Breaking News

ಮಂಗಳೂರು ಸ್ಫೋಟಕ್ಕೂ ಪ್ರೇಮರಾಜ್‌ಗೂ ಸಂಬಂಧವಿಲ್ಲ: ಡಿಜಿಪಿ

ಮಂಗಳೂರು: ನಗರದ ಗರೋಡಿಯಲ್ಲಿ ಆಟೊರಿಕ್ಷಾದಲ್ಲಿ ಶನಿವಾರ ಸಂಜೆ ಸಂಭವಿಸಿದ ಸ್ಪೋಟ ಪ್ರಕರಣಕ್ಕೂ ಪ್ರೇಮರಾಜ್‌ಗೂ ಸಂಬಂಧವಿಲ್ಲ ಎಂದು ರಾಜ್ಯ ಪೊಲೀಸ್‌ ಮಹಾ ನಿರ್ದೇಶಕ ಪ್ರವೀಣ್‌ ಸೂದ್‌ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಭಾನುವಾರ ಟ್ವೀಟ್‌ ಮಾಡಿರುವ ಅವರು, ‘ಪ್ರೇಮರಾಜ್‌ ದಾಖಲೆಗಳು ಕಳವಾಗಿದ್ದವು. ಅವರಿಗೂ ಈ ಸ್ಫೋಟ ಪ್ರಕರಣಕ್ಕೂ ಸಂಬಂಧ ಇಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ. ಕೃತ್ಯದ ಸ್ಥಳದಲ್ಲಿ ಪ್ರೇಮರಾಜ್‌ ಹುಟಗಿ ಅವರ ಆಧಾರ್‌ ಕಾರ್ಡ್‌ ಪತ್ತೆಯಾಗಿದೆ ಎಂದು ಕೆಲವು ಮಾಧ್ಯಮಗಳು ವರದಿ ಬಿತ್ತಿರಿಸಿದ್ದವು. ಸ್ಫೋಟ ಸಂಭವಿಸುವಾಗ …

Read More »

53ನೇ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಪಣಜಿ ಸಜ್ಜು

ಪಣಜಿ : ಪ್ರವಾಸೋದ್ಯಮಕ್ಕೆ ಹೆಸರಾದ ಗೋವಾದ ರಾಜಧಾನಿ ಪಣಜಿಯಲ್ಲಿ‌ 53 ನೇ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (ಐಊಊಐ) ದ ಕ್ಷಣಗಣನೆ ಆರಂಭವಾಗಿದೆ. ಹಿಂದಿನ ಕೆಲವು ವರ್ಷಗಳಿಗಿಂತ ಈ ವರ್ಷ ಕೊಂಚ ವಿಭಿನ್ನವಾಗಿ ಸಿದ್ಧಗೊಳ್ಳುತ್ತಿರುವ ಎಂಟರ್‌ಟೈನ್‌ ಮೆಂಟ್‌ ಸೊಸೈಟಿ ಆಫ್ ಗೋವಾದ ಆವರಣ ಹಾಗೂ ಪಣಜಿಯ ಮುಖ್ಯ ರಸ್ತೆಗಳು ವಿದ್ಯುತ್‌ ದೀಪಾಲಂಕಾರದಿಂದ ಕಂಗೊಳಿಸುತ್ತಿವೆ. ಕೃತಕ ನಿರ್ಮಿತ ವರ್ಣರಂಜಿತ ನವಿಲುಗಳ ಸಂಭ್ರಮ ಉತ್ಸವಕ್ಕೆ ಹೊಸ ಹುಮ್ಮಸ್ಸು ತುಂಬತೊಡಗಿವೆ. ನ್ಯಾಷನಲ್‌ ಫಿಲ್ಮ್ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ (ಎನ್‌ಎಫ್ಡಿಸಿ) …

Read More »

ರೈತರ ಮೇಲೆ ಕ್ರಿಮಿನಲ್‌ ಪ್ರಕರಣ ಬೇಡ: ಅಶೋಕ್‌

ಮೈಸೂರು: ಸರಕಾರಿ ಜಮೀನು, ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಉಳುಮೆ ಮಾಡಿಕೊಂಡು ಬರುತ್ತಿರುವ ರೈತರ ಮೇಲೆ ಯಾವುದೇ ಕಾರಣಕ್ಕೂ ಕ್ರಿಮಿನಲ್‌ ಪ್ರಕರಣ ದಾಖಲಿಸಬಾರದು ಎಂದು ಕಂದಾಯ ಸಚಿವ ಆರ್‌. ಅಶೋಕ್‌ ಸೂಚಿಸಿದ್ದಾರೆ. ಎಚ್‌.ಡಿ. ಕೋಟೆ ಭೀಮ ನಕೊಲ್ಲಿಯಲ್ಲಿ ನಡೆದ “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಹಿಂದೆ ಸರಕಾರಿ ಜಮೀನು ಅಥವಾ ಅರಣ್ಯ ಭೂಮಿಯಲ್ಲಿ ಉಳುಮೆ ಮಾಡುವ ರೈತರನ್ನು ಭೂ ಕಬಳಿಕೆದಾರರು ಎಂಬಂತೆ ನೋಡಲಾಗುತ್ತಿತ್ತು. ಅವರ ಮೇಲೆ ಪ್ರಕರಣ …

Read More »

ಕಾಂಗ್ರೆಸ್ ಆರೋಪ ಅವರಿಗೇ ತಿರುಗುಬಾಣ: ಸಿಎಂ ಬೊಮ್ಮಾಯಿ

ಬೆಂಗಳೂರು: ಚುನಾವಣಾ ಆಯೋಗದ ನಿಯಮಾವಳಿಯನ್ನು ಗಾಳಿಗೆ ತೂರಿ ಕಾಂಗ್ರೆಸ್ ಸರ್ಕಾರ ಚಿಲುಮೆ ಸಂಸ್ಥೆಗೆ ಆದೇಶವನ್ನು ನೀಡಿದ್ದು, ತನಿಖೆಯ ಮೂಲಕ ಎಲ್ಲ ಸತ್ಯಗಳು ಹೊರಬರಲಿದೆ. ಕಾಂಗ್ರೆಸ್ ಅವರ ಆರೋಪ ನಿರಾಧಾರ. ಈ ಪ್ರಕರಣ ಅವರಿಗೇ ತಿರುಗುಬಾಣವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು ಸಿದ್ದರಾಮಯ್ಯ ಅವರ ಸರ್ಕಾರ 2013 ರಿಂದಲೂ ತನಿಖೆಯಾಗಬೇಕು ಎಂದು ಸೂಚನೆ ನೀಡಲಾಗಿದೆ. 2013 ರಿಂದ ಯಾವ ಆದೇಶಗಳನ್ನು ನೀಡಿದ್ದಾರೆ ಎಂಬ ಎಲ್ಲ ಸ್ಪಷ್ಟವಾದ ಸತ್ಯಗಳು ಹೊರಗೆ ಬರಲಿ …

Read More »

ಮಂಗಳೂರಿನ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್

ಹುಬ್ಬಳ್ಳಿ: ಮಂಗಳೂರಿನ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ನಕಲಿ ವಿಳಾಸ ಪತ್ತೆಯಾಗಿದ್ದು, ಅದು ಹುಬ್ಬಳ್ಳಿಯ ಪ್ರೇಮ್ ರಾಜ್ ಅವರಿಗೆ ಸೇರಿದೆ. ಆಟೋರಿಕ್ಷಾದಲ್ಲಿ ಪತ್ತೆಯಾದ ಆಧಾರ ಕಾರ್ಡ್ ಹುಬ್ಬಳ್ಳಿಯ ಕೇಶ್ವಾಪುರ ಮಧುರಾ ಕಾಲೋನಿ ನಿವಾಸಿ ಪ್ರೇಮರಾಜ್ ಹೆಸರಿನಲ್ಲಿದೆ. ಆದರೆ ಈ ಆಧಾರ್ ಕಾರ್ಡ್ ಕಳೆದು ಹೋಗಿತ್ತು. ಇವರದೇ ವಿಳಾಸವನ್ನು ಬ್ಲಾಸ್ಟ್ ನಲ್ಲಿ ಬಳಕೆ ಮಾಡಲಾಗಿದೆ. ಪ್ರೇಮ್ ರಾಜ್‌ಗೂ ಈ ಪ್ರಕರಣಕ್ಕೆ ಸಂಬಂಧ ಇಲ್ಲ ಎನ್ನುತ್ತಿದ್ದಾರೆ ಕುಟುಂಬದವರು. “ನನ್ನ ಮಗ ಅಂಥವನಲ್ಲ. …

Read More »

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ

ಹುಬ್ಬಳ್ಳಿ: ಕ್ಷುಲ್ಲಕ ವಿಚಾರವಾಗಿ ಯುವಕನೊಬ್ಬನಿಗೆ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಶನಿವಾರ ರಾತ್ರಿ ಇಲ್ಲಿನ ಹಳೇಹುಬ್ಬಳ್ಳಿ ಸದರಸೋಫಾ ಕಟಗರ ಓಣಿ ಬಳಿಯ ಮುಖಗಲ್ಲಿಯಲ್ಲಿ ನಡೆದಿದೆ. ಮಹಮ್ಮದ್ ಜಾಫರ್ ಇಮ್ತಿಯಾಜ್ ದಢೇಸೂರ (21 ವ) ಕೊಲೆಯಾಗಿದ ವ್ಯಕ್ತಿ. ಹಳೇಹುಬ್ಬಳ್ಳಿ ಕಸಾಯಿ ಮೊಹಲ್ಲಾದ ಶಾಬಾದ ಎಂಬಾತನೇ ಕೊಲೆ ಮಾಡಿದ್ದವನೆಂದು ಮೃತನ ಸಹೋದರ ಖ್ವಾಜಾಮೈನುದ್ದೀನ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಕ್ಷುಲ್ಲಕ ವಿಷಯವಾಗಿ ಇವರಿಬ್ಬರ ನಡುವೆ ಎರಡು ದಿನಗಳ ಹಿಂದೆ ಮಾತಿನ ಚಕಮಕಿ ನಡೆದಿತ್ತು. ಇದೇ …

Read More »

ಕಳಸಾ-ಬಂಡೂರಿ ಪ್ರದೇಶಕ್ಕೆ ಗೋವಾ ತಂಡ ಭೇಟಿ

ಮಹತ್ವಾಕಾಂಕ್ಷೆಯ ಕಳಸಾ-ಬಂಡೂರಿ ಅಣೆಕಟ್ಟು ಯೋಜನೆ ಪೂರ್ಣಗೊಳಿಸುವ ಮೂಲಕ ಗೋವಾದ ಮಹಾದಾಯಿ ನೀರನ್ನು ತಿರುಗಿಸಲು ಕರ್ನಾಟಕ ಮುಂದಾಗಿದೆ. ಈ ಅಣೆಕಟ್ಟು ನಿರ್ಮಿಸಲು ಹಳತಾರ ಮತ್ತು ಕಳಸಾ ಪ್ರದೇಶಗಳಲ್ಲಿ ಮಣ್ಣು ಪರೀಕ್ಷೆ ಜತೆಗೆ ಉದ್ದೇಶಿತ ಕಾಲುವೆ ಅಗೆಯಲು ಗುರುತು ಹಾಕುವುದು ಬಹುತೇಕ ಪೂರ್ಣಗೊಂಡಿದೆ ಎಂದು ಗೋವಾ ಫಾರ್ವರ್ಡ್‌ ಶಾಸಕ ವಿಜಯ್‌ ಸರ್ದೇಸಾಯಿ ಹಾಗೂ ಪರಿಸರ ಹೋರಾಟಗಾರ ರಾಜೇಂದ್ರ ಕೇರ್ಕರ್‌ ಹೇಳಿದ್ದಾರೆ.   ಅವರು ಶುಕ್ರವಾರ ಕಳಸಾ-ಬಂಡೂರಿ ನಾಲಾ ವ್ಯಾಪ್ತಿಯ ಚೋರ್ಲಾ ಮಹಾದಾಯಿ ಜಲಾನಯನ …

Read More »

ವಿದ್ಯಾರ್ಥಿಗಳಿಗೆ ಸಂವಹನ ಕಲೆ ಮುಖ್ಯ: ಕತ್ತಿ

ಹುಕ್ಕೇರಿ: ಉತ್ತರ ಕರ್ನಾಟಕದ ವಿದ್ಯಾರ್ಥಿಗಳು ಜಾಣರಿದ್ದರೂ, ಆ ಜಾಣತನವನ್ನು ಬಿಂಬಿಸುವ ಸಂವಹನ ಕಲೆಯ ಕೊರತೆಯಿಂದ ಉದ್ಯೋಗಾವಕಾಶ ಕಳೆದುಕೊಳ್ಳುತ್ತಿದ್ದಾರೆಂದು ಮಾಜಿ ಸಂಸದರು ಹಾಗೂ ಬಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ರಮೇಶ ಕತ್ತಿ ಅಸಮಾಧಾನ ವ್ಯಕ್ತಪಡಿಸಿದರು.   ಅವರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2022-23 ನೇ ಶೈಕ್ಷಣಿಕ ಸಾಲಿನ ವಿವಿಧ ಸಂಘಗಳ ಕಾರ್ಯ ಚಟುವಟಿಕೆ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಕನ್ನಡದ ಜತೆ ಇಂಗ್ಲಿಷ್‌ ಕಲಿಯಬೇಕು. ಶಿಕ್ಷಣ ಪಡೆದು ಇನ್ನೊಬ್ಬರ ಕೈಯಲ್ಲಿ ನೌಕರಿ ಮಾಡುವ …

Read More »

ಆರೋಗ್ಯ ಕೇಂದ್ರಕ್ಕೆ ಬಾರದ ವೈದ್ಯರು, ನರ್ಸ್‌: 2 ತಾಸು ನರಳಾಡಿದ ತುಂಬು ಗರ್ಭಿಣಿ

ಕಿತ್ತೂರು : ಸಮೀಪದ ಸಂಗೊಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುರುವಾರ, ಸೂಕ್ತ ಸಮಯಕ್ಕೆ ಗರ್ಭಿಣಿಗೆ ಚಿಕಿತ್ಸೆ ನೀಡದ ಶುಶ್ರೂಷಕಿಯನ್ನು ವರ್ಗಾವಣೆ ಮಾಡಿದ್ದು, ಆಸ್ಪತ್ರೆಯ ಇಬ್ಬರು ವೈದ್ಯರಿಗೂ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಲಾಗಿದೆ.   ತಾಲ್ಲೂಕಿನ ಕಡತನಾಳ ಗ್ರಾಮದ ರತ್ನವ್ವ ಕಾದ್ರೊಳ್ಳಿ ಅವರನ್ನು ಗುರುವಾರ ಹೆರಿಗೆಗೆ ಆರೋಗ್ಯ ಕೇಂದ್ರಕ್ಕೆ ತರಲಾಗಿತ್ತು. ಆದರೆ ಅಲ್ಲಿ ವೈದ್ಯರು, ನರ್ಸ್‌ ಸೇರಿದಂತೆ ಯಾರೂ ಇರಲಿಲ್ಲ. ಎರಡು ತಾಸು ಆಸ್ಪತ್ರೆಯ ಆವರಣದಲ್ಲೇ ಗರ್ಭಿಣಿ …

Read More »

ಒತ್ತಡದ ಮಧ್ಯೆ ಆರೋಗ್ಯ ಕಾಪಾಡಿಕೊಳ್ಳಿ: ರಾಜೇಂದ್ರ ಕಲಘಟಗಿ

ಬೆಳಗಾವಿ: ‘ಪ್ರತಿದಿನವೂ ನಿಯಮಿತ ಹಾಗೂ ಸಮತೋಲನದ ಆಹಾರ ಸೇವನೆ, ಸಮಯಕ್ಕೆ ಸರಿಯಾಗಿ ವಾಯುವಿಹಾರ, ಯಾವುದೇ ಒತ್ತಡ ಪರಿಸ್ಥಿತಿಯಲ್ಲಿಯೂ ಹೊರಗಿನ ಪದಾರ್ಥ ಸೇವಿಸದೇ ಇರುವುದೇ ನನ್ನ ಆರೋಗ್ಯದ ಗುಟ್ಟು. ಪೊಲೀಸ್‌ ಪಡೆ ಸೇರಿದವರು ಇಂಥ ಜೀವನಶೈಲಿ ರೂಢಿಸಿಕೊಳ್ಳುವುದು ಅಗತ್ಯ’ ಎಂದು ಸ್ವಾತಂತ್ರ್ಯ ಹೋರಾಟಗಾರ ರಾಜೇಂದ್ರ ಕಲಘಟಗಿ ಕಿವಿಮಾತು ಹೇಳಿದರು.   ನಗರ ಪೊಲೀಸ್ ಆಯುಕ್ತಾಲಯ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಗರದ ಜಿಲ್ಲಾ ಪೊಲೀಸ್ ಕವಾಯತ್ ಮೈದಾನದಲ್ಲಿ ಆಯೋಜಿಸಿದ ಎರಡು ದಿನಗಳ …

Read More »