ಪ್ರತಿಟನ್ ಕಬ್ಬಿಗೆ ೫೫೦೦/- ಬೆಲೆ ನೀಡಬೇಕೆಂದು ಕಬ್ಬು ಬೆಳೆಗಾರರು ಆರಂಭಿಸಿದ ಹೋರಾಟ ಇಂದು ಕೂಡ ಮುಂದೆವರಿದಿದೆ. ವಿಧಾನಸಭೆಯ ಉಪಸಭಾಪತಿ ಆನಂದ ಮಾಮನಿ ನಿಧನ ಮತ್ತು ಕಿತ್ತೂರು ಉತ್ಸವದ ಹಿನ್ನೆಲೆ ಸಾಂಕೇತಿಕವಾಗಿ ಇಂದು ರೈತರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದರು. ಭಾನುವಾರದAದು ಬೆಳಗಾವಿ ತಾಲೂಕು, ಮೂಡಲಗಿ ತಾಲೂಕು ಮತ್ತು ಗೋಕಾಕ ತಾಲೂಕಿನಿಂದ ಆಗಮಿಸಿದ ರೈತರು ಪ್ರತಿಟನ್ ಕಬ್ಬಿಗೆ ೫೫೦೦/- ಬೆಲೆ ನೀಡುವಂತೆ ಒತ್ತಾಯಿಸಿ ನಗರದ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. …
Read More »ಸರ್ವಿಸ್ ವಿದ್ಯುತ್ ವೈರ್ ತುಳಿದು 6 ಬಾಲಕ ಸಾವನ್ನಪ್ಪಿದ್ದಾನೆ.
ಸರ್ವಿಸ್ ವಿದ್ಯುತ್ ವೈರ್ ತುಳಿದು ಬಾಲಕ ಓರ್ವ ಸಾವನ್ನಪ್ಪಿರುವ ಘಟನೆ ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿ ಗ್ರಾಮದಲ್ಲಿ ನಡೆದಿದೆ. 6 ವರ್ಷದ ವರುಣ ಬಸಪ್ಪ ಕೋಲಕಾರ್ ಮೃತ ದುರ್ದೈವಿ ಬಾಲಕ. ಶನಿವಾರ ಬೆಳಿಗ್ಗೆ ಈ ಬಾಲಕ ಶೌಚಕ್ಕೆ ಹೋಗುತ್ತಿದ್ದ ವೇಳೆ ಪಕ್ಕದ ಮನೆಯವರ ಹಿಂಬದಿ ಬಿದ್ದಿದ್ದ ಸರ್ವಿಸ್ ವೈರ್ ತುಳಿದು ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾನೆ. ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
Read More »ಸವದತ್ತಿಗೆ ಬಂದ ಆನಂದ ಮಾಮನಿ ಮೃತದೇಹ
ಇಂದು ಬೆಳಗಿನ ಜಾವ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದ ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಶಾಸಕರು ಹಾಗೂ ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ಆನಂದ ಮಾಮನಿ ಮೃತದೇಹ ಸ್ವಕ್ಷೇತ್ರ ಸವದತ್ತಿಗೆ ತರಲಾಗಿದೆ. ತಮ್ಮ ನೆಚ್ಚಿನ ನಾಯಕನ ಪಾರ್ಥಿವ ಶರೀರ ಸ್ವಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿತ್ತು. ಇಡೀ ಸವದತ್ತಿ ಕ್ಷೇತ್ರ ಶೋಕ ಸಾಗರದಲ್ಲಿ ಮುಳುಗಿದೆ. ಅಭಿಮಾನಿಗಳ ದಂಡು ಆನಂದ ಮಾಮನಿ ಅವರ ನಿವಾಸಕ್ಕೆ ತಂಡೋಪತಂಡವಾಗಿ ದೌಡಾಯಿಸಿದ್ದು ಕಣ್ಣೀರು ಹಾಕುತ್ತಿದ್ದಾರೆ. ಈಗಾಗಲೇ ಸಿಎಂ …
Read More »ವಿಮಾನಕ್ಕಿಂತ ಬಸ್ ಪ್ರಯಾಣ ದುಬಾರಿ-ದೀಪಾವಳಿಗೆ ಊರಿಗೆ ಹೊರಟವರಿಗೆ ದರ ಏರಿಕೆ ಬಿಸಿ
ಬೆಂಗಳೂರು: ದೀಪಾವಳಿ ಹಬ್ಬದ ಸಾಲು ಸಾಲು ರಜೆಗಳಲ್ಲಿ ಬಸ್ನಲ್ಲಿ ಪ್ರಯಾಣ ಮಾಡುವರಿಗೆ ಟಿಕೆಟ್ ದರ ಏರಿಕೆಯ ಬಿಸಿ ತಟ್ಟಿದೆ. ಸಾಮಾನ್ಯ ದಿನಗಳ ದರಕ್ಕೆ ಹೋಲಿಸಿದರೆ ಮೂರರಿಂದ ನಾಲ್ಕು ಪಟ್ಟು ಹೆಚ್ಚಿಸಲಾಗಿದ್ದು, ವಿಮಾನ ಪ್ರಯಾಣ ದರಕ್ಕಿಂತಲೂ ಬಸ್ ಪ್ರಯಾಣ ದರ ದುಬಾರಿಯಾಗಿದೆ. ಹಬ್ಬ ಮತ್ತು ಸರ್ಕಾರಿ ರಜೆಗಳ ಸಂದರ್ಭದಲ್ಲಿ ಪ್ರಯಾಣ ದರ ಹೆಚ್ಚಳವಾಗದಂತೆ ಕ್ರಮ ಕೈಗೊಳ್ಳುವುದಾಗಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಭರವಸೆ ನೀಡಿದ್ದರು. ಈ ಸಂಬಂಧ ಬಸ್ ಮಾಲೀಕರ …
Read More »ಕಿತ್ತೂರು ಉತ್ಸವ ನಾಳೆಗೆ ಮುಂದೂಡಿಕೆ….
ಕಿತ್ತೂರು :ಉತ್ಸವ ನಾಳೆಗೆ ಮುಂದೂಡಿಕೆ.. ಚನ್ನಮ್ಮನ ಕಿತ್ತೂರಿನಲ್ಲಿ ಇಂದು ನಡೆಯಬೇಕಿದ್ದ ಕಿತ್ತೂರು ಉತ್ಸವವನ್ನು ನಾಳೆ ಸೋಮವಾರ(ಅ.24)ಕ್ಕೆ ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.
Read More »ಧಾರವಾಡ: ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣ, ಆರೋಪಿಯ ಬಂಧನ
ಧಾರವಾಡ:ನಗರದಲ್ಲಿ ಯುವಕನೊಬ್ಬನನ್ನು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಸಲಿಂಗಕಾಮಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಪವನ್ ಬಯಾಲಿ ಎಂದು ಗುರುತಿಸಲಾಗಿದೆ. ಮೃತ ಯಾಸಿನ್ ರೊಟ್ಟಿವಾಲೆ ಪೋಷಕರು ನೀಡಿದ ದೂರಿನ ಮೇರೆಗೆ ಪವನ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅತ್ತಿಕೊಲ್ಲ ನಿವಾಸಿ ಯಾಸಿನ್ ಅಕ್ಟೋಬರ್ 12ರಂದು ನಾಪತ್ತೆಯಾಗಿದ್ದ. ನಂತರ, ಅವನ ದೇಹವು ಕೆಳಗೇರಿ ಕೆರೆಯಲ್ಲಿ ಪತ್ತೆಯಾಗಿತ್ತು. ಯಾಸಿನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪವನ್ …
Read More »‘ಬನಾರಸ್’ ವೇದಿಕೆಯಲ್ಲಿ ದರ್ಶನ್ ಬಿಚ್ಚು ಮಾತು
ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ ನಟಿಸಿರುವ ಮೊದಲ ಸಿನಿಮಾ ‘ಬನಾರಸ್’ನ ಪ್ರೀ ರಿಲೀಸ್ ಇವೆಂಟ್ ಇಂದು (ಅಕ್ಟೋಬರ್ 22) ರಂದು ಅದ್ಧೂರಿಯಾಗಿ ಹುಬ್ಬಳ್ಳಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ನಟ ದರ್ಶನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದು, ಸಿನಿಮಾದ ಬಗ್ಗೆ ಹಾಗೂ ಝೈದ್ ಖಾನ್, ಅವರ ತಂದೆ ಜಮೀರ್ ಅಹ್ಮದ್ ಬಗ್ಗೆ ಮಾತನಾಡಿದರು. ತಮ್ಮ ಎಂದಿನ ಶೈಲಿಯಲ್ಲಿ, ವೇದಿಕೆ ಮೇಲೆ ಚಪ್ಪಲಿ ಬಿಟ್ಟು, ತಮ್ಮ ಅಭಿಮಾನಿಗಳಿಗೆ ‘ಸೆಲೆಬ್ರಿಟಿ’ ಎಂದು ಸಂಭೋದಿಸುತ್ತಾ …
Read More »ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ
ರಾಮದುರ್ಗ: ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಪಿಯು ಕಾಲೇಜುಗಳ ಕ್ರೀಡಾಕೂಟದಲ್ಲಿ ಇಲ್ಲಿನ ಸುಶೀಲಾತಾಯಿ ಕುಲಗೋಡ ಪಿಯು ಕಾಲೇಜಿನ ವಿದ್ಯಾರ್ಥಿಗಳು ನೆಟ್ ಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನ ಗಳಿಸಿ, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಸನಗೌಡಾ ದ್ಯಾಮನಗೌಡ್ರ-ಕಬಡ್ಡಿ, ವಿಜಯ ಕಳಸಗೌಡರ-5 ಕಿ.ಮೀ ನಡಿಗೆ ಮತ್ತು ಸಾನೀಯಾ ನಾಸಿಪೂರ ಜಾವಲಿನ್ ಎಸೆತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾ ಪ್ರಸಾರಕ ಸಮಿತಿಯ ಅಧ್ಯಕ್ಷ ಎಸ್.ಎ. ಶೆಟ್ಟಿಸದಾವರ್ತಿ, ಉಪಾಧ್ಯಕ್ಷ ಕೆ.ಮೋಹನ, ಗೌರವ ಕಾರ್ಯದರ್ಶಿ ಎಸ್.ಎಸ್. ಸುಲ್ತಾನಪೂರ, ಪ್ರಾಚಾರ್ಯ ಪ್ರೊ.ಎಂ.ಬಿ. …
Read More »ರಾಜ್ಯೋತ್ಸವ: ಅದ್ಧೂರಿ ಆಚರಣೆಗೆ ಸೂಚನೆ
ನಿಪ್ಪಾಣಿ: ‘ಈ ಬಾರಿ ರಾಜ್ಯೋತ್ಸವವನ್ನು ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸೋಣ. ಎಲ್ಲರೂ ಭಾಗವಹಿಸಿ ಕಾರ್ಯಕ್ರಮಕ್ಕೆ ಶೋಭೆ ತನ್ನಿ’ ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಕರೆ ನೀಡಿದರು. ಇಲ್ಲಿನ ನಗರಸಭೆಯಲ್ಲಿ ಶುಕ್ರವಾರ ತಾಲ್ಲೂಕು ಆಡಳಿತ ಮತ್ತು ಕನ್ನಡಪರ ಸಂಘಟನೆಗಳ ಆಶ್ರಯದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು. ‘ಎಲ್ಲ ಇಲಾಖೆಯ ಕಾರ್ಯಾಲಯಗಳನ್ನು ಅಲಂಕರಿಸಿ ಹಬ್ಬದ ವಾತಾವರಣ ಸೃಷ್ಟಿಸಬೇಕು. ಅ.28ರಂದು ರಾಜ್ಯದಾದ್ಯಂತ ನಡೆಯುವ ಕೋಟಿ ಕಂಠ ಗೀತಗಾಯನ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ …
Read More »ಮಕ್ಕಳಲ್ಲಿ ದೇಶಾಭಿಮಾನ ಮೂಡಿಸಿ’
ಬೈಲಹೊಂಗಲ: ‘ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣನ ತ್ಯಾಗ, ಬಲಿದಾನ, ರಾಷ್ಟ್ರಪ್ರೇಮದ ಕುರಿತು ಮಕ್ಕಳಿಗೆ ತಿಳಿಸಿ, ಅವರಲ್ಲಿ ದೇಶಾಭಿಮಾನ ಬೆಳೆಸಬೇಕು’ ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು. ಪಟ್ಟಣದ ಕಿತ್ತೂರು ಚನ್ನಮ್ಮನ ಸಮಾಧಿ ಸ್ಥಳದಲ್ಲಿ ಶನಿವಾರ ವೀರಜ್ಯೋತಿ ವಾಹನಕ್ಕೆ ಪೂಜೆ ಸಲ್ಲಿಸುವ ಮೂಲಕ ಸ್ವಾಗತಿಸಿ ಅವರು ಮಾತನಾಡಿದರು. ‘ಇದೇ ಮೊದಲ ಬಾರಿಗೆ ರಾಜ್ಯದಾದ್ಯಂತ ಸಂಚರಿಸಿದ ಜ್ಯೋತಿ ವಾಹನಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಬರುವ ದಿನಗಳಲ್ಲಿ ಕಿತ್ತೂರು ಉತ್ಸವ ರಾಷ್ಟ್ರ ಮಟ್ಟದಲ್ಲಿ …
Read More »