ಉಡುಪಿ: ಪ್ರಧಾನ ನರೇಂದ್ರ ಮೋದಿ ಅವರ ಮುಂದೆ ರಾಹುಲ್ ಗಾಂಧಿ ಬಚ್ಚಾ. ರಾಹುಲ್ ಹೋದಲ್ಲಿ ಕಾಂಗ್ರೆಸ್ ಸೋಲುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಲೇವಡಿ ಮಾಡಿದರು. ಉಡುಪಿ ಜಿಲ್ಲೆಯ ಕಾಪುವಿನಲ್ಲಿ ಸೋಮವಾರ ಹಮ್ಮಿಕೊಂಡ ‘ಜನಸಂಕಲ್ಪ ಸಮಾವೇಶ’ದಲ್ಲಿ ಮಾತನಾಡಿದ ಯಡಿಯೂರಪ್ಪ, ಕಾಂಗ್ರೆಸ್ನ ಕೆಲ ನಾಯಕರು ಸಿಎಂ ಆಗುವ ಭ್ರಮೆಯಲ್ಲಿದ್ದಾರೆ. ಅವರಿಗೆ ವಾಸ್ತವ ಸಂಗತಿ ತಿಳಿಸಲಿದ್ದೇವೆ. ಮೋದಿ ಟೀಕಿಸುವ ನೈತಿಕತೆ ಅವರಿಗೆ ಇಲ್ಲ. ರಾಹುಲ್ ಹೋದಲ್ಲಿ ಕಾಂಗ್ರೆಸ್ ಸೋಲುತ್ತದೆ ಎಂದರು. ಮೋದಿ ಪ್ರಧಾನಿಯಾಗಿ 8 …
Read More »ವಿಕೋಪಕ್ಕೆ ತಿರುಗಿದ ಪ್ರತಿಭಟನೆ: ಸಿಪಿಐ ಎದೆಗೇ ಬಿತ್ತು ಪ್ರತಿಭಟನಾಕಾರರು ಎಸೆದ ಕಲ್ಲು, ಪೊಲೀಸರಿಗೆ ಗಾಯ
ಬಾಗಲಕೋಟೆ: ಕಬ್ಬು ಬೆಲೆ ನಿಗದಿ ವಿಚಾರವಾಗಿ ಬಾಗಲಕೋಟೆಯ ಸಕ್ಕರೆ ಕಾರ್ಖಾನೆಯ ಬಳಿ ನಡೆಯುತ್ತಿರುವ ಪ್ರತಿಭಟನೆ ವಿಕೋಪಕ್ಕೆ ತೆರಳಿದ್ದು, ಕಲ್ಲು ತೂರಾಟವೂ ನಡೆದಿದೆ. ಮಾತ್ರವಲ್ಲ, ಇನ್ಸ್ಪೆಕ್ಟರ್ ಸೇರಿ ಮೂವರು ಪೊಲೀಸರಿಗೆ ಗಾಯವಾಗಿದೆ. ಬಾಗಲಕೋಟೆಯ ಸಮೀರವಾಡಿ ಸಕ್ಕರೆ ಕಾರ್ಖಾನೆ ಎದುರು ಕಬ್ಬು ಬೆಲೆ ನಿಗದಿ ವಿಚಾರವಾಗಿ ರೈತರ ಪ್ರತಿಭಟನೆ ನಡೆಸುತ್ತಿದ್ದು, ಅದು ಇದೀಗ ವಿಕೋಪಕ್ಕೂ ತಿರುಗಿದೆ. ಪ್ರತಿಭಟನಾಕಾರರು ಎಸೆದ ಕಲ್ಲು ಸರ್ಕಲ್ ಪೊಲೀಸ್ ಇನ್ಸ್ಪೆಕ್ಟರ್ ಎದೆಗೇ ಬಿದ್ದಿದ್ದು, ಅವರೂ ಸೇರಿ ಮೂವರು ಪೊಲೀಸರು ಗಾಯಗೊಂಡಿದ್ದಾರೆ. …
Read More »ಮೈಸೂರಿಗೆ ಬಂದ ‘ವಂದೇ ಭಾರತ್’ ಎಕ್ಸ್ ಪ್ರೆಸ್ ರೈಲು
ಮೈಸೂರು: ಚೆನ್ನೈ- ಬೆಂಗಳೂರು- ಮೈಸೂರು ವಂದೇಭಾರತ್ ಎಕ್ಸ್ ಪ್ರೆಸ್ ಸೋಮವಾರ ಮಧ್ಯಾಹ್ನ 12.13ಕ್ಕೆ ಮೈಸೂರಿಗೆ ಆಗಮಿಸಿತು. ದಕ್ಷಿಣ ಭಾರತದ ಮೊದಲ ವಂದೇ ಭಾರತ್ ರೈಲು ಇದಾಗಿದ್ದು, ಪ್ರಧಾನಿ ನರೇಂದ್ರ ಮೋದಿ ನ.11ರ ಶುಕ್ರವಾರ ಚಾಲನೆ ನೀಡಲಿದ್ದಾರೆ. ದಕ್ಷಿಣ ಭಾರತದ ಮೊದಲ ವಂದೇ ಭಾರತ್ ರೈಲು ಇದಾಗಿದ್ದು, ಪ್ರಧಾನಿ ನರೇಂದ್ರ ಮೋದಿ ನ.11ರ ಶುಕ್ರವಾರ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ರೈಲಿನ ಪ್ರಾಯೋಗಿಕ ಸಂಚಾರವು ಸೋಮವಾರ ನಡೆಯಿತು. ರೈಲನ್ನು ಮೊದಲ …
Read More »K.R.S. ಬೃಂದಾವನದಲ್ಲಿ ಚಿರತೆ
ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ ಎಸ್ ಬೃಂದಾವನದಲ್ಲಿ ಭಾನುವಾರ ಸಂಜೆ ಚಿರತೆ ಕಾಣಿಸಿಕೊಂಡ ಕಾರಣ ಪ್ರವಾಸಿಗರು ಕೆಲಕಾಲ ಭಯಭೀತರಾದರು. ಸಂಜೆ 6 ಗಂಟೆ ಸಮಯದಲ್ಲಿ ಬೃಂದಾವನ ಉದ್ಯಾನದಲ್ಲಿ ಸಾವಿರಾರು ಪ್ರವಾಸಿಗರು ಇದ್ದರು. ಸಂಜೆ 6 ಗಂಟೆ ಸಮಯದಲ್ಲಿ ಬೃಂದಾವನ ಉದ್ಯಾನದಲ್ಲಿ ಸಾವಿರಾರು ಪ್ರವಾಸಿಗರು ಇದ್ದರು. ಮೀನುಗಾರಿಕಾ ಇಲಾಖೆಯ ಅಕ್ವೇರಿಯಂ ಬಳಿಯ ರಾಯಲ್ ಆರ್ಕಿಡ್ ಹೋಟೆಲ್ ಕಡೆ ಚಿರತೆ ಹೋಗುತ್ತಿರುವುದು ಭದ್ರತಾ ಸಿಬ್ಬಂಂದಿಯ ಕಣ್ಣಿಗೆ ಬಿದ್ದಿದೆ. ತಕ್ಷಣ ಜಾಗೃತರಾದ ಭದ್ರತಾ …
Read More »ಬೆಳಗಾವಿ ತಾಲೂಕಿನ ಯಳ್ಳೂರ ಗ್ರಾಮದಲ್ಲಿ ವೃದ್ಧೆಯ ಮೇಲೆ ಜೇನು ದಾಳಿ
ಭತ್ತದ ಕಟಾವಿಗೆ ಗದ್ದೆಗೆ ಹೋಗಿದ್ದ ವೃದ್ಧ ರೈತ ಮಹಿಳೆ ಓರ್ವರಿಗೆ ಜೇನು ಹುಳು ಕಚ್ಚಿರುವ ಘಟನೆ ಬೆಳಗಾವಿ ತಾಲೂಕಿನ ಯಳ್ಳೂರ ಗ್ರಾಮದಲ್ಲಿ ನಡೆದಿದೆ. ಯಳ್ಳೂರ ಗ್ರಾಮದ 70 ವರ್ಷದ ಚಾಂಗುನಾ ಕೃಷ್ಣಾ ಕುಗಜಿ ಜೇನು ದಾಳಿಯಿಂದ ಗಾಯಗೊಂಡಿರುವ ವೃದ್ಧ ರೈತ ಮಹಿಳೆ. ತಮ್ಮ ಹೊಲದಲ್ಲಿ ಭತ್ತದ ಕಟಾವು ಮಾಡಲು ಬಂದಿದ್ದ ವೇಳೆ ಏಕಾಏಕಿ ಜೇನುಗಳು ದಾಳಿ ಮಾಡಿದ್ದರಿಂದ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ವೃದ್ಧೆಯ ಮುಖ, ಬಾಯಿ ಮತ್ತು ತುಟಿಗಳಿಗೆ …
Read More »ನ. 28 ರಂದು ಬೆಳಗಾವಿ ತಾಲೂಕಿನ ರೈತರು ಮತ್ತೇ ಬೀದಿಗಿಳಿದು ಪ್ರತಿಭಟಿಸುತ್ತಾರಂತೆ?
ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ರೈತರನ್ನು ಭೂಸ್ವಾಧೀನಪಡಿಸಿ ನಿರ್ಮಿಸಲಾಗುತ್ತಿರುವ ರಿಂಗ್‌ರೋಡ್ ಯೋಜನೆಯನ್ನು ವಿರೋಧಿಸಿ ಬೆಳಗಾವಿ ತಾಲೂಕಿನ ರೈತರು ಪ್ರತಿಭಟನೆ ನಡೆಸಿದ್ದಾರೆ. ಇಂದು ಬೆಳಗಾವಿಯಲ್ಲಿ ನಡೆದ ಮಹಾರಾಷ್ಟ್ರ ಏಕೀಕರಣ ತಾಲೂಕಾ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಭೆಯಲ್ಲಿ ಈ ರಿಂಗ್ ರೋಡ್ ವಿರುದ್ಧದ ಹೋರಾಟ ಯಶಸ್ವಿಗೊಳಿಸಲು ತೀರ್ಮಾನಿಸಲಾಯಿತು. ಹೌದು, ಬೆಳಗಾವಿ ತಾಲೂಕಿನಲ್ಲಿ ಸಾವಿರಾರು ಎಕರೆ ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ರಿಂಗ್ ರೋಡ್ ಮಾಡಲು ಸರ್ಕಾರ ಯೋಜಿಸಿದೆ. ಆದರೆ ಇದರಿಂದ ಫಲವತ್ತಾದ ಭೂಮಿ …
Read More »ಡಿಸಿ ಕಚೇರಿ ಆವರಣ ಅಭಿವೃದ್ಧಿಗೆ ಕೂಡಿ ಬಂದ ಭಾಗ್ಯ..!
ಅಂತೂ ಇಂತೂ ಕೊನೆಗೂ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿನ ರಸ್ತೆ, ಚರಂಡಿ ಸೇರಿ ಇನ್ನಿತರ ಅಭಿವೃದ್ಧಿಗೆ ಕಾಲ ಕೂಡಿ ಬಂದಿದ್ದು. ವಿವಿಧ ಕಾಮಗಾರಿಗಳಿಗೆ ಚಾಲನೆ ಸಿಕ್ಕಿದೆ. ಹೌದು ಉತ್ತರ ಶಾಸಕ ಅನೀಲ್ ಬೆನಕೆ, ಜಿಲ್ಲಾಧಿಕಾರಿ ಡಾ.ನಿತೇಶ ಪಾಟೀಲ್, ಬುಡಾ ಆಯುಕ್ತ ಪ್ರೀತಮ್ ನಸಲಾಪೂರ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಪ್ರವೀಣ ಬಾಗೇವಾಡಿ ಅವರು ಜಿಲ್ಲಾಧಿಕಾರಿ ಕಚೇರಿ ಆವರಣದ ಸುತ್ತಲಿನ ಪ್ರದೇಶ ಹಾಗೂ ಜಿಲ್ಲಾ ಪಂಚಾಯತಿಯಿಂದ ಸರದಾರ್ಸ ಹೈಸ್ಕೂಲ್ ಕ್ಲಾಸ್‍ವರೆಗೆ ರಸ್ತೆ, …
Read More »ನಿಪ್ಪಾಣಿಗೆ ಜೆಡಿಎಸ್ ರಾಜ್ಯಾದ್ಯಕ್ಷ ಸಿ ಎಮ್ ಇಬ್ರಾಹಿಮ್ ಭೇಟಿ
ರಾಜಕೀಯವಾಗಿ ಅತ್ಯಂತ ಕುತೂಹಲಕಾರಿಯಾಗಿರುವ ನಿಪ್ಪಾಣಿ ಮತಕ್ಷೇತ್ರವು ನಿಪ್ಪಾಣಿಗೆ ಜೆಡಿಎಸ್ ರಾಜ್ಯಾದ್ಯಕ್ಷ ಸಿ ಎಮ್ ಇಬ್ರಾಹಿಮ್ ಭೇಟಿ ನೀಡಿದ ಹಿನ್ನೆಲೆಯಲ್ಲಿ ಮತ್ತಷ್ಟು ರಾಜಕೀಯ ಗರಿಗಳು ಮೂಡಿವೆ. ರಾಜ್ಯದಲ್ಲಿ ಸಾಕಷ್ಟು ನೆಲಕಚ್ಚಿರುವ ಜೆಡಿಎಸ್ ಪಕ್ಷದ ಹಿನ್ನೆಲೆಯಲ್ಲಿ ಮುಂಬರುವ ವಿಧಾನಸಭೆಯಲ್ಲಿ ವಿಧಾನಸಭೆಯ ಚುನಾವಣೆಯಲ್ಲಿ ತನ್ನ ಚಾಪನ್ನು ಮೂಡಿಸಲು ಸಾಕಷ್ಟು ಹೋರಾಟ ಮಾಡುತ್ತಿರುವ ಜೆಡಿಎಸ್ ಪಕ್ಷವು ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಈಗ ರಾಜ್ಯದ ಉಸ್ತುವಾರಿಯನ್ನು ಹೊತ್ತಿರುವ ಜೆ ಡಿ ಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ರವರು …
Read More »ಸಿದ್ದರಾಮಯ್ಯ ಯಾರನ್ನೂ ಬೆಳೆಯಲು ಬಿಟ್ಟಿಲ್ಲ:C.M
ಕನ್ನಡ ನಾಡಿನ ಜನತೆಯ ಸಮಗ್ರ ಅಭಿವೃದ್ಧಿಗಾಗಿ ಡಬಲ್ ಇಂಜಿನ್ ಸರ್ಕಾರ ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿರುವ ಜನ ಸಂಕಲ್ಪ ಯಾತ್ರೆಯನ್ನು ಸಿಎಂ ಬೊಮ್ಮಾಯಿಯವರು ಉದ್ಘಾಟಿಸಿಮಾತನಾಡಿದರು. ಕರಾವಳಿ ಪ್ರದೇಶದ ಅಭಿವೃದ್ಧಿಗೆ ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಸರ್ಕಾರ ಬಹಳಷ್ಟು ಕೊಡುಗೆ ನೀಡಿದೆ. ಕರಾವಳಿಗರ ಬಹುದಿನಗಳ ಬೇಡಿಕೆಯಾಗಿದ್ದ ಸಿ.ಆರ್.ಝೆಡ್ ನಿಯಮಗಳಿಗೆ ತಿದ್ದುಪಡಿ ತಂದಿದೆ. …
Read More »ಹದಗೆಟ್ಟ ರಸ್ತೆ ದುರಸ್ತಿ ಮಾಡುವಂತೆ ಕರವೇ ಕಾರ್ಯಕರ್ತರು ಪ್ರತಿಭಟನೆ
ಚಿಕ್ಕೋಡಿ ಪಟ್ಟಣದಲ್ಲಿ ಹದಗೆಟ್ಟ ಹೋಗಿರುವ ರಸ್ತೆಗಳನ್ನು ದುರಸ್ತಿ ಮಾಡುವಂತೆ ರಸ್ತೆ ತಡೆದು ಕರವೇ ಕಾರ್ಯಕರ್ತರು ಪ್ರತಿಭಟನೆಯನ್ನು ಮಾಡಿ ಆಕ್ರೋಶವನ್ನು ಹೋರಹಾಕಿದರು. ಕೆಲಹೊತ್ತು ಚಿಕ್ಕೋಡಿ-ಮಿರಜ ರಸ್ತೆ ತಡೆದು ಪ್ರತಿಭಟನೆಯನ್ನು ನಡೆಸಿದರು. ಕರವೇ ಜಿಲ್ಲಾ ಸಂಚಾಲಕ ಸಂಜು ಬಡಿಗೇರ ಹಾಗೂ ಸಮಾಜ ಸೇವಕ ಚಂದ್ರಕಾಂತ ಹುಕ್ಕೇರಿ ಇವರ ನೇತೃತ್ವದಲ್ಲಿ ಕರವೇ ಕಾರ್ಯಕರ್ತರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು. ಚಿಕ್ಕೋಡಿ ಪಟ್ಟಣದಲ್ಲಿ ಹದಗೆಟ್ಟ ರಸ್ತೆಗಳನ್ನು ದುರಸ್ತೆ ಮಾಡುವಂತೆ ಆಗ್ರಹಿಸಿದರು. ಪಟ್ಟಣದಲ್ಲಿ ಹೊಸ ರಸ್ತೆಗಳನ್ನು ಮಾಡದೇ …
Read More »