ಬೆಂಗಳೂರು: ದೇವೇಗೌಡರಿಗೆ ಬಿಜೆಪಿ ಅವರು ರಾಜ್ಯಸಭೆ ಟಿಕೆಟ್ ಕೊಡಲಿಲ್ಲ ಅಂತ ಮೈತ್ರಿಯಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಜೆಡಿಎಸ್ ಶಾಸಕಾಂಗ ನಾಯಕ ಸುರೇಶ್ ಬಾಬು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಕೊಡಿ ಅಂತ ಬಿಜೆಪಿ ಅವರಿಗೆ ನಾವು ಕೇಳಿರಲಿಲ್ಲ. ಜನರ ಆಶಯ ಮತ್ತೆ ದೇವೇಗೌಡರು ಹೋಗುತ್ತಾರೆ ಅಂತ ಇತ್ತು. ಜನರ ಪರ ಅವರು ಮಾತನಾಡುತ್ತಾರೆ ಅಂತ ಇತ್ತು. ನಾವು ಟಿಕೆಟ್ ಕೇಳಿಲ್ಲ. ಇದರಿಂದ ಮೈತ್ರಿಗೆ …
Read More »ನನಗೆ ಕೊಟ್ಟಿರೋ ಖಾತೆ ಬಗ್ಗೆ ಅಸಮಾಧಾನ ಇಲ್ಲ: ಬೈರತಿ ಸುರೇಶ್
ಬೆಂಗಳೂರು: ಖಾತೆ ಬಗ್ಗೆ ನನಗೆ ಯಾವುದೇ ಅಸಮಾಧಾನ ಇಲ್ಲ. ನಾನು ಸಂತೋಷದಿಂದ ಕೆಲಸ ಮಾಡುತ್ತೇನೆ ಎಂದು ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಹೈಕಮಾಂಡ್, ಸಿಎಂ ಡಿಕೆಶಿ, ಸಿದ್ದರಾಮಯ್ಯ ಆಶೀರ್ವಾದ ಮಾಡಿ ನನಗೆ ಮಂತ್ರಿ ಸ್ಥಾನ ಕೊಟ್ಟಿದ್ದಾರೆ. ಸಮರ್ಥವಾಗಿ ನಿಭಾಯಿಸುವ ಶಕ್ತಿ ದೇವರು ಕೊಡುವ ವಿಶ್ವಾಸ ಇದೆ. ಹಿಂದೆ ನಗರಾಭಿವೃದ್ಧಿ ಇಲಾಖೆಯಲ್ಲಿ ಹೊಸ ಕಾರ್ಯಕ್ರಮ ಮಾಡಿ ಉತ್ತಮವಾಗಿ ಇಲಾಖೆ ನಡೆಸಿದ್ದೆ. ಇದೇ ರೀತಿ ಕೆಲಸ ಸಾರಿಗೆ …
Read More »KSRTC ಬಸ್‌ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ
ಚಿಕ್ಕಬಳ್ಳಾಪುರ: ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ನಿರ್ಮಲಾ(24) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಚಿಕ್ಕಬಳ್ಳಾಪುರದ ಹಾಲಗಾನಹಳ್ಳಿ ಗ್ರಾಮದ ನಿವಾಸಿಯಾಗಿರುವ ನಿರ್ಮಲಾ ದೇವನಹಳ್ಳಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತಿದ್ದರು. ಬಸ್‌ನಲ್ಲಿ ಕುಳಿತುಕೊಳ್ಳುತ್ತಿದ್ದಂತೆ ವಿಷ ಸೇವಿಸಿದ್ದಾರೆ. ಈ ವೇಳೆ 48 ಮಂದಿ ಪ್ರಯಾಣಿಕರಿದ್ದ ಬಸ್ ಸಮೇತ ಚಾಲಕ ಹಾಗೂ ಕಂಡಕ್ಟರ್ ಖಾಸಗಿ ಆಸ್ಪತ್ರೆಗೆ ತೆರಳಿ ಸಮಯ ಪ್ರಜ್ಞೆ ಮೆರೆದಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಡಿಪೋಗೆ …
Read More »ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ – ಚಿಂದಿ ಆಯುವವನ ವಿರುದ್ಧ ಪ್ರಕರಣ ದಾಖಲು
ಬೆಂಗಳೂರು: ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚಿಂದಿ ಆಯುವವನ ಮೇಲೆ ವೈಟ್‌ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಜೂನ್ 2ರಂದು ಪಟ್ಟಂದೂರು ಅಗ್ರಹಾರದಲ್ಲಿ ಘಟನೆ ನಡೆದಿತ್ತು. ಕೋ ಲಿವಿಂಗ್ ಪಿಜಿಯಲ್ಲಿ ವಾಸವಾಗಿದ್ದ ಕಾಲೇಜು ವಿದ್ಯಾರ್ಥಿನಿ ಓದುತ್ತಿದ್ದ ವೇಳೆ ನಿದ್ದೆ ಬರುತ್ತಿದೆ ಎಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಟೀ ಕುಡಿಯಲು ಹೋಗಿದ್ದಳು. ಟೀ ಕುಡಿದು ವಾಪಸ್ಸಾಗುವ ವೇಳೆ ವಿದ್ಯಾರ್ಥಿನಿಯನ್ನ ಆರೋಪಿ ಸೈಬುಲ್ …
Read More »ಪಾನ್ ಶಾಪ್‌ನಲ್ಲಿ ನಿಗೂಢ ಸ್ಫೋಟ – ಮೂವರಿಗೆ ಗಾಯ
ವಿಜಯಪುರ: ಪಾನ್ ಶಾಪ್‌ನಲ್ಲಿ ನಿಗೂಢ ಸ್ಫೋಟ ಸಂಭವಿಸಿದ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಮಮದಾಪೂರ ಗ್ರಾಮದಲ್ಲಿ ಘಟನೆ ನಡೆದಿದೆ. ರವಿಕಿರಣ ಎಂಬುವವರಿಗೆ ಸೇರಿದ ಶೆಡ್ ಮಾದರಿಯ ಪಾನ್ ಶಾಪ್‌ನಲ್ಲಿ ಘಟನೆ ನಡೆದಿದೆ. ಪಾನ್ ಶಾಪ್‌ನಲ್ಲಿ ನಿಗೂಢ ಸ್ಫೋಟದಲ್ಲಿ ಪಾನ್ ಶಾಪ್ ಒಳಗಿದ್ದ ಫ್ರಿಡ್ಜ್‌ಗೆ ಯಾವುದೇ ಹಾನಿಯಾಗಿಲ್ಲ. ಹೊರಗಡೆಯಿಂದ ಸ್ಫೋಟವಾಗಿರೋ ಶಂಕೆ ವ್ಯಕ್ತವಾಗಿದೆ. ಸ್ಫೋಟದಲ್ಲಿ ಅಂಗಡಿ ಮಾಲೀಕ ರವಿಕಿರಣ ಸೇರಿದಂತೆ ಮೂವರಿಗೆ ಗಾಯಗಳಾಗಿವೆ. ಸದ್ಯ ಗಾಯಾಳುಗಳನ್ನ …
Read More »ಒಸಿ-ಸಿಸಿ ಸಮಸ್ಯೆಗೆ ಮುಕ್ತಿ: 1.54 ಲಕ್ಷ ಮನೆಗಳಿಗೆ ಸಿಗಲಿದೆ ಶಾಶ್ವತ ವಿದ್ಯುತ್ ಸಂಪರ್ಕ
ಬೆಂಗಳೂರು: ಹಲವು ವರ್ಷಗಳಿಂದ ಒಸಿ-ಸಿಸಿ ಸಮಸ್ಯೆಯಿಂದ ತಾತ್ಕಾಲಿಕ ವಿದ್ಯುತ್ ಸಂಪರ್ಕದಲ್ಲಿದ್ದ ಮನೆಗಳಿಗೆ ಇಂದಿನಿಂದ ಶಾಶ್ವತ ವಿದ್ಯುತ್ ಸಂಪರ್ಕ ಕಲ್ಪಿಸಲು ಸರ್ಕಾರ ಮುಂದಾಗಿದೆ. ಈ ಮೂಲಕ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ಜನಸಾಮಾನ್ಯರ ಬಹುಕಾಲದ ಸಮಸ್ಯೆಗೆ ಪರಿಹಾರ ನೀಡಲು ಮುಂದಾಗಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಬಡ ಮತ್ತು ಮಧ್ಯಮ ವರ್ಗದ ಮನೆ ಮಾಲೀಕರಿಗೆ ಅನುಕೂಲವಾಗುವಂತೆ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಾರಂಭಿಕ ಪ್ರಮಾಣಪತ್ರ ಮತ್ತು ಸ್ವಾಧೀನಾನುಭವ ಪ್ರಮಾಣಪತ್ರ ನಿಯಮಗಳಿಂದ …
Read More »ನೇಣು ಬಿಗಿದ ಸ್ಥಿತಿಯಲ್ಲಿ ಪುರಸಭೆ ಮಾಜಿ ಅಧ್ಯಕ್ಷೆ ಪುತ್ರಿಯ ಶವ ಪತ್ತೆ
ಮೈಸೂರು: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆಯಾಗಿದ್ದು, ಪತಿ ಕುಟುಂಬಸ್ಥರ ವಿರುದ್ಧವೇ ಕೊಲೆ ಆರೋಪ ಮಾಡಿರುವ ಘಟನೆ ಮೈಸೂರಿನ ಸರಸ್ವತಿಪುರಂನಲ್ಲಿ ನಡೆದಿದೆ. ಸಂಧ್ಯಾ (30) ಮೃತ ದುರ್ದೈವಿ. ಈಕೆ ಹುಣಸೂರು ಪುರಸಭೆ ಮಾಜಿ ಅಧ್ಯಕ್ಷೆ ಗೀತಾ ನಿಂಗರಾಜು ಅವರ ಪುತ್ರಿ. ಮೈಸೂರು ನಗರದ ಸರಸ್ವತಿ ಪುರಂ ಜವರೇಗೌಡ ಪಾರ್ಕ್ ಸಮೀಪದಲ್ಲಿ ವಾಸವಿದ್ದರು. ಸಂಧ್ಯಾ ಅವರನ್ನ ಟಿ.ಕೆ ಬಡಾವಣೆ ನಿವಾಸಿ ಮಹದೇವ್ ಅವರ ಪುತ್ರ ಅಕ್ಷಯ್‌ಗೆ ಕೊಟ್ಟು ಮದುವೆ ಮಾಡಲಾಗಿತ್ತು. …
Read More »ಬೈಕ್‌ನಲ್ಲಿ ತೆರಳುತ್ತಿದ್ದಾಗ ಮರ ಬಿದ್ದು ಯುವಕ ಸಾವು
ರಾಮನಗರ: ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಯುವಕನ ಮೇಲೆ ಮರ ಬಿದ್ದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ತಾಲೂಕಿನ ಹುಣಸನಹಳ್ಳಿ ಗ್ರಾಮದ ಬಳಿ ನಡೆದಿದೆ. ಪ್ರಶಾಂತ್ (19) ಮೃತ ದುರ್ದೈವಿ. ರಾಮನಗರ ತಾಲೂಕಿನ ನಾಗೋಹಳ್ಳಿ ಗ್ರಾಮದ ಯುವಕ ಪ್ರಶಾಂತ್ ಕೆಲಸಕ್ಕೆಂದು ಮುಂಜಾನೆ ಮನೆಯಿಂದ ರಾಮನಗರಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ. ಈ ವೇಳೆ ರಾತ್ರಿ ಸುರಿದ ಮಳೆಗೆ ಬುಡ ಸಮೇತ ಬೃಹತ್ ಮರ ಬೈಕ್ ಮೇಲೆ ಏಕಾಏಕಿ ಬಿದ್ದಿದೆ. ಮರ ಬಿದ್ದ …
Read More »ಬೆಂಗಳೂರು ಏರ್‌ಪೋರ್ಟ್‌ನಲ್ಲಿ 5.87 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ
ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 5.87 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿಯಾಗಿದೆ. ಬೆಳ್ಳಂಬೆಳಿಗ್ಗೆ ವಿಮಾನ ನಿಲ್ದಾಣದ ಅಧಿಕಾರಿಗಳು ಭರ್ಜರಿ ದಾಳಿ ನಡೆಸಿದ್ದಾರೆ. ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಗಾಂಜಾ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಈ ವೇಳೆ ಒಟ್ಟು 5.87 ಕೋಟಿ ರೂ. ಮೌಲ್ಯದ 16 ಕೆಜಿ 880 ಗ್ರಾಂ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕೋಟಿ ಮೌಲ್ಯದ …
Read More »ಹಾಸನದಲ್ಲಿ ರೌಡಿಶೀಟರ್‌ನ ಬರ್ಬರ ಹತ್ಯೆ – ದುಷ್ಕರ್ಮಿಗಳು ಎಸ್ಕೇಪ್
ಹಾಸನ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನ ಬರ್ಬರವಾಗಿ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ನಗರದ ಚನ್ನಪಟ್ಟಣದಲ್ಲಿರುವ ಜಿಲ್ಲಾ ಕೋರ್ಟ್ ಮುಂಭಾಗ ಇಂದು ಮುಂಜಾನೆ ಘಟನೆ ನಡೆದಿದೆ. ಮಂಜೇಶ್ (43) ಕೊಲೆಯಾದ ರೌಡಿಶೀಟರ್. ಮಂಜೇಶ್ ತಾಯಿ ಹಾಸನ ಮೂಲದವರಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದರು. ಬೆಂಗಳೂರಿನಲ್ಲಿ ರೌಡಿಶೀಟರ್ ಆಗಿರುವ ಮಂಜೇಶ್ ಹಾಸನಕ್ಕೆ ಬಂದಿದ್ದ ವೇಳೆ ಹಂತಕರು ಮಾರಕಾಸ್ತ್ರಗಳನ್ನ ಹಿಡಿದು ದಾಳಿ ನಡೆಸಿದ್ದು ಮುಖದ ಗುರುತು ಸಿಗದಂತೆ ಕೊಚ್ಚಿ ಕೊಲೆಗೈದು ಎಸ್ಕೇಪ್ ಆಗಿದ್ದಾರೆ. …
Read More »
Laxmi News 24×7