ಬೆಳಗಾವಿ : ಇಂದಿನಿಂದ ಬೆಳಗಾವಿ ಜಿಲ್ಲೆಯ ಚನ್ನಮ್ಮನ್ನ ಕಿತ್ತೂರಿನಲ್ಲಿ ಮೂರು ದಿನಗಳ ಕಾಲ ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರವು ಕಿತ್ತೂರು ಉತ್ಸವವನ್ನು ರಾಜ್ಯ ಮಟ್ಟದಲ್ಲಿ ಉತ್ಸವವಾಗಿ ಆಚರಿಸುತ್ತಿದೆ. ಇಂದು ಸಂಜೆ 7 ಗಂಟೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಿತ್ತೂರು ಉತ್ಸವ ಉದ್ಘಾಟಿಸಲಿದ್ದು, ಅಕ್ಟೋಬರ್ 23,24,25 ರಂದು ಕಾರ್ಯಕ್ರಮಗಳು ನಡೆಯಲಿವೆ. ಮೂರು ದಿನಗಳ ಉತ್ಸವದಲ್ಲಿ ಮೂರು ವೇದಿಕೆಗಳನ್ನು ನಿರ್ಮಿಸಲಾಗಿದೆ. ಕಿತ್ತೂರು ರಾಣಿ ಚನ್ನಮ್ಮ ಮುಖ್ಯ ವೇದಿಕೆ ಹಾಗೂ …
Read More »ವಿಧಾನಸಭೆ ಉಪಸಭಾಪತಿ, ಸವದತ್ತಿ ಶಾಸಕ ಆನಂದ ಮಾಮನಿ ವಿಧಿವಶ
ಬೆಳಗಾವಿ: ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಚಂದ್ರಶೇಖರ ಮಾಮನಿ ಅವರು ಅನಾರೋಗ್ಯದಿಂದ ಶನಿವಾರ ರಾತ್ರಿ ಕೊನೆಯುಸಿರೆಳೆದರು. ಅನಾರೋಗ್ಯದಿಂದ ಬಳಲುತ್ತಿದ್ದ ಅನಂದ ಮಾಮನಿ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನೇಕ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ. ರವಿವಾರ ಪಾರ್ಥಿವ ಶರೀರ ತವರು ಜಿಲ್ಲೆಗೆ ಆಗಮಿಸಲಿದೆ. ಶಾಸಕ ಆನಂದ ಮಾಮನಿ ನಿಧನದಿಂದ ಜಿಲ್ಲೆಯಾದ್ಯಂತ ಶೋಕ ಮಡುಗಟ್ಟಿದ್ದು, ಹಿರಿಯ ರಾಜಕೀಯ ನೇತಾರನನ್ನು ಕಳೆದುಕೊಂಡ ಜಿಲ್ಲೆ …
Read More »೧ ನವೆಂಬರ್ ಕರಾಳದಿನಕ್ಕೆ ಮಹಾರಾಷ್ಟ್ರ ಸರ್ಕಾರದ ಪ್ರತಿನಿಧಿಗಳು ಉಪಸ್ಥಿತರಿರಲಿದ್ದಾರೆ.: ಏಕನಾಥ್ ಶಿಂಧೆ
ಈ ಬಾರಿ ನಡೆಯಲಿರುವ ೧ ನವೆಂಬರ್ ಕರಾಳದಿನಕ್ಕೆ ಮಹಾರಾಷ್ಟ್ರ ಸರ್ಕಾರದ ಪ್ರತಿನಿಧಿಗಳು ಉಪಸ್ಥಿತರಿರಲಿದ್ದಾರೆ. ಈ ಕುರಿತು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಮಹಾರಾಷ್ಟ್ರ ಏಕೀಕರಣ ಸಮಿತಿಯ ನಾಯಕರಿಗೆ ಮಾತು ಕೊಟ್ಟಿದ್ದಾರೆ. ಮಹಾರಾಷ್ಟ್ರ ಏಕೀಕರಣ ಸಮಿತಿಯ ಪ್ರಮುಖರು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರಿಗೆ ಫೋನಾಯಿಸಿ ೧ ನವೆಂಬರ್ ಕರಾಳದಿನಕ್ಕೆ ಮಹಾರಾಷ್ಟ್ರದ ಪ್ರತಿನಿಧಿಗಳನ್ನು ಕಳುಹಿಸಿಕೊಡುವಂತೆ ಆಗ್ರಹಿಸಿದ್ದಾರೆ. ಮಧ್ಯವರ್ತಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ಖಜಾಂಚಿ ಪ್ರಕಾಶ ಮರಗಾಳೆ ಅವರ ಬೇಡಿಕೆಗೆ ಮಹಾ ಸಿಎಂ …
Read More »ಈಶ್ವರಪ್ಪ, ರಮೇಶ್ ಜಾರಕಿಹೊಳಿಗೆ ಮಂತ್ರಿಗಿರಿ ವಿಚಾರ; ಸಿಎಂ ಬೊಮ್ಮಾಯಿ ಹೇಳಿದ್ದೇನು ?
ಚಿತ್ರದುರ್ಗ: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಶೀಘ್ರದಲ್ಲಿಯೇ ದೆಹಲಿಗೆ ತೆರಳಿ ಹೈಕಮಾಂಡ್ ಜೊತೆ ಚರ್ಚೆ ನಡೆಸುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಚಿತ್ರದುರ್ಗ ಜಿಲ್ಲೆಗೂ ಪ್ರಾತಿನಿಧ್ಯ ನೀಡಲು ಪ್ರಯತ್ನಿಸಲಾಗುವುದು. ಜಿಲ್ಲೆಗೆ ಸಚಿವ ಸ್ಥಾನ ನಿಡದೇ ಮಲತಾಯಿ ಧೋರಣೆ ಅನುಸರಿಸಲಾಗಿದೆ ಎಂದು ಹೇಳಲಾಗುತ್ತಿದೆ. ಯಾವುದೇ ತಾರತಮ್ಯ ಮಾಡಿಲ್ಲ ಎಂದರು. ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ರಮೇಶ್ ಜಾರಕಿಹೊಳಿಗೆ ಈ ಬಾರಿ ಸಚಿವ ಸಂಪುಟದಲ್ಲಿ ಸ್ಥಾನ …
Read More »ಮುಂದಿನ ಒಂದು ವರ್ಷದಲ್ಲಿ 10 ಲಕ್ಷ ಉದ್ಯೋಗ ಕೊಡುತ್ತೇವೆ: ಶೋಭಾ ಕರಂದ್ಲಾಜೆ
ಹುಬ್ಬಳ್ಳಿ: ‘ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಚುನಾವಣೆಯಲ್ಲಿ ಯುವಕರಿಗೆ 10 ಲಕ್ಷ ಉದ್ಯೋಗ ಕಲ್ಪಿಸಲಾಗುವುದು ಎಂಬ ಭರವಸೆ ನೀಡಿದ್ದರು. ಅದರಂತೆ ಈಗ ನಡೆದುಕೊಂಡಿದ್ದಾರೆ’ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಅದರಂತೆ ಈಗ ನಡೆದುಕೊಂಡಿದ್ದಾರೆ’ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರು 10 ಲಕ್ಷ ಉದ್ಯೋಗಿಗಳ …
Read More »ಪೊಲೀಸರೊಂದಿಗೆ ಸಾರ್ವಜನಿಕರೂ ಕೈ ಜೋಡಿಸಲಿ: ಮಲ್ಲಿಕಾರ್ಜುನ ಗೌಡ
ಶಿವಮೊಗ್ಗ: ‘ಎಲ್ಲಿಯವರೆಗೆ ಸಾರ್ವಜನಿಕರು ಪೊಲೀಸರಿಗೆ ಸಹಕರಿಸುವುದಿಲ್ಲವೋ ಅಲ್ಲಿಯವರೆಗೆ ಸಮಾಜದಲ್ಲಿ ಅಶಾಂತಿ ಇದ್ದೇ ಇರುತ್ತದೆ’ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅಭಿಪ್ರಾಯಪಟ್ಟರು. ಇಲ್ಲಿನ ಡಿಎಆರ್ ಮೈದಾನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪೊಲೀಸ್ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಕ್ಷಣೆಗೆ ಸಂಬಂಧಿಸಿದ ಹೊಣೆಗಾರಿಕೆ ಕೇವಲ ಯೋಧರು ಮತ್ತು ಪೊಲೀಸರದ್ದು ಅಲ್ಲ. ನಮ್ಮದೂ (ಸಾರ್ವಜನಿಕರದ್ದು) ಇದೆ ಎಂದರು. ಪರರ ರಕ್ಷಣೆಗಾಗಿ ದೇಹ ತ್ಯಾಗ ಮಾಡುವವರು ಸೈನಿಕರು ಮತ್ತು …
Read More »ಜನ ಹುಚ್ಚರಾಗಬಹುದು, ದಾರಿಯಲ್ಲೇ ಬಿದ್ದು ಸಾಯಬಹುದು. ಎಂದು ಭವಿಷ್ಯ ನುಡಿಯುತ್ತಲೇ ಪರಿಹಾರ ತಿಳಿಸಿದ ಕೋಡಿಶ್ರೀ
ಹಾಸನ: ಕಾರ್ತಿಕದಿಂದ ಜನವರಿವರೆಗೂ ಮೂರು ತಿಂಗಳ ಕಾಲ ಕಂಟಕ ಎದುರಾಗಲಿದೆ ಎಂದು ಕೋಡಿ ಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಶನಿವಾರ ಭವಿಷ್ಯ ನುಡಿದ ಕೋಡಿ ಮಠದ ಶ್ರೀಗಳು, ಕಾರ್ತಿಕ ಮಾರ್ಗಶಿರ ಮಧ್ಯ ಭಾಗದಿಂದ ಜನವರಿ 23ರ ವರೆಗೂ ಕಂಠಕ ಎದುರಾಗಲಿದೆ. ರಾಜಭೀತಿ, ಭೂ ಕಂಟಕ, ಪ್ರದೇಶ, ಪ್ರಾಕೃತಿಕ ಕಂಟಕ, ಬಾಂಬ್, ಯುದ್ಧಭೀತಿ, ಭೂ ಕಂಪನ ಆಗಬಹುದು ಎಂದರು. ಜನರು ನಿಯಂತ್ರಣ ಕಳೆದುಕೊಂಡು ಹುಚ್ಚರಾಗಬಹುದು, ದಾರಿ ಒಳಗೆ …
Read More »ನಾಳೆ ರಾಜ್ಯದಲ್ಲಿ ‘ಭಾರತ್ ಜೋಡೋ ಯಾತ್ರೆ’ಗೆ ತೆರೆ
ರಾಯಚೂರು: ಭಾರತ ಐಕ್ಯತಾ ಯಾತ್ರೆ ನಾಳೆ ಬೆಳಗ್ಗೆ 11 ಗಂಟೆಗೆ ರಾಜ್ಯದಲ್ಲಿ ಮುಕ್ತಾಯವಾಗಲಿದೆ. ಸೆ.30 ರಿಂದ ಆರಂಭವಾದ ಯಾತ್ರೆಯಲ್ಲಿ ಲಕ್ಷಾಂತರ ಮಂದಿ ಭಾಗವಹಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಯಾತ್ರೆಯಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ ಯುವಕರು, ಮಹಿಳೆಯರು, ರೈತರು ಹಾಗೂ ಮಕ್ಕಳು ಬಹಳ ಉತ್ಸಾಹದಿಂದ ಭಾಗವಹಿಸಿದ್ದಾರೆ. ಇವರು ಪಕ್ಷವನ್ನು ನೋಡಿಲ್ಲ. ಈ ಎಲ್ಲರೂ ಬದುಕು, ಭವಿಷ್ಯ, ದೇಶದಲ್ಲಿ ಶಾಂತಿ ಮರುಸ್ಥಾಪನೆ, ನಿತ್ಯ …
Read More »ನಮ್ಮನ್ನು ತುಳಿಯುತ್ತಿದಾರೆ, ಎಲ್ಲಾ ಗೊತ್ತಾಗ್ತಿದೆ ಎಂದು ಆಕ್ರೋಶಗೊಂಡ ಡಾಲಿ, ಯೋಗಿ!
ನಟನಾಗಿ ಚಿತ್ರರಂಗ ಪ್ರವೇಶಿಸಿ ಟಗರು ಚಿತ್ರದ ವಿಲನ್ ರೋಲ್ ಮೂಲಕ ದೊಡ್ಡ ತಿರುವು ಪಡೆದುಕೊಂಡ ಧನಂಜಯ್ ನಂತರ ಬ್ಯಾಕ್ ಟು ಬ್ಯಾಕ್ ಸಕ್ಸಸ್ ಕಂಡರು. ಕನ್ನಡದ ನಂತರ ಟಾಲಿವುಡ್ ಚಿತ್ರರಂಗಕ್ಕೂ ಪದಾರ್ಪಣೆ ಮಾಡಿದ ಧನಂಜಯ ಅಲ್ಲು ಅರ್ಜುನ್ ಅಭಿನಯದ ಪುಷ್ಪದಂತಹ ಬಿಗ್ ಬಜೆಟ್ ಪ್ಯಾನ್ ಇಂಡಿಯಾ ಚಿತ್ರದಲ್ಲಿ ನಟಿಸಿ ಸೈ ಎನಿಸಿಕೊಂಡರು. ಹೀಗೆ ದಕ್ಷಿಣ ಭಾರತ ಚಿತ್ರರಂಗದಲ್ಲಿ ಸದ್ದು ಮಾಡುತ್ತಿರುವ ಧನಂಜಯ್ ನಿರ್ಮಾಪಕನಾಗಿಯೂ ಬಡ್ತಿ ಪಡೆದಿದ್ದಾರೆ. ಶಂಕರ್ ಗುರು ನಿರ್ದೇಶನದ …
Read More »ದೀಪಾವಳಿ ಬಳಿಕ ಸಂಪುಟ ಪುನಾರಚನೆ ಬಗ್ಗೆ ಚರ್ಚೆಗೆ ಸಿಎಂ ದಿಲ್ಲಿಗೆ: ಪ್ರಹ್ಲಾದ ಜೋಶಿ
ಬೆಂಗಳೂರು: ದೀಪಾವಳಿಯ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ಬರುವುದಾಗಿ ಹೇಳಿದ್ದಾರೆ. ಅವರು ಅಲ್ಲಿಗೆ ಬಂದ ನಂತರ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಿ ಸಂಪುಟ ರಚನೆ ಸೇರಿದಂತೆ ಹಲವು ವಿಚಾರಗಳನ್ನು ವರಿಷ್ಠರ ಜತೆ ಚರ್ಚಿಸುವುದಾಗಿ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ದೀಪಾವಳಿ ನಂತರ ಮುಖ್ಯಮಂತ್ರಿಗಳು ದೆಹಲಿಗೆ ಬರುವುದಾಗಿ ತಮ್ಮ ಬಳಿ ಹೇಳಿದ್ದಾರೆ. ಅವರು ದೆಹಲಿಗೆ ಬಂದಾಗ ಹಲವು ವಿಚಾರಗಳ ಬಗ್ಗೆ …
Read More »