ಬೆಳಗಾವಿ: ಕಬ್ಬು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿರೋ ಘಟನೆ ಬೈಲಹೊಂಗಲ ತಾಲೂಕಿನ ಶಿಗೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಗಂಗವ್ವ ಕಂಬಾರ (56) ಮೃತ ವೃದ್ಧೆ. ಟ್ರ್ಯಾಕ್ಟರ್ವೊಂದು ರಸ್ತೆಯ ಪಕ್ಕದ ಗುಡಿಸಲು ಮೇಲೆ ಪಲ್ಟಿಯಾಗಿದೆ. ಇದರ ಪರಿಣಾಮ ಗುಡಿಸಲಿನಲ್ಲಿದ್ದ ವೃದ್ಧೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಜೊತೆಗೆ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »ಶ್ರೀ ಸಿದ್ದೇಶ್ವರ ದೇವರ ಜಾತ್ರೆಯಲ್ಲಿ ಗಮನ ಸೆಳೆದ ಶ್ವಾನ ಪ್ರದರ್ಶನ; ಫೋಟೋ ಇಲ್ಲಿದೆ
ಬೆಳಗಾವಿ: ಶ್ರೀ ಸಿದ್ದೇಶ್ವರ ದೇವರ ಜಾತ್ರಾ ಮಹೋತ್ಸವದಲ್ಲಿ ಬೃಹತ್ ಕೃಷಿ ಮೇಳವನ್ನ ಆಯೋಜಿಸಲಾಗಿತ್ತು. ಕಾಗವಾಡ ತಾಲೂಕಿನ ಐನಾಪೂರ ಪಟ್ಟಣದ ಈ ಮೇಳದಲ್ಲಿ ಶ್ವಾನ ಪ್ರದರ್ಶನವೂ ನಡೀತು. ವಿವಿಧ ತಳಿಯ ಶ್ವಾನಗಳ ಪ್ರದರ್ಶನ ನೀಡಿವೆ. ಸುಮಾರು 65ಕ್ಕೊ ಹೆಚ್ಚು ವಿವಿಧ ತಳಿಯ ಶ್ವಾನಗಳು ಪ್ರದರ್ಶನದಲ್ಲಿ ಭಾಗವಹಿಸಿದ್ದವು. ಕರ್ನಾಟಕ, ಮಹಾರಾಷ್ಟ್ರದಿಂದ ನೂರಾರು ಮಂದಿ ತಮ್ಮ ಶ್ವಾನಗಳನ್ನ ಸ್ಪರ್ಧೆಗೆ ಕರೆ ತಂದಿದ್ರು. ಈ ಸ್ಫರ್ಧೆಯಲ್ಲಿ ಭಾಗವಹಿಸಿದ್ದ ಶ್ವಾನಗಳು ವಿಷೇಶವಾದ ಕೂದಲು, ಬಣ್ಣ, ದೇಹಾಕಾರದಿಂದ ಪ್ರೇಕ್ಷಕರನ್ನು …
Read More »ಸಿದ್ದರಾಮಯ್ಯ ಕ್ಷೇತ್ರದ ಸ್ಫೋಟಕ ಭವಿಷ್ಯ ನುಡಿದ BSY
ಬೆಳಗಾವಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಸ್ಪರ್ಧೆ ಕ್ಷೇತ್ರದ ಬಗ್ಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಕೋಲಾರದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವುದಿಲ್ಲ. ಕೋಲಾರದಿಂದ ಸ್ಪರ್ಧಿಸಿದರೆ ಅವರಿಗೆ ಸೋಲು ನಿಶ್ಚಿತ. ಇದು ಸಿದ್ದರಾಮಯ್ಯನವರಿಗೂ ಗೊತ್ತು. ಕೋಲಾರದಿಂದ ಸ್ಪರ್ಧಿಸುವುದಾಗಿ ಡ್ರಾಮಾ ಮಾಡ್ತಿದ್ದಾರೆ. ಇದೆಲ್ಲ ರಾಜಕೀಯ ದೊಂಬರಾಟ ಎಂದು ಹೇಳಿದರು. ಅಂತಿಮವಾಗಿ ಸಿದ್ದರಾಮಯ್ಯ ಮೈಸೂರಿಗೆ …
Read More »ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ ನ ಎಲ್ಲ ನಾಯಕರು ಪಿಎಚ್ ಡಿ ಮಾಡಿದ್ದಾರೆ: ಸಿಎಂ ಬೊಮ್ಮಾಯಿ
ಬೆಳಗಾವಿ: ಬೆಂಗಳೂರನ್ನು ಸಂಪೂರ್ಣವಾಗಿ ಹಾಳು ಮಾಡಿದವರೇ ಕಾಂಗ್ರೆಸ್ ನವರು. ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ ನ ಎಲ್ಲ ನಾಯಕರು ಪಿ ಎಚ್ ಡಿ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು. ಬೆಳಗಾವಿ ವಿಮಾನ ನಿಲ್ದಾಣದ ಲ್ಲಿ ಸೋಮವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ಬೆಂಗಳೂರಿನಲ್ಲಿ ಅತಿಕ್ರಮಣ ಬರುವುದಕ್ಕೆ ರಾಜಕಾಲುವೆ ಮುಚ್ಚುವದಕ್ಕೆ ಮತ್ತು ರಾಜಕಾಲುವೆ ಹೆಸರಿನಲ್ಲಿ ಭ್ರಷ್ಟಾಚಾರ ನಡೆದಿರುವದಕ್ಕೆ ಕಾಂಗ್ರೆಸ್ ಕಾರಣ. ಹತ್ತು ಹಲವು ಭ್ರಷ್ಟಾಚಾರ ಅವರ ಕಾಲದಲ್ಲಿ ನಡೆದಿವೆ. ಈಗ ಅವುಗಳನ್ನು …
Read More »ಕಳಸಾ ಬಂಡೂರಿ ವಿಷಯದಲ್ಲಿ ಗೋವಾ ನಿರ್ಣಯಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ: ಸಿಎಂ ಬೊಮ್ಮಾಯಿ
ಬೆಳಗಾವಿ: ಕಳಸಾ ಬಂಡೂರಿ ವಿಷಯದಲ್ಲಿ ಗೋವಾ ಸರಕಾರ ತೆಗೆದುಕೊಂಡಿರುವ ನಿರ್ಣಯಕ್ಕೆ ಕವಡೆ ಕಾಸಿನ ಕಿಮ್ಮತ್ತೂ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೋವಾ ನಾಯಕರಿಗೆ ಸ್ಪಷ್ಟವಾಗಿ ತಿರುಗೇಟು ನೀಡಿದರು. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ಈಗಾಗಲೇ ಯೋಜನೆಯ ಸಮಗ್ರ ಪರಿಷ್ಕೃತ ವರದಿ ಗೆ ಅನುಮೋದನೆ ಸಿಕ್ಕಿದೆ. ಅರಣ್ಯ ಇಲಾಖೆಯ ಒಪ್ಪಿಗೆ ಸಿಕ್ಕ ತಕ್ಷಣ ಕಾಮಗಾರಿಯನ್ನು ಕೈಗೊಳ್ಳಲಾಗುವದು ಎಂದು ಸ್ಪಷ್ಟಪಡಿಸಿದರು. ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ …
Read More »ಬೆಂಗಳೂರು: ಹಿರಿಯ ನಟ ಲಕ್ಷ್ಮಣ್ ಹೃದಯಾಘಾತದಿಂದ ನಿಧನ
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಲಕ್ಷ್ಮಣ್ (54) ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ‘ಸೂರ್ಯವಂಶ’, ‘ಯಜಮಾನ’ ಸೇರಿದಂತೆ ಅನೇಕ ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸುವ ಮೂಲಕ ಜನರ ಗಮನ ಸೆಳೆದಿದ್ದರು. ಲಕ್ಷ್ಮಣ್ ಅವರ ನಿಧನಕ್ಕೆ ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳು ಮತ್ತು ಸಿನಿಪ್ರಿಯರು ಸಂತಾಪ ಸೂಚಿಸಿದ್ದಾರೆ.
Read More »ಬೆಳಗಾವಿಯ ನಾಗರಾಜು ‘ಸುತ್ತೂರು ಕೇಸರಿ’, ಮಂಜು ‘ಸುತ್ತೂರು ಕುಮಾರ’
ನಂಜನಗೂಡು (ಮೈಸೂರು ಜಿಲ್ಲೆ): ಎರಡು ವರ್ಷಗಳ ನಂತರ ರಂಗೇರಿದ್ದ ಸುತ್ತೂರು ಕುಸ್ತಿ ಅಖಾಡದಲ್ಲಿ ಕುಸ್ತಿಪ್ರಿಯರ ಶಿಳ್ಳೆ- ಚಪ್ಪಾಳೆಗಳ ನಡುವೆ ಬೆಳಗಾವಿಯ ನಾಗರಾಜು ಹಾಗೂ ಶ್ರೀರಂಗಪಟ್ಟಣದ ಮಂಜು ಕ್ರಮವಾಗಿ ‘ಸುತ್ತೂರು ಕೇಸರಿ’ ಹಾಗೂ ‘ಸುತ್ತೂರು ಕುಮಾರ’ ಪ್ರಶಸ್ತಿ ಗೆದ್ದರು. ಸುತ್ತೂರು ಉಚಿತ ಶಾಲೆಯ ಮೈದಾನದ ಅಖಾಡದಲ್ಲಿ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ ಪ್ರಯುಕ್ತ ಭಾನುವಾರ ನಡೆದ 41ನೇ ರಾಷ್ಟಮಟ್ಟದ ಸುತ್ತೂರು ಕುಸ್ತಿ ಸ್ಪರ್ಧೆಯ ಹಣಾಹಣಿಯಲ್ಲಿ ಬೆಳಗಾವಿ ನಾಗರಾಜು ಹರಿಯಾಣದ ಪೈಲ್ವಾನ್ ಬಂಟಿ …
Read More »ಕೋಲಾರದಲ್ಲಿ ಸಿದ್ದರಾಮಯ್ಯ ಮಣಿಸಲು BJP, JDS ಚಕ್ರವ್ಯೂಹ
ಕೋಲಾರ: ಕೋಲಾರದಲ್ಲೇ ಸ್ಪರ್ಧೆ ಮಾಡುವುದಾಗಿ ಘೋಷಿಸಿರುವ ಸಿದ್ದರಾಮಯ್ಯ ಅವರತ್ತ ಕ್ಷೇತ್ರದಲ್ಲಿ ನಿತ್ಯ ‘ವಿವಿಧಾಸ್ತ್ರ’ ಪ್ರಯೋಗ ನಡೆಯುತ್ತಿದ್ದು, ಇಡೀ ರಾಜ್ಯದ ಚಿತ್ತವೆಲ್ಲಾ ಈ ಕ್ಷೇತ್ರದತ್ತ ನೆಟ್ಟಿದೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಜೆಡಿಎಸ್ ರಾಜ್ಯ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಸೇರಿದಂತೆ ಪ್ರಮುಖ ನಾಯಕರು ಕೋಲಾರಕ್ಕೆ ಭೇಟಿ ನೀಡುತ್ತಾ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರನ್ನು ಕಟ್ಟಿ ಹಾಕಲು ‘ಚಕ್ರವ್ಯೂಹ’ ರಚಿಸಿಸುತ್ತಿದ್ದಾರೆ. ತಂತ್ರ, ಪ್ರತಿತಂತ್ರದಿಂದಾಗಿ ಚುನಾವಣೆ ಘೋಷಣೆಗೆ ಮುನ್ನವೇ ಕೋಲಾರದ ಅಖಾಡ ರಂಗೇರಿದೆ. ಕುರುಬ ಸಂಘದಲ್ಲಿ …
Read More »ಭ್ರಷ್ಟಾಚಾರವನ್ನು ಬೆಂಬಲಿಸಿ, ಕುಮ್ಮಕ್ಕು ಕೊಟ್ಟವರು ಕಾಂಗ್ರೆಸ್ನವರು: ಬೊಮ್ಮಾಯಿ
ಬೆಂಗಳೂರು: ‘ಭ್ರಷ್ಟಾಚಾರದ ಗಂಗೋತ್ರಿ ಕಾಂಗ್ರೆಸ್. ಭ್ರಷ್ಟಾಚಾರವನ್ನು ಬೆಂಬಲಿಸಿದವರು, ಅದಕ್ಕೆ ಕುಮ್ಮಕ್ಕು ಕೊಟ್ಟವರು ಕಾಂಗ್ರೆಸ್ನವರು. ಭ್ರಷ್ಟಾಚಾರದ ಜೊತೆಗೇ ಸರ್ಕಾರ ನಡೆಸಿದವರು. ಭ್ರಷ್ಟಾಚಾರ ಅವರ ಸರ್ಕಾರದ ಒಂದು ಭಾಗವಾಗಿತ್ತು’ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದರು. ‘ಭ್ರಷ್ಟಾಚಾರದ ತೊಲಗಿಸಿ, ಬೆಂಗಳೂರು ಉಳಿಸಿ’ ಎಂದು ಆಗ್ರಹಿಸಿ ಬೆಂಗಳೂರಿನ 300ಕ್ಕೂ ಹೆಚ್ಚು ಕಡೆಗಳಲ್ಲಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಯ ಕುರಿತು ಪ್ರತಿಕ್ರಿಯಿಸಿದ ಅವರು, ‘ಬಿಬಿಎಂಪಿಯಲ್ಲಿನ ಭ್ರಷ್ಟಾಚಾರ ಅವರ ಅವಧಿಯಲ್ಲಿ ನಡೆದಿದೆ. ಪ್ರತಿಭಟನೆ …
Read More »ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಇಬ್ಬರು ಪುತ್ರರ ವಿವಾಹ ಸಮಾರಂಭ ಸೋಮವಾರ ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ
ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಸೋಮವಾರ ಬೆಳಗಾವಿಗೆ ಗಣ್ಯರ ದಂಡೇ ಹರಿದು ಬರಲಿದೆ. ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಇಬ್ಬರು ಪುತ್ರರ ವಿವಾಹ ಸಮಾರಂಭ ಸೋಮವಾರ ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆಯಲಿದೆ. ಇದರಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶೇಷ ವಿಮಾನದಲ್ಲಿ ಆಗಮಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಬೆಂಗಳೂರಿನಿಂದ ಹೊರಡಲಿರುವ ಬೊಮ್ಮಾಯಿ 12.15ಕ್ಕೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿಯುವರು. ಅಲ್ಲಿಂದ ಸಿಪಿಎಡ್ ಮೈದಾನಕ್ಕೆ ಆಗಮಿಸಿ ವಿವಾಹ ಸಮಾರಂಭದಲ್ಲಿ …
Read More »
Laxmi News 24×7