Breaking News

5 ಗಾಂಜಾ ಮಾರಾಟ ಪ್ರಕರಣ ಬೇಧಿಸಿ 11 ಜನರ ಬಂಧನ

5 ಗಾಂಜಾ ಮಾರಾಟ ಪ್ರಕರಣ ಬೇಧಿಸಿ 11 ಜನರ ಬಂಧನ 5 ಅಕ್ರಮ ಗಾಂಜಾ ಮಾರಾಟ ಪ್ರಕರಣಗಳನ್ನು ಬೇಧಿಸಿದ ಬೆಳಗಾವಿ ಪೊಲೀಸರು ಒಟ್ಟು 11 ಜನರನ್ನು ಬಂಧಿಸಿ ಒಟ್ಟು 1 ಲಕ್ಷ 3000 ರೂಪಾಯಿ ಮೌಲ್ಯದ 3 ಕಿಲೋ 132 ಗ್ರಾಂ. ಗಾಂಜಾ ಮತ್ತು 1 ಲಕ್ಷ 55 ಸಾವಿರ ಮೌಲ್ಯದ ಬೈಕ್’ಗಳನ್ನು ವಶಕ್ಕೆ ಪಡೆದಿದ್ದಾರೆ. ಬೈಲಹೊಂಗಲ ತಾಲೂಕಿನ ಮರಕಟ್ಟಿಯಲ್ಲಿ ಬೈಕ್’ನಲ್ಲಿ ಅನಧಿಕೃತವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮಂಜುನಾಥ ಕುರೇರನನ್ನು …

Read More »

ನಂದಗಡ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ ಆ16ರಂದು ಸಿಎಂ ರಿಂದ ಉದ್ಘಾಟನೆ

ನಂದಗಡ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ ಆ16ರಂದು ಸಿಎಂ ರಿಂದ ಉದ್ಘಾಟನೆ ಸಂಗೋಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಅವರು ಖಾನಾಪೂರ ತಾಲೂಕಿನ ನಂದಗಡ ಮತ್ತು ಬೈಲಹೊಂಗಲ ತಾಲೂಕಿನ ಸಂಗೋಳಿ ಗಳಲ್ಲಿ ಉಳಿದಿರುವ ಅಭಿವೃದ್ಧಿ ಕಾರ್ಯಗಳು ಮತ್ತು ಸೌಂದರ್ಯೀಕರಣ ಕಾರ್ಯಗಳಿಗಾಗಿ ಸರ್ಕಾರ 28 ಕೋಟಿ ರೂ. ನಿಧಿಯನ್ನು ಅನುಮೋದಿಸಿದೆ ಎಂದು ತಿಳಿಸಿದ್ದಾರೆ. ಬೆಂಗಳೂರಿನ ವಿಕಾಸ್ ಸೌಧದಲ್ಲಿ ಅವರ ಅಧ್ಯಕ್ಷತೆಯಲ್ಲಿ ಸಂಗೋಳಿ ರಾಯಣ್ಣ …

Read More »

ಬೀದರ್ ಜಿಲ್ಲೆಯಲ್ಲಿ ಎರಡು ವರ್ಷದಲ್ಲಿ 132 ಮಂದಿ ರೈತರ ಆತ್ಮಹತ್ಯೆ

ಬೀದರ್​, ಜುಲೈ 09: ಬೀದರ್ (Farmers) ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಕಡಿಮೆಯಾಗುತ್ತಿಲ್ಲ. ಬೀದರ್‌ (Bidar) ಕೃಷಿ ಪ್ರಧಾನ ಜಿಲ್ಲೆಯಾಗಿದೆ. ಕಬ್ಬು, ಉದ್ದು, ಹಸಿರು ಕಾಳು, ಸೋಯಾಬಿನ್‌, ಶುಂಠಿ ಹೀಗೆ ಹಲವು ಬೆಳೆಗಳನ್ನು ಬೆಳೆಯಲಾಗುತ್ತದೆ. ಜಿಲ್ಲೆಯ ಒಂದಷ್ಟು ಕಡೆ ನೀರಾವರಿಯ ಸೌಲಭ್ಯವೂ ಇದೆ. ಆದರೆ, ಜಿಲ್ಲೆಯಲ್ಲಿ ರೈತರು ಆತ್ಮಹತ್ಯೆ ಸಂಖ್ಯೆ ಮಾತ್ರ ಏರುತ್ತಲೇ ಇದೆ. ಎರಡೂವರೆ ವರ್ಷದಲ್ಲಿ ಬೀದರ್‌ ಜಿಲ್ಲೆಯೊಂದರಲ್ಲೇ ಬರೋಬ್ಬರಿ 132 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಹುತೇಕ ರೈತರ ಆತ್ಮಹತ್ಯೆಗೆ …

Read More »

ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ಹಣ ವಂಚನೆ

ಬೆಂಗಳೂರು, (ಜುಲೈ 09):  ಕಿಟ್ಟಿ ಪಾರ್ಟಿಯಲ್ಲಿ ಪರಿಚಯವಾದ ಸ್ನೇಹಿತೆಯರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದ ಮಹಿಳೆ ಸಿಕ್ಕಿಬಿದ್ದಿದ್ದಾಳೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹೆಸರು ಹೇಳಿಕೊಂಡು ಗಾಳ ಹಾಕುತ್ತಿದ್ದ ಸವಿತಾ ಎನ್ನುವ ಮಹಿಳೆಯನ್ನು ಬೆಂಗಳೂರಿನ ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ. ಕಿಟ್ಟಿ ಪಾರ್ಟಿಯಲ್ಲಿ ನೆಪದಲ್ಲಿ ಶ್ರೀಮಂತ ಮಹಿಳೆಯರನ್ನೇ ಟಾರ್ಗೇಟ್ ಮಾಡುತ್ತಿದ್ದ ಸವಿತಾ, ಈವರೆಗೆ 20ಕ್ಕೂ ಹೆಚ್ಚು ಮಹಿಳೆಯರಿಗೆ ಬರೋಬ್ಬರಿ 30 ಕೋಟಿ ರೂಪಾಯಿಗೂ ಅಧಿಕ ಹಣ ವಂಚನೆ ಮಾಡಿದ್ದಾಳೆ …

Read More »

ಪಾಠ ಕೇಳುವಾಗಲೇ ಹೃದಯಾಘಾತದಿಂದ ಮೃತಪಟ್ಟ 4ನೇ ತರಗತಿ ವಿದ್ಯಾರ್ಥಿ

ಚಾಮರಾಜನಗರ, ಜುಲೈ 09: ಗುಂಡ್ಲುಪೇಟೆ (Gundupete) ತಾಲೂಕಿನ ಕುರಬರಗೇರಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 4ನೇ ತರಗತಿ ಓದುತ್ತಿದ್ದ ಓರ್ವ ವಿದ್ಯಾರ್ಥಿಯು ಪಾಠ ಕೇಳುತ್ತಿರುವಾಗಲೇ ಹೃದಯಾಘಾತದಿಂದ (Heart Attack) ಮೃತಪಟ್ಟಿದ್ದಾನೆ. ಮನೋಜ್ ಕುಮಾರ್ (10) ಮೃತ ದುರ್ದೈವಿ. ಹೃದಯಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮನೋಜ್ ಕುಮಾರ್ ಶಾಲೆಯಲ್ಲಿ ಪಾಠ ಕೇಳುತ್ತಿದ್ದಾಗ ಕುಸಿದುಬಿದ್ದು, ಮೃತಪಟ್ಟಿದ್ದಾನೆ. ಮೃತ ಮನೋಜ್ ಕುಮಾರ್ ಹೃದಯದಲ್ಲಿ ರಂಧ್ರ​ ಇದ್ದು, ಜಯದೇವ, ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದನು ಎಂದು ತಿಳಿದುಬಂದಿದೆ.

Read More »

ಸಿಎಸ್​ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಂಎಲ್​​ಸಿ ರವಿಕುಮಾರ್​​​ಗೆ ಜಾಮೀನು

ಬೆಂಗಳೂರು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajneesh) ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್ ಸಿ ರವಿಕುಮಾರ್​​ ಗೆ ಜಾಮೀನು ಸಿಕ್ಕಿದೆ. ವಿಧಾನಸೌಧದ ಆವರಣದಲ್ಲಿ ಪ್ರತಿಭಟನೆ ವೇಳೆ ಸಿಎಸ್​​ ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ರವಿಕುಮಾರ್ ವಿರುದ್ಧ ಎಫ್​ಐಆರ್ ದಾಖಲಾಗಿತ್ತು. ಬಳಿಕ ರವಿಕುಮಾರ್ (BJP MLC N Ravikumar) ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ನಿರೀಕ್ಷಣಾ ಜಾಮೀನು ನೀಡಿ ಆದೇಶಿಸಿದೆ. …

Read More »

ಶಾಪಿಂಗ್​ಗೆ ಹೋಗಿ ಬಂದ ಪತ್ನಿಯ ಕತ್ತು ಹಿಸುಕಿ ಕೊಂದ ಪತಿ

ಬೆಂಗಳೂರು: ಪತ್ನಿ ಶಾಪಿಂಗ್​ಗೆ ಹೋಗಿ‌ ಬಂದಿದ್ದಕ್ಕೆ ತಗಾದೆ ತೆಗೆದು ಕತ್ತು ಹಿಸುಕಿ ಹತ್ಯೆಗೈದಿದ್ದ ಪತಿಯನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹರೀಶ್​ ಬಂಧಿತ ಆರೋಪಿ. ಪದ್ಮಜಾ (29) ಕೊಲೆಯಾದವರು. ಜುಲೈ 6ರಂದು ಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಮರುದಿನ ಆಸ್ಪತ್ರೆಯಿಂದ ಬಂದ ಮಾಹಿತಿ ಆಧರಿಸಿ ಪೊಲೀಸರು ತನಿಖೆ ನಡೆಸಿದ್ದರು. ಕೋಲಾರದ ಶ್ರೀನಿವಾಸಪುರ ಮೂಲದ ದಂಪತಿ ಇಬ್ಬರು ಮಕ್ಕಳೊಂದಿಗೆ ಬೊಮ್ಮನಹಳ್ಳಿಯಲ್ಲಿ ನೆಲೆಸಿದ್ದರು‌. ಪದ್ಮಜಾ ಅವರು ಎಲೆಕ್ಟ್ರಾನಿಕ್ಸ್ ಹಾಗೂ ಕಮ್ಯುನಿಕೇಶನ್ಸ್ ವಿಭಾಗದಲ್ಲಿ ಬಿಇ …

Read More »

ಸ್ನೇಹಿತನ ಮನೆಗೆ ಬಂದಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್, ಹಣ ಸುಲಿಗೆ ಆರೋಪ: ಮೂವರು ಆರೋಪಿಗಳ ಬಂಧನ

ಬೆಂಗಳೂರು: ನಗರದಲ್ಲಿ ಮಹಿಳೆ ಮೇಲೆ ಸಾಮೂಹಿಕ ಆತ್ಯಾಚಾರವೆಸಗಿ ಬಳಿಕ ಹಣ ಸುಲಿಗೆ ಮಾಡಿದ್ದಲ್ಲದೆ ಮನೆಯಲ್ಲಿದ್ದ ಪಿಠೋಪಕರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೊಳಪಡಿಸಿದ್ಧಾರೆ. 35 ವರ್ಷದ ಮಹಿಳೆ ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ರಘು, ಕೆಂಚೇಗೌಡ ಹಾಗೂ ಮಾದೇಶ್ ಎಂಬುವರನ್ನು ಬಂಧಿಸಿದ್ದಾರೆ. ಬಂಧಿತರೆಲ್ಲರೂ ಹೆಬ್ಬಗೋಡಿ ಸುತ್ತಮುತ್ತಲಿನ …

Read More »

ಪ್ರಜ್ವಲ್‌ ರೇವಣ್ಣ ಜಾಮೀನು ಕೋರಿ ಸೆಷನ್ಸ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಿ: ಹೈಕೋರ್ಟ್

ಬೆಂಗಳೂರು: ಮನೆ ಕೆಲಸದಾಕೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ಸೆಷನ್ಸ್‌ ನ್ಯಾಯಾಲಯಕ್ಕೆ ವರ್ಗಾಯಿಸಿ ಆದೇಶಿಸಿತು. ಸುಪ್ರೀಂ ಕೋರ್ಟ್ ಆದೇಶಗಳ ಪ್ರಕಾರ ಮೊದಲಿಗೆ ವಿಚಾರಣಾಧೀನ ನ್ಯಾಯಾಲಯದಲ್ಲಿ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ಸಲ್ಲಿಸಬೇಕು. ಈ ಅರ್ಜಿಯನ್ನು ವಿಚಾರಣಾಧೀನ ನ್ಯಾಯಾಲಯ ಮುಂದಿನ 10 ದಿನಗಳಲ್ಲಿ ನಿರ್ಧರಿಸಬೇಕು ಎಂದು ಹೈಕೋರ್ಟ್‌ ನಿರ್ದೇಶನ ನೀಡಿದೆ. ಅತ್ಯಾಚಾರ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ಎರಡನೇ ಬಾರಿಗೆ ಜಾಮೀನು …

Read More »

ಹೃದಯಾಘಾತದ ಭಯ: ಪರೀಕ್ಷೆಗಾಗಿ ಮೈಸೂರು ಜಯದೇವ ಆಸ್ಪತ್ರೆ ಮುಂದೆ ಜನಜಂಗುಳಿ

ಮೈಸೂರು: ರಾಜ್ಯದಲ್ಲಿ ಅತಿ ಕಿರಿಯ ವಯಸ್ಸಿನವರು, ಯುವಕರು ಕೂಡ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಘಟನೆಗಳು ಹೆಚ್ಚುತ್ತಿವೆ. ಈ ಪ್ರಕರಣಗಳು ಜನರಲ್ಲಿ ಆತಂಕ ಮೂಡಿಸಿದ್ದು, ಮುಂಜಾಗ್ರತ ಕ್ರಮವಾಗಿ ಪರೀಕ್ಷೆಗಾಗಿ ಆಸ್ಪತ್ರೆಗಳಿಗೆ ಧಾವಿಸುತ್ತಿದ್ದಾರೆ. ನಗರದ ಸರ್ಕಾರಿ ಜಯದೇವ ಹೃದ್ರೋಗ ಆಸ್ಪತ್ರೆಯ ಬಳಿ ಸಾವಿರಾರು ಜನರು ಜಮಾಯಿಸಿದ್ದು, ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಹೈರಾಣಾಗಿದ್ದಾರೆ. ಜನರು ಪ್ಯಾನಿಕ್‌ ಆಗಬೇಡಿ ಎಂಬ ವೈದ್ಯರ ಸಲಹೆ ಒಂದೆಡೆಯಾದರೆ, ಪರೀಕ್ಷೆಗಾಗಿ ಬಂದ ಜನರು ಹೇಳುವುದೇನು? ಇದರ ಪ್ರತ್ಯಕ್ಷ ವರದಿ ಇಲ್ಲಿದೆ. ಯುವಕರೇ ಹೆಚ್ಚು: ಪ್ರತಿದಿನ …

Read More »