ತುಮಕೂರು: ಜಿಲ್ಲೆಯ ವಿವಿಧೆಡೆ ಮಂಗಳವಾರ ಸುರಿದ ಭಾರಿ ಮಳೆಗೆ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಇನ್ನೊಂದೆಡೆ, ಹಳ್ಳ-ಕೊಳ್ಳಗಳಲ್ಲಿ ಯಥೇಚ್ಛವಾಗಿ ನೀರು ಹರಿದು ಹೋಗುತ್ತಿರುವುದರಿಂದ ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ. ಗುಬ್ಬಿ, ತಿಪಟೂರು, ತುರುವೇಕೆರೆ ಸೇರಿದಂತೆ ಇತರೆ ಭಾಗದಲ್ಲಿ ವ್ಯಾಪಕ ಮಳೆಯಾದ ಹಿನ್ನೆಲೆಯಲ್ಲಿ ಇಲ್ಲಿನ ಕೆರೆಗಳೆಲ್ಲ ಭರ್ತಿಯಾಗಿದ್ದು, ನೀರು ತುಂಬಿ ಹೊರ ಹೊರಹೋಗುತ್ತಿರುವ ದೃಶ್ಯ ಸರ್ವೇಸಾಮಾನ್ಯವಾಗಿದೆ. ನೀರಿನ ರಭಸಕ್ಕೆ ತೇಲಿ ಹೋದ ಕಾರು: ಗುಬ್ಬಿ ತಾಲೂಕಿನ ಭಾಗದಲ್ಲಿ ಹಳ್ಳಗಳಲ್ಲಿ ನೀರು ಉಕ್ಕಿ ಹರಿಯುತ್ತಿರುವುದರಿಂದ ಅಕ್ಕಪಕ್ಕದ …
Read More »ಹೋರಿ ತಿವಿದು ವೃದ್ಧ ಸಾವು, ಇಬ್ಬರು ಗಂಭೀರ
ಹಾವೇರಿ: ಕೊಬ್ಬರಿ ಹೋರಿ ತಿವಿದು ಓರ್ವ ವಯೋವೃದ್ಧ ವ್ಯಕ್ತಿ ಸಾವನ್ನಪ್ಪಿದ ಘಟನೆ ಜಿಲ್ಲೆಯಲ್ಲಿ ಇಂದು ನಡೆಯಿತು. ಮೃತರನ್ನು 70 ವರ್ಷದ ಚಂದ್ರಶೇಖರ್ ಕೊಡಿಹಳ್ಳಿ ಎಂದು ಗುರುತಿಸಲಾಗಿದೆ. ಚಂದ್ರಶೇಖರ ಕೋಡಹಳ್ಳಿ ಅವರು ಹಾವೇರಿಯ ದಾನೇಶ್ವರಿನಗರದ ನಿವಾಸಿ. ಘಟನೆಯಲ್ಲಿ ಇನ್ನಿಬ್ಬರಿಗೆ ಗಂಭೀರ ಗಾಯವಾಗಿದ್ದು, ಹುಬ್ಬಳ್ಳಿಯ ಕಿಮ್ಸ್ಗೆ ರವಾನಿಸಲಾಗಿದೆ. ಹೋರಿ ಬೆದರಿಸುವ ಸ್ಪರ್ಧೆಯನ್ನು ನೋಡಿ ವಾಪಸ್ ಮನೆಗೆ ಹೋಗುತ್ತಿದ್ದ ವೇಳೆ, ಹಿಂದಿನಿಂದ ಹೋರಿ ತಿವಿದು ಘಟನೆ ನಡೆದಿದೆ. ಹಾವೇರಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ …
Read More »ಭಾವಪೂರ್ಣ ಶ್ರದ್ಧಾಂಜಲಿ ಆತ್ಮೀಯ ವಿರೂಪಾಕ್ಷ ಕವಟಗಿ ಇನ್ನಿಲ್ಲ
ಭಾವಪೂರ್ಣ ಶ್ರದ್ಧಾಂಜಲಿ ಆತ್ಮೀಯ ಗೆಳೆಯ, ವಿರೂಪಾಕ್ಷ ಕವಟಗಿ ಇನ್ನಿಲ್ಲ ಮೂಡಲಗಿ ಪಟ್ಟಣದ ಬಳಿ ಅಪಘಾತಕ್ಕೀಡಾಗಿ, ಕಳೆದ ಒಂದು ತಿಂಗಳಿನಿಂದ ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಿಕ್ಕೋಡಿಯ ಪತ್ರಕರ್ತ ಮಿತ್ರ ವಿರೂಪಾಕ್ಷ ಕವಟಗಿ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂಬ ಸುದ್ದಿ ಅತ್ಯಂತ ನೋವನ್ನುಂಟು ಮಾಡಿದೆ. ಅವರ ಅಗಲಿಕೆ ಪತ್ರಿಕೋದ್ಯಮ ಲೋಕಕ್ಕೆ ಹಾಗೂ ಅವರ ಸ್ನೇಹಿತರ ಬಳಗಕ್ಕೆ ತುಂಬಲಾರದ ನಷ್ಟ. ಬದುಕು ಮತ್ತು ವ್ಯಕ್ತಿತ್ವ: ವಿರೂಪಾಕ್ಷ ಕವಟಗಿ ಅವರು ತಮ್ಮ …
Read More »ದೀಪಾವಳಿ ಹಬ್ಬದ ನಿಮಿತ್ತ ಶ್ರೀ ಸಂತೋಷ್ ಅಣ್ಣಾ ಜಾರಕಿಹೊಳಿ ಅವರ ಅಭಿಮಾನಿಗಳಿಂದ ರಾಮದುರ್ಗ, ಸವದತ್ತಿ ಯರಗಟ್ಟಿ ಗೋಕಾಕ, ಮೂಡಲಗಿ, ತಾಲೂಕಿನಲ್ಲಿ ಸಿಹಿ ಹಂಚಿದರು.
ದೀಪಾವಳಿ ಹಬ್ಬದ ನಿಮಿತ್ತ ಶ್ರೀ ಸಂತೋಷ್ ಅಣ್ಣಾ ಜಾರಕಿಹೊಳಿ ಅವರ ಅಭಿಮಾನಿಗಳಿಂದ ರಾಮದುರ್ಗ, ಸವದತ್ತಿ ಯರಗಟ್ಟಿ ಗೋಕಾಕ, ಮೂಡಲಗಿ, ತಾಲೂಕಿನಲ್ಲಿ ಸಿಹಿ ಹಂಚಿದರು. ಈ ಸಂದರ್ಭದಲ್ಲಿ ಸಂತೋಷ್ ಅಣ್ಣಾ ಜಾರಕಿಹೊಳಿ ಅಭಿಮಾನಿಗಳು, ಸ್ನೇಹಿತರು ಉಪಸ್ಥಿತರಿದ್ದರು
Read More »ಕುಕ್ಕೆ ಸುಬ್ರಹ್ಮಣ್ಯದಲ್ಲಿ ದೀಪಾವಳಿ ಹಬ್ಬದ ಸಂಭ್ರಮ: ಹೊರಾಂಗಣ ಉತ್ಸವಗಳು ಆರಂಭ
ಸುಬ್ರಹ್ಮಣ್ಯ, ದಕ್ಷಿಣಕನ್ನಡ: ದಕ್ಷಿಣ ಭಾರತದ ಪ್ರಸಿದ್ಧ ನಾಗರಾಧ್ಯ ಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಂಪ್ರದಾಯಿಕ ಉತ್ಸವಗಳು ಬುಧವಾರ( ಅ. 22 ರಿಂದ) ಅಂದರೆ ಇಂದಿನಿಂದ ಆರಂಭಗೊಳ್ಳಲಿವೆ. ಈ ಹಬ್ಬದ ಮುಖ್ಯ ಆಕರ್ಷಣೆ ಎಂದರೆ, ಶ್ರೀ ದೇವರ ಹೊರಾಂಗಣ ಪ್ರವೇಶ ಮತ್ತು ಅನೇಕ ಧಾರ್ಮಿಕ ಕಾರ್ಯಕ್ರಮಗಳು. ರಾಜ್ಯದ ಮುಜರಾಯಿ ಇಲಾಖೆಯ ನಂಬರ್ ಒನ್ ದೇವಸ್ಥಾನವಾಗಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ದೀಪಾವಳಿ ಬಲಿಪಾಡ್ಯಮಿ ಹಬ್ಬವನ್ನು ಪ್ರಮುಖವಾಗಿ ಆಚರಿಸಲಾಗುತ್ತದೆ. ಬುಧವಾರದಂದು …
Read More »ಸಕ್ರೆಬೈಲಿನ ನಾಲ್ಕು ಆನೆಗಳಿಗೆ ಅನಾರೋಗ್ಯ:
ಶಿವಮೊಗ್ಗ: ರಾಜ್ಯದ ಪ್ರಮುಖ ಆನೆ ಬಿಡಾರಗಳಲ್ಲಿ ಒಂದಾದ ಸಕ್ರೆಬೈಲು ಆನೆ ಬಿಡಾರದ ನಾಲ್ಕು ಗಂಡಾನೆಗಳು ತೀವ್ರ ಅನಾರೋಗ್ಯಕ್ಕೆ ತುತ್ತಾಗಿವೆ. ಇದರಲ್ಲಿ ಆನೆ ಬಿಡಾರದ ಆನೆಗಳಾದ ಸಾಗರ್, ಬಾಲಣ್ಣ ಹಾಗೂ ಸೆರೆ ಹಿಡಿದು ತಂದಿರುವ ವಿಕ್ರಾಂತ್ ಹಾಗೂ ಅಡಕಬಡಕ ಆನೆಗಳು ಅನಾರೋಗ್ಯದಿಂದ ಬಳಲುತ್ತಿವೆ. ಬಾಲಣ್ಣ ಆನೆಯ ಬಲಗಡೆಯ ಕಿವಿಗೆ ಗಂಭೀರವಾದ ಗಾಯವಾಗಿದೆ. ಗಾಯದಿಂದ ಕೀವು ಉಂಟಾಗಿದ್ದು, ಇದೀಗ ಕಿವಿ ತುಂಡಾಗಿ ಬೀಳುವಂತಾಗಿದೆ. ಇದಕ್ಕೆ ಚಿಕಿತ್ಸೆ ಮುಂದುವರೆಸಲಾಗಿದೆ. ಬಾಲಣ್ಣ ಆನೆ ಶಿವಮೊಗ್ಗ ದಸರಾದಲ್ಲಿ ಭಾಗಿಯಾಗಲು …
Read More »ಸಂಸ್ಕೃತ ಶಾಲಾ ಶಿಕ್ಷಕನಿಂದ 9 ವರ್ಷದ ವಿದ್ಯಾರ್ಥಿ ಮೇಲೆ ಅಮಾನುಷ ಹಲ್ಲೆ ಆರೋಪ: ವಿಡಿಯೋ ವೈರಲ್, ಶಿಕ್ಷಕ ಪರಾರಿ, ಪೊಲೀಸರಿಂದ ತಲಾಶ್
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಸಂಸ್ಕೃತ ವೇದ ವಸತಿ ಶಾಲೆಯೊಂದರಲ್ಲಿ ವಿದ್ಯಾರ್ಥಿಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸುತ್ತಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದಲ್ಲಿರುವ ವೇದ ಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ. ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್: ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ವೈರಲ್ ಆಗಿದೆ. ವೈರಲ್ ಆದ ವಿಡಿಯೋದಲ್ಲಿ ಶಿಕ್ಷಕ ಒಂಬತ್ತು ವರ್ಷದ ವಿದ್ಯಾರ್ಥಿಯನ್ನು ನೆಲಕ್ಕೆ ಕೆಡವಿ ಕಾಲಿನಿಂದ ಒದೆಯುತ್ತಿರುವುದು ಕಂಡು ಬಂದಿದೆ ಎನ್ನಲಾಗಿದೆ. ಬಾಲಕ ತನ್ನ ಅಜ್ಜಿಗೆ ಕರೆ …
Read More »ಸವದಿ ಬಿಜೆಪಿಯಲ್ಲಿದ್ದರೆ ದೊಡ್ಡ ಲೀಡರ್ ಆಗುತ್ತಿದ್ದ, ಆದರೀಗ ನಮ್ಮ ಪೀಡಾ ಹೋಗಿದೆ: ರಮೇಶ್ ಜಾರಕಿಹೊಳಿ
ಸವದಿ ಬಿಜೆಪಿಯಲ್ಲಿದ್ದರೆ ದೊಡ್ಡ ಲೀಡರ್ ಆಗುತ್ತಿದ್ದ, ಆದರೀಗ ನಮ್ಮ ಪೀಡಾ ಹೋಗಿದೆ: ರಮೇಶ್ ಜಾರಕಿಹೊಳಿ ಚಿಕ್ಕೋಡಿ, ಬೆಳಗಾವಿ : ನಾವು ಯಾವುದೋ ಒಂದು ಕಾರಣಕ್ಕಾಗಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದಾಗ ಲಕ್ಷ್ಮಣ್ ಸವದಿಗೆ ಹೆಚ್ಚಿನ ಲಾಭವಾಯಿತು. ಸವದಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರಿಂದ ಬಿಜೆಪಿಯಿಂದ ಪೀಡಾ ಹೋಯಿತು. ಅದು ಕಾಂಗ್ರೆಸ್ ಪಾಲಾಗಿದೆ, ಬಿಜೆಪಿಯಲ್ಲಿ ಸವದಿ ಇದ್ದರೆ ರಾಜ್ಯದಲ್ಲಿ ಅತಿ ದೊಡ್ಡ ಲೀಡರ್ ಆಗುತ್ತಿದ್ದ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಅಥಣಿ ಪಟ್ಟಣದಲ್ಲಿ …
Read More »ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯಿಂದ ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಿಗೆ, ಚಿಕ್ಕೋಡಿ ಜಿಲ್ಲೆಗಾಗಿ ಮನವಿ
ಚಿಕ್ಕೋಡಿ : ಪಟ್ಟಣದ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯಿಂದ ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಿಗೆ, ಚಿಕ್ಕೋಡಿ ಜಿಲ್ಲೆಗಾಗಿ ಮನವಿ. ಕಳೆದ ಮೂರು ದಶಕಗಳಿಂದ ಬೆಳಗಾವಿ ವಿಭಜನೆಯಾಗಿ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಗಾಗಿ ಹೋರಾಟ ಸತತವಾಗಿ ನಡೆದಿದೆ, ಕೂಡಲೇ ಪ್ರತ್ಯೇಕ ಜಿಲ್ಲೆಯನ್ನು ಘೋಷಿಸಿ ಎಂದು, ಜಿಲ್ಲಾ ಹೋರಾಟ ಸಮಿತಿಯ ಅಧ್ಯಕ್ಷರಾಗಿ ಸಂಜು ಬೆಇಗೇರ ಇವರ ನೇತೃತ್ವದಲ್ಲಿ, ಲೊಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರ್ಕಿಹೊಳಿ ಇವರಿಗೆ ಮನವಿ …
Read More »ಅಕ್ರಮ ಗೋವು ಸಾಗಾಟ: 10 ಕಿಮೀ ಬೆನ್ನಟ್ಟಿ ಪರಾರಿಯಾಗುತ್ತಿದ್ದ ಆರೋಪಿ ಕಾಲಿಗೆ ಗುಂಡೇಟು ಕೊಟ್ಟ ಪೊಲೀಸರು
ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರಮಂಗಲ ಬೆಳ್ಳಿಚಡವಿನಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಐಸರ್ ಲಾರಿಯನ್ನು ಬೆನ್ನಟ್ಟಿದ ಪೊಲೀಸರು ಪರಾರಿಯಾಗುತ್ತಿದ್ದ ಆರೋಪಿಯ ಕಾಲಿಗೆ ಗುಂಡು ಹಾರಿಸಿದ ಘಟನೆ ಇಂದು ನಸುಕಿನ ಜಾವ ನಡೆದಿದೆ. ಪೊಲೀಸರು 12 ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ. ಘಟನೆಯಲ್ಲಿ ಆರೋಪಿ ಲಾರಿ ಚಾಲಕ ಅಬ್ದುಲ್ಲಾ (40 ವರ್ಷ) ಕಾಲಿಗೆ ಗುಂಡೇಟು ತಗಲಿದೆ. ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಐಸರ್ ಲಾರಿಯಲ್ಲಿ ಸುಮಾರು 12 ಜಾನುವಾರುಗಳನ್ನು ಹಾಸನದಿಂದ ಕೇರಳಕ್ಕೆ ಸಾಗಾಟ …
Read More »
Laxmi News 24×7