ಮೂಡಲಗಿ: ಮಾನವರಾಗಿ ಹುಟ್ಟಿದ ಮೇಲೆ ನಾವು ಸಕಲರಿಗೂ ಒಳ್ಳೆಯದನ್ನೇ ಬಯಸಬೇಕು. ಈ ಭೂಮಿಯಲ್ಲಿ ಮನುಷ್ಯರಾಗಿ ಹುಟ್ಟಿರುವದು ನಮ್ಮೆಲ್ಲರ ಪುಣ್ಯವಾಗಿದೆ. ಆದರೆ ಕೆಲವೇ ಕೆಲವು ಜನರು ಈ ಭೂಮಿಯಿಂದ ನಿರ್ಗಮನರಾಗುವಾಗ ದೇವರಾಗಿ ಹೋಗುತ್ತಾರೆ. ಇದಕ್ಕೆ ವಿಜಯಪುರದ ಸಿದ್ಧೇಶ್ವರ ಸ್ವಾಮಿಜಿಗಳೇ ಜ್ವಲಂತ ಉದಾಹರಣೆ ಎಂದು ಶಾಸಕ, ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ವಡೇರಹಟ್ಟಿ ಗ್ರಾಮದ ಮಲ್ಲಿಕಾರ್ಜುನ ಮಠದಲ್ಲಿ ಕಳೆದ ಭಾನುವಾರದಂದು ಸಿದ್ಧೇಶ್ವರ ಸ್ವಾಮಿಜಿಗಳ ನುಡಿ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ …
Read More »24ರ ಸಾರಿಗೆ ಮುಷ್ಕರ ಕೈಬಿಡಲ್ಲ: ಆರ್. ಚಂದ್ರಶೇಖರ್
ಬೆಂಗಳೂರು: ಸಾರಿಗೆ ಸಿಬ್ಬಂದಿ ಮುಷ್ಕರ ಕೈಬಿಡುವಂತೆ ಅಧಿಕಾರಿಗಳು ನಡೆಸಿದ ಸಂಧಾನ ಸಭೆಯು ವಿಫಲವಾಗಿದ್ದು, ಸಾರಿಗೆ ನೌಕರರ ಸಂಘದ ಸಮಾನ ಮನಸ್ಕರ ವೇದಿಕೆ ಅಧ್ಯಕ್ಷ ಆರ್. ಚಂದ್ರಶೇಖರ್ ಅವರ ನೇತೃತ್ವದಲ್ಲಿ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿ ಬಳಿ ಚಾಲಕರು ಹಾಗೂ ನಿರ್ವಾಹಕರು ಉಪವಾಸ ಸತ್ಯಾಗ್ರಹ ಆರಂಭಿಸಿದರು. ಸರ್ಕಾರಿ ನೌಕರರ ಸರಿಸಮಾನ ವೇತನಕ್ಕೆ ಆಗ್ರಹಿಸಿ, ಕರೆ ನೀಡಲಾಗಿರುವ ಮುಷ್ಕರದ ಪೂರ್ವಭಾವಿ ಹೋರಾಟಕ್ಕೆ ಮಂಗಳವಾರ ರಾತ್ರಿಯೇ ಚಾಲನೆ ದೊರೆಯಿತು. ಸರ್ಕಾರವು ಶೇ 15ರಷ್ಟು ವೇತನ ಹೆಚ್ಚಳಕ್ಕೆ …
Read More »ಮತ್ತೆ ನಾನೇ ಸಿಎಂ: ಬೊಮ್ಮಾಯಿ
ಬಾಗಲಕೋಟೆ: ‘ಬೀಳಗಿ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಮತ್ತೆ ಮುಖ್ಯಮಂತ್ರಿಯಾಗಿ ಬಂದು ನಾನೇ ಉದ್ಘಾಟನೆ ಮಾಡುತ್ತೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಮುಧೋಳದಲ್ಲಿ ಮಂಗಳವಾರ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಮುಧೋಳ, ತೇರದಾಳ, ಬಾಗಲಕೋಟೆ, ಬೀಳಗಿ ಕ್ಷೇತ್ರದಲ್ಲಿ ಸಾಕಷ್ಟು ನೀರಾವರಿ ಯೋಜನೆ ಜಾರಿಗೊಳಿಸಲಾಗಿದೆ’ ಎಂದರು. ‘ಅಭಿವೃದ್ಧಿ ಕಾರ್ಯ ನನಗೆ ಗೊತ್ತಾಗುತ್ತದೆ ಎಂದು ಸಚಿವ ಮುರುಗೇಶ ನಿರಾಣಿ ನನ್ನನ್ನು ಅವರ ಕ್ಷೇತ್ರಕ್ಕೆ ಕರೆದಿಲ್ಲ. ಆದರೆ, ಮುಖ್ಯಮಂತ್ರಿಯಾಗಿ ಅವುಗಳ ಉದ್ಘಾಟನೆಯನ್ನು ನಾನೇ …
Read More »₹40 ಸಾವಿರ ಲಂಚ ಪಡೆಯುತ್ತಿದ್ದಾಗ ಪಿಎಸ್‌ಐ, ಕಾನ್‌ಸ್ಟೆಬಲ್ ಬಂಧನ
ರಾಣೆಬೆನ್ನೂರು: ವ್ಯಕ್ತಿಯೊಬ್ಬರಿಂದ ಮನೆ ಬಾಡಿಗೆ ವಸೂಲಿ ಮಾಡಿಕೊಡಲು ₹ 40 ಸಾವಿರ ಲಂಚ ಪಡೆಯುತ್ತಿದ್ದಾಗ ಇಲ್ಲಿನ ಅಶೋಕನಗರ ಠಾಣೆ ಪಿಎಸ್‌ಐ ಮತ್ತು ಕಾನ್‌ಸ್ಟೆಬಲ್ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಪಿಎಸ್‌ಐ ಸುನೀಲ ತೇಲಿ, ವಾಹನ ಚಾಲಕ ಹಾಗೂ ಕಾನ್‌ಸ್ಟೆಬಲ್ ಸಚಿನ್ ಓಲೇಕಾರ ಸಿಕ್ಕಿಬಿದ್ದವರು. ಇವರ ಜೊತೆಗೆ ಉಡುಪಿ ಟಿಸ್ಟಾಲ್ ಮಾಲೀಕ ಸಂತೋಷ್ ಶೆಟ್ಟಿ ಅವರನ್ನು ಲೋಕಾಯುಕ್ತ ಬಂಧಿಸಿದ್ದು, ಕೋರ್ಟ್‌ಗೆ ಹಾಜರುಪಡಿಸಿದ್ದಾರೆ. ದೂರುದಾರ ಸಿದ್ಧೇಶ್ವರ ನಗರದ ಅಫ್ರೋಜ್ ಅಹ್ಮದ್ ನೂರ ಅಹ್ಮದ್‌ಸಾಬ್ ಊದಗಟ್ಟಿ ಅವರಿಗೆ …
Read More »ಗಡ್ಕರಿ ಕಚೇರಿಗೆ ಬೆಳಗಾವಿಯಿಂದ ಮತ್ತೆ ಕೊಲೆ ಬೆದರಿಕೆ ಕರೆ
ಬೆಳಗಾವಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ನಾಗ್ಪುರದ ಕಚೇರಿಗೆ ಬೆಳಗಾವಿಯಿಂದಲೇ ಮಂಗಳವಾರ ಮತ್ತೆ ಬೆದರಿಕೆ ಕರೆ ಮಾಡಲಾಗಿದೆ. ಆದರೆ, ಈ ಕರೆಯನ್ನು ಸದ್ಯ ಹಿಂಡಲಗಾ ಜೈಲಿನಲ್ಲಿರುವ ಕೈದಿ ಜಯೇಶ್ ಪೂಜಾರಿ ಮಾಡಿಲ್ಲ ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ. ‘ನನಗೆ ₹10 ಕೋಟಿ ಹಣ ನೀಡಬೇಕು. ಇಲ್ಲದಿದ್ದರೆ ನಿತಿನ್ ಗಡ್ಕರಿ ಅವರನ್ನು ಕೊಲೆ ಮಾಡುತ್ತೇನೆ’ ಎಂದು ಹೇಳಿಕೊಂಡು ಬೆಳಗಾವಿಯಿಂದ ಜಯೇಶ್ ಪೂಜಾರಿ ಎಂಬ ವ್ಯಕ್ತಿ ಕರೆ ಮಾಡಿದ್ದಾಗಿ ನಾಗ್ಪುರ ಪೊಲೀಸರು …
Read More »ಪೊಲೀಸರ ಮೇಲೇ ಹಲ್ಲೆಗೆ ಮುಂದಾದ ದರೋಡೆಕೋರರು
ಬೀದರ್: ಬಂಧಿಸಲು ಹೋಗಿದ್ದ ಪೊಲೀಸರ ಮೇಲೆಯೇ ದರೋಡೆಕೋರರು ಹಲ್ಲೆ ಮಾಡಲು ಮುಂದಾಗಿದ್ದು, ಬಳಿಕ ಸರ್ಕಲ್ ಪೊಲೀಸ್ ಇನ್ಸ್ಪೆಕ್ಟರ್ ಗುಂಡು ಹಾರಿಸಬೇಕಾದ ಪ್ರಸಂಗ ಎದುರಾಗಿತ್ತು. ಬೀದರ್ನಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ. ಇಲ್ಲಿನ ಮೈಕೂರ್ನ ರಿಂಗ್ರೋಡ್ನಲ್ಲಿ ಈ ಘಟನೆ ನಡೆದಿದೆ. ಹಲವು ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಖದೀಮರನ್ನು ತಮಗೆ ಸಿಕ್ಕ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಹೆಡೆಮುರಿ ಕಟ್ಟಲು ಪೊಲೀಸರು ಮುಂದಾಗಿದ್ದ ಸಂದರ್ಭದಲ್ಲಿ ಈ ಹಲ್ಲೆಯತ್ನ ನಡೆದಿದೆ. ಇಬ್ಬರು ದರೋಡೆಕೋರರು …
Read More »ಯುಗಾದಿ.. ಅರ್ಥ ಆಚರಣೆ ವಿಶ್ಲೇಷಣೆ
ಭಾರತೀಯ ಸಂಸ್ಕೃತಿಯೇ ಹಾಗೆ! ಜೀವನವನ್ನು, ಮನುಷ್ಯನನ್ನು, ಜೀವನಕ್ರಮವನ್ನು, ಜೀವನಕ್ಕೆ ಆಶ್ರಯ, ಪುಷ್ಟಿ, ತುಷ್ಟಿಗಳನ್ನು ನೀಡುವ ಭೂಮಿ, ನೀರು, ಆಕಾಶ, ಗಾಳಿಗಳನ್ನು, ಇದಕ್ಕೆ ಆಧಾರವಾಗಿ ನಿಲ್ಲುವ ದೇಶ, ಮಾತಾಪಿತೃಗಳು, ಗುರುಹಿರಿಯರು, ರಾಜ, ಪಶುಪಕ್ಷಿಗಳನ್ನು ದೈವೀಕರಿಸಿ ಉದಾತ್ತೀಕರಿಸಿ ಇವುಗಳೆಡೆಗೆ ಉತ್ಸಾಹ, ಹುಮ್ಮಸ್ಸುಗಳು ಪ್ರತಿನಿತ್ಯವೂ ಧುಮ್ಮಿಕ್ಕುವಂತೆ ಇದು ಮಾಡುವುದರ ಪರಿಯನ್ನು ನೋಡಿಯೇ ತಿಳಿಯಬೇಕು. ವೇದಗಳಲ್ಲಿ ಬರುವ ಈ ಜೀವನೋತ್ಸಾಹ ಮತ್ತೆಲ್ಲಿ ಕಾಣಲಾದೀತು! ಪಶ್ಯೇಮ ಶರದಃ ಶತಂ| ಜೀವೇಮ ಶರದಃ ಶತಂ | ಶೃಣುಯಾಮ ಶರದಃ …
Read More »ಬಿಜೆಪಿ ಉತ್ಸಾಹಕ್ಕೆ ಆಕಾಂಕ್ಷಿಗಳು ಅಡ್ಡಗಾಲು: ರಥಯಾತ್ರೆಗಳಿಗೆ ತಟ್ಟಿದ ಪೈಪೋಟಿಯ ಬಿಸಿ
ಬೆಂಗಳೂರು :ಪ್ರಧಾನಿ ನರೇಂದ್ರ ಮೋದಿ ಸೇರಿ ಕೇಂದ್ರ ನಾಯಕರ ನಿರಂತರ ಭೇಟಿ, ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆಯಿಂದ ಆಡಳಿತ ಬಿಜೆಪಿಯಲ್ಲಿ ಹೆಚ್ಚಿರುವ ಉತ್ಸಾಹಕ್ಕೆ ಪಕ್ಷದ ಟಿಕೆಟ್ ಆಕಾಂಕ್ಷಿಗಳು ಅಡ್ಡಗಾಲಾಗಿದ್ದಾರೆ. ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿ, ಎರಡನೇ ಪಟ್ಟಿಗೆ ಬಿಡುಗಡೆಗೆ ತಯಾರಿ ನಡೆಸಿದೆ. ಪ್ರತಿಪಕ್ಷ ಕಾಂಗ್ರೆಸ್ ಕೂಡ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಪ್ರಾರಂಭಿಸಿ ಮೊದಲ ಪಟ್ಟಿ ತ್ವರಿತವಾಗಿ ಘೋಷಿಸಿ ಕಾರ್ಯಕರ್ತರಲ್ಲಿ ಹುಮ್ಮಸ್ಸು ತುಂಬಲು ಸನ್ನದ್ಧವಾಗಿದೆ. ಆದರೆ ಬಿಜೆಪಿ ಪಾಳೆಯದಲ್ಲಿ ಮೇಲ್ನೋಟಕ್ಕೆ ಯಾವುದೇ …
Read More »ಸಾರ್ವಜನಿಕರು ಗೂಡ್ಸ್ ವಾಹನಗಳಲ್ಲಿ ಸಂಚರಿಸಬಾರದು:ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಬೆಳಗಾವಿ: ಜಿಲ್ಲೆಯಲ್ಲಿ ಗೂಡ್ಸ್ ವಾಹನಗಳಲ್ಲಿ ಪ್ರಯಾಣಿಕರನ್ನು ಕರೆದೊಯ್ಯವುದು ಕಂಡುಬಂದರೆ ಅಂತಹ ವಾಹನಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಎಚ್ಚರಿಕೆ ನೀಡಿದ್ದಾರೆ. ಗೂಡ್ಸ್ ವಾಹನಗಳಲ್ಲಿ ಜನರನ್ನು ಕರೆದೊಯ್ಯುವುದನ್ನು ಚುನಾವಣಾ ಆಯೋಗ ಕೂಡ ಗಂಭೀರವಾಗಿ ಪರಿಗಣಿಸಿದೆ. ಗೂಡ್ಸ್ ವಾಹನಗಳಲ್ಲಿ ಜನರನ್ನು ಕರೆದೊಯ್ಯುವುದನ್ನು ಮೋಟಾರು ವಾಹನ ಕಾಯ್ದೆ ಪ್ರಕಾರ ನಿಷೇಧಿಸಲಾಗಿರುತ್ತದೆ. ಪೊಲೀಸ್ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಇಂದಿನಿಂದ ಜಿಲ್ಲೆಯಾದ್ಯಂತ ತೀವ್ರ ತಪಾಸಣೆ ನಡೆಸಲಿದ್ದಾರೆ. ಕಾನೂನು ಉಲ್ಲಂಘನೆ ಕಂಡುಬಂದರೆ ಕಠಿಣ ಕ್ರಮವನ್ನು …
Read More »ಖಾನಾಪುರದಲ್ಲಿ ಡಾ.ಸೋನಾಲಿ ಸರ್ನೋಬತ್ ಬಿಜೆಪಿಯ ಪ್ರಬಲ ಆಕಾಂಕ್ಷಿ
ಖಾನಾಪುರ: ಕರ್ನಾಟಕ ವಿಧಾನ ಸಭೆ ಚುನಾವಣೆ ಇನ್ನೇನು ಘೋಷಣೆಯಾಗಲಿದೆ. ಇಡೀ ರಾಜ್ಯದಲ್ಲಿ ಚುನಾವಣೆ ವಾತಾವರಣ ನಿರ್ಮಾಣವಾಗಿದೆ. ಅಘೋಷಿತ ನೀತಿ ಸಂಹಿತೆ ಜಾರಿಯಾಗಿದೆ. ರಾಜಕೀಯ ಪಕ್ಷಗಳು ಕಳೆದ 3 ತಿಂಗಳನಿಂದಲೆ ಚುನಾವಣೆ ಮೂಡ್ ಗೆ ಜಾರಿವೆ. ಪ್ರಮುಖ ಮೂರೂ ಪಕ್ಷಗಳು ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ತೊಡಗಿವೆ. ಪಕ್ಷಾಂತರ ಪರ್ವವೂ ಜೋರಾಗಿದೆ. ಚುನಾವಣೆ ಘೋಷಣೆಯಾಗುತ್ತಿದ್ದಂತೆ ಇನ್ನಷ್ಟು ಘಟಾನುಘಟಿಗಳು ಪಕ್ಷ ಬದಲಾವಣೆ ಮಾಡುವ ಮುನ್ಸೂಚನೆ ಈಗಾಗಲೆ ಕಾಣಿಸಿದೆ. ಪಕ್ಷಾಂತರಿಗಳಿಗಾಗಿ ಮೂರೂ ಪಕ್ಷಗಳು ಕೆಲವು ಸೀಟ್ …
Read More »
Laxmi News 24×7