Breaking News

ಓದಿನ ಒತ್ತಡ ತಾಳಲಾಗದೆ ನೇಣು ಹಾಕಿಕೊಂಡ ವಿದ್ಯಾರ್ಥಿ

ಮುದ್ದೇಬಿಹಾಳ: ವಿದ್ಯಾರ್ಥಿಗಳೂ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿದ್ದು, ಇಂದು ಇನ್ನೊಬ್ಬ ವಿದ್ಯಾರ್ಥಿ ಪ್ರಾಣ ಕಳೆದುಕೊಂಡಿದ್ದಾನೆ. ವಿಜಯನಗರ ಜಿಲ್ಲೆಯಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ. ವಿಜಯಪುರ ಮೂಲದ ನಾಗರಬೆಟ್ಟದ ಖಾಸಗಿ ವಸತಿ ಕಾಲೇಜಿನ ವಿದ್ಯಾರ್ಥಿ ಅಜಯಕುಮಾರ್ ವಿರುಪಾಕ್ಷಿ ನುಚ್ಚಿ (18) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ವಿದ್ಯಾರ್ಥಿ. ಈತ ನಾಗರಬೆಟ್ಟದ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ಪಿಯುಸಿ ವ್ಯಾಸಂಗ ಮಾಡುತ್ತಿದ್ದ. ನೇಣು ಬಿಗಿದ ಸ್ಥಿತಿಯಲ್ಲಿ ಕಾಲೇಜಲ್ಲೇ ಈತನ ಶವ ಪತ್ತೆಯಾಗಿದೆ. …

Read More »

ಇಸ್ಲಾಂ ಮತ್ತು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಆಗುತ್ತಿರೋ ವಿಶ್ವಕರ್ಮ ಜನರು: ಸ್ಫೋಟಕ ಸಂಗತಿ ಬಯಲು!

ಧಾರವಾಡ: ರಾಜ್ಯದಲ್ಲಿ ವಿಶ್ವಕರ್ಮ ಜನಾಂಗದವರು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಿರೋ ಹಿನ್ನೆಲೆಯಲ್ಲಿ ಇಸ್ಲಾಂ ಮತ್ತು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಆಗುತ್ತಿದ್ದಾರೆ ಎಂಬ ಆಘಾತಕಾರಿ ಅಂಶವನ್ನು ಬಿಜೆಪಿ ಎಂಎಲ್‌ಸಿ ಕೆ.ಪಿ ನಂಜುಂಡಿ ಇಂದು ಬಹಿರಂಗಪಡಿಸಿದ್ದಾರೆ.   ವಿಶ್ವಕರ್ಮ ಸಮಾಜಕ್ಕೆ ಹೆಚ್ಚಿನ ಮೀಸಲಾತಿ ನೀಡುವುದಕ್ಕೆ ಸಂಬಂಧಿಸಿದಂತೆ ಸಮಾಜದಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಧಾರವಾಡಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಷ್ಟೋ ಕಡೆ ನಮ್ಮ ಸಮಾಜದವರು ಬೇರೆ ಬೇರೆ ಧರ್ಮಕ್ಕೆ ಹೋಗುತ್ತಿದ್ದಾರೆ. ದಕ್ಷಿಣ ಕನ್ನಡದಲ್ಲಿ ಹೆಚ್ಚಿಗೆ …

Read More »

ಸಿದ್ದು ಕ್ಷೇತ್ರ ನಿರ್ಧಾರ ಇಂದು?; ಕಾಂಗ್ರೆಸ್ ಟಿಕೆಟ್​ಗೆ ಅರ್ಜಿ ಸಲ್ಲಿಸಲು ಕೊನೇ ದಿನ

ಬೆಂಗಳೂರು: ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮುಂದಿನ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಕಣಕ್ಕಿಳಿಯುತ್ತಾರೆಂಬ ಕುತೂಹಲಕ್ಕೆ ಸೋಮವಾರ ತೆರೆಬೀಳುವ ಸಾಧ್ಯತೆ ಇದೆ. ಮುಂಬರುವ ವಿಧಾನಭಾ ಚುನಾವಣೆಗೆ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಆಸಕ್ತರಾದವರು ಕೆಪಿಸಿಸಿಗೆ ನಿಗದಿತ ಶುಲ್ಕ ಕಟ್ಟಿ ಅರ್ಜಿ ಸಲ್ಲಿಸಬೇಕೆಂಬ ನಿಯಮ ಜಾರಿಗೆ ತರಲಾಗಿದೆ. ಆ ಪ್ರಕಾರ 1,200 ಮಂದಿ ಅರ್ಜಿ ಪಡೆದುಕೊಂಡಿದ್ದು, 1,030 ಮಂದಿ ಭರ್ತಿ ಮಾಡಿದ ಅರ್ಜಿಯನ್ನು ಕೆಪಿಸಿಸಿಗೆ ಸಲ್ಲಿಸಿದ್ದಾರೆ. ಭರ್ತಿ ಮಾಡಿದ ಅರ್ಜಿ ಸಲ್ಲಿಸಲು ಸೋಮವಾರ ಕಡೆಯ ದಿನ. ಈವರೆಗೆ …

Read More »

ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ

ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಸರಣಿ ಅಪಘಾತದಲ್ಲಿ 30 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, 48 ವಾಹನಗಳು ಜಖಂಗೊಂಡಿದೆ. ಭಾನುವಾರ ರಾತ್ರಿ ಈ ಘಟನೆ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪುಣೆ ಸಮೀಪ ಇರುವ ನವಲೆ ಬ್ರಿಡ್ಜ್​ನಲ್ಲಿ ನಡೆದಿದೆ. ಪುಣೆಯ ಅಗ್ನಿ ಶಾಮಕ ಮತ್ತು ಪುಣೆ ಮೆಟ್ರೋಪಾಲಿಟನ್ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ರಕ್ಷಣಾ ತಂಡ ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿ, ರಕ್ಷಣಾ ಕಾರ್ಯ ನಡೆಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ. …

Read More »

ರಾಜಕೀಯದಲ್ಲಿ ದಲಿತರಿಗೆ ಉನ್ನತ ಸ್ಥಾನ ಕೊಡೋದು ಬಿಜೆಪಿ ಮಾತ್ರ: ಜೆ.ಪಿ.ನಡ್ಡಾ

ಬಳ್ಳಾರಿ: ರಾಜಕೀಯದಲ್ಲಿ ದಲಿತರಿಗೆ ಉನ್ನತ ಸ್ಥಾನ ಕೊಡೋದು ಬಿಜೆಪಿ ಮಾತ್ರ, ಬೇರೆ ಯಾರಿಗೂ ಇದು ಸಾಧ್ಯವಿಲ್ಲ ಎಂದು ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು. ಬಳ್ಳಾರಿಯಲ್ಲಿ ಆಯೋಜಿಸಿದ್ದ ಎಸ್​ಟಿ ಮೋರ್ಚಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ನಡ್ಡಾ, ಬಿಜೆಪಿ ದಲಿತ ಮಹಿಳೆಯೊಬ್ಬರನ್ನು ರಾಷ್ಟಪತಿ ಮಾಡಿದೆ. ಈ ಬಗ್ಗೆ ಯಾವ ಪಕ್ಷವೂ ಚಿಂತನೆ ಮಾಡಿರಲಿಲ್ಲ. ಕಾಂಗ್ರೆಸ್​ಗೆ ದಲಿತರು ಯಾಕೆ ನೆನಪಾಗಲಿಲ್ಲ? ಯಾಕೆ ಉನ್ನತ ಸ್ಥಾನ ನೀಡಲಿಲ್ಲ? ದಲಿತರ ಪರ ಮೊದಲು ಯಡಿಯೂರಪ್ಪ ಕೆಲಸ …

Read More »

ನ್ಯೂಜಿಲೆಂಡ್​ ವಿರುದ್ಧ ಭಾರತಕ್ಕೆ 65 ರನ್​ಗಳ ಭರ್ಜರಿ ಗೆಲುವು, ಶತಕ ಸಿಡಿಸಿದ ಸೂರ್ಯಕುಮಾರ್

ಮೌಂಟ್​ ಮೌಂಗನುಯಿ: ಭಾರತ ಮತ್ತು ಆತಿಥೇಯ ನ್ಯೂಜಿಲೆಂಡ್​ ನಡುವಿನ ಟಿ-20 ಸರಣಿಯ ಎರಡನೇ ಪಂದ್ಯದಲ್ಲಿ ಹಾರ್ದಿಕ್​ ಪಾಂಡ್ಯ ಪಡೆ 65 ರನ್​ಗಳ ಭರ್ಜರಿ ಗೆಲುವು ಸಾಧಿಸಿದೆ. ಮೊದಲ ಟ್ವೆಂಟಿ-20 ಅಂತಾರಾಷ್ಟ್ರಿಯ ಕ್ರಿಕೆಟ್​ ಪಂದ್ಯವು ಮಳೆಯಿಂದಾಗಿ ಒಂದೂ ಎಸೆತ ಕಾಣದೆ ರದ್ದಾಗಿತ್ತು. ಬೇ ಓವಲ್​ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 2ನೇ ಪಂದ್ಯದಲ್ಲಿ ಟಾಸ್​ ಗೆದ್ದ ನ್ಯೂಜಿಲೆಂಡ್​ ತಂಡ, ಫೀಲ್ಡಿಂಗ್​ ಆಯ್ಕೆ ಮಾಡಿಕೊಂಡಿತ್ತು. ಆರಂಭದಲ್ಲಿ ರನ್​ ಪೇರಿಸಲು ಹೆಣಗಾಡಿದ ಭಾರತ ತಂಡ, ನಂತರ ಉತ್ತಮ …

Read More »

ಮಂಗಳೂರು ಸ್ಫೋಟಕ್ಕೂ ಪ್ರೇಮರಾಜ್‌ಗೂ ಸಂಬಂಧವಿಲ್ಲ: ಡಿಜಿಪಿ

ಮಂಗಳೂರು: ನಗರದ ಗರೋಡಿಯಲ್ಲಿ ಆಟೊರಿಕ್ಷಾದಲ್ಲಿ ಶನಿವಾರ ಸಂಜೆ ಸಂಭವಿಸಿದ ಸ್ಪೋಟ ಪ್ರಕರಣಕ್ಕೂ ಪ್ರೇಮರಾಜ್‌ಗೂ ಸಂಬಂಧವಿಲ್ಲ ಎಂದು ರಾಜ್ಯ ಪೊಲೀಸ್‌ ಮಹಾ ನಿರ್ದೇಶಕ ಪ್ರವೀಣ್‌ ಸೂದ್‌ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಭಾನುವಾರ ಟ್ವೀಟ್‌ ಮಾಡಿರುವ ಅವರು, ‘ಪ್ರೇಮರಾಜ್‌ ದಾಖಲೆಗಳು ಕಳವಾಗಿದ್ದವು. ಅವರಿಗೂ ಈ ಸ್ಫೋಟ ಪ್ರಕರಣಕ್ಕೂ ಸಂಬಂಧ ಇಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ. ಕೃತ್ಯದ ಸ್ಥಳದಲ್ಲಿ ಪ್ರೇಮರಾಜ್‌ ಹುಟಗಿ ಅವರ ಆಧಾರ್‌ ಕಾರ್ಡ್‌ ಪತ್ತೆಯಾಗಿದೆ ಎಂದು ಕೆಲವು ಮಾಧ್ಯಮಗಳು ವರದಿ ಬಿತ್ತಿರಿಸಿದ್ದವು. ಸ್ಫೋಟ ಸಂಭವಿಸುವಾಗ …

Read More »

53ನೇ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಪಣಜಿ ಸಜ್ಜು

ಪಣಜಿ : ಪ್ರವಾಸೋದ್ಯಮಕ್ಕೆ ಹೆಸರಾದ ಗೋವಾದ ರಾಜಧಾನಿ ಪಣಜಿಯಲ್ಲಿ‌ 53 ನೇ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (ಐಊಊಐ) ದ ಕ್ಷಣಗಣನೆ ಆರಂಭವಾಗಿದೆ. ಹಿಂದಿನ ಕೆಲವು ವರ್ಷಗಳಿಗಿಂತ ಈ ವರ್ಷ ಕೊಂಚ ವಿಭಿನ್ನವಾಗಿ ಸಿದ್ಧಗೊಳ್ಳುತ್ತಿರುವ ಎಂಟರ್‌ಟೈನ್‌ ಮೆಂಟ್‌ ಸೊಸೈಟಿ ಆಫ್ ಗೋವಾದ ಆವರಣ ಹಾಗೂ ಪಣಜಿಯ ಮುಖ್ಯ ರಸ್ತೆಗಳು ವಿದ್ಯುತ್‌ ದೀಪಾಲಂಕಾರದಿಂದ ಕಂಗೊಳಿಸುತ್ತಿವೆ. ಕೃತಕ ನಿರ್ಮಿತ ವರ್ಣರಂಜಿತ ನವಿಲುಗಳ ಸಂಭ್ರಮ ಉತ್ಸವಕ್ಕೆ ಹೊಸ ಹುಮ್ಮಸ್ಸು ತುಂಬತೊಡಗಿವೆ. ನ್ಯಾಷನಲ್‌ ಫಿಲ್ಮ್ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ (ಎನ್‌ಎಫ್ಡಿಸಿ) …

Read More »

ರೈತರ ಮೇಲೆ ಕ್ರಿಮಿನಲ್‌ ಪ್ರಕರಣ ಬೇಡ: ಅಶೋಕ್‌

ಮೈಸೂರು: ಸರಕಾರಿ ಜಮೀನು, ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಉಳುಮೆ ಮಾಡಿಕೊಂಡು ಬರುತ್ತಿರುವ ರೈತರ ಮೇಲೆ ಯಾವುದೇ ಕಾರಣಕ್ಕೂ ಕ್ರಿಮಿನಲ್‌ ಪ್ರಕರಣ ದಾಖಲಿಸಬಾರದು ಎಂದು ಕಂದಾಯ ಸಚಿವ ಆರ್‌. ಅಶೋಕ್‌ ಸೂಚಿಸಿದ್ದಾರೆ. ಎಚ್‌.ಡಿ. ಕೋಟೆ ಭೀಮ ನಕೊಲ್ಲಿಯಲ್ಲಿ ನಡೆದ “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಹಿಂದೆ ಸರಕಾರಿ ಜಮೀನು ಅಥವಾ ಅರಣ್ಯ ಭೂಮಿಯಲ್ಲಿ ಉಳುಮೆ ಮಾಡುವ ರೈತರನ್ನು ಭೂ ಕಬಳಿಕೆದಾರರು ಎಂಬಂತೆ ನೋಡಲಾಗುತ್ತಿತ್ತು. ಅವರ ಮೇಲೆ ಪ್ರಕರಣ …

Read More »

ಕಾಂಗ್ರೆಸ್ ಆರೋಪ ಅವರಿಗೇ ತಿರುಗುಬಾಣ: ಸಿಎಂ ಬೊಮ್ಮಾಯಿ

ಬೆಂಗಳೂರು: ಚುನಾವಣಾ ಆಯೋಗದ ನಿಯಮಾವಳಿಯನ್ನು ಗಾಳಿಗೆ ತೂರಿ ಕಾಂಗ್ರೆಸ್ ಸರ್ಕಾರ ಚಿಲುಮೆ ಸಂಸ್ಥೆಗೆ ಆದೇಶವನ್ನು ನೀಡಿದ್ದು, ತನಿಖೆಯ ಮೂಲಕ ಎಲ್ಲ ಸತ್ಯಗಳು ಹೊರಬರಲಿದೆ. ಕಾಂಗ್ರೆಸ್ ಅವರ ಆರೋಪ ನಿರಾಧಾರ. ಈ ಪ್ರಕರಣ ಅವರಿಗೇ ತಿರುಗುಬಾಣವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು ಸಿದ್ದರಾಮಯ್ಯ ಅವರ ಸರ್ಕಾರ 2013 ರಿಂದಲೂ ತನಿಖೆಯಾಗಬೇಕು ಎಂದು ಸೂಚನೆ ನೀಡಲಾಗಿದೆ. 2013 ರಿಂದ ಯಾವ ಆದೇಶಗಳನ್ನು ನೀಡಿದ್ದಾರೆ ಎಂಬ ಎಲ್ಲ ಸ್ಪಷ್ಟವಾದ ಸತ್ಯಗಳು ಹೊರಗೆ ಬರಲಿ …

Read More »