Breaking News

ಚಿತ್ರಕಲಾ ಶಿಲ್ಪಿ ಡಿ.ವ್ಹಿ.ಹಾಲಭಾವಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಧಾರವಾಡ: ನಗರದ ಆಲೂರು ಭವನದಲ್ಲಿ ಮಂಗಳವಾರ ಸಂಜೆ ಚಿತ್ರಕಲಾ ಶಿಲ್ಪಿ ಡಿ.ವ್ಹಿ.ಹಾಲಭಾವಿ ರಾಷ್ಟ್ರೀಯ ಸ್ಮಾರಕ (ರಿ)ಟ್ರಸ್ಟ್‌ ವತಿಯಿಂದ ಡಿ.ವ್ಹಿ. ಹಾಲಭಾವಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಿತು. 2022ನೇ ಸಾಲಿಗೆ ಕಲಾ ಪ್ರಪಂಚದಲ್ಲಿ ಜೀವಮಾನ ಸಾಧನೆಗಾಗಿ 1ಲಕ್ಷ ನಗದು ಒಳಗೊಂಡ ಕುಂಚ ಕಲಾ ತಪಸ್ವಿ ರಾಷ್ಟ್ರೀಯ ಪ್ರಶಸ್ತಿಯನ್ನು ಬೆಂಗಳೂರಿನ ಹಿರಿಯ ಕಲಾವಿದ ಪಿ.ಸಂಪತ್‌ಕುಮಾರ, 50 ಸಾವಿರ ನಗದು ಒಳಗೊಂಡ ಕುಂಚ ಕಲಾಶ್ರೀ ರಾಷ್ಟ್ರೀಯ ಪ್ರಶಸ್ತಿಯನ್ನು ಧಾರವಾಡದ ಎಫ್‌.ವಿ.ಚಿಕ್ಕಮಠ ಅವರಿಗೆ ಪ್ರದಾನ …

Read More »

ಉತ್ತಮ ಬ್ರ್ಯಾಂಡ್‌ ಹೆಸರನ್ನು ಸೂಚಿಸುವ ವಿಜೇತರಿಗೆ ಆಕರ್ಷಕ ಬಹುಮಾನ:KSRTC

ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ನೂತನವಾಗಿ ಆರಂಭಿಸಲಿರುವ ಮಲ್ಟಿ ಆಯಕ್ಸೆಲ್‌ ಸ್ಲೀಪರ್ ಮತ್ತು ವಿದ್ಯುತ್‌ ಚಾಲಿತ ಬಸ್‌ಗಳನ್ನು ಪರಿಚಯಿಸುತ್ತಿದ್ದು, ಈ ವಾಹನಗಳಿಗೆ ಪ್ರಯಾಣಿಕರಿಂದ ಬ್ರ್ಯಾಂಡ್‌ ಹೆಸರು ಆಹ್ವಾನಿಸಿದೆ.   ಹೊಸದಾಗಿ ಪರಿಚಯಿಸಲಾಗುತ್ತಿರುವ ಈ ಬಸ್‌ಗಳಿಗೆ ಪ್ರಯಾಣಿಕರು ಬ್ರ್ಯಾಂಡ್‌ ಹೆಸರು, ಟ್ಯಾಗ್‌ಲೈನ್‌ ಹಾಗೂ ಗ್ರಾಫಿಕ್ಸ್‌ಗಳನ್ನು ಕೆಎಸ್‌ಆರ್‌ಟಿಸಿಗೆ ಕಳುಹಿಸಬೇಕು. ಪ್ರತೀ ಮಾದರಿಯ ವಾಹನಗಳಿಗೆ ಉತ್ತಮ ಬ್ರ್ಯಾಂಡ್‌ ಹೆಸರನ್ನು ಸೂಚಿಸುವ ವಿಜೇತರಿಗೆ ಆಕರ್ಷಕ ಬಹುಮಾನ ನೀಡಿ ಗೌರವಿಸಲಾಗುವುದು. ಉತ್ತಮ ಬ್ರ್ಯಾಂಡ್‌ ಹೆಸರು ಸೂಚಿಸಿದವರಿಗೆ …

Read More »

ಇಂಗ್ಲೆಂಡ್‌, ಫ್ರಾನ್ಸ್‌ ಸೇರಿದಂತೆ 10ಕ್ಕೂ ಹೆಚ್ಚು ದೇಶಗಳೊಂದಿಗೆ ವ್ಯಾಪಾರ-ವಹಿವಾಟು ಸಂಪರ್ಕ ಹೊಂದಿರುವ ಬೆಳಗಾವಿಯ ಫೌಂಡ್ರಿ ಉದ್ಯಮಿಗಳಲ್ಲಿ ಹೊಸ ಭರವಸೆ

ಬೆಳಗಾವಿ: ಇಂಗ್ಲೆಂಡ್‌, ಫ್ರಾನ್ಸ್‌ ಸೇರಿದಂತೆ 10ಕ್ಕೂ ಹೆಚ್ಚು ದೇಶಗಳೊಂದಿಗೆ ವ್ಯಾಪಾರ-ವಹಿವಾಟು ಸಂಪರ್ಕ ಹೊಂದಿರುವ ಬೆಳಗಾವಿಯ ಫೌಂಡ್ರಿ ಉದ್ಯಮಿಗಳಲ್ಲಿ ಹೊಸ ಭರವಸೆಯ ಬೆಳಕು ಕಾಣಿಸಿಕೊಂಡಿದೆ. ಕೈಗಾರಿಕಾ ಕ್ಷೇತ್ರದಲ್ಲಿ ಬೆಂಗಳೂರು ನಂತರ ರಾಜ್ಯ ಸರಕಾರಕ್ಕೆ ತೆರಿಗೆ ರೂಪದಲ್ಲಿ ಅತೀ ಹೆಚ್ಚಿನ ಆದಾಯ ನೀಡುತ್ತಿರುವ ಗಡಿ ಜಿಲ್ಲೆ ಬೆಳಗಾವಿ ಮಾಹಿತಿ ತಂತ್ರಜ್ಞಾನ ಮತ್ತು ಫೌಂಡ್ರಿ ಕ್ಷೇತ್ರದಲ್ಲಿ ಹೊಸ ಆಶಾದಾಯಕ ಬೆಳವಣಿಗೆ ನೋಡುತ್ತಿದೆ. ಇದಕ್ಕೆ ಪೂರಕವಾಗಿ ಮುಖ್ಯಮಂತ್ರಿಗಳ ಜೊತೆಗಿನ ಸಭೆ ಈ ಆಶಾದಾಯಕ ಹೆಜ್ಜೆಗೆ ಮುನ್ನುಡಿ ಬರೆದಿದೆ. …

Read More »

ಅಶ್ಲೀಲ ದೃಶ್ಯ ತೋರಿಸಿ ಮರ್ಯಾದೆ ತೆಗೆಯುತ್ತೆನೆ ಎಂದು ಬ್ಲ್ಯಾಕ್​​ಮೇಲ್ ,​ನಿವೃತ್ತ ಅಧಿಕಾರಿಗಳೇ ಟಾರ್ಗೆಟ್​!

ಬೆಂಗಳೂರು: ಸ್ಮಾರ್ಟ್​ಫೋನ್​ ಬಳಕೆದಾರರೇ ಎಚ್ಚರ. ಸೈಬರ್​ ಕಳ್ಳರು ಹೊಸ ಮೋಸದ ಅಸ್ತ್ರ ವಾಟ್ಸ್​ಆಯಪ್​ ವಿಡಿಯೋ ಕಾಲ್​ ಬಲೆ ಬೀಸುತ್ತಿದ್ದಾರೆ. ಚಪಲಕ್ಕೆ ಅಶ್ಲೀಲ ವಿಡಿಯೋ ನೋಡಿದರೆ ಸಾಕು ಅದನ್ನೇ ಅಸ್ತ್ರವಾಗಿಟ್ಟುಕೊಂಡು ಬ್ಲ್ಯಾಕ್​​​ಮೇಲ್​ ಮಾಡಿ ಹಣ ಪೀಕುತ್ತಿದ್ದಾರೆ ಹುಷಾರ್​.   ಅದರಲ್ಲಿಯೂ ಇತ್ತೀಚೆಗೆ ನಿವೃತ್ತ ನೌಕರರು ಮತ್ತು ವೃದ್ಧರನ್ನೇ ಟಾರ್ಗೆಟ್​ ಮಾಡುತ್ತಿದ್ದಾರೆ. ೇಸ್​ಬುಕ್​, ಟ್ವಿಟರ್​, ಇನ್​ಸ್ಟ್ರಾಗ್ರಾಂನಲ್ಲಿ ಫ್ರೆಂಡ್​​ ರಿಕ್ವೆಸ್ಟ್​ ಕಳುಹಿಸಿ ಅಥವಾ ನೇರವಾಗಿ ವಾಟ್ಸ್​ಆಯಪ್​ನಲ್ಲಿ ವಿಡಿಯೋ ಕಾಲ್​ ಮಾಡಿ ಯುವತಿಯರು ಸ್ನೇಹ ಬಯಸುತ್ತಾರೆ. ವಿಡಿಯೋ …

Read More »

ಹೃದಯಾಘಾತದಿಂದ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ವೈಸ್ ಚೇರ್ಮನ್ ವಿಕ್ರಮ್ ಕಿರ್ಲೋಸ್ಕರ್ ನಿಧನ

ಬೆಂಗಳೂರು: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ವೈಸ್ ಚೇರ್ಮನ್ ವಿಕ್ರಮ್ ಕಿರ್ಲೋಸ್ಕರ್(64) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿಕ್ರಮ್ ಕಿರ್ಲೋಸ್ಕರ್ ಭಾರತದ ವಾಹನೋದ್ಯಮದ ದಿಗ್ಗಜರಲ್ಲಿ ಒಬ್ಬರು. ವಿಕ್ರಮ್ ಕಿರ್ಲೋಸ್ಕರ್ ಅವರು ತೀವ್ರ ಹೃದಯಾಘಾತದಿಂದ ಬಳಲುತ್ತಿದ್ದರು.   ಟೊಯೊಟಾ ಇಂಡಿಯಾ ತನ್ನ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ ಗಳಲ್ಲಿ ನಿಧನದ ಸುದ್ದಿಯನ್ನು ದೃಢಪಡಿಸಿದೆ. ನವೆಂಬರ್ 29, 2022 ರಂದು ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನ ಉಪಾಧ್ಯಕ್ಷರಾದ ಶ್ರೀ ವಿಕ್ರಮ್ ಎಸ್.ಕಿರ್ಲೋಸ್ಕರ್ ಅವರ ಅಕಾಲಿಕ ನಿಧನವನ್ನು ತಿಳಿಸಲು ನಾವು ತುಂಬಾ …

Read More »

ಮೀಸಲು ಎಡವಟ್ಟು ಇಕ್ಕಟ್ಟು: ಶಿಕ್ಷಕರ ತಾತ್ಕಾಲಿಕ ಆಯ್ಕೆಪಟ್ಟಿಗೆ ಆಕಾಂಕ್ಷಿಗಳಿಂದ ಭಾರಿ ಆಕ್ರೋಶ

ಇಟಿ, ಸಿಇಟಿಗಳನ್ನು ಎದುರಿಸಿ ಎಲ್ಲ ಅರ್ಹತೆಗಳೊಂದಿಗೆ ಅಯ್ಕೆಪಟ್ಟಿಯಲ್ಲಿ ಅವಕಾಶ ಪಡೆದಿದ್ದರೂ, ಮೀಸಲಾತಿ ಅನ್ವಯಿಸುವ ವಿಚಾರದಲ್ಲಿ ಉಂಟಾಗಿರುವ ಗೊಂದಲದಿಂದಾಗಿ ಅವಕಾಶ ಕೈತಪುಪತ್ತಿದೆ ಎಂದು ಪದವೀಧರ ಪ್ರಾಥಮಿಕ ಶಾಲಾ ಶಿಕಕ್ಷರ ಹುದ್ದೆಯ ಸಾವಿರಾರು ಆಕಾಂಕ್ಷಿಗಳು ಇಲಾಖೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಲ್ಯಾಣ ಕರ್ನಾಟಕ ಹಾಗೂ ಮಹಿಳಾ ‘ಮೀಸಲಾತಿ’ ನೀಡುವಲ್ಲಿ ಉಂಟಾಗಿರುವ ಎಡವಟ್ಟು ಇದಕ್ಕೆ ಕಾರಣವೆಂದು ದೂರಿದ್ದಾರೆ. ಈ ಗೊಂದಲವನ್ನು ಸರಿಪಡಿಸುವಂತೆ ಭಾವಿ ಶಿಕ್ಷಕರ ವಲಯದಿಂದ ಒತ್ತಾಯ ಕೇಳಿಬಂದಿದೆ. ಶಿಕ್ಷಕರ ನೇಮಕಾತಿ ಸಂಬಂಧ …

Read More »

ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿದ C.M. ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ಜವಳಿ ವಾಣಿಜ್ಯ ಮತ್ತು ಕೈಗಾರಿಕೆ ಗ್ರಾಹಕ ವ್ಯವಹಾರಗಳ ಸಚಿವಾಲಯ ಹಾಗೂ ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿದರು. ಈ ವೇಳೆ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ಜೊತೆಗೆ ರಾಜ್ಯದ ವಿವಿಧ ಅಭಿವೃದ್ಧಿ ಯೋಜನೆಗೆಳ ಬಗ್ಗೆ ಮುಖ್ಯಮಂತ್ರಿಗಳು ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ಬೃಹತ್ ಮತ್ತು ಮಧ್ಯಮ ನೀರಾವರಿ, ಜಲಸಂಪನ್ಮೂಲ ಸಚಿವರಾದ …

Read More »

ಇಡೀ ರಾಜ್ಯದಲ್ಲಿಯೇ ಗೋಕಾಕ್ ಮಾದರಿ ಕ್ಷೇತ್ರವನ್ನಾಗಿ ಮಾಡುವೆ: ರಮೇಶ ಜಾರಕಿಹೊಳಿ

ಗೋಕಾಕ್ ತಾಲೂಕಿನಲ್ಲಿ ಅಂಕಲಗಿ ಮತ್ತು ಅಕ್ಕತಂಗೇರಹಾಳ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಭೂಮಿ ಪೂಜೆ ನೆರವೇರಿಸಿದರು. ನಗರೋತ್ತಾನ ಯೋಜನೆಯಡಿ 5 ಕೋಟಿ ರೂಪಾಯಿ ಮತ್ತು 15ನೇ ಹಣಕಾಸಿನ ಯೋಜನೆಯಡಿ 2.5 ಕೋಟಿ ರೂಪಾಯಿ ವೆಚ್ಛದಲ್ಲಿ ರಸ್ತೆ ನಿರ್ಮಾಣ ಸೇರಿ ಇನ್ನಿತರ ಕಾಮಗಾರಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು 20ಕ್ಕೂ ಹೆಚ್ಚು ವರ್ಷಗಳ ಕಾಲ ತಮ್ಮ ಸೇವೆ ಮಾಡಲು ನನಗೆ ಅವಕಾಶ ಮಾಡಿಕೊಟ್ಟಿದ್ದಿರಿ. …

Read More »

ಕಾಂಗ್ರೆಸ್‌ ದಲ್ಲಿ ಎಷ್ಟು ಜನ ರೌಡಿಶೀಟರ್ ಇದ್ದಾರೆ ಎಂದು ಕಾಂಗ್ರೆಸ್‌ ಲೆಕ್ಕ ಹಾಕಲಿ:C.M.

ನವದೆಹಲಿ: ತಮ್ಮ ಪಕ್ಷದಲ್ಲಿ ಎಷ್ಟು ಜನ ರೌಡಿಶೀಟರ್ ಇದ್ದಾರೆ ಎಂದು ಕಾಂಗ್ರೆಸ್‌ ಲೆಕ್ಕ ಹಾಕಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು. ಸೈಲೆಂಟ್ ಸುನೀಲ್ ಜೊತೆಗೆ ಬಿಜೆಪಿ ನಾಯಕರು ವೇದಿಕೆ ಹಂಚಿಕೊಂಡ‌ ವಿಚಾರದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿದರು.   ಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಸಮಯ ಕೇಳಿದ್ದು, ನಾಳೆ ಸಮಯ ದೊರೆಯುವ ವಿಶ್ವಾಸವಿದೆ ಎಂದರು. ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್, ಭೂಪೇಂದ್ರ …

Read More »

ನಾಳೆ ಗಡಿ ವಿವಾದ ವಿಚಾರಣೆ ಸಮರ್ಥ ವಾದ ನಡೆಸುವ ಭರವಸೆ: ಬೊಮ್ಮಾಯಿ

ನವದೆಹಲಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಪ್ರಕರಣ ಇದೇ 30 ರಂದು ವಿಚಾರಣೆಗೆ ಬರಲಿದ್ದು, ಈ ಕುರಿತು ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ಕರ್ನಾಟಕದ ಪರವಾಗಿ ಸಮರ್ಥವಾಗಿ ವಾದ ಮಾಡುವ ಭರವಸೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.   ನವದೆಹಲಿಯಲ್ಲಿ ಹಿರಿಯ ವಕೀಲ ಮುಕುಲ್ ರೋಹಟಗಿ ಅವರನ್ನು ಮಂಗಳವಾರ ಭೇಟಿಯಾದ ಬಳಿಕ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. ಮುಕುಲ್ ರೋಹಟಗಿ ಹಿರಿಯ ವಕೀಲರಾಗಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರ …

Read More »