Breaking News

ಕುಮ್ಕಿ ಜಮೀನು ಸಮಸ್ಯೆಗೆ ಪರಿಹಾರ: ಸಚಿವ ಆರ್‌. ಅಶೋಕ್‌

ಸುವರ್ಣವಿಧಾನಸೌಧ: ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಸೇರಿದಂತೆ ರಾಜ್ಯದ ಐದಾರು ಜಿಲ್ಲೆಗಳಲ್ಲಿರುವ ಕುಮ್ಕಿ ಜಮೀನು ಸಮಸ್ಯೆ ಕುರಿತಾಗಿ ಸಾಧಕ-ಬಾಧಕಗಳು, ಕಾನೂನು ಪರಿಣಾಮಗಳನ್ನು ಕೂಲಂಕುಷವಾಗಿ ಚರ್ಚಿಸಿ ಪರಿಹಾರ ರೂಪದಲ್ಲಿ ಹೊಸ ಕಾಯ್ದೆ ತರುವ ಚಿಂತನೆ ಸರ್ಕಾರದ್ದಾಗಿದೆ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ಹೇಳಿದ್ದಾರೆ. ಪರಿಷತ್‌ನಲ್ಲಿ ಬುಧವಾರ ಬಿಜೆಪಿ ಸದಸ್ಯ ಪ್ರತಾಪ ಸಿಂಹ ನಾಯಕ್‌ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಈ ವಿಚಾರದಲ್ಲಿ ಸರ್ಕಾರ ಸಕಾರಾತ್ಮಕ ಚಿಂತನೆ ಹೊಂದಿದೆ ಎಂದು ತಿಳಿಸಿದರು. ಕನ್ನಡ, …

Read More »

ಮಿತಿಮೀರಿದ ಅಡಿಕೆ ಬೆಳೆಯಿಂದ ಅಸಮತೋಲನ: ಸದನ ಆತಂಕ

ಬೆಳಗಾವಿ: ಬೇಕಾಬಿಟ್ಟಿಯಾಗಿ ಅಡಿಕೆ ಬೆಳೆಯನ್ನು ಬಯಲುಸೀಮೆ ಸಹಿತ ಹಲವು ಜಿಲ್ಲೆಗಳಲ್ಲಿ ವಿಸ್ತರಣೆ ಮಾಡುತ್ತಿರುವುದು ಅಪಾಯಕಾರಿ. ಇದರಿಂದ ಮುಂದೆ ಬೆಳೆಗಳ ಅಸಮತೋಲನ ಉಂಟಾಗುವ ಭೀತಿ ಇದೆ ಎಂಬ ಕಳವಳ ಬುಧವಾರ ವಿಧಾನಸಭೆಯಲ್ಲಿ ವ್ಯಕ್ತವಾಯಿತು.   ಕೃಷಿ ಎದುರಿಸುತ್ತಿರುವ ಅತಿವೃಷ್ಟಿ ಮತ್ತಿತರ ಸಮಸ್ಯೆಗಳಿಂದ ರೈತರು ಎದುರಿಸುತ್ತಿರುವ ಸಂಕಷ್ಟದ ಬಗ್ಗೆ ನಡೆಯುತ್ತಿದ್ದ ಚರ್ಚೆ ವೇಳೆ ಗೃಹಸಚಿವ ಆರಗ ಜ್ಞಾನೇಂದ್ರ ವಿಷಯ ಪ್ರಸ್ತಾವಿಸಿ, ಅಡಿಕೆ ಬೆಳೆ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸುವುದನ್ನು ನೋಡಿದರೆ ಅದುವೇ ರೈತರಿಗೆ ಮಾರಕವಾಗುವ ದಿನಗಳು …

Read More »

ವಿಧಾನಪರಿಷತ್ ನಲ್ಲಿ `ಕರ್ನಾಟಕ ಭೂ ಕಂದಾಯ ಕಾಯ್ದೆ ತಿದ್ದುಪಡಿ ವಿಧೇಯಕ’ ಅಂಗೀಕಾರ

ಬೆಳಗಾವಿ : ವಿಧಾನಪರಿಷತ್ ನಲ್ಲಿ ಸುದೀರ್ಘ ಚರ್ಚೆ ಬಳಿಕ ಕರ್ನಾಟಕ ಭೂ ಕಂದಾಯ (ಮೂರನೇ ತಿದ್ದುಪಡಿ) ವಿಧೇಯಕ-2022 ಕ್ಕೆ ಅಂಗೀಕಾರ ದೊರೆಯಿತು.   ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಈ ಕುರಿತು ಮಾತನಾಡಿದ್ದು, 2005 ಕ್ಕಿಂತ ಪೂರ್ವದಲ್ಲಿ ಕೃಷಿ ಮಾಡಿಕೊಂಡು ಬಂದಿರುವವರಿಗೆ 25 ಎಕರೆ ಭೂಮಿಯನ್ನು 30 ವರ್ಷಗಳ ಅವಧಿಗೆ ಗುತ್ತಿಗೆಗೆ ನೀಡುವ ಪ್ರಸ್ತಾಪ ಇದರಲ್ಲಿದೆ. ಆದರೆ ಇದ್ದವರಿಗೆ ಕೊಡುವ ಬದಲು ಇಲ್ಲದ ರೈತರಿಗೆ ಭೂಮಿ ನೀಡಿದರೆ ಅವರ ಜೀವನ …

Read More »

ಕರ್ನಾಟಕದ ವಿರುದ್ಧ ಮಹಾರಾಷ್ಟ್ರದ ನಿರ್ಣಯಕ್ಕೆ ರಾಜ್ಯದಲ್ಲಿ ರೋಷಾಗ್ನಿ

ನಾಗ್ಪುರ/ಬೆಳಗಾವಿ: ಬೆಳಗಾವಿ ಗಡಿ ವಿವಾದದ ವಿಚಾರದಲ್ಲಿ ನಿರಂತರವಾಗಿ ಕನ್ನಡಿಗರನ್ನು ಕೆರಳಿಸುತ್ತಿರುವ ಮಹಾರಾಷ್ಟ್ರ, ಈಗ “ನಿರ್ಣಯ’ದ ಮೂಲಕ ಕರ್ನಾಟಕವನ್ನು ಕೆಣಕಿದೆ. ಮಂಗಳವಾರ ಮಹಾರಾಷ್ಟ್ರ ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ಕರ್ನಾಟಕದ ವಿರುದ್ಧ ನಿರ್ಣಯಗಳನ್ನು ಅಂಗೀಕರಿಸಲಾಗಿದ್ದು, ಇದಕ್ಕೆ ರಾಜ್ಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಜತೆಗೆ, ಗಡಿ ತಂಟೆ ಕುರಿತು ಮಹಾರಾಷ್ಟ್ರದ ವರ್ತನೆ ವಿರುದ್ಧ ರಾಜ್ಯ ವಿಧಾನ ಪರಿಷತ್‌ನಲ್ಲಿ ಸರ್ವಾನುಮತ ನಿರ್ಣಯವನ್ನು ಕೈಗೊಳ್ಳಲಾಗಿದೆ. ರಾಜ್ಯದ ಹಿತಾಸಕ್ತಿಯನ್ನು ರಕ್ಷಿಸುವ ನಿಟ್ಟಿನಲ್ಲಿ ಕರ್ನಾಟಕ ಸರಕಾರವು ಇತ್ತೀಚೆಗೆ ವಿಧಾನಸಭೆಯಲ್ಲಿ ನಿರ್ಣಯ …

Read More »

ಕುಕ್ಕರ್‌ ಪ್ರಕರಣ : ಹಗುರಗೊಳಿಸುವ ಯತ್ನ : ಸಿಎಂ ಬೊಮ್ಮಾಯಿ

ಬೆಳಗಾವಿ: ಕುಕ್ಕರ್‌ ಪ್ರಕರಣದಂತಹ ಗಂಭೀರ ವಿಚಾರವನ್ನೂ ಮತಬ್ಯಾಂಕ್‌ ಉದ್ದೇಶದಿಂದ ಹಗುರಗೊಳಿಸುವಂತಹ ಹೇಳಿಕೆ ಖಂಡನೀಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಂಗಳವಾರ ವಿಧಾನಸಭೆಯಲ್ಲಿ ಅವರು ಶಾಸಕ ಸಿ.ಟಿ.ರವಿ ಅವರ ಭಯೋತ್ಪಾದನೆ ಕುರಿತ ನಿಯಮ 69ರಡಿಯ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿ, ಕುಕ್ಕರ್‌ ಬ್ಲಾಸ್ಟ್‌ ಆಕಸ್ಮಿಕವಾಗಿ ನಡೆದಿದೆ. ಒಂದು ವೇಳೆ ಅದು ಜನನಿಬಿಡ ಪ್ರದೇಶದಲ್ಲಿ ಸ್ಫೋಟಿಸಿ ದೊಡ್ಡ ಪ್ರಮಾಣದ ಸಾವುನೋವು ಉಂಟಾಗಿದ್ದರೆ ಏನಾಗುತ್ತಿತ್ತು ಎನ್ನುವುದನ್ನು ಗಮನದಲ್ಲಿರಿಸಬೇಕು ಎಂದು ತಿಳಿಸಿದರು. ಪೊಲೀಸರ ದೊಡ್ಡ ಲೋಪ ಉಪನಾಯಕ …

Read More »

ಕೈಗಾರಿಕೆಗಳಿಗೆ ಜಮೀನು: ಭೂ ಲೆಕ್ಕ ಪರಿಶೋಧನೆಗೆ ಆದೇಶ

ಬೆಳಗಾವಿ: “ಕರ್ನಾಟಕ ಕೈಗಾರಿಕಾ ಪ್ರದೇಶಾಭಿ ವೃದ್ಧಿ ಮಂಡಳಿ (ಕೆಐಎಡಿಬಿ) ವತಿಯಿಂದ ಕೈಗಾರಿಕೆಗಳ ಸ್ಥಾಪನೆಗೆ ಸ್ವಾಧೀನಪಡಿಸಿಕೊಂಡ ಜಮೀನಿನ ಸಮಗ್ರ ಲೆಕ್ಕ ಪರಿಶೋಧನೆಗೆ (ಲ್ಯಾಂಡ್‌ ಆಡಿಟ್‌) 3 ತಿಂಗಳ ಹಿಂದೆ ಆದೇಶಿಸಲಾಗಿದೆ. ವರದಿ ಬಂದ ಕೂಡಲೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ವಿಧಾನಸಭೆಯಲ್ಲಿ ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ವಿಧೇಯಕದ ಮೇಲಿನ ಚರ್ಚೆ ವೇಳೆ ಮಾತ ನಾಡಿ, ಉಕ್ಕು ಮತ್ತು ಉಷ್ಣ ಸ್ಥಾವರ ಸೇರಿದಂತೆ ವಿವಿಧ ಕೈಗಾರಿಕೆಗಳ …

Read More »

ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ಮಸೂದೆಗೆ ಅಂಗೀಕಾರ

ಬೆಳಗಾವಿ: ರಾಜ್ಯದಲ್ಲಿ ಕೈಗಾರಿಕೋದ್ಯಮಿಗಳು ಮತ್ತು ಹೂಡಿಕೆದಾರರಿಗೆ ಹಾದಿ ಸುಗಮ ಮಾಡಿಕೊಡಲು ಹಾಗೂ ಕೈಗಾರಿಕಾ ಸ್ಥಾಪನೆಗೆ ಎದುರಾಗುವ ತಾಂತ್ರಿಕ, ಕಾನೂನಾತ್ಮಕ ಅಡೆತಡೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರತ್ಯೇಕವಾಗಿ ಕರ್ನಾಟಕ ರಾಜ್ಯ ಹೂಡಿಕೆದಾರರ ಪ್ರಾಧಿಕಾರ ರಚಿಸುವ ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ಮಸೂದೆ-2022ಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರಕಿತು.   ವಿಧಾನಸಭೆಯಲ್ಲಿ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಮಸೂದೆ ಮಂಡಿಸಿ, ರಾಜ್ಯದಲ್ಲಿ ದೊಡ್ಡ-ಅತಿದೊಡ್ಡ ಅಥವಾ ಬೃಹತ್‌ ಗಾತ್ರದ ಅಂದರೆ 1,250 ಎಕರೆಗೂ ಮೀರಿದ ಹೂಡಿಕೆ ಪ್ರದೇಶ, ಕೈಗಾರಿಕಾ …

Read More »

ದೇಶದಲ್ಲೇ ರಾಜ್ಯದ ಪೊಲೀಸರು ಉತ್ತಮ ಎನಿಸಿದ್ದಾರೆ: ಸಿಎಂ ಬೊಮ್ಮಾಯಿ

ಬೆಳಗಾವಿ: ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ನಡೆಯದಂತೆ ಮುಂಜಾಗ್ರತೆ ವಹಿಸಬೇಕು. ಕೃತ್ಯಗಳು ನಡೆದ ಸಂದರ್ಭದಲ್ಲಿ ಕ್ಷಿಪ್ರ ಗತಿಯಲ್ಲಿ ಕಾರ್ಯಾಚರಣೆ ನಡೆಸಿ ಅಪರಾಧಿಗಳನ್ನು ಬಂಧಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು.   ಬೆಳಗಾವಿ ನಗರ ಪೊಲೀಸ್‌ ಆಯುಕ್ತರ ನೂತನ ಕಚೇರಿಯ ಕಟ್ಟಡವನ್ನು ಬುಧವಾರ ಉದ್ಘಾಟಸಿ ಮಾತನಾಡಿದ ಅವರು,ಬೆಳಗಾವಿ ಸೇರಿದಂತೆ ಎಲ್ಲಾ ಜಿಲ್ಲೆಗಳ ಪೊಲೀಸರು ಜನರೊಂದಿಗೆ ನಿಕಟ ಸಂಪರ್ಕ ಇಟ್ಟುಕೊಳ್ಳಬೇಕು. ಪೊಲೀಸ್ ಇಲಾಖೆ ಜನರ ಸಹಕಾರದಿಂದ ಶಾಂತಿ ಸುವ್ಯವಸ್ಥಿತ ಕಾಪಾಡಬೇಕು. …

Read More »

K.S.R.T.C.ಚೆಲ್ಲಾಟ ; ಬಸ್ ವ್ಯವಸ್ಥೆ ಇಲ್ಲದೇ ವಿದ್ಯಾರ್ಥಿಗಳ ಪರದಾಟ!

  ಗೋಕಾಕ: ತಾಲೂಕಿನ ಸುತ್ತಮುತ್ತಲಿನ ಗ್ರಾಮಗಳಿಂದ ಗೋಕಾಕ ಮಹಾವಿದ್ಯಾಲಯಕ್ಕೆ ಹಾಗೂ ಶಾಲೆ, ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಸೂಕ್ತ ಬಸ್‌ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳು ನಿತ್ಯ ಪರದಾಡುವಂತಾಗಿದೆ. ಬಸ್‌ ಬಾರದೆ ಹೋದರೆ ಶಾಲೆ, ಕಾಲೇಜು ವಿದ್ಯಾರ್ಥಿಗಳು ತರಗತಿಗಳಿಂದ ವಂಚಿತರಾಗಬೇಕಾಗಿದೆ. ಹೆಚ್ಚಿನ ಬಸ್‌ ಸೌಲಭ್ಯ ಕಲ್ಪಿಸುವಂತೆ ವಿದ್ಯಾರ್ಥಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಕ್ರಮ ಕೈಗೊಂಡಿಲ್ಲ. ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಂದ ಮನೆಗೆ ತೆರಳಬೇಕಾದರೂ ಬಸ್‌ಗಳಿಲ್ಲದೆ, ಪರ್ಯಾಯ ಮಾರ್ಗವಿಲ್ಲದೆ ಕಷ್ಟ ಪಡುತ್ತಿದ್ದಾರೆ. …

Read More »

ಹಳೇ ಪಿಂಚಣಿ ವ್ಯವಸ್ಥೆ ಜಾರಿ ಇಲ್ಲ: ಸಿಎಂ ಬೊಮ್ಮಾಯಿ

ಬೆಳಗಾವಿ: ಹಳೆಯ ಪಿಂಚಣಿ ಯೋಜನೆಯನ್ನು ರಾಜ್ಯದಲ್ಲಿ ಮತ್ತೆ ಜಾರಿಗೆ ತರುವ ಪ್ರಸ್ತಾವ ನಮ್ಮ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಇದರಿಂದಾಗಿ ಬೆಂಗಳೂರಿನಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಗಾಗಿ ಹೋರಾಡು ತ್ತಿರುವ ಸರಕಾರಿ ನೌಕರರಿಗೆ ಹಿನ್ನಡೆಯಾಗಿದೆ.   ಮಂಗಳವಾರ ಬಿಜೆಪಿಯ ರೇಣುಕಾ ಚಾರ್ಯ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಸಿಎಂ, ಹಳೆಯ ಪಿಂಚಣಿ ಯೋಜನೆಯ ಆರ್ಥಿಕ ಹೊರೆಯನ್ನು ನಿಭಾಯಿಸಲು ಸಾಕಷ್ಟು ನಿಧಿ ಇಲ್ಲ. ಹಾಗಾಗಿ ಮರು ಜಾರಿ ಕಷ್ಟ. ಅಲ್ಲದೇ ಆರ್‌ಬಿಐ …

Read More »