Breaking News

ಮುರುಘಾ ಶ್ರೀ ಜಾಮೀನು ಆಕ್ಷೇಪಣೆಗೆ ವಾರ ಗಡುವು ಚಿತ್ರದುರ್ಗ ಜೈಲಿನಲ್ಲಿ ಮುರುಘಾ ಶ್ರೀ

ಬೆಂಗಳೂರು: ಪೊಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ತಮ್ಮ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಸಂತ್ರಸ್ತ ಬಾಲಕಿಯರ ಪರ ವಕಾಲತ್ತಿನ ಕಾನೂನು ಬದ್ಧತೆ ಪ್ರಶ್ನಿಸಿದ್ದಾರೆ.   ಶ್ರೀಗಳ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು. …

Read More »

‘ಇನ್‌ಸ್ಪೆಕ್ಟರ್‌ ಹುದ್ದೆಗೆ ₹70 ರಿಂದ ₹80 ಲಕ್ಷ ಕೊಟ್ಟು ಬಂದರೆ ಹೃದಯಾಘಾತವಾಗದೆ ಇನ್ನೇನಾಗುತ್ತದೆ;M.T.B.

ಬೆಂಗಳೂರು: ‘ಇನ್‌ಸ್ಪೆಕ್ಟರ್‌ ಹುದ್ದೆಗೆ ₹70 ರಿಂದ ₹80 ಲಕ್ಷ ಕೊಟ್ಟು ಬಂದರೆ ಹೃದಯಾಘಾತವಾಗದೆ ಇನ್ನೇನಾಗುತ್ತದೆ’ ಎಂದು ಸಚಿವ ಎಂ.ಟಿ.ಬಿ. ನಾಗರಾಜ್ ನೀಡಿರುವ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ವಿಡಿಯೊವನ್ನು ಲಗತ್ತಿಸಿ ಟ್ವೀಟ್‌ ಮಾಡಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು, ‘ಈಗ ಸರ್ಕಾರವೇ ಸತ್ಯ ಹೇಳಿದೆ! ಸದ್ಯ, ಸಾವಿನಲ್ಲೂ ಸತ್ಯ ಹೇಳುವ ಧೈರ್ಯವನ್ನು ಸರ್ಕಾರ ಮಾಡಿದೆ. ಬೊಮ್ಮಾಯಿ ಸಂಪುಟದ ಸಚಿವರೇ ವಿಷಯ ಬಹಿರಂಗಪಡಿಸಿದ್ದಾರೆ. ಸಚಿವ ಎಂ.ಟಿ.ಬಿ. …

Read More »

S.S.C.: ಮತ್ತೆ ಕನ್ನಡ ಕಡೆಗಣನೆ, ಇಂಗ್ಲಿಷ್‌, ಹಿಂದಿಯಲ್ಲಿ ಮಾತ್ರ ಪರೀಕ್ಷೆ

ಬೆಂಗಳೂರು: ಕಾನ್‌ಸ್ಟೆಬಲ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿರುವ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (ಎಸ್‌ಎಸ್‌ಸಿ) ಮತ್ತೊಮ್ಮೆ ಪ್ರಾದೇಶಿಕ ಭಾಷೆಗಳ ವಿರೋಧಿ ನೀತಿ ಅನುಸರಿಸಿದೆ. ಎಸ್‌ಎಸ್‌ಸಿ ನಡೆಸುವ ಪರೀಕ್ಷೆಯಲ್ಲಿ ಹಿಂದಿ ಮತ್ತು ಇಂಗ್ಲಿಷ್‌ ಮಾತ್ರ ಕಡ್ಡಾಯಗೊಳಿಸಿರುವುದಕ್ಕೆ ಕನ್ನಡ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಎಸ್‌ಎಸ್‌ಸಿ ಧೋರಣೆಯಿಂದ ಕನ್ನಡಿಗರಿಗೆ ನಿರಂತರವಾಗಿ ಅನ್ಯಾಯವಾಗುತ್ತಿದೆ ಎಂದು ಸಂಘಟನೆ ಗಳ ಕಾರ್ಯಕರ್ತರು ಕಿಡಿಕಾರಿದ್ದಾರೆ. ಗಡಿ ಭದ್ರತಾ ಪಡೆ(ಬಿಎಸ್‌ಎಫ್‌), ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್‌), ಕೇಂದ್ರೀಯ ಮೀಸಲು ಪೊಲೀಸ್‌ ಪಡೆ (ಸಿಆರ್‌ಪಿಎಫ್‌), …

Read More »

2023ರಲ್ಲಿ ಕರ್ನಾಟಕದಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬಂದೇ ಬರುತ್ತದೆ:H.D.D.

ಬೆಂಗಳೂರು: ‘2023ರಲ್ಲಿ ಕರ್ನಾಟಕದಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬಂದೇ ಬರುತ್ತದೆ. ಇದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ’ ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಹೇಳಿದರು. ಪಕ್ಷದ ಕಚೇರಿಯಲ್ಲಿ ಶುಕ್ರವಾರ ರಾಷ್ಟ್ರೀಯ ಪರಿಷತ್‌ ಸಭೆಯಲ್ಲಿ ಅವರು ಮಾತನಾಡಿ, ‘ಕೆಲವರು ಜೆಡಿಎಸ್‌ಗೆ 20 ರಿಂದ 25 ಸೀಟುಗಳು ಬರುತ್ತವೆ ಎಂದು ಹೇಳುತ್ತಿದ್ದಾರೆ. ಅದನ್ನೆಲ್ಲ ನಂಬಬೇಡಿ. ನನ್ನ ಜೊತೆ ನೀವು ಕೈ ಜೋಡಿಸಿ, ಜನರ ಮುಂದೆ ನಮ್ಮ ಯೋಜನೆಗಳ ಬಗ್ಗೆ ತಿಳಿಸಿ’ ಎಂದರು. ‘ನೀವು ಎಷ್ಟು …

Read More »

ಜೀವಗಳು ಹೋಗುತ್ತಿದ್ದರು ಸ್ಥಳಕ್ಕೆ ಬಾರದ ಗೋವಿಂದ ಕಾರಜೋಳ ವರ್ತನೆಗೆ ನೆಟ್ಟಿಗರ ಆಕ್ರೋಶ

ರಾಮದುರ್ಗ (ಬೆಳಗಾವಿ ಜಿಲ್ಲೆ: ‘ಮುದೇನೂರು ಗ್ರಾಮದಲ್ಲಿ ಕಳೆದ ಒಂದು ವಾರದಿಂದ ವಾಂತಿ ಭೇದಿ ಸಮಸ್ಯೆ ತಲೆದೋರಿದೆ. ಈಗಾಗಲೇ ಇಬ್ಬರು ಸಾವನ್ನಪ್ಪಿದ್ದಾರೆ. ದಿನದಿನಕ್ಕೆ ಆಸ್ಪತ್ರೆಗಳಿಗೆ ದಾಖಲಾಗುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇಷ್ಟಾದರೂ ಜಿಲ್ಲಾ ಉಸ್ತುವಾರಿ ಸಚಿವರಾಗಲಿ, ಜಿಲ್ಲಾಧಿಕಾರಿ ಆಗಲಿ ಸ್ಥಳಕ್ಕೆ ಬಂದಿಲ್ಲ. ನಮ್ಮ ಕಷ್ಟ ನೋಡಿಲ್ಲ’ ಎಂದು ಹಲವರು ಆಕ್ರೋಶ ಹೊರಹಾಕಿದರು. ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿದಾಗ ಮಹಿಳೆಯರು ಸಂಕಷ್ಟ ತೋಡಿಕೊಂಡರು. ‘ಸಚಿವ ಗೋವಿಂದ ಕಾರಜೋಳ ಅವರು ಬಾಗಲಕೋಟೆಯಲ್ಲೇ ಇದ್ದಾರೆ. ಮುದೇನೀರಿಗೆ …

Read More »

ಹಿಂಬಾಗಿಲ ಮೂಲಕ ಅಧಿಕಾರಕ್ಕೆ ಬಂದ ಬಿಜೆಪಿಯನ್ನು ಕಳಿಸೋಣ; ಸಿದ್ದರಾಮಯ್ಯ

ಮಂಡ್ಯ, : “ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿರುವ ಬಿಜೆಪಿಯವರನ್ನು ಮುಂಬಾಗಿಲಿನಿಂದ ಕಳುಹಿಸಿಬಿಡೋಣ” ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತದಾರಿಗೆ ಕರೆ ನೀಡಿದ್ದಾರೆ. ಮಂಡ್ಯ ತಾಲ್ಲೂಕಿನ ತಿರುಮಲಾಪುರ ಗ್ರಾಮದಲ್ಲಿ ಶ್ರೀ ಹುಲಿಯೂರಮ್ಮ(ಹಳೇಊರಮ್ಮ) ದೇವಿ ದೇವಾಲಯ ಸೇವಾ ಸಮಿತಿ ಟ್ರಸ್ಟ್ ಸಹಯೋಗದಲ್ಲಿ ಶ್ರೀ ಹುಲಿಯೂರಮ್ಮ ದೇವಿ ವಿಗ್ರಹ ಪ್ರತಿಷ್ಠಾಪನೆ ಮತ್ತು ಉದ್ಘಾಟನಾ ಮಹೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, “ಪರಿಶಿಷ್ಠ ಜಾತಿ, ವರ್ಗ, ಹಿಂದುಳಿದವರ ಕಲ್ಯಾಣಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ನೀಡಿದ್ದೇವೆ. ಕೃಷಿ ಭಾಗ್ಯವನ್ನು ನಿಲ್ಲಿಸಿದ್ದಾರೆ. …

Read More »

ಬಾಗಲಕೋಟೆ; ಕುಳಗೇರಿ ಬೀರಲಿಂಗೇಶ್ವರ ಜಾತ್ರೆಯ ವಿಶೇಷತೆ ಏನು?

ಬಾಗಲಕೋಟೆ, ಅಕ್ಟೋಬರ್‌, 28; ಕಳೆದ ಎರಡು ವರ್ಷಗಳಿಂದ ಜಾತ್ರೆಗಳಿಗೆ ಕೋವಿಡ್ ಕಂಟಕ ಎದುರಾಗಿತ್ತು. ಆದರೆ ಈ ಬಾರಿ ಮುಕ್ತ ಅವಕಾಶ ಸಿಕ್ಕಿದ್ದು, ಜಾತ್ರೆಗಳಿಗೆ ಮತ್ತೆ ಕಳೆ ಬಂದಿದೆ. ಬಾಗಲಕೋಟೆ ಜಿಲ್ಲೆಯ ಕುಳಗೇರಿ ಗ್ರಾಮದಲ್ಲಿ ನಡೆದ ಜಾತ್ರೆ ಎಲ್ಲರ ಗಮನ ಸೆಳೆಯಿತು. ಇಡೀ ಜಾತ್ರೆ ತುಂಬಾ ಭಂಡಾರದ ಓಕುಳಿ ಆಡಿ ಬೀರಲಿಂಗನ ಭಕ್ತರು ಸಂಭ್ರಮಿಸಿದರು.   ಅದ್ದೂರಿಯಾಗಿ ನೆರವೇರುತ್ತಿರುವ ರಥೋತ್ಸವವನ್ನು ನೋಡುವುದಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದರು. ಎಲ್ಲ ಕಡೆ ಭಂಡಾರಮಯ …

Read More »

ಅಪ್ಪು ಹೆಸರಿನಲ್ಲಿ ನಿರೂಪಕಿ ಅನುಶ್ರೀ ಓವರ್‌ ಆಕ್ಟಿಂಗ್‌ : ಸಾಮಾಜಿಕ ಜಾಲತಾಣದಲ್ಲಿ ಟೀಕೆ

ಬೆಂಗಳೂರು: ನಿರೂಪಕಿ ಅನುಶ್ರೀ ಅವರ ನಿರೂಪಣೆ ಬಗ್ಗೆ ಸದಾ ಒಂದಲ್ಲ ಒಂದು ವಿವಾದ ಇದ್ದೇ ಇರುತ್ತದೆ. ನಿರೂಪಣೆ ಮಾಡೋದು ಬಿಟ್ಟು ಬಾಕಿ ಎಲ್ಲ ಮಾಡ್ತಾರೆ ಅನ್ನೋದು ಅನೇಕರ ಅಭಿಪ್ರಾಯ ಕೂಡ. ಟಿವಿ ಟಿಆರ್‌ಪಿಗಾಗಿ, ದುಡ್ಡಿಗಾಗಿ ಅನುಶ್ರೀ ನಡೆದುಕೊಳ್ಳುತ್ತಿದ್ದಾರೆ ಅಂತ ಅವರ ನಿರೂಪಣೆ ರೀತಿಯನ್ನು ಟೀಕೆ ಮಾಡುವವರು ಕೂಡ ಇದ್ದಾರೆ. ಈ ನಡುವೆ ಅಪ್ಪು ಹೆಸರಿನಲ್ಲಿ ನಿರೂಪಕಿ ಅನುಶ್ರೀ ಓವರ್‌ ಆಕ್ಟಿಂಗ್‌ ಮಾಡುತ್ತಿದ್ದಾರೆ ಅಂತ ಅನೇಕ ಮಂದಿ ಅನುಶ್ರೀಯವರ ನಡೆಯನ್ನು ಕಿಡಿಕಾರುತ್ತಿದ್ದಾರೆ. …

Read More »

ನ.1ರಂದು ಪುನೀತ್ ಗೆ ಕರ್ನಾಟಕರತ್ನ ಪ್ರಶಸ್ತಿ; ರಜಿನಿಕಾಂತ್, ಜೂ.ಎನ್‌ಟಿಆರ್‌ ಭಾಗಿ: CMಘೋಷಣೆ

ಬೆಂಗಳೂರು: ಈ ಬಾರಿ ನವೆಂಬರ್ ಒಂದನೇ ತಾರೀಕು ದಿವಂಗತ ನಟ ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುತ್ತೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ನವೆಂಬರ್ ಒಂದರಂದು ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ಆಚರಣೆ ಮಾಡುತ್ತೇವೆ. ವಿಧಾನಸೌಧದಲ್ಲಿ ಸಂಜೆ 4 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಪುನೀತ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ …

Read More »

ಡಿನಾಡು ಬೆಳಗಾವಿಯ ರಾಜ್ಯೋತ್ಸವ ಈಡೀ ರಾಜ್ಯದಲ್ಲೇ ಆಕರ್ಷಕ ಮತ್ತು ಭಿನ್ನ

ಗಡಿನಾಡು ಬೆಳಗಾವಿಯ ರಾಜ್ಯೋತ್ಸವ ಈಡೀ ರಾಜ್ಯದಲ್ಲೇ ಆಕರ್ಷಕ ಮತ್ತು ಭಿನ್ನವಾಗಿರುತ್ತದೆ. ಈ ಬಾರಿಯಂತೂ ಬೆಳಗಾವಿಯ ರಾಜ್ಯೋತ್ಸವ ಅದ್ಧೂರಿ-ಮಹಾ ಅದ್ಧೂರಿಯಾಗಿ ನಡೆಯಲಿದೆ. ೧೦ ಸಾವಿರ ಅಡಿಯ ಕನ್ನಡ ಬಾವುಟದ ಮೆರವಣಿಗೆ ನಡೆಸಿ ಲಂಡನ್ ಬುಕ್ ಆಫ್ ರೆಕಾರ್ಡ್ ನಿರ್ಮಿಸಲು ಹೊರಟಿರುವ ಕನ್ನಡದ ಕುವರರು ಯಾರು ಅನ್ನುವ ಕುರಿತು ಇಲ್ಲಿದೆ ಒಂದು ಸ್ಟೋರಿ. ಹಳದಿಗೆಂಪು ಬಾವುಟ ಹಿಡಿದು ನಲಿಯುತ್ತಿರುವ ಕನ್ನಡದ ಕುವರರು.. ನಾಡದೇವಿಯ ಜಾತ್ರೆಯ ದಿನ ಮೆರವಣಿಗೆಗೆ ಸಿದ್ಧವಾಗುತ್ತಿದ್ದೆ ಈ ಬೃಹತ್ ಬಾವುಟ. …

Read More »