವರು ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ಅವರೊಂದಿಗೆ ನಾಗಪೂರಕ್ಕೆ ತೆರಳಿ ಹಿರಿಯ ನಾಯಕರನ್ನು ಭೇಟಿ ಮಾಡಿದ್ದಾರೆ. ಮರಾಠಾ ಸಮುದಾಯಕ್ಕೆ ಟಿಕೆಟ್ ಕೊಡಬೇಕೆಂದು ಗ್ರಾಮೀಣ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ನಾಗೇಶ ಮನ್ನೋಳಕರ ಅವರು ಕಾಲಿಗೆ ಚಕ್ರ ಕಟ್ಟಿಕೊಂಡು ಬೆಂಗಳೂರು ದೆಹಲಿವರೆಗೆ ಓಡಾಡಿ ಇದಿಗ ನಾಗಪೂರಕ್ಕೂ ಪ್ರಯಾಣ ಬೆಳೆಸಿ ಬಿಜೆಪಿ ಮುಖಂಡರನ್ನ ಭೇಟಿ ಆಗಿದ್ದಾರೆ. ರಮೇಶ ಜಾರಕಿಹೊಳಿ …
Read More »JDS ಪಂಚರತ್ನ ರಥಯಾತ್ರೆ ಮಳೆಯ ಕಾರಣ ನಾಲ್ಕು ದಿನ ಮುಂದಕ್ಕೆ
ಬೆಂಗಳೂರು: ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಭಾನುವಾರದಿಂದ (ಡಿ.11) ಮತ್ತೆ ಆರಂಭ ಆಗಬೇಕಿದ್ದ ಪಂಚರತ್ನ ರಥಯಾತ್ರೆಯನ್ನು ಮಳೆಯ ಕಾರಣ ನಾಲ್ಕು ದಿನಗಳು ಮುಂದೂಡಲಾಗಿದೆ. ತುಮಕೂರು ಜಿಲ್ಲೆ ಸೇರಿದಂತೆ ರಾಜ್ಯದ ಒಳನಾಡಿನಲ್ಲಿ ಮಳೆ ಸುರಿಯುತ್ತಿದೆ. ಪೂರ್ವನಿಗದಿತ ವೇಳಾಪಟ್ಟಿಯಂತೆ ರಥಯಾತ್ರೆ ಚಿಕ್ಕನಾಯಕನಹಳ್ಳಿಯಿಂದ ಆರಂಭವಾಗಬೇಕಿತ್ತು. ನಂತರ ತುರುವೇಕೆರೆ, ತುಮಕೂರು ಗ್ರಾಮಾಂತರ, ಕುಣಿಗಲ್ ಕ್ಷೇತ್ರಗಳಲ್ಲಿ ಸಾಗಬೇಕಿತ್ತು. ತುಮಕೂರು ಜಿಲ್ಲೆಯಲ್ಲಿ ಯಲ್ಲೊ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ, ರಥಯಾತ್ರೆ ಮಾರ್ಗ, ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ. ಡಿ.15ರಂದು ಮಾಗಡಿಯಲ್ಲಿ ರಥಯಾತ್ರೆ ನಡೆಯಲಿದೆ. 16ರಂದು …
Read More »ಜಾತ್ರೆ: ವಸ್ತುಪ್ರದರ್ಶನಕ್ಕೆ ಚಾಲನೆ
ರಾಮದುರ್ಗ: ‘ಜಾತ್ರೆಗಳಲ್ಲಿ ಆಯೋಜಿಸುವ ವಸ್ತುಪ್ರದರ್ಶನ ರೈತರಿಗೆ ಮತ್ತು ಯಾತ್ರಿಕರಿಗೆ ಉಪಯುಕ್ತವಾಗುವಂತೆ ಅಧಿಕಾರಿಗಳು ವ್ಯವಸ್ಥೆ ಮಾಡಬೇಕು. ಕಾಟಾಚಾರದ ವಸ್ತುಪ್ರದರ್ಶನ ಮಾಡಬಾರದು’ ಎಂದು ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು. ತಾಲ್ಲೂಕಿನ ಗೊಡಚಿ ವೀರಭದ್ರೇಶ್ವರ ಜಾತ್ರೆಯ ಅಂಗವಾಗಿ ಗುರುವಾರ ಗ್ರಾಮ ಪಂಚಾಯ್ತಿ ಏರ್ಪಡಿಸಿದ್ದ ವಸ್ತುಪ್ರದರ್ಶನ ಉದ್ಘಾಟಿಸಿ ಮಾತನಾಡಿ, ‘ಕೃಷಿಗೆ ಉತ್ತೇಜನ ನೀಡುವಂಥ ಮಳಿಗೆಗಳ ನಿರ್ಮಾಣಕ್ಕೆ ಆದ್ಯತೆ ನೀಡಬೇಕು. ಕೃಷಿ , ತೋಟಗಾರಿಕೆ, ಅರಣ್ಯ ಇಲಾಖೆಗಳು ರೈತರಿಗೆ ನೂತನ ತಾಂತ್ರಿಕತೆಯ ಪರಿಚಯ ಮಾಡಿಕೊಡಬೇಕು’ ಎಂದರು. ತಹಶೀಲ್ದಾರ್ …
Read More »