ಹುಬ್ಬಳ್ಳಿ: ‘ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿರುವುದರಿಂದ, ರಾಜ್ಯ ಕಾಂಗ್ರೆಸ್‌ನಲ್ಲಿ ಇದ್ದ ಬಣಗಳ ಸಂಖ್ಯೆ ಮೂರಕ್ಕೇರಿದೆ. ಹಿಂದೆ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ ಪಕ್ಷ ಕೇವಲ 80 ಸೀಟು ಗಳಿಸಿ ಸೋತಿತ್ತು. ಹಿಂದೆ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ ಪಕ್ಷ ಕೇವಲ 80 ಸೀಟು ಗಳಿಸಿ ಸೋತಿತ್ತು. ಎಐಸಿಸಿ ಅಧ್ಯಕ್ಷರಾದ ಮೇಲೆ ಮಹತ್ವದ ಬದಲಾವಣೆ ನಿರೀಕ್ಷಿಸುವಂತಿಲ್ಲ. ಮತ್ತೊಬ್ಬರ ಕೈಗೊಂಬೆಯಾಗಿ ಕೆಲಸ ಮಾಡುತ್ತಾರಷ್ಟೆ’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ …
Read More »ನ್ಯಾಯಾಲಯಕ್ಕೆ ಮುರುಘಾಶ್ರೀ ವಿರುದ್ಧ 694 ಪುಟಗಳ ಆರೋಪ ಪಟ್ಟಿ
ಚಿತ್ರದುರ್ಗ: ಪೋಕ್ಸೊ ಹಾಗೂ ಪರಿಶಿಷ್ಟ ಜಾತಿ, ಪಂಗಡ ದೌರ್ಜನ್ಯ ತಡೆ ಕಾಯ್ದೆ ಅಡಿ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾದ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ನ್ಯಾಯಾಲಯಕ್ಕೆ ಗುರುವಾರ 694 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ತನಿಖೆಯನ್ನು ಭಾಗಶಃ ಪೂರ್ಣಗೊಳಿಸಿರುವ ಪೊಲೀಸರು, ದೋಷಾರೋಪ ಪಟ್ಟಿಯ ತಲಾ 347 ಪುಟಗಳ ಎರಡು ಪ್ರತಿಗಳನ್ನು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಸಿದರು. ಒಂದರಲ್ಲಿ ಮುರುಘಾ ಶರಣರು …
Read More »ರಾಮದುರ್ಗ ತಾಲ್ಲೂಕಿನ ಮುದೇನೂರ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಇಬ್ಬರು ಮೃತಪಟ್ಟಿದ್ದಾರೆ.
ರಾಮದುರ್ಗ (ಬೆಳಗಾವಿ): ತಾಲ್ಲೂಕಿನ ಮುದೇನೂರ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಇಬ್ಬರು ಮೃತಪಟ್ಟಿದ್ದಾರೆ. 12 ಬಾಲಕರು, 8 ಬಾಲಕಿಯರು ಸೇರಿ 186 ಮಂದಿ ಅಸ್ವಸ್ಥ ರಾಗಿದ್ದಾರೆ. ಇವರಲ್ಲಿ ಆರೋಗ್ಯ ಸ್ಥಿತಿ ಗಂಭೀರ ವಾಗಿರುವ 94 ಮಂದಿಯನ್ನು ಜಿಲ್ಲೆಯಲ್ಲಿ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಉಳಿದವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಕಳುಹಿಸಲಾಗಿದೆ. ಇದೇ ಊರಿನ ಸರಸ್ವತಿ ನಿಂಗಪ್ಪ ಹಾವಳ್ಳಿ (70) ಅವರು ಅ.23ರಂದು, ಶಿವಪ್ಪ ಯಂಡಿಗೇರಿ (70) ಬುಧವಾರ ಮೃತಪಟ್ಟರು. ಅಸ್ಪತ್ರೆಗೆ ದಾಖಲಾಗಿರುವ ಹಲವರಿಗೆ …
Read More »ಮನೆಯಲ್ಲಿನ ಅಡುಗೆ ಅನಿಲ ಸೋರಿಕೆ ಸುಟ್ಟು ಕರಕಲಾಗಿರುವ ವಸ್ತುಗಳು
ಮನೆಯಲ್ಲಿನ ಅಡುಗೆ ಅನಿಲ ಸೋರಿಕೆಯಾಗಿರುವ ಪರಿಣಾಮ ಬೆಂಕಿ ಹತ್ತಿದ್ದು, ದೊಡ್ಡ ಪ್ರಮಾಣದಲ್ಲಿನ ಗೃಹಬಳಕೆಯ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಹುಬ್ಬಳ್ಳಿಯ ವೀರಾಪೂರ ಓಣಿಯಲ್ಲಿ ನಡೆದಿದೆ. ದೀಪಾವಳಿ ಹಿನ್ನೆಲೆಯಲ್ಲಿ ಮನೆಯವರೆಲ್ಲರೂ ಊರಿಗೆ ಹೋಗಿದ್ದ ಸಂದರ್ಭದಲ್ಲಿ ಸಿಲಿಂಡರ್ ಲೀಕ್ ಆಗಿದ್ದು, ಸೋರಿಕೆಯಾದ ಸಿಲಿಂಡರ್ ಏರ್ ಪಾಸ್ ಆಗಲು ಯಾವುದೇ ಸ್ಥಳಾವಕಾಶ ಇಲ್ಲದೇ ಇರುವುದರಿಂದ ಆಕಸ್ಮಿಕ ಬೆಂಕಿ ತಗುಲಿದ್ದು, ದೊಡ್ಡ ಪ್ರಮಾಣದಲ್ಲಿ ಮನೆಯಲ್ಲಿರುವ ವಸ್ತುಗಳು ಸುಟ್ಟು ಕರಕಲಾಗಿವೆ.
Read More »ಅಂತರರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆದ್ದಿರುವ ಬೆಳಗಾವಿಯ ಕರಾಟೆಪಟು
ಅಂತರರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆದ್ದಿರುವ ಕರಾಟೆ ಪಟು ಕೇತನ ಕಲ್ಲಪ್ಪಾ ಫಾಟಕೆ ಬ್ಲ್ಯಾಕ್ ಬೆಲ್ಟ್ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಬೆಳಗಾವಿಯ ಮಂಡೋಳಿ ರಸ್ತೆಯ ಮನೋಪ್ರಭಾ ಮಂಗಲ ಕಾರ್ಯಾಲಯದಲ್ಲಿ ಇದೇ ಅಕ್ಟೋಬರ್ 23ರಂದು ಕರಾಟೆ ಬ್ಲ್ಯಾಕ್ ಬೆಲ್ಟ್ ಪರೀಕ್ಷೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ 70 ಕರಾಟೆ ಪಟುಗಳು ಭಾಗಿಯಾಗಿದ್ದರು. ಈ ವೇಳೆ ಮುಖ್ಯ ತೀರ್ಪುಗಾರರಾಗಿ ಗಜೇಂದ್ರ ಕಾಕತಿಕರ ಆಗಮಿಸಿದ್ದರು. ಕಳೆದ 9 ವರ್ಷಗಳಿಂದ ಇಲ್ಲಿ ತರಬೇತಿ ಪಡೆದು ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ …
Read More »ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ದೇವೇಗೌಡರ ಪುನರಾಯ್ಕೆ
ಬೆಂಗಳೂರು: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮತ್ತೂಮ್ಮೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜೆಪಿ ಭವನದಲ್ಲಿ ಗುರುವಾರ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಅವಿರೋಧವಾಗಿ ಆಯ್ಕೆ ಮಾಡಲು ನಿರ್ಣಯ ಕೈಗೊಳ್ಳಲಾಯಿತು. ಎಚ್.ಡಿ.ದೇವೇಗೌಡರೇ ರಾಷ್ಟ್ರೀಯ ಅಧ್ಯಕ್ಷರಾಗಿ ಮುಂದುವರಿಯಬೇಕು ಎಂದು ಎಲ್ಲ ರಾಜ್ಯ ಪ್ರತಿನಿಧಿಗಳ ಒಮ್ಮತ ಅಭಿಪ್ರಾಯ ಪಟ್ಟರು. 13 ರಾಜ್ಯಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಕೇರಳದ …
Read More »ವಿಜಯಪುರ: ಟ್ರ್ಯಾಕ್ಟರ್‌ಗೆ ಕ್ರೂಸರ್ ಡಿಕ್ಕಿ, ದಂಪತಿ ಸಾವು
ವಿಜಯಪುರ: ಇಂಡಿ ತಾಲ್ಲೂಕಿನ ಧೂಳಖೇಡ್ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಗುರುವಾರ ನಸುಕಿನಲ್ಲಿ ಕಬ್ಬು ಸಾಗಾಟ ಮಾಡುತ್ತಿದ್ದ ಟ್ಯಾಕ್ಟರ್‌ಗೆ ಹಿಂಬದಿಯಿಂದ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮವಾಗಿ ಕ್ರೂಸರ್‌ನಲ್ಲಿದ್ದ ದಂಪತಿ ಸಾವಿಗೀಡಾಗಿದ್ದಾರೆ. ಕ್ರೂಸರ್‌ನಲ್ಲಿದ್ದ ಇತರೆ ಒಂಬತ್ತು ಜನರಿಗೆ ಗಾಯಗಳಾಗಿದ್ದು, ಮಹಾರಾಷ್ಟ್ರದ ಸೋಲಪುರಕ್ಕೆ ಚಿಕಿತ್ಸೆಗೆ ಕಳುಹಿಸಲಾಗಿದೆ. ಬೆಳಗಾವಿ ಜಿಲ್ಲೆ ಅಥಣಿ ಮೂಲದ ಭಯ್ಯಾಜಿ ಶಿಂಧೆ (50), ಸುಮಿತ್ರಾ ಶಿಂಧೆ (45) ಸಾವಿಗೀಡಾದ ದಂಪತಿ. ಅಥಣಿ ಮೂಲದ ಇವರೆಲ್ಲರೂ ಕ್ರೂಸರ್‌ನಲ್ಲಿ ಮಹಾರಾಷ್ಟ್ರದ ಅಕ್ಕಲಕೋಟ ಬಳಿ …
Read More »ಜಮೀನು ನಕ್ಷೆಗಳು ಆನ್ ಲೈನ್ ನಲ್ಲೇ ಲಭ್ಯ; ನಕ್ಷೆ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ
ಬೆಂಗಳೂರು: ಜಮೀನಿಗೆ ಸಂಬಂಧಿಸಿದ 11ಇ, ಪೋಡಿ, ಭೂ ಪರಿವರ್ತನೆ ಸ್ಕೆಚ್, ಹದ್ದುಬಸ್ತು ಮತ್ತು ಇತರ ನಕ್ಷೆಗಳು ಇನ್ನು ಮುಂದೆ ಆನ್ ಲೈನ್ ನಲ್ಲೇ ಸಿಗುವುದಕ್ಕೆ ಈಗ ರಾಜ್ಯ ಸರ್ಕಾರ ವ್ಯವಸ್ಥೆ ಮಾಡಿದೆ. 11ಇ, ಪೋಡಿ, ಭೂ ಪರಿವರ್ತನೆ ಸ್ಕೆಚ್, ಹದ್ದುಬಸ್ತು ಮತ್ತು ಇತರೆ ನಕ್ಷೆಗಳಿಗೆ ಅರ್ಜಿ ಸಲ್ಲಿಸಿದ ನಾಗರಿಕರು https:// 103,138.196.154/service19/Report/ ವೆಬ್ಸೈಟ್ ಮೂಲಕ ತಮ್ಮ ಅರ್ಜಿಯ ಸ್ಥಿತಿಗತಿಯನ್ನು ಸಹ ವೀಕ್ಷಿಸಬಹುದು. ಅರ್ಜಿ ಸ್ವೀಕಾರಗೊಂಡು ಸರ್ವೇ ಸಿಬ್ಬಂದಿ ತಮ್ಮ ಜಮೀನಿಗೆ ಬಂದು …
Read More »ಜನರಿಗೆ ಅನ್ನ ನೀಡದ ಬಿಜೆಪಿಯಿಂದ ವಿಶ್ವಗುರು ಮಾಡಲು ಸಾಧ್ಯವೇ?; ಸಿದ್ದರಾಮಯ್ಯ
ಬೆಂಗಳೂರು: ಜನರ ಹೊಟ್ಟೆಗೆ ಸಮರ್ಪಕವಾದ ಅನ್ನ ನೀಡದ ಬಿಜೆಪಿಯವರಿಂದ ದೇಶವನ್ನು ವಿಶ್ವಗುರು ಮಾಡಲು ಸಾಧ್ಯವೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಜಗತ್ತಿನ ಜನರ ಮುಂದೆ ಹಸಿವು, ಸ್ವಾತಂತ್ರ್ಯ, ಮಹಿಳೆಯರ ದುಡಿಮೆ ಮುಂತಾದ ವಿಷಯಗಳಲ್ಲಿ ಭಾರತದ ಮರ್ಯಾದೆ ಹರಾಜಾಗುತ್ತಿದೆ ಎಂದು ಅವರು ಟೀಕಿಸಿದ್ದಾರೆ. ಮೋದಿಯವರನ್ನು ಟೀಕಿಸಿದವರ ವಿರುದ್ಧ ಪ್ರತಿಭಟಿಸಿ ಎಂದು ಹೇಳಿಕೆ ನೀಡಿದ್ದ ಯಡಿಯೂರಪ್ಪನವರಿಗೆ ಮತ್ತು ಬಿಜೆಪಿಯವರಿಗೆ ನಾನು 32 ಪ್ರಶ್ನೆಗಳನ್ನು ಕೇಳಿದ್ದೆ. ಇದುವರೆಗೆ ಬಿಜೆಪಿಯವರಿಗೆ ಮತ್ತು ಯಡಿಯೂರಪ್ಪನವರಿಗೆ …
Read More »ಯು.ಕೆ.ಪಿ ಭೂಸ್ವಾಧೀನ ತ್ವರಿತ ವಿಲೇವಾರಿಗೆ ಕ್ರಮ: ಗೋವಿಂದ ಕಾರಜೋಳ
ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಭೂಸ್ವಾಧೀನ ಮತ್ತು ಪುನರ್ವಸತಿ ಹಾಗೂ ಪುನರ್ನಿರ್ಮಾಣ ಕಾಮಗಾರಿಗಳಿಗೆ ಡಿಸೆಂಬರ್ ಅಂತ್ಯದೊಳಗೆ 3000 ಕೋಟಿ ರೂ. ವೆಚ್ಚ ಮಾಡಲು ಮತ್ತು ಪ್ರಸಕ್ತ ಸಾಲಿನಲ್ಲಿಯೇ 11,000 ಎಕರೆ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ರವರು ಇಂದು ನಡೆದ ಜಲಸಂಪನ್ಮೂಲ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು 524.256 ಮೀ. ಮಟ್ಟಕ್ಕೆ ನೀರು ನಿಲ್ಲಿಸಲು …
Read More »