ಕಲಬುರಗಿ: ‘ಹಿಂದೂ ಮಹಿಳೆಯರ ರಕ್ಷಣೆಗಾಗಿ ನಿಮ್ಮ ಮನೆಗಳಲ್ಲಿ ಎಲ್ಲರಿಗೂ ಕಾಣಿಸುವ ಸ್ಥಳದಲ್ಲಿ ತಲ್ವಾರ್ ಇಟ್ಟುಕೊಳ್ಳಿ’ ಎಂದು ಶ್ರೀರಾಮ ಸೇನೆ ಸಂಘಟನೆಯ ರಾಷ್ಟ್ರೀಯ ಘಟಕದ ಅಧ್ಯಕ್ಷ ಪ್ರಮೋದ ಮುತಾಲಿಕ್ ಸಲಹೆ ನೀಡಿದರು. ಜಿಲ್ಲೆಯ ಯಡ್ರಾಮಿ ಪಟ್ಟಣದಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಪ್ರಯುಕ್ತ ಗುರುವಾರ ಶ್ರೀರಾಮಸೇನೆ ಸಂಘಟನೆ ವತಿಯಿಂದ ನಡೆದ ಸಂತರ ಸಮಾವೇಶದಲ್ಲಿ ಮಾತನಾಡಿದ ಅವರು, ‘ಒಂದು ತಲ್ವಾರ್ ಇಟ್ಟುಕೊಂಡರೆ ಪೊಲೀಸರು ಎಫ್‌ಐಆರ್ ಹಾಕಲ್ಲ. ತಲ್ವಾರ್ ಅನ್ನು ಸಹೋದರಿಯರ ರಕ್ಷಣೆಗೆ ಇಡಬೇಕೆ ಹೊರತು …
Read More »ಇದೇ ವರ್ಷ ಮಂಡ್ಯ ಸಾಹಿತ್ಯ ಸಮ್ಮೇಳನ: ಮುಂದಿನ ತಿಂಗಳು ಸಭೆ
ಬೆಂಗಳೂರು: ಮಂಡ್ಯದಲ್ಲಿ ಇದೇ ವರ್ಷ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನಿರ್ಧರಿಸಿದೆ. ಇದರಿಂದಾಗಿ ಒಂದೇ ವರ್ಷ ಎರಡು ಸಮ್ಮೇಳನ ನಡೆಸಿದಂತಾಗಲಿದೆ. ಹಾವೇರಿಯಲ್ಲಿ ನಡೆದ ಪರಿಷತ್ತಿನ ಕಾರ್ಯಕಾರಿಣಿ ಸಭೆಯಲ್ಲಿ ಮುಂದಿನ ಸಮ್ಮೇಳನದ ಆತಿಥ್ಯವನ್ನು ಮಂಡ್ಯಕ್ಕೆ ನೀಡಲಾಗಿದೆ. ಕಸಾಪ 1915ರಿಂದ ನಿಯಮಿತವಾಗಿ ಸಾಹಿತ್ಯ ಸಮ್ಮೇಳನವನ್ನು ನಡೆಸಿಕೊಂಡು ಬರುತ್ತಿದೆ. ವರ್ಷಕ್ಕೊಮ್ಮೆ ನಡೆಯಬೇಕಿದ್ದ ಈ ಸಮ್ಮೇಳನ, ಕಾರಣಾಂತರಗಳಿಂದ ಈ ಹಿಂದೆಯೂ ವರ್ಷಕ್ಕೆ ಎರಡು ಬಾರಿ ನಡೆದಿದೆ. 2020ರ …
Read More »ಸಂಗೊಳ್ಳಿ ರಾಯಣ್ಣನ ಕೀರ್ತಿ ಅಜರಾಮರ: ಸಂಸದೆ ಮಂಗಲಾ ಅಂಗಡಿ
ಬೈಲಹೊಂಗಲ: ನಾಡಿನ ಬಗ್ಗೆ ಅಭಿಮಾನ ಇಟ್ಟುಕೊಂಡು ದೇಶಪ್ರೇಮವನ್ನು ಮೆರೆದ ಶೂರ ಸಂಗೊಳ್ಳಿ ರಾಯಣ್ಣನ ಕೀರ್ತಿ ಅಜರಾಮರ ಎಂದು ಸಂಸದೆ ಮಂಗಲಾ ಅಂಗಡಿ ಹೇಳಿದರು. ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಉತ್ಸವ 2023 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಂಗೊಳ್ಳಿ ರಾಯಣ್ಣನ ಸ್ವಾಭಿಮಾನವನ್ನು ಬೆಳೆಸಿಕೊಳ್ಳಬೇಕು.ಇಂದಿನ ಯುವಕರು ದುಶ್ಚಟಗಳನ್ನು ತೊರೆದು ಸಂಗೊಳ್ಳಿ ರಾಯಣ್ಣನ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದರು. ಶಾಸಕ ಮಹಾಂತೇಶ ಕೌಜಲಗಿ,ಎಂಎಲ್ ಸಿ ಎಂ.ನಾಗರಾಜ ಯಾದವ,ಶಾಸಕ ಮಹಾಂತೇಶ ದೊಡ್ಡಗೌಡರ, ಕಾಡಾ ಅಧ್ಯಕ್ಷ …
Read More »ಕೆಪಿಟಿಸಿಎಲ್ ಅಕ್ರಮ ಪರೀಕ್ಷೆ: ಬಂಧಿತರ ಸಂಖ್ಯೆ ಅರ್ಧ ಶತಕ
ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕ ಲಿಖಿತ ಪರೀಕ್ಷೆಯಲ್ಲಿ ಇಲೆಕ್ಟ್ರಾನಿಕ್ ಡಿವೈಸ್ ಮತ್ತು ಮೈಕ್ರೋಚಿಪ್ ತೆಗೆದುಕೊಂಡು ಪರೀಕ್ಷೆ ಬರೆದಿದ್ದ ಮತ್ತೊಬ್ಬ ಅಭ್ಯರ್ಥಿಯನ್ನು ಗುರುವಾರ ಬಂಧಿಸುವ ಮೂಲಕ ಬಂಧಿತರ ಸಂಖ್ಯೆ ಅರ್ಧ ಶತಕವಾಗಿದೆ. ಕಲ್ಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ದರ್ಗಾಶಿರೂರ ಗ್ರಾಮದ ಶಿವರಾಜ್ ಲಕ್ಷ್ಮೀಪುತ್ರ ಪೊಲೀಸ್ ಪಾಟೀಲ್ (28) ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಈವರೆಗೆ ಒಟ್ಟು 50 ಜನರನ್ನು ಬಂಧಿಸಿದಂತಾಗಿದೆ. 7 ಆಗಸ್ಟ್ 2022ರಂದು ನಡೆದಿದ್ದ ಪರೀಕ್ಷೆ ಬರೆದಿದ್ದರು. ಪರೀಕ್ಷೆ ವೇಳೆ …
Read More »ಪಂಚಮಸಾಲಿ, ಒಕ್ಕಲಿಗ ಮೀಸಲಾತಿ ಓಟಕ್ಕೆ ಹೈಕೋರ್ಟ್‌ನಿಂದ ತಾತ್ಕಾಲಿಕ ತಡೆ
ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು 2-ಎ ಪ್ರವರ್ಗಕ್ಕೆ ಸೇರಿಸಿ ಮೀಸಲಾತಿ ನೀಡುವ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಗುರುವಾರ ಹೈಕೋರ್ಟ್ ಆದೇಶಿಸಿದೆ. ಪಂಚಮಸಾಲಿ ಸಮುದಾಯವನ್ನು 2-ಎ ಪ್ರವರ್ಗಕ್ಕೆ ಸೇರಿಸಬಾರದು ಎಂದು ಕೋರಿ ಬೆಂಗಳೂರು ನಿವಾಸಿ ಡಿ.ಜಿ. ರಾಘವೇಂದ್ರ ಎಂಬವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಲೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ಗುರುವಾರ ವಿಚಾರಣೆಗೆ ಪಟ್ಟಿಯಾಗಿತ್ತು. ಆದರೆ ದಿನದ ಕಲಾಪದ ಸಮಯ ಮುಗಿದದ್ದರಿಂದ ಅರ್ಜಿ ವಿಚಾರಣೆಗೆ ಬರಲಿಲ್ಲ. ಮುಖ್ಯ ನ್ಯಾಯಮೂರ್ತಿಯವರು …
Read More »ಇದು ಬರೀ ಮಾದಕ ಲೋಕವಲ್ಲ, ಲಿವಿಂಗ್ ಟುಗೆದರ್, ಸೆಕ್ಸ್ ಬೆರೆತ ವೈದ್ಯ ವಿದ್ಯಾರ್ಥಿಗಳ ಕರಾಳ ಲೋಕ
ಮಂಗಳೂರು: ಮಂಗಳೂರಿನ ಮೆಡಿಕಲ್ ಕಾಲೇಜುಗಳಲ್ಲಿ ಬೆಳಕಿಗೆ ಬಂದಿರುವ ಗಾಂಜಾ ಡ್ರಗ್ಸ್ ದಂಧೆಯಲ್ಲಿ (Drugs Mafia) ಕೇವಲ ಮಾದಕ ಲೋಕ ಮಾತ್ರವಲ್ಲ, ಲಿವಿಂಗ್ ಟುಗೆದರ್, ಸೆಕ್ಸ್ ಮತ್ತು ಗರ್ಲ್‌ಫ್ರೆಂಡ್‌ಗಳನ್ನು ನಶೆಗೆ ಎಳೆಯುವ ಕರಾಳ ಲೋಕವೂ ಬೆಳಕಿಗೆ ಬಂದಿದೆ. ಮಂಗಳೂರು ಪೊಲೀಸರು ಗಾಂಜಾ ಬಲೆಯಲ್ಲಿ ಬಿದ್ದಿದ್ದ, ಪೆಡ್ಲರ್‌ಗಳಾಗಿ ಕೆಲಸ ಮಾಡುತ್ತಿದ್ದ ನಾಲ್ವರು ವೈದ್ಯಕೀಯ ವಿದ್ಯಾರ್ಥಿನಿಯರು, ಇಬ್ಬರು ವಿದ್ಯಾರ್ಥಿಗಳು ಮತ್ತು ಇಬ್ಬರು ವೈದ್ಯರು ಸೇರಿದಂತೆ ೧೦ ಜನರನ್ನು ಬಂಧಿಸಿದ್ದಾರೆ. ಇವರು ಕೆಎಂಸಿ ಅತ್ತಾವರ, ಕೆ.ಎಂ.ಸಿ …
Read More »ಸಿಎಂ ಮನೆ ಮುಂದೆ ಪ್ರತಿಭಟನೆ ಮಾಡಲು ನಿರ್ಧರಿಸಿದ ಪಂಚಮಸಾಲಿ ಸಮಾಜ
ಹಾವೇರಿ: ಪಂಚಮಸಾಲಿ ಸಮುದಾಯಕ್ಕೆ 2A ಬದಲಾಗಿ 2D ಮಿಸಲಾತಿ ನೀಡಿರುವ ಹಿನ್ನಲೆ ನಾಳೆ(ಜ.13) ಶಿಗ್ಗಾಂವಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನೆ ಮುಂದೆ ಪಂಚಮಸಾಲಿ ಸಮಾಜ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಶಿಗ್ಗಾಂವಿಯ ರಾಣಿ ಚೆನ್ನಮ್ಮ ಸರ್ಕಲ್ನಿಂದ ಬೆಳಗ್ಗೆ 10 ಗಂಟೆಗೆ ಸಿಎಂ ನಿವಾಸದವರೆಗೂ ಬೃಹತ್ ಪಾದಯಾತ್ರೆ ನಡೆಯಲಿದೆ. ಪಂಚಮಸಾಲಿ ಸಮಾಜದ ಜಯ ಮೃತ್ಯುಂಜಯ ಸ್ವಾಮೀಜಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ, ವಿಜಯಾನಂದ ಕಾಶಪ್ಪನವರ, ಅರವಿಂದ ಬೆಲ್ಲದ, ಶಾಸಕಿ ಲಕ್ಷ್ಮಿ …
Read More »ಸ್ವಾಮಿ ವಿವೇಕಾನಂದರ ಸ್ಫೂರ್ತಿಯಿಂದ ದೇಶ ಮುಂದಕ್ಕೆ ಕೊಂಡೊಯ್ಯಬೇಕು: ಹುಬ್ಬಳ್ಳಿಯಲ್ಲಿ ಪ್ರಧಾನಿ ಮೋದಿ
ಹುಬ್ಬಳ್ಳಿ: ಸ್ವಾಮಿ ವಿವೇಕಾನಂದರಿಂದ ಸ್ಫೂರ್ತಿ ಪಡೆದು ತಮ್ಮ ಪ್ರಯತ್ನ ಮತ್ತು ಜವಾಬ್ದಾರಿಗಳ ಮೂಲಕ ಅಮೃತ ಕಾಲದ ಸಮಯದಲ್ಲಿ ಭಾರತವನ್ನು ಮುಂದಕ್ಕೆ ಕೊಂಡೊಯ್ಯುವುದು ಭಾರತೀಯ ಯುವಕರ ಮಂತ್ರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. 26 ನೇ ರಾಷ್ಟ್ರೀಯ ಯುವ ಜನೋತ್ಸವ ಉದ್ಘಾಟನೆ ನಡೆಸಿ ಮಾತನಾಡಿ, 2023 ರ ರಾಷ್ಟ್ರೀಯ ಯುವ ದಿನದ ಈ ದಿನ ಬಹಳ ವಿಶೇಷವಾಗಿದೆ. ಒಂದೆಡೆ ಈ ಶಕ್ತಿ ಹಬ್ಬ ಮತ್ತೊಂದೆಡೆ ಸ್ವಾತಂತ್ರ್ಯದ ಅಮೃತ ಮಹೋತ್ಸವ. ಏಳಿ …
Read More »ದೇಶದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದ 6 ಯೂಟ್ಯೂಬ್ ಚಾನೆಲ್‌ಗಳಿಗೆ ನಿಷೇಧ
ನವದೆಹಲಿ: ದೇಶದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದ ಆರು ಯೂಟ್ಯೂಬ್ ಚಾನೆಲ್‌ಗಳ ಮೇಲೆ ಕೇಂದ್ರ ಸರ್ಕಾರ ನಿಷೇಧ ಹೇರಿದೆ. ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಪ್ರಸ್ ಇನ್ಫೋರ್ಮೇಷನ್ ಬ್ಯೂರೋ (ಪಿಐಬಿ) ಈ ಬಗ್ಗೆ ಪ್ರಕಟಣೆ ನೀಡಿದ್ದು, “20 ಲಕ್ಷ ಚಂದಾದಾರರನ್ನು ಹೊಂದಿರುವ 6 ಯೂಟ್ಯೂಬ್ ಚಾನೆಲ್‌ಗಳು 51 ಕೋಟಿ ವೀಕ್ಷಕರನ್ನು ಹೊಂದಿವೆ. ಅವುಗಳು ಸುಪ್ರೀಂಕೋರ್ಟ್‌ನಲ್ಲಿ ನಡೆಯುತ್ತಿರುವ ಪ್ರಕರಣಗಳ ಬಗ್ಗೆ, ಚುನಾವಣಾ ವ್ಯವಸ್ಥೆಯ ಬಗ್ಗೆ, ಕೇಂದ್ರ ಸರ್ಕಾರ ಕಾರ್ಯನಿರ್ವಹಣೆಯ ಬಗ್ಗೆ ಸುಳ್ಳು ಮಾಹಿತಿ …
Read More »ಕೇಂದ್ರ ಸಚಿವ ಸಂಪುಟ ವಿಸ್ತರಣೆ ಕುರಿತು ಮಾಹಿತಿ ಇಲ್ಲ: ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ: ಕೇಂದ್ರ ಸಚಿವ ಸಂಪುಟ ವಿಸ್ತರಣೆ ಕುರಿತು ಮಾಧ್ಯಮದಲ್ಲಿ ವರದಿಗಳಾಗಿದ್ದು, ಈ ಕುರಿತು ಮಾಹಿತಿ ಇಲ್ಲ. ಆದರೆ ಕೇಂದ್ರ ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಸೂಕ್ತ ಕ್ರಮ ತೆಗೆದುಕೊಳ್ಳತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳುದರು. ನಗರದ ರೈಲ್ವೆ ನಿಲ್ದಾಣದ ಬಳಿಯಿರುವ ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಪುಷ್ಪಾರ್ಪಣೆ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿಯೂ ಸಹ ಸಚಿವ ಸಂಪುಟ ವಿಸ್ತರಣೆ ಕುರಿತು ಮುಖ್ಯಮಂತ್ರಿಗಳು …
Read More »
Laxmi News 24×7