Breaking News

ಅರಿಹಂತ ಕಾರ್ಖಾನೆಯಿಂದ ಟನ್ ಕಬ್ಬಿಗೆ 3350 ರೂಪಾಯಿ ದರ, ಮಾಲಿಕರಿಗೆ ರೈತರಿಂದ ಸನ್ಮಾನ

ಚಿಕ್ಕೋಡಿ:ಜೈನಾಪುರದ ಅರಿಹಂತ ಶುಗರ್ ಇಂಡಸ್ಟ್ರೀಸ್ ವತಿಯಿಂದ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಅಭಿನಂದನ ಪಾಟೀಲ ಮತ್ತು ಯುವ ನಾಯಕ ಉತ್ತಮ ಪಾಟೀಲ ಕಳೆದ 7 ವರ್ಷಗಳಿಂದ ರೈತರ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಪ್ರಯತ್ನಿಸುತ್ತಿದ್ದಾರೆ. ಬಯೋ ಪ್ರಾಡಕ್ಟ್ ಉತ್ಪನ್ನವಿಲ್ಲದಿದ್ದರೂ ಪ್ರಸ್ತುತ ಹಂಗಾಮಿನಲ್ಲಿ ಪ್ರತಿ ಟನ್‌ಗೆ 3350 ರೂ. ಕಬ್ಬಿನ ಬೆಲೆ ನೀಡಿ ರೈತರ ಹಿತಾಸಕ್ತಿ ಕಾಪಾಡಿದ್ದಾರೆ ಎಂದು ಸ್ವಾಭಿಮಾನಿ ರೈತ ಸಂಘಟನೆಯ ನಾಯಕ ರಾಜು ಖಿಚಡೆ ಹೇಳಿದರು. ಬೋರಗಾಂವ ಪಟ್ಟಣದಲ್ಲಿ ಸ್ವಾಭಿಮಾನಿ ಶೇತಕರಿ …

Read More »

ಚಿಕ್ಕೋಡಿ-ಸದಲಗಾ ಕ್ಷೇತ್ರದ ಅಭಿವೃದ್ಧಿಗೆ 4 ಕೋಟಿ ರೂ. ಅನುದಾನ: ಪ್ರಕಾಶ ಹುಕ್ಕೇರಿ

ಚಿಕ್ಕೋಡಿ-ಸದಲಗಾ ಕ್ಷೇತ್ರದ ಅಭಿವೃದ್ಧಿಗೆ 4 ಕೋಟಿ ರೂ. ಅನುದಾನ: ಪ್ರಕಾಶ ಹುಕ್ಕೇರಿ ಚಿಕೋಡಿ: ಚಿಕ್ಕೋಡಿ-ಸದಲಗಾ ಮತಕ್ಷೇತ್ರದ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಒಟ್ಟು 4 ಕೋಟಿ ರೂ ಅನುದಾನವನ್ನು ಕರ್ನಾಟಕ ಸರ್ಕಾರ ಮಂಜೂರು ಮಾಡಿದೆ ಎಂದು ದೆಹಲಿ ವಿಶೇಷ ಪ್ರತಿನಿಧಿ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ತಿಳಿಸಿದರು. ಯಕ್ಸಂಬಾ ಪಟ್ಟಣದ ಗೃಹ ಕಚೇರಿ ಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಗಣೇಶ ಹುಕ್ಕೇರಿ ಅವರ ವಿಶೇಷ ಪ್ರಯತ್ನದಿಂದ …

Read More »

ಕಂಗ್ರಾಳಿ ಬಿ.ಕೆ. ಗ್ರಾಮದಲ್ಲಿ ಅಭಿವೃದ್ಧಿ ಪರ್ವ ಸುಮಾರು 9 ಕೋಟಿ ರೂ ವೆಚ್ಚದಲ್ಲಿ ವಿವಿಧ ಕಾಮಗಾರಿ

ಭಾರೀ ಪ್ರಮಾಣದಲ್ಲಿ ಅಭಿವೃದ್ಧಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಸನ್ಮಾನಿಸಿದ ಗ್ರಾಮಸ್ಥರು ಕಂಗ್ರಾಳಿ ಬಿ.ಕೆ. ಗ್ರಾಮದಲ್ಲಿ ಅಭಿವೃದ್ಧಿ ಪರ್ವ ಸುಮಾರು 9 ಕೋಟಿ ರೂ ವೆಚ್ಚದಲ್ಲಿ ವಿವಿಧ ಕಾಮಗಾರಿ ಬೆಳಗಾವಿ : ಗ್ರಾಮಕ್ಕೆ ಭಾರೀ ಪ್ರಮಾಣದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಮಂಜೂರು ಮಾಡಿಸಿರುವ ಹಿನ್ನೆಲೆಯಲ್ಲಿ ಕಂಗ್ರಾಳಿ ಬಿಕೆ ಗ್ರಾಮಸ್ಥರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಸೋಮವಾರ ಸನ್ಮಾನಿಸುವ ಮೂಲಕ ಕೃತಜ್ಞತೆ ಸಲ್ಲಿಸಿದರು. ಕಂಗ್ರಾಳಿ ಬಿ.ಕೆ ಗ್ರಾಮದಲ್ಲಿ …

Read More »

ಬೆಳಗಾವಿಯ ಡಾ. ಸಾರಂಗ್ ಶೆಠೆ ಅವರಿಗೆ ರಾಷ್ಟ್ರ ಮಟ್ಟದ NAMS ಗೌರವ

ಬೆಳಗಾವಿಯ ಡಾ. ಸಾರಂಗ್ ಶೆಠೆ ಅವರಿಗೆ ರಾಷ್ಟ್ರ ಮಟ್ಟದ NAMS ಗೌರವ ಭಾರತದ ಮೂವರು ಅಸ್ಥಿಶಸ್ತ್ರ ತಜ್ಞರಲ್ಲಿ ಒಬ್ಬರಾಗಿ ಆಯ್ಕೆ ಬೆಳಗಾವಿಯ ಡಾ. ಸಾರಂಗ್ ಶೆಠೆ ಅವರಿಗೆ ರಾಷ್ಟ್ರ ಮಟ್ಟದ NAMS ಗೌರವ ಭಾರತದ ಮೂವರು ಅಸ್ಥಿಶಸ್ತ್ರ ತಜ್ಞರಲ್ಲಿ ಒಬ್ಬರಾಗಿ ಆಯ್ಕೆ ಚಂಡೀಗಢದಲ್ಲಿ ನಡೆದ ಸಮಾರಂಭ ಡಾ. ಡಿ. ಬೆಹೆರಾ ಅವರ ಅಧ್ಯಕ್ಷತೆ ರಾಷ್ಟ್ರೀಯ ವೈದ್ಯಕೀಯ ವಿಜ್ಞಾನ ಅಕಾಡೆಮಿ, ಭಾರತ ಸರ್ಕಾರದ ಆರೋಗ್ಯ ಸಚಿವಾಲಯದ ಅಧೀನದಲ್ಲಿರುವ ಉನ್ನತ ಸಂಸ್ಥೆಯಾಗಿದೆ. ಈ …

Read More »

NDPS ಕಾಯ್ದೆ & ಅಬಕಾರಿ ಕಾಯ್ದೆಯಡಿ ಒಟ್ಟು 4 ಪ್ರಕರಣ ದಾಖಲು; ನಾಲ್ವರು ಆರೋಪಿಗಳ ಬಂಧನ!

NDPS ಕಾಯ್ದೆ & ಅಬಕಾರಿ ಕಾಯ್ದೆಯಡಿ ಒಟ್ಟು 4 ಪ್ರಕರಣ ದಾಖಲು; ನಾಲ್ವರು ಆರೋಪಿಗಳ ಬಂಧನ! ಬೆಳಗಾವಿ ನಗರ ಪೊಲೀಸರು ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಕಳ್ಳಭಟ್ಟಿ ಸಾರಾಯಿ ಮಾರಾಟಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಒಟ್ಟು 4 ಪ್ರಕರಣಗಳನ್ನು ದಾಖಲಿಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಶಹಾಪೂರ ಪೊಲೀಸ್ ಠಾಣೆ ವ್ಯಾಪ್ತಿಯ ವಡಗಾಂವದ ಜೈಲ್ ಸ್ಕೂಲ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಮಾದಕ ಪದಾರ್ಥಗಳನ್ನು ಸೇವಿಸಿ ಅಸಹಜವಾಗಿ ವರ್ತಿಸುತ್ತಿದ್ದ ಮೂವರನ್ನು …

Read More »

ಮೂಕ ಪ್ರಾಣಿಗಳ ಸಾವಿಗೆ ಕಾರಣ ಆದವರ ವಿರುದ್ಧ ಕ್ರಮ ನಿಶ್ಚಿತ: ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ರಂಗಸ್ವಾಮಿ

ಬೆಳಗಾವಿ : ಮೂಕ ಪ್ರಾಣಿಗಳ ಸಾವಿಗೆ ಯಾರೇ ಕಾರಣವಾದರೂ ಅವರ ಮೇಲೆ ಕ್ರಮ ಖಂಡಿತ ಎಂದು ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ರಂಗಸ್ವಾಮಿ ಅವರು ಎಚ್ಚರಿಸಿದ್ದಾರೆ. ಬೆಳಗಾವಿಯ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 31 ಕೃಷ್ಣಮೃಗಗಳು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಸೋಮವಾರ ಮೃಗಾಲಯಕ್ಕೆ ರಂಗಸ್ವಾಮಿ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಪ್ರಾಧಿಕಾರದ ಅಧ್ಯಕ್ಷ ರಂಗಸ್ವಾಮಿ ಅವರ ತಂಡಕ್ಕೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚವ್ಹಾಣ್​, ಉಪ ಅರಣ್ಯ ಸಂರಕ್ಷಣಾಧಿಕಾರಿ …

Read More »

ಐತಿಹಾಸಿಕ ಕಡಲೆಕಾಯಿ ಪರಿಷೆಗೆ ಚಾಲನೆ

ಬೆಂಗಳೂರು: ಐತಿಹಾಸಿಕ ಕಡಲೆಕಾಯಿ ಪರಿಷೆಗೆ ಇಂದಿನಿಂದ ಅಧಿಕೃತ ಚಾಲನೆ ದೊರೆತಿದೆ. ಕಾರ್ತಿಕ ಮಾಸದ ಕೊನೆಯ ಸೋಮವಾರವಾದ ಇಂದು ಬಸವನಗುಡಿಯ ದೊಡ್ಡ ಬಸವಣ್ಣನ ದೇಗುಲದಲ್ಲಿ ಅಭಿಷೇಕದೊಂದಿಗೆ ಪರಿಷೆ ಆರಂಭವಾಗಿದ್ದು, ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಚಾಲನೆ ನೀಡಿದರು. ಎರಡು ದಿನಗಳ ಬದಲು ಇದೇ ಮೊದಲ ಬಾರಿಗೆ ಐದು ದಿನಗಳ ಕಾಲ ಪರಿಷೆ ನಡೆಯಲಿದ್ದು, ಬಸವನಗುಡಿಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಲಕ್ಷಾಂತರ ಜನರ ಜಾತ್ರೆಯಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ. …

Read More »

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದು ಮಾಡಿದ ಹೈಕೋರ್ಟ್

ಬೆಂಗಳೂರು: ಬೆಳ್ತಂಗಡಿ ವಿದ್ಯಾರ್ಥಿನಿ ಕೊಲೆ ಪ್ರಕರಣ ಸಂಬಂಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ ಇಂದು ರದ್ದುಪಡಿಸಿ ಆದೇಶಿಸಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆಪ್ಟಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗಿಸ್ ಅವರು ಹೊರಡಿಸಿರುವ ಆದೇಶ ಪ್ರಶ್ನಿಸಿ, ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ಅರ್ಜಿಯ …

Read More »

ಬಂಡೀಪುರ ಹಾಗೂ ನಾಗರಹೊಳೆ ಕಾಡಂಚಿನ ಪ್ರದೇಶಗಳಲ್ಲಿ ಸುಮಾರು 20 ಹುಲಿಗಳ ಓಡಾಟ: ಡಿಸಿಎಫ್ ಪರಮೇಶ್ವರ್

ಮೈಸೂರು: ಬಂಡೀಪುರ ಹಾಗೂ ನಾಗರಹೊಳೆ ಅರಣ್ಯ ಪ್ರದೇಶಗಳ ಕಾಡಂಚಿನ ಗ್ರಾಮಗಳ ಪ್ರದೇಶದಲ್ಲಿ ಸುಮಾರು 20 ಹುಲಿಗಳು ಓಡಾಟ ಮಾಡುತ್ತಿವೆ ಎಂದು ಮೈಸೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್​) ಪರಮೇಶ್ವರ್ ಮಾಹಿತಿ ನೀಡಿದ್ದಾರೆ. ಈ ಕುರಿತು ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಹಾಗೂ ನಾಗರಹೊಳೆ ಅರಣ್ಯ ಪ್ರದೇಶದ ಗುಂಡ್ಲುಪೇಟೆ, ಹೆಚ್.ಡಿ. ಕೋಟೆ, ಸರಗೂರು ಹಾಗೂ ನಂಜನಗೂಡು ತಾಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಹುಲಿ ದಾಳಿಗೆ ಹಲವು …

Read More »

ಕುವೆಂಪು ವಿವಿ ಡಿಜಿಟಲ್ ಮೌಲ್ಯಮಾಪನದ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದಲ್ಲಿ ನೂತನವಾಗಿ ಜಾರಿಗೆ ತಂದಿರುವ ಡಿಜಿಟಲ್ ಮೌಲ್ಯಮಾಪನಕ್ಕೆ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ವಿವಿಯಲ್ಲಿ ಜಾರಿಗೆ ಬಂದಿರುವ ಡಿಜಿಟಲ್ ಮೌಲ್ಯಮಾಪನ ಸರಿಯಾಗಿ ಮಾಡಿಲ್ಲವೆಂದು ಆರೋಪಿಸಿರುವ ನೂರಾರು ವಿದ್ಯಾರ್ಥಿಗಳು ಸೋಮವಾರ ಪ್ರತಿಭಟನೆ ನಡೆಸಿದರು. ಒಮ್ಮೆ ನಡೆದ ಮೌಲ್ಯಮಾಪನದಿಂದ ಫೇಲ್ ಆದ ವಿದ್ಯಾರ್ಥಿಗಳು ಮರು ಮೌಲ್ಯಮಾಪನಕ್ಕೆ ಹಾಕಿದಾಗ ಕೆಲವರು ಫೇಲ್ ಆಗಿದ್ದು, ಮತ್ತೆ ಕೆಲವರು ಪಾಸ್ ಆಗಿದ್ದಾರೆ. ಪರೀಕ್ಷಾಂಗ ವಿವಿಯ ದಿನಗೂಲಿ ನೌಕರರಿಂದ ಉತ್ತರ ಪತ್ರಿಕೆಯ ಬಂಡಲ್ ಅದಲು ಬದಲಾದ ಕಾರಣಕ್ಕೆ ಮೌಲ್ಯ …

Read More »