Breaking News

ಬಾಕಿ ಕಾಮಗಾರಿ ತ್ವರಿತ ಪೂರ್ಣಗೊಳಿಸಿ: ಎಲ್‌.ಕೆ.ಅತೀಕ್‌

ಬೆಳಗಾವಿ: ಪ್ರಸಕ್ತ ಆರ್ಥಿಕ ವರ್ಷದ ಅಂತಿಮ ಘಟ್ಟದಲ್ಲಿರುವುದರಿಂದ ಪ್ರತಿಯೊಂದು ಇಲಾಖೆಗಳು ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಯಾವುದೇ ಕಾರಣಕ್ಕೂ ಅನುದಾನ ಮರಳಿ ಹೋಗದಂತೆ ಎಚ್ಚರಿಕೆ ವಹಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್‌.ಕೆ.ಅತೀಕ್‌ ಹೇಳಿದರು.   ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 15ನೇ ಹಣಕಾಸು ಯೋಜನೆಯಡಿ …

Read More »

ಬೆಳಗಾವಿಯ ಪ್ರಭಾವಿ ರಾಜ ಕಾರಣಿಗಳ ಮೌನ ಮತ್ತು ತಟಸ್ಥ ನಿಲುವು ಈಗ ಅನು ಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿ ಬೆಳಗಾವಿಯ ಪ್ರಭಾವಿ ರಾಜ ಕಾರಣಿಗಳ ಮೌನ ಮತ್ತು ತಟಸ್ಥ ನಿಲುವು ಈಗ ಅನು ಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಸದ್ಯದಲ್ಲೇ ಬೆಳಗಾವಿ ಗಡಿ ವಿಚಾರ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ. ಹಾಗೆಯೇ ಮಹಾರಾಷ್ಟ್ರದ ಇಬ್ಬರು ಸಚಿವರು ಬೆಳಗಾವಿಗೆ ಬರಲು ತಯಾರಾಗಿದ್ದಾರೆ. ಈ ಅಂಶಗಳಿಂದ ವಿವಾದಕ್ಕೆ ಹೆಚ್ಚಿನ ಮಹತ್ವ ಬಂದಿದೆ. ಬೆಳಗಾವಿಯ ಜತೆಗೆ ನಿಕಟ ಸಂಪರ್ಕ ಇರಿಸಿಕೊಂಡಿರುವ ಮಹಾರಾಷ್ಟ್ರದ ಗಡಿ ಉಸ್ತುವಾರಿ ಸಚಿವರಾದ ಚಂದ್ರಕಾಂತ ಪಾಟೀಲ ಮತ್ತು …

Read More »

ಜೆಡಿಎಸ್ ಅಧಿಕಾರಕ್ಕೆ ಬಂದರೆ ಕುಮಾರಸ್ವಾಮಿಯೇ ಸಿ.ಎಂ: ಇಬ್ರಾಹಿಂ

ಹುಬ್ಬಳ್ಳಿ: ಜೆಡಿಎಸ್ ಅಧಿಕಾರಕ್ಕೆ ಬಂದರೆ ಎಚ್‌.ಡಿ. ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಯಾಗಲಿದ್ದಾರೆ. ಪಂಚರತ್ನ ಯಾತ್ರೆ ಮೂಲಕ ರಾಜ್ಯದ ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸಲು ಅವರೇ ಮುಖ್ಯಮಂತ್ರಿ ಆಗಬೇಕು ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದರು.   ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್‌ಗೆ ಸಂಪೂರ್ಣ ಬಹುಮತ ಬಂದರೆ ಮುಸ್ಲಿಂ ಸಮುದಾಯದ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡಲಾಗುತ್ತದೆ ಎಂಬ ಕುಮಾರಸ್ವಾಮಿ ಹೇಳಿಕೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಚುನಾವಣಾ ಆಮಿಷ ಕೋರ್ಟ್‌ಗೆ ಮೊರೆ: ಚುನಾವಣಾ …

Read More »

ಅಂಗನವಾಡಿಗೆ ಅವಧಿ ಮೀರಿದ ಆಹಾರ ಪದಾರ್ಥ ಪೂರೈಕೆ?

ಬೆಂಗಳೂರು: ಮಕ್ಕಳು ಮತ್ತು ಗರ್ಭಿಣಿಯರಿಗೆ ಪೌಷ್ಠಿಕ ಆಹಾರದ ಹೆಸರಿನಲ್ಲಿ ಬಳಕಗೆ ಯೋಗ್ಯವಲ್ಲದ ಆಹಾರ ಪದಾರ್ಥಗಳನ್ನು ಪೂರೈಸಿದೆಯೇ? ಹೌದು ಎನ್ನುತ್ತಿವೆ ತುಮಕೂರು ಜಿಲ್ಲೆಯ ಅಂಗನವಾಡಿಗಳಿಗೆ ಪೂರೈಕೆಯಾಗಿರುವ ಆಹಾರದ ಪಟ್ಟಣಗಳ ಮೇಲೆ ನಮೂದಾಗಿರುವ ದಿನಾಂಕಗಳು.   ತಿಪಟೂರು, ತುಮಕೂರು ನಗರ ಮತ್ತು ಗ್ರಾಮಾಂತರ ಪ್ರದೇಶದ ಅಂಗನವಾಡಿಗಳಿಗೆ ಪೂರೈಕೆಯಾಗಿರುವ ತೊಗರಿ ಬೇಳೆ, ಹೆಸರು ಕಾಳು ಮತ್ತು ಮಿಶ್ರಿತ ಪೌಷ್ಠಿಕ ಆಹಾರದ ಪೊಟ್ಟಣಗಳ ಮೇಲೆ ಪ್ಯಾಕ್ ಮಾಡಿದ ದಿನಾಂಕವನ್ನು 2022ರ ನವೆಂಬರ್‌ ಎಂದು ಅಚ್ಚು ಹಾಕಲಾಗಿದೆ. ಉಪಯೋಗಿಸಬಹುದಾದ …

Read More »

ಶಾಲೆಗೆ ಹೋಗಿದ್ದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಬೆಳಗಾವಿ: ಶಾಲೆಗೆ ಹೋಗಿದ್ದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಗುಜರಾತ್ ಮೂಲದ ಬಿ.ಕೆ. ಕಂಗ್ರಾಳಿಯ ನಿವಾಸಿ ಆಕಾಶ ಭರತಕುಮಾರ ದೋಂಡಿಯಾ (19) ಬಂಧಿತ. ತಾಲ್ಲೂಕಿನ ಗ್ರಾಮವೊಂದರ 14 ವರ್ಷದ ಬಾಲಕಿ ನಗರದ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದಳು. ಬಾಲಕಿಯನ್ನು ಪುಸಲಾಯಿಸಿ ಸಲುಗೆ ಬೆಳೆಸಿದ ಆರೋಪಿ, ಗುಜರಾತಿಗೆ ಕರೆದೊಯ್ದು ಎರಡು ದಿನ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿ ಮರಳಿ ಬೆಳಗಾವಿಗೆ ಬಂದು ತಂದೆಗೆ …

Read More »

ನಂದಗಡದಲ್ಲಿ ಈಗ ಸುಧಾರಣಾ ಪರ್ವ ಆರಂಭ

ನಂದಗಡ (ಖಾನಾಪುರ ತಾಲ್ಲೂಕು): ಕ್ರಾಂತಿಯ ನೆಲ, ರಕ್ತಸಿಕ್ತ ಇತಿಹಾಸಕ್ಕೆ ಸಾಕ್ಷಿಯಾಗಿ ನಿಂತ ತಾಲ್ಲೂಕಿನ ನಂದಗಡದಲ್ಲಿ ಈಗ ಸುಧಾರಣಾ ಪರ್ವ ಆರಂಭವಾಗಿದೆ. ಈ ಸ್ಥಳಕ್ಕೆ ಜಾಗತಿಕ ಗುರುತು ತಂದುಕೊಟ್ಟ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಸಮಾಧಿ ಈಗ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ.   ಹಲವು ವರ್ಷಗಳಿಂದ ನಂದಗಡ ನಿರ್ಲಕ್ಷ್ಯಕ್ಕೆ ಒಳಗಾಗಿತ್ತು. ಚನ್ನಮ್ಮನ ಕಿತ್ತೂರು, ಬೈಲಹೊಂಗಲದಲ್ಲಿ ಆದಂಥ ಅಭಿವೃದ್ಧಿ ಕಾರ್ಯಗಳನ್ನು ಇಲ್ಲಿಯೂ ಮಾಡಬೇಕು ಎಂದು ಜನ ದಶಕದಿಂದ ಹೋರಾಟ ಮಾಡಿದ್ದರು. ಇತ್ತೀಚಿನ ವರ್ಷಗಳಲ್ಲಿ ಶುಕ್ರದೆಸೆ …

Read More »

ಬೆಳಗಾವಿ | ವೈಯಕ್ತಿಕ ಕಾರಣಕ್ಕೆ ಅಣ್ಣನ ಕೊಲೆ ಮಾಡಿದ ತಮ್ಮ

ನಾಗರಮುನ್ನೋಳಿ: ಸಮೀಪದ ಉಮರಾಣಿ ಗ್ರಾಮದ ಹೊರವಲಯದಲ್ಲಿ ನಿಪ್ಪಾಣಿ- ಮುಧೋಳ ರಸ್ತೆಯಲ್ಲಿ ತಮ್ಮನೇ ಅಣ್ಣನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಚಿಕ್ಕೋಡಿ ಪಟ್ಟಣದ ಡಂಬಳ ಕಾಲೊನಿ ನಿವಾಸಿ ಅಕ್ಬರ್‌ ಅಬ್ದುಲ್‌ ಶೇಖ್‌ (40) ಕೊಲೆಯಾದವರು. ಅಮ್ಜಾದ್ ಅಬ್ದುಲ್‌ ಶೇಖ್ (32) ಆರೋಪಿ. ಅಕ್ಬರ್ ಅಬ್ದುಲ್‌ ಶೇಖ್ ಅವರು ಕಬ್ಬೂರು ಗ್ರಾಮದಿಂದ ಚಿಕ್ಕೋಡಿಗೆ ದ್ವಿಚಕ್ರ ವಾಹನದ ಮೇಲೆ ಬರುತ್ತಿರುವ ವೇಳೆ ಕಾರಿನಿಂದ ಹಿಂಬಾಲಿಸಿಕೊಂಡು ಬಂದ ಸಹೋದರ, ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದರು. ವೈಯಕ್ತಿ ಕಾರಣವಳಿಂದ …

Read More »

ವಚನಾನಂದ ಸ್ವಾಮೀಜಿ ಬ್ರೋಕರ್ ಆಗಿದ್ದಾರೆ; ಮಂತ್ರಿ ಸ್ಥಾನ ಕೊಡಿಸುವುದಾಗಿ ಹೇಳಿ ಹಣಕ್ಕೆ ಬೇಡಿಕೆ; ಶಾಸಕ ಯತ್ನಾಳ್ ಆರೋಪ

ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಜೋಕರ್ ಎಂದು ಟೀಕಿಸಿರುವ ವಿಚಾರವಾಗಿ ವಾಗ್ದಾಳಿ ನಡೆಸಿರುವ ಯತ್ನಾಳ್, ವಚನಾನಂದ ಸ್ವಾಮೀಜಿ ಬ್ರೋಕರ್ ಆಗಿದ್ದಾರೆ ಎಂದು ಕಿಡಿಕಾರಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಶಾಸಕ ಯತ್ನಾಳ್, ಹರಿಹರ ಪೀಠದ ವಚನಾನಂದ ಸ್ವಾಮೀಜಿ ಬ್ರೋಕರ್ ಆಗಿದ್ದಾರೆ. ಮಂತ್ರಿ ಸ್ಥಾನ ಕೊಡಿಸುವುದಾಗಿ ಹೇಳಿ ಹಣ ಕೇಳುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ವಚನಾನಂದ ಶ್ರೀಗಳು ಯಡಿಯೂರಪ್ಪ ಅವರಿಂದ 10 ಕೋಟಿ ರೂಪಾಯಿ ವಸೂಲಿ ಮಾಡಿದ್ದಾರೆ. ಮಠದ ಅಭಿವೃದ್ಧಿ ಕಾಮಗಾರಿ …

Read More »

ರಾಜ್ಯದ 60 ವರ್ಷ ಮೇಲ್ಪಟ್ಟವರಿಗೆ ಗುಡ್ ನ್ಯೂಸ್: ಸರ್ಕಾರದಿಂದಲೇ ಉಚಿತ ಕಣ್ಣಿನ ಆಪರೇಷನ್‌, ಕನ್ನಡಕ ವಿತರಣೆ

ಹಾವೇರಿ: ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಕಣ್ಣಿನ ಆಪರೇಷನ್ ( Eye Operation ) ಮಾಡಿಸಲಾಗುತ್ತದೆ. ಅಲ್ಲದೇ ಉಚಿತ ಕನ್ನಡಕವನ್ನು ಕೂಡ ನೀಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಹೇಳಿದ್ದಾರೆ.   ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಇಂದು ತಾಲೂಕು ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಕಾರ್ಯಕ್ರಮಕ್ಕೆ ಶಿಲಾನ್ಯಾಸ ನೆರವೇರಿಸಿದ ಬಳಿಕ ಮಾತನಾಡಿದ ಅವರು, 96 ಕೋಟಿ ವೆಚ್ಚದ ಆಸ್ಪತ್ರೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. …

Read More »

ಬೆಳಗಾವಿ ಜಿಲ್ಲೆಯಲ್ಲಿ ಛಲವಾದಿ ಸಮಾಜದ ಜನಸಂಖ್ಯೆ ದೊಡ್ಡ ಪ್ರಮಾಣದಲ್ಲಿ ಇದ್ದರೂ ಕೂಡ ಒಬ್ಬರೂ ಶಾಸಕರು ಇಲ್ಲಾ

ಬೆಳಗಾವಿ ಜಿಲ್ಲೆಯಲ್ಲಿ ಛಲವಾದಿ ಸಮಾಜದ ಜನಸಂಖ್ಯೆ ದೊಡ್ಡ ಪ್ರಮಾಣದಲ್ಲಿ ಇದ್ದರೂ ಕೂಡ ಒಬ್ಬರೂ ಶಾಸಕರು ಇರದೇ ಇರುವುದು ನಮ್ಮ ದುರ್ದೈವ. ಸಂಘಟಿತರಾಗದಿದ್ರೆ ನಮ್ಮ ಸಮಾಜಕ್ಕೆ ರಾಜಕೀಯ ಶಕ್ತಿ ಬರುವುದಿಲ್ಲ ಎಂದು ಹುಬ್ಬಳ್ಳಿ ಕಾಂಗ್ರೆಸ ಶಾಸಕ ಪ್ರಸಾದ ಅಬ್ಬಯ್ಯ ಕರೆ ನೀಡಿದರು. ರವಿವಾರ ನಗರದ ಅಂಜುಮನ್-ಎ-ಇಸ್ಲಾಂ ಸಂಸ್ಥೆಯ ಸಭಾಂಗಣದಲ್ಲಿ ಬೆಳಗಾವಿ ಜಿಲ್ಲಾ ಛಲವಾದಿ ಸಮಾಜದ ಸಮಾವೇಶ ಕುರಿತು ಪೂರ್ವಭಾವಿ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು ಕಾಂಗ್ರೆಸ್, ಬಿಜೆಪಿ ಟಿಕೆಟ್ ಸಿಕ್ಕರೂ ವ್ಯವಸ್ಥಿತವಾಗಿ …

Read More »