Breaking News

ಮೆಕ್ಕೆಜೋಳಕ್ಕೆ ಕೇಂದ್ರ ಕೊಡುವ 2,400 ರೂ. ಬೆಂಬಲ ಬೆಲೆಯೊಂದಿಗೆ ರಾಜ್ಯದಿಂದಲೂ 600 ರೂ. ಸೇರಿಸಿ ನೀಡುವಂತೆ ಒತ್ತಾಯ

ಹಾವೇರಿ: ರಾಜ್ಯದಲ್ಲಿ ಅತಿಹೆಚ್ಚು ಮೆಕ್ಕೆಜೋಳ ಬೆಳೆಯುವ ಜಿಲ್ಲೆಗಳಲ್ಲಿ ಹಾವೇರಿ ಜಿಲ್ಲೆಯೂ ಒಂದು. ಮೆಕ್ಕೆಜೋಳಕ್ಕೆ ಕೇಂದ್ರ ಸರ್ಕಾರ ಇದೀಗ ಕನಿಷ್ಠ ಬೆಂಬಲ ಬೆಲೆ 2400 ರೂಪಾಯಿ ನಿಗದಿ ಮಾಡಿದೆ. ಇದಕ್ಕೆ ರಾಜ್ಯ ಸರ್ಕಾರ 600 ರೂಪಾಯಿ ಪ್ರೋತ್ಸಾಹಧನ ಸೇರಿಸಿ ಕ್ವಿಂಟಾಲ್ ಮೆಕ್ಕೆಜೋಳಕ್ಕೆ ಸರ್ಕಾರ 3000 ರೂಪಾಯಿ ನೀಡಬೇಕು ಎಂದು ಹಾವೇರಿ ರೈತರು ಒತ್ತಾಯಿಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ವಿಂಟಾಲ್ ಮೆಕ್ಕೆಜೋಳಕ್ಕೆ 3 ಸಾವಿರ ರೂಪಾಯಿ ನೀಡಿ ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಬೇಕು …

Read More »

ರಾಹುಲ್ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಬಿಡಿಸಿಸಿ ಬ್ಯಾಂಕಿನ ಮೊದಲ ಮಾಸಿಕ ಸಭೆ

ರಾಹುಲ್ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಬಿಡಿಸಿಸಿ ಬ್ಯಾಂಕಿನ ಮೊದಲ ಮಾಸಿಕ ಸಭೆ ಬಿಡಿಸಿಸಿ ಬ್ಯಾಂಕಿನ ಮೊದಲ ಮಾಸಿಕ ಸಭೆ ರಾಹುಲ್ ಜಾರಕಿಹೊಳಿ ಅಧ್ಯಕ್ಷತೆ ಮಹತ್ವದ ವಿಷಯಗಳ ಕುರಿತು ಚರ್ಚೆ ನಿರ್ದೇಶಕರ ಸಲಹೆ ಸೂಚನೆ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಬೆಳಗಾವಿ ಪಟ್ಟಣ ಶಾಖೆಯಲ್ಲಿ, ಮಾಸಿಕ ಸಭೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ಬುಧವಾರದಂದು ಬೆಳಗಾವಿ ತಾಲೂಕಿನ ಬಿಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ರಾಹುಲ್ಸತೀಶ ಜಾರಕಿಹೋಳಿ ಅವರ ಅಧ್ಯಕ್ಷತೆಯಲ್ಲಿ ಪ್ರಧಾನ ಕಾರ್ಯಾಲಯದ ಸಭಾ ಭವನದಲ್ಲಿ ಮಾಸಿಕ …

Read More »

ಮೂರನೇ ರೈಲ್ವೇ ಮೇಲ್ಸೇತುವೆ ರಸ್ತೆ ಕಾಮಗಾರಿ ಪರಿಶೀಲಿಸಿದ ಶಾಸಕ ಅಭಯ್ ಪಾಟೀಲ್

ಮೂರನೇ ರೈಲ್ವೇ ಮೇಲ್ಸೇತುವೆ ರಸ್ತೆ ಕಾಮಗಾರಿ ಪರಿಶೀಲಿಸಿದ ಶಾಸಕ ಅಭಯ್ ಪಾಟೀಲ್ ಗುತ್ತಿಗೆದಾರ ಗೋಡಸೆಯೊಂದಿಗೆ ವಿಮರ್ಶೆ ತಾಂತ್ರಿಕ ವಿನ್ಯಾಸಗಳ ಬಗ್ಗೆ ಪಡೆದುಕೊಂಡರು ಮಾಹಿತಿ ಗುಣಮಟ್ಟದೊಂದಿಗೆ, ಕಾಮಗಾರಿಗೆ ವೇಗ ಹೆಚ್ಚಿಸುವಂತೆ ಸೂಚನೆ ಬೆಳಗಾವಿಯ ಮೂರನೇ ರೇಲ್ವೆ ಮೇಲ್ಸೇತುವೆಯಲ್ಲಿ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯ ಪ್ರಗತಿಯನ್ನು ಇಂದು ಶಾಸಕ ಅಭಯ್ ಪಾಟೀಲ್ ಅವರು ಪರಿಶೀಲಿಸಿದರು. ಬೆಳಗಾವಿಯ ಮೂರನೇ ರೇಲ್ವೆ ಮೇಲ್ಸೇತುವೆಯಲ್ಲಿ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯ ಪ್ರಗತಿಯನ್ನು ಇಂದು ಶಾಸಕ ಅಭಯ್ ಪಾಟೀಲ್ …

Read More »

ಮನವಿಗೆ ಸ್ಪಂದಿಸಿ ಸಕ್ಕರೆ ದರ ಹೆಚ್ಚಿಸಿದ ಕೇಂದ್ರ ಸರ್ಕಾರ ಕೇಂದ್ರ ಸರ್ಕಾರ ನಿರ್ಧಾರವನ್ನು ಸ್ವಾಗತಿಸಿದ ಸಿಎಂ ಸಿದ್ಧರಾಮಯ್ಯ

ಮನವಿಗೆ ಸ್ಪಂದಿಸಿ ಸಕ್ಕರೆ ದರ ಹೆಚ್ಚಿಸಿದ ಕೇಂದ್ರ ಸರ್ಕಾರ ಕೇಂದ್ರ ಸರ್ಕಾರ ನಿರ್ಧಾರವನ್ನು ಸ್ವಾಗತಿಸಿದ ಸಿಎಂ ಸಿದ್ಧರಾಮಯ್ಯ ಮನವಿಗೆ ಸ್ಪಂದಿಸಿ ಸಕ್ಕರೆ ದರ ಹೆಚ್ಚಿಸಿದ ಕೇಂದ್ರ ಸರ್ಕಾರ ಕೇಂದ್ರ ಸರ್ಕಾರ ನಿರ್ಧಾರವನ್ನು ಸ್ವಾಗತಿಸಿದ ಸಿಎಂ ಸಿದ್ಧರಾಮಯ್ಯ ಪಿಎಂ ಭೇಟಿ ಬಳಿಕ ಕೇಂದ್ರದಿಂದ ನಿರ್ಧಾರ ನಾವು 41 ರೂ. ಕೇಳಿದ್ದೇವು 40 ರೂ. ನೀಡಲು ಮುಂದಾಗಿದ್ದಾರೆ ಸಕ್ಕರೆ ದರ ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ ನಿರ್ಧಾರವನ್ನು ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ. ಈ …

Read More »

ನೀರು ಸೋರಿಕೆ, ಅಕ್ರಮ ಸಂಪರ್ಕಕ್ಕೆ ಕಡಿವಾಣ ಹಾಕಲು ರೋಬೋಟಿಕ್ ತಂತ್ರಜ್ಞಾನ

ಬೆಂಗಳೂರು: ಅಕ್ರಮ ನೀರು ಸೋರಿಕೆಗೆ ಕಡಿವಾಣ ಹಾಕುವ ಮೂಲಕ, ಕಲುಷಿತ ನೀರು ಪತ್ತೆ ಹಚ್ಚಿ ಪರಿಶುದ್ಧ ನೀರು ನೀಡುವ ನಿಟ್ಟಿನಲ್ಲಿ ಬೆಂಗಳೂರು ಜಲಮಂಡಳಿ ಅಳವಡಿಸಿಕೊಂಡಿರುವ ನೂತನ ರೋಬೋಟಿಕ್ ತಂತ್ರಜ್ಞಾನ ದೇಶಕ್ಕೆ ಮಾದರಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶಂಸಿದ್ದಾರೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಕ್ರಮ ಸಂಪರ್ಕ ಪತ್ತೆ ಮತ್ತು ನೀರಿನ ಸೋರಿಕೆ ತಡೆಗೆ ನೂತನವಾಗಿ ರಚಿಸಿರುವ ನೀಲಿ ಪಡೆ ಮತ್ತು ರೊಬೋಟಿಕ್ ತಂತ್ರಜ್ಞಾನ ಅಳವಡಿಕೆ ಯೋಜನೆಗಳಿಗೆ ಚಾಲನೆ ನೀಡಿ …

Read More »

ಅಂತಾರಾಜ್ಯ ಕಳ್ಳರಿಬ್ಬರ ಬಂಧನ

ಕೋಲಾರ: ಒಂಟಿ‌ ಮಹಿಳೆಯಿದ್ದ ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ್ದ ಇಬ್ಬರು ಅಂತಾರಾಜ್ಯ ಕಳ್ಳರನ್ನು ಮಾಲೂರು ತಾಲೂಕಿನ ಪೊಲೀಸರು ಬಂಧಿಸಿದ್ದಾರೆ. 40 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಬಂಧಿತರಿಂದ ವಶಕ್ಕೆ ಪಡೆಯಲಾಗಿದೆ. ಪಶ್ಚಿಮ ಬಂಗಾಳ ಮೂಲದ ಹುಸ್ದರ್ ಶೇಖ್ (24) ಹಾಗೂ ತಮಿಳುನಾಡು ಮೂಲದ ಉಮಾಶಂಕರ್ (27) ಬಂಧಿತ ಆರೋಪಿಗಳು. ಪ್ರಕರಣದ ವಿವರ: ಇದೇ ನವೆಂಬರ್ 4 ರಂದು ಮಾಲೂರು ತಾಲೂಕಿನ ಚಿಕ್ಕತಿರುಪತಿ ಗ್ರಾಮದ ದಿ ಎಂಪೈರಿಯನ್ ಅಪಾರ್ಟ್​ಮೆಂಟ್​ನಲ್ಲಿ ಪ್ರೀತ್ ಕಮಲ್ ಎಂಬ ಮಹಿಳೆ‌ಯಿದ್ದು, …

Read More »

31 ಕೃಷ್ಣಮೃಗಗಳು ಸತ್ತಿದ್ದು ಗಳಲೆ ರೋಗದಿಂದ,

ಬೆಳಗಾವಿ: ಇಲ್ಲಿನ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 31 ಕೃಷ್ಣಮೃಗಗಳು ಗಳಲೆ ರೋಗ(Hemorrhagic Septicemia) ಎಂಬ ಬ್ಯಾಕ್ಟೀರಿಯಾ ಸೋಂಕಿನಿಂದ ಮೃತಪಟ್ಟಿರುವುದು ದೃಢಪಟ್ಟಿದೆ. ಈ ಸೋಂಕು ಸಸ್ಯಾಹಾರಿ ಪ್ರಾಣಿಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್.ಇ. ಕ್ರಾಂತಿ ಸ್ಪಷ್ಟಪಡಿಸಿದರು. ಬುಧವಾರ ತಮ್ಮ ಕಚೇರಿಯಲ್ಲಿ ಮಾಧ್ಯಮಗೋಷ್ಟಿ ಮಾಹಿತಿ ನೀಡಿದ ಅವರು, ಬೆಂಗಳೂರಿನ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯ ಪ್ರಯೋಗಾಲಯಕ್ಕೆ ಮೃತ ಕೃಷ್ಣಮೃಗಗಳ ಅಂಗಾಂಗಳ ಮಾದರಿಯನ್ನು ಪರೀಕ್ಷೆಗೆ ರವಾನಿಸಲಾಗಿತ್ತು. …

Read More »

ಲೋಕೋಪಯೋಗಿ ಇಲಾಖೆಯ ರಾಜ್ಯ ಎಸ್‌.ಸಿ/ಎಸ್‌.ಟಿ ಗುತ್ತಿಗೆದಾರರಸಮಸ್ಯೆಗಳು ಮತ್ತು ಬೇಡಿಕೆಗಳ ಕುರಿತುಸಭೆ

ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ಲೋಕೋಪಯೋಗಿ ಇಲಾಖೆಯ ರಾಜ್ಯ ಎಸ್‌.ಸಿ/ಎಸ್‌.ಟಿ ಗುತ್ತಿಗೆದಾರರ   ಸಮಸ್ಯೆಗಳು ಮತ್ತು ಬೇಡಿಕೆಗಳ ಕುರಿತು ಗುತ್ತಿಗೆದಾರರ ಸಂಘದ ಅಧ್ಯಕ್ಷರು ಮತ್ತು   ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಮಗ್ರ ಚರ್ಚೆ ನಡೆಸಲಾಯಿತು.

Read More »

ಕೋರ್ಟ್‌ ಕಲಾಪದ ವೇಳೆ ಮಹಿಳೆ ಮೇಲೆ ಹಲ್ಲೆ, ಆರೋಪಿ ಬಂಧನ

ಚಿಕ್ಕೋಡಿ: ಕಲಾಪಕ್ಕೆ ಬಂದಿದ್ದ ಮಹಿಳೆಯ ಮೇಲೆ ವ್ಯಕ್ತಿಯೊಬ್ಬ ಕೋರ್ಟ್​ ಕಲಾಪದ ವೇಳೆಯೇ ಮಾರಕಾಸ್ತ್ರದಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ ಘಟನೆ ಅಥಣಿ ನ್ಯಾಯಾಲಯದಲ್ಲಿ ಜರುಗಿದೆ. ಮಂಗಳವಾರ ಈ ಘಟನೆ ನಡೆದಿದ್ದು ಇಂದು ಬೆಳಕಿಗೆ ಬಂದಿದೆ. ಮೀನಾಕ್ಷಿ ರಾಮಚಂದ್ರ ಶಿಂಧೆ (50) ಹಲ್ಲೆಗೊಳಗಾದ ಮಹಿಳೆ. ಬಾಬಾಸಾಹೇಬ್ ಚೌಹಾಣ್ ಹಲ್ಲೆ ಮಾಡಿದ ಆರೋಪಿ. ಘಟನೆಯಲ್ಲಿ ಮಹಿಳೆಯು ಗಂಭೀರವಾಗಿ ಗಾಯಗೊಂಡಿದ್ದು, ಸದ್ಯ ಆಕೆಯನ್ನು ಅಥಣಿ ಸಮುದಾಯದ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಳಗಾವಿ ಜಿಲ್ಲೆಯ ಅಥಣಿ …

Read More »

ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಅವರು ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಉಡುಪಿ: “ಯಕ್ಷಗಾನದೊಳಗಡೆ ಹೋಮೊಸೆಕ್ಸ್ ಬೆಳೆಯುತ್ತದೆ ಮತ್ತು ಯಕ್ಷಗಾನದಲ್ಲಿ ಅದು ಅನಿವಾರ್ಯ. ಸ್ತ್ರೀ ವೇಷಧಾರಿಗಳಿಗೆ ಅಲ್ಲಿ ಹೆಚ್ಚು ಒತ್ತಡ ಇರುತ್ತದೆ. ಸ್ತ್ರೀ ವೇಷ ಕಲಾವಿದ ಅದನ್ನು ನಿರಾಕರಿಸಿದರೆ ಮರುದಿವಸ ಭಾಗವತರು ಅವನಿಗೆ ಹೆಚ್ಚು ಪದ್ಯ ಕೊಡುವುದಿಲ್ಲ” ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ್ ಬಿಳಿಮಲೆ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದು, ಉಡುಪಿಯಲ್ಲಿಂದು ಯಕ್ಷಗಾನ ಅಕಾಡೆಮಿ ರಾಜ್ಯಾದ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮದ …

Read More »