Breaking News

ಎಂಎಲ್‌ಸಿ ಆರ್​.ಶಂಕರ್ ಮನೆ ಮೇಲೆ ದಾಳಿ: 8 ಕೋಟಿ ರೂ. ಮೌಲ್ಯದ ಸೀರೆ, ತಟ್ಟೆ-ಲೋಟಾ, ಬ್ಯಾಗ್‌ ಪತ್ತೆ

ಹಾವೇರಿ : ಬಿಜೆಪಿ ವಿಧಾನಪರಿಷತ್ ಸದಸ್ಯ ಆರ್​.ಶಂಕರ್ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಬೀರಲಿಂಗೇಶ್ವರ ನಗರದಲ್ಲಿರುವ ಶಂಕರ್​ ಮನೆ ಮೇಲೆ ನಿನ್ನೆ ತಡರಾತ್ರಿ ದಾಳಿಯಾಗಿದ್ದು, ಈ ವೇಳೆ ಆರ್.ಶಂಕರ್ ಗೃಹಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕರಿಗೆ ಹಂಚಲು ತಂದಿದ್ದ ಹಲವು ವಸ್ತುಗಳು ಪತ್ತೆಯಾಗಿವೆ.   ಆರ್.ಶಂಕರ್ ಭಾವಚಿತ್ರ ಇರುವ ಸೀರೆ ಬಾಕ್ಸ್, ತಟ್ಟೆ, ಲೋಟಾ ಹಾಗೂ ಎಲ್.ಕೆ.ಜಿಯಿಂದ ಪದವಿ ಕಾಲೇಜು ಮಕ್ಕಳ ತನಕ ಹಂಚಲು …

Read More »

ಉದ್ಘಾಟನೆಗೊಂಡ ಎರಡೇ ದಿನಗಳಲ್ಲಿ ಕಿತ್ತುಬಂದ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ವೇ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಿದ ಎರಡೇ ದಿನಗಳಲ್ಲಿ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ದುರಸ್ತಿ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಮೂಲಗಳ ಪ್ರಕಾರ, ಬೀಳಗಿ ಬೈಪಾಸ್ ನ ಕೊನೆಯಲ್ಲಿ ಗುಂಡಿಗಳು ಕಂಡುಬಂದಿವೆ.   ಈಗ, ಎನ್‌ಎಚ್‌ಎಐ ದುರಸ್ತಿ ಕಾರ್ಯಗಳನ್ನು ಕೈಗೆತ್ತಿಕೊಂಡಿದೆ. ಇದು ಬಿಜೆಪಿ ನಾಯಕರು ಹೇಳಿಕೊಳ್ಳುತ್ತಿರುವ ಈ 9,000 ಕೋಟಿ ರೂ.ಗಳ ಕೆಲಸದ ಸಾಲದ ಗುಣಮಟ್ಟದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ಯೋಜನೆಯ ಅನುಷ್ಠಾನದಲ್ಲಿ ಭ್ರಷ್ಟಾಚಾರದ ಆರೋಪದ ಬಗ್ಗೆ …

Read More »

ಕಾಡುಕೋಣ ಬೇಟೆಯಾಡಿ ಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆ ತಂಡ ಬಂಧಿಸಿದೆ.

ಖಾನಾಪುರ: ತಾಲೂಕಿನ ನಂದಗಡದಲ್ಲಿ ಕಾಡುಕೋಣ ಬೇಟೆಯಾಡಿ ಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆ ತಂಡ ಬಂಧಿಸಿದೆ. ಡೆವಿಡ್ ಫಿಗೇರ್ ಮತ್ತು ಹಸನ್ ಬೇಪಾರಿ ಬಂಧಿತರು. ಇವರಿಂದ 11 ಕೆಜಿ ಕಾಡುಕೋಣದ ಮಾಂಸ, ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ, ೆರಡು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.     ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.     ಬೆಳಗಾವಿ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚವ್ಹಾಣ ಅವರ …

Read More »

ಬೆಳಗಾವಿ ನಗರದ ಕ್ಲಬ್ ರೋಡ್ ನಲ್ಲಿರುವ ಸಿಪಿಇಡಿ ಗ್ರೌಂಡ್‌ನಲ್ಲಿ17ರಂದು ಅಪ್ಪು ಜನ್ಮದಿನೋತ್ಸವ

ಬೆಳಗಾವಿ: ಡಾ. ಪುನೀತ್ ರಾಜಕುಮಾರ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಮಾರ್ಚ್ 17ರಂದು  ‘ಅಪ್ಪು ಜನ್ಮದಿನೋತ್ಸವ’  ಕಾರ್ಯಕ್ರಮ ಆಯೋಜಿಸಲಾಗಿದೆ. ನಗರದ ಕ್ಲಬ್ ರೋಡ್ ನಲ್ಲಿರುವ ಸಿಪಿಇಡಿ ಗ್ರೌಂಡ್‌ನಲ್ಲಿ ಅದ್ಧೂರಿ ಸಮಾರಂಭವನ್ನು ಅಪ್ಪು ಅಭಿಮಾನಿ ಬಳಗ ಅಯೋಜಿಸಿದೆ. ಅಂದು ಸಂಜೆ 4.30ರಿಂದ ಕಾರ್ಯಕ್ರಮಗಳು ಆರಂಭವಾಗಲಿದ್ದು, ಈ ಶುಭ ಸಂದರ್ಭದಲ್ಲಿ ಮಮತ ಕ್ರಿಯೇಷನ್ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ಪರ್ಯಾಯ ಕನ್ನಡ ಚಲನಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗುವುದು ಎಂದು ಅಪ್ಪು ಜನ್ಮದಿನೋತ್ಸವ ದ ಸಂಘಟಕ …

Read More »

ಮತ್ತೊಮ್ಮೆ ಮುಂದೂಡಲ್ಪಟ್ಟ ಪ್ರಜಾಧ್ವನಿ ಕಾರ್ಯಕ್ರಮ

ಬೆಳಗಾವಿ: ಬೆಳಗಾವಿ ಜಿಲ್ಲೆಯ ವಿವಿಧೆಡೆ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ಪ್ರಜಾಧ್ವನಿ ಕಾರ್ಯಕ್ರಮ ಮತ್ತೊಮ್ಮೆ ಮುಂದೂಡಲ್ಪಟ್ಟಿದೆ. ಇದೇ 20ರಂದು ರಾಹುಲ್ ಗಾಂಧಿ ಬೆಳಗಾವಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಜಾಧ್ವನಿ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ ತಿಳಿಸಿದ್ದಾರೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಇದೇ 17ರಿಂದ ಗೋಕಾಕ, ಹಾರೂಗೇರಿ, ಅಥಣಿ, ಕಾಗವಾಡ (ಮದಬಾವಿ), ಕಂಕನವಾಡಿ, ಕಾಕತಿ ಮೊದಲಾದ ಕಡೆಗಳಲ್ಲಿ ಪ್ರಜಾ ಧ್ವನಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ ರಾಹುಲ ಗಾಂಧಿ ಭೇಟಿ ನಿಗದಿಯಾಗಿದ್ದರಿಂದ ಎಲ್ಲವನ್ನೂ …

Read More »

ಮಾರ್ಚ್ 21ರಿಂದ 23,000 ಬಸ್ ಗಳ ಸೇವೆ ಸ್ಥಗಿತ*

ಬೆಂಗಳೂರು: ಯುಗಾದಿ ಹಬ್ಬಕ್ಕೆ ಪ್ರಯಾಣಿಕರಿಗೆ ಕೆ ಎಸ್ ಆರ್ ಟಿಸಿ ಸಿಬ್ಬಂದಿ ಬಿಗ್ ಶಾಕ್ ನೀಡಿದ್ದಾರೆ. ವಿವಿಧ ಬೇಡಿಕೆ ಇಡೇರಿಕೆಗಾಗಿ ಆಗ್ರಹಿಸಿ ಕೆ ಎಸ್ ಆರ್ ಟಿಸಿ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಮಾರ್ಚ್ 21ರಿಂದ ಕೆ ಎಸ್ ಆರ‍್ ಟಿಸಿ ನೌಕರರು ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ನಾಲ್ಕು ನಿಗಮದ ನೌಕರರು ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಾರ್ಚ್ 21ರಿಂದ 23,000 ಬಸ್ ಗಳು ರಸ್ತೆಗಿಳಿಯುವುದಿಲ್ಲ ಎಂದು ಸಾರಿಗೆ ನೌಕರರ ಸಂಘ …

Read More »

ಬಸನಗೌಡ ಪಾಟೀಲ ಯತ್ನಾಳ ಮತ್ತು ನಾವು ಆತ್ಮೀಯ ಸ್ನೇಹಿತರು:B.S.Y.

ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮತ್ತು ನಾವು ಆತ್ಮೀಯ ಸ್ನೇಹಿತರು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೋ ಒಂದೆರಡು ಸಂದರ್ಭದಲ್ಲಿ ಹೇಳಿಕೆ ನೀಡಿರುವುದನ್ನು ನಾವು ಅಪರಾಧ ಎಂದು ಪರಿಗಣಿಸುವುದಿಲ್ಲ. ನಮ್ಮ ಮಧ್ಯದಲ್ಲಿ ಯಾವುದೇ ಗೊಂದಲವಿಲ್ಲ. ಎಲ್ಲರೂ ಒಟ್ಟಾಗಿ ಹೋಗುತ್ತೇವೆ ಸ್ಪಷ್ಟಪಡಿಸಿದರು. ವಿಜಯೇಂದ್ರ ಹಾಗೂ ರಾಜ್ಯದ ಯಾವುದೇ ಬಿಜೆಪಿ ಶಾಸಕರ ಟಿಕೆಟ್‌ ನಿರ್ಧಾರವನ್ನು ಚುನಾವಣಾ ಸಮಿತಿ ಮಾಡುತ್ತದೆ. ನಾವು ಕೇವಲ ಸಲಹೆ ಕೊಡಬಹುದು. ಅಂತಿಮ …

Read More »

ರೈತರ ಹೆಸರಿನಲ್ಲಿ ಬಿ.ಸಿ.ಪಾಟೀಲರಿಂದ ಲೂಟಿ: ಸಿದ್ದರಾಮಯ್ಯ

ಹಾವೇರಿ: ‘ಶಾಸಕ ಮಾಡಾಳ್‌ ವಿರೂಪಾಕ್ಷಪ್ಪನ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದಾಗ ₹8 ಕೋಟಿ ಸಿಕ್ಕಿದೆ. ಕೃಷಿ ಸಚಿವ ಬಿ.ಸಿ.ಪಾಟೀಲ್‌ ಮನೆ ಮೇಲೆ ದಾಳಿ ಮಾಡಿದರೆ ಕನಿಷ್ಠ ₹1 ಸಾವಿರ ಕೋಟಿ ಸಿಗುತ್ತದೆ. ರೈತರ ಹೆಸರು ಹೇಳುವುದು ಲೂಟಿ ಹೊಡೆಯುವುದು ಇದೇ ಪಾಟೀಲರ ಕಸುಬಾಗಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.   ಹಿರೇಕೆರೂರು ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ‘ಕಾಂಗ್ರೆಸ್‌ ಪ್ರಜಾಧ್ವನಿ ಯಾತ್ರೆ’ ಸಮಾವೇಶದಲ್ಲಿ …

Read More »

ತೇರದಾಳ ಮತಕ್ಷೇತ್ರಕ್ಕೆ ಸಿದ್ದು ಸವದಿ ಅಭ್ಯರ್ಥಿ – B.S.Y.

ರಬಕವಿ-ಬನಹಟ್ಟಿ: ತೇರದಾಳ ಮತಕ್ಷೇತ್ರದ ಶಾಸಕ ಸಿದ್ದು ಸವದಿ ಮತಕ್ಷೇತ್ರದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಅನೇಕ ಉತ್ತಮ ಕಾರ್ಯಗಳನ್ನು ಮಾಡಿದ್ದು, ಅವರೇ ತೇರದಾಳ ಮತಕ್ಷೇತ್ರದ ಅಭ್ಯರ್ಥಿಯಾಗಿ ಮುಂದುವರೆಯಲಿದ್ದಾರೆ ಮತ್ತು ಈ ಬಾರಿಯೂ ಕೂಡಾ ಭಾರಿ ಅಂತರದಿಂದ ಜಯ ಸಾಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.   ಮಂಗಳವಾರ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಟಹಟಿ ತಾಲೂಕಿನ ಬನಹಟ್ಟಿಯ ನಿರೀಕ್ಷಣಾ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ, ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವವೇ ಇಲ್ಲ. ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ …

Read More »

ಸಾದಾ ಹೊಟೇಲ್‌ನಲ್ಲಿ ಜನರ ಮಧ್ಯ ಭರಪೂರ ನ್ಯಾರಿ ಮಾಡಿದ ಸಚಿವರು !

ರಬಕವಿ-ಬನಹಟ್ಟಿ : ಹಾ.. ನಿಮ್ಗೇನ್ ಬೇಕ್ರಿ..? ಕೊಡ್ತೀನಿ ತಡ್ರೀ.. ಹೀಗೆ ಸಾಮಾನ್ಯ ಹೊಟೇಲ್‌ನಲ್ಲಿ ಗ್ರಾಹಕರನ್ನು ಕೇಳುವುದು ರೂಢಿ. ಇಂತಹ ಹೊಟೇಲ್‌ನಲ್ಲಿ ನೀರಾವರಿ ಸಚಿವ ಗೋವಿಂದ ಕಾರಜೋಳ, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಶಾಸಕ ಸಿದ್ದು ಸವದಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪೂರ, ಮನೋಹರ ಶಿರೋಳ ಸೇರಿದಂತೆ ಅನೇಕರು ಸಾಮಾನ್ಯ ಹೊಟೇಲ್‌ನಲ್ಲಿ ಸಾಮಾನ್ಯರಂತೆ ಯಾವದೇ ಬಿಗುಮಾನವಿಲ್ಲದೆ ಜನರ ಮಧ್ಯದಲ್ಲಿಯೇ ಖಾರದ ಚಪಾತಿ, …

Read More »