ನಾನು ಯಾವುದೇ ಕಾರಣಕ್ಕೂ ಜೆಡಿಎಸ್ ಸೇರುವದಿಲ್ಲ.ನಾನು ಬಿಜೆಪಿ ಬಿಡೋಲ್ಲ,ಬಿಡೋಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಸ್ಪಷ್ಟಪಡಿಸಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಳಗುಂದಿ ಸಮೀಪದಲ್ಲಿ ರಮೇಶ್ ಜಾರಕಿಹೊಳಿ ಅವರ ಆಪ್ತ ನಾಗೇಶ್ ಮನ್ನೋಳಕರ ಮಾಲಿಕತ್ವದ ಸ್ಮಾರ್ಟ್ ಕ್ಯಾಶ್ಯು ಕಾರ್ಖಾನೆಯನ್ನು ಉದ್ಘಾಟಿಸುವ ಮುನ್ನ ಮಾದ್ಯಮಗಳ ಜೊತೆ ಮಾತನಾಡಿದ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ನಲ್ಲಿ ನಾನು ಮಂತ್ರಿಯಾಗಿದ್ದೆ. ಆ ಮಂತ್ರಿ ಸ್ಥಾನ ಬಿಟ್ಟು ಬಿಜೆಪಿಗೆ ಸೇರ್ಪಡೆಯಾಗಿ ಸರ್ಕಾರ ರಚಿಸಿದ್ದೇವೆ.ಈಗ ನನ್ನನ್ನು ಮಂತ್ರಿ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯ
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ದಂಡಾಪುರ ಗ್ರಾಮದಲ್ಲಿ ಬೀರಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಲಕ್ಷ್ಮಣ ಗನಾಪಾಗೋಲ್, ಮಾದೇವ್ ತುಕ್ಕಾನಟ್ಟಿ, ರಾಮಣ್ಣ ವಡೆರ್, …
Read More »ಬಿಜೆಪಿಯಿಂದ ನೀವು ಇದ್ದೀರಿ ಬಿಜೆಪಿ ಇಲ್ಲದೆ ಇದ್ದರೆ ನೀವು ಜೀರೋ.ಯತ್ನಾಳ್ ಹೆಂಡ್ಯಾಗಿನ ಹುಳಾ
ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಮುಗಿದು ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ಪಕ್ಷದಿಂದ ಟಿಕೆಟ್ ಸಿಗದ ಕಾರಣ ಪಕ್ಷೇತರರಾಗಿ ಸ್ಪರ್ಧಿಸಿದ್ದ ಅಭ್ಯರ್ಥಿಗಳನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಇದೀಗ ಉಚ್ಚಾಟಿತ ಅಭ್ಯರ್ಥಿಗಳು ಸೇರಿಕೊಂಡು ಪತ್ರಿಕಾಗೋಷ್ಠಿ ನಡೆಸಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಾಗೂ ಬಿಜೆಪಿ ಅಧ್ಯಕ್ಷ ಆರ್.ಎಸ್.ಪಾಟೀಲ ಕುಚಬಾಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಟ್ಲರ್ ಸಂಸ್ಕೃತಿ ಎಂದು ವಾಗ್ದಾಳಿ ನಡೆಸಿದ್ದಾರೆ.ಈ ಕುರಿತು ಇಲ್ಲಿದೆ ಡಿಟೇಲ್ಸ್. ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ …
Read More »ಸ್ಥಳೀಯ ಸಂಸ್ಥೆಗಳ ಆಸ್ತಿ ದಾಖಲೆಗೆ ಹೈಟೆಕ್ ಸ್ಪರ್ಶ: ಡಿಜಿಟಲೀಕರಣಕ್ಕೆ ‘ಇ-ಆಸ್ತಿ ತಂತ್ರಾಂಶ’ ಜಾರಿ; ಆನ್ಲೈನ್ನಲ್ಲೇ ಸಕಲ ಮಾಹಿತಿ
ಬೆಳಗಾವಿ :ನಗರ -ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸರ್ಕಾರಿ, ಖಾಸಗಿ ಒಡೆತನದ ಲಕ್ಷಾಂತರ ಆಸ್ತಿ ದಾಖಲೆಗಳಿಗೆ ಇನ್ಮುಂದೆ ಹೈಟೆಕ್ ಸ್ಪರ್ಶ ಸಿಗಲಿದೆ. ಏಕಕಾಲದಲ್ಲಿ ಆನ್ಲೈನ್ನಲ್ಲಿಯೇ ಆಸ್ತಿ ದಾಖಲೆಗಳ ಮಾಹಿತಿ ಲಭ್ಯವಾಗಲಿದೆ. ಹೌದು. ರಾಜ್ಯದಲ್ಲಿ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸುಮಾರು 1.20 ಕೋಟಿ ಆಸ್ತಿಗಳಿವೆ. ಆದರೆ, ಲಕ್ಷಾಂತರ ಆಸ್ತಿಗಳ ದಾಖಲೆಗಳ ನಿರ್ವಹಣೆ, ಸಂರಕ್ಷಣೆ ಇಲ್ಲದೆ ಸಂಪೂರ್ಣ ಹಾಳಾಗಿವೆ. ಇದರಿಂದಾಗಿ ಸಾರ್ವಜನಿಕರಿಗೆ ಆಸ್ತಿಯ ಮೂಲ ದಾಖಲೆಗಳು ಲಭ್ಯವಾಗುತ್ತಿಲ್ಲ. …
Read More »ಶಾಸಕರಿಗೆ ಹಣದ ಆಮಿಷ ಪ್ರಕರಣ ಬಿ.ಎಲ್.ಸಂತೋಷ್‌ಗೆ ಸಮನ್ಸ್ ಜಾರಿ
ಹೈದರಾಬಾದ್: ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಪಕ್ಷದ ಶಾಸಕರಿಗೆ ಬಿಜೆಪಿಗೆ ಸೇರುವಂತೆ ಹಣದ ಆಮಿಷವೊಡ್ಡಿದ ಪ್ರಕರಣ ಸಂಬಂಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಅವರಿಗೆ ಸಮನ್ಸ್ ಜಾರಿಗೊಳಿಸಲಾಗಿದೆ. ತೆಲಂಗಾಣ ವಿಶೇಷ ತನಿಖಾ ತಂಡ (ಎಸ್‌ಐಟಿ) ಶುಕ್ರವಾರ ಈ ಸಮನ್ಸ್ ಜಾರಿ ಮಾಡಿದೆ. ಶಾಸಕರಿಗೆ ಹಣದ ಆಮಿಷವೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ. 21ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಬಿ.ಎಲ್.ಸಂತೋಷ್‌ಗೆ ಸಮನ್ಸ್ ಜಾರಿಗೊಳಿಸಿರುವ ಎಸ್‌ಐಟಿ, ತಪ್ಪಿದರೆ ಬಂಧನದ ಎಚ್ಚರಿಕೆಯನ್ನೂ …
Read More »ರಾಜ್ಯ ಸರ್ಕಾರದಿಂದ ಎಲ್ಲಾ ನೇರ ನೇಮಕಾತಿ, ಮುಂಬಡ್ತಿಗೆ ತಡೆ
ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಕೆಲ ದಿನಗಳ ಹಿಂದೆ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮೀಸಲಾತಿಯನ್ನು ಹೆಚ್ಚಿಸಲಾಗಿತ್ತು. ಈ ಮೀಸಲಾತಿ ಹೆಚ್ಚಳದ ಅನ್ವಯ ನೇರನೇಮಕಾತಿ, ಮುಂಬಡ್ತಿಯಲ್ಲಿ ಅವಕಾಶ ನೀಡೋ ಸಲುವಾಗಿ, ಈಗ ಎಲ್ಲಾ ನೇರ ನೇಮಕಾತಿ, ಮುಂಬಡ್ತಿಗೆ ( Direct Recruitment, Promotion ) ತಡೆ ನೀಡಲಾಗಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ( Karnataka Chief Secretory Vandita …
Read More »ಸಿಹಿ ಬೆಳೆದ ಅನ್ನದಾತರಿಗೆ ಕಹಿ ಅನುಭವ
ಕಬ್ಬು ಬೆಳೆಗಾರರ ಸಮಸ್ಯೆ ಪ್ರತೀವರ್ಷವೂ ಕಗ್ಗಂಟು. ಸಕ್ಕರೆ ಕಾರ್ಖಾನೆ ಮಾಲಕರು ಹಾಗೂ ಬೆಳೆಗಾರರ ನಡುವೆ ಬೆಲೆ ತಿಕ್ಕಾಟ ಸಾಮಾನ್ಯವಾಗಿ ಬಿಟ್ಟಿದೆ. ಕೃಷ್ಣಾ ತೀರದ ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಹೋರಾಟ ನಡೆಯುತ್ತಲೇ ಇರುತ್ತದೆ. ಸರಕಾರವೇ ಮಧ್ಯಸ್ಥಿಕೆ ವಹಿಸಿದರೂ ಪರಿಹಾರ ಎಂಬುದು ಮರೀಚಿಕೆಯಾಗಿದೆ. ಈ ವರ್ಷವೂ ಪ್ರತಿಭಟನೆ ಕಾವು ತುಸು ಹೆಚ್ಚೇ ನಡೆದಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಕಳೆದ 50 ದಿನಗಳಿಂದ ಹೋರಾಟದ ಕಿಚ್ಚು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಸಂಘರ್ಷ, ಸಂಧಾನದ …
Read More »ಖಾನಾಪುರ ಬಳಿ ಟೆಂಪೋ ಪಲ್ಟಿ: 30 ಜನರಿಗೆ ಗಾಯ
ಖಾನಾಪುರ ತಾಲೂಕಿನ ಗರ್ಲಗುಂಜಿ ಗ್ರಾಮದ ಬಳಿ ಟೆಂಪೋ ಪಲ್ಟಿಯಾಗಿ 30 ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ನಡೆದಿದೆ. ಶುಕ್ರವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿಯಾಗಿದೆ. ಟೆಂಪೋದಲ್ಲಿ ಪ್ರಯಾಣಿಸುತ್ತಿದ್ದ 30 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಗಾಯಾಳುಗಳನ್ನು ಯಳ್ಳೂರ ಕೆಎಲ್ಇ ಚಾರಿಟೇಬಲ್ ಆಸ್ಪತ್ರೆ ಮತ್ತು ವಿಜಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ಎಲ್ಲರೂ ಹುದಲಿ ಗ್ರಾಮದವರಾಗಿದ್ದು, ಗರ್ಲಗುಂಜಿಗೆ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಆಗಮಿಸಿದ್ದರು.
Read More »ಸಿಐಟಿಯು ರಾಜ್ಯಾಧ್ಯಕ್ಷೆ ಕಾರು ಘಾಟಿಯಲ್ಲಿ ಅಪಘಾತ: ಪಾರು
ಕುಂದಾಪುರ: ಇಲ್ಲಿ ಮೂರು ದಿನಗಳ ಕಾಲ ನಡೆದ ಸಿಐಟಿಯುವಿನ 15ನೇ ರಾಜ್ಯ ಸಮ್ಮೇಳನ ಮುಗಿಸಿ ಗುರುವಾರ ರಾತ್ರಿ ಹಾಸನಕ್ಕೆ ಹೋಗುತ್ತಿದ್ದ ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷ್ಮೀ ಅವರ ಕಾರು ಆಗುಂಬೆಯಲ್ಲಿ ಅಪಘಾತಕ್ಕೊಳಗಾಗಿದೆ. ಧರ್ಮೇಶ್ ಅವರು ಕಾರು ಚಲಾಯಿಸುತ್ತಿದ್ದು, ಆಗುಂಬೆ ಘಾಟ್ ನಂತರ ಜಯಪುರದಿಂದ ಆಲ್ದೂರಿಗೆ 5 ಕಿ.ಮೀ. ಇದೆ ಎನ್ನುವಾಗ ರಾತ್ರಿ 10.30ರ ಸುಮಾರಿಗೆ ಕಾರು ರಸ್ತೆ ಬಿಟ್ಟು ಪ್ರಪಾತದೆಡೆಗೆ ಹೋಗಿದೆ. 50ಅಡಿಗಿಂತ ಹೆಚ್ಚು ಕೆಳಗಿಳಿದಿತ್ತು. ಮಾಹಿತಿ ತಿಳಿಸಲು ನೆಟ್‌ವರ್ಕ್ ಕೂಡಾ …
Read More »ಇಂದಿನಿಂದ ಶ್ರೀಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ
ಬೆಂಗಳೂರು: ಪರಂಪರಾಗತ ಆಚಾರ ವಿಚಾರಗಳು, ಸಂಸ್ಕೃತಿ-ಸಾಹಿತ್ಯ ಪ್ರಕಾರಗಳ ಜತೆಗೆ ಈ ನಾಡಿನ ಕಲೆಗಳಾದಿಗಳು ಒಂದೆಡೆ ಕೇ೦ದ್ರೀಕೃತವಾಗುವ ಶ್ರೀಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಸನ್ನಿಧಾನದಲ್ಲಿ ನ.19ರಿಂದ ನ.23ರವರೆಗೆ ನಾಡಿನ ಗಣ್ಯರು, ವಿದ್ವಾಂಸರು ಹಾಗೂ ಕಲಾವಿದರ ಸಹಭಾಗಿತ್ವದಲ್ಲಿ ಲಕ್ಷದೀಪೋತ್ಸವ ನೆರವೇರಲಿದೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರ ಸಮ್ಮುಖದಲ್ಲಿ, ಧರ್ಮಸ್ಥಳ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಹಾಗೂ ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನದ 90ನೇ ಅಧಿವೇಶನವು ನೆರವೇರಲಿದ್ದು, ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ದೇವಸ್ಥಾನ, …
Read More »