ಬೆಳಗಾವಿ: ಇಲ್ಲಿನ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣ ಮೃಗಗಳ ಸಾವಿನ ಸರಣಿ ಮುಂದುವರಿದಿದೆ. ಇಂದು(ಸೋಮವಾರ) ಬೆಳಗಿನ ಜಾವ ಮತ್ತೊಂದು ಮೃತಪಟ್ಟಿದ್ದು, ಈ ಮೂಲಕ ಕೃಷ್ಣಮೃಗಗಳ ಸಾವಿನ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಗ್ರಾಮದಲ್ಲಿರುವ ಕಿರು ಮೃಗಾಲಯದಲ್ಲಿ ಕಳೆದ ಐದು ದಿನಗಳ ಅಂತರದಲ್ಲಿ ಒಟ್ಟು 31 ಕೃಷ್ಣ ಮೃಗಗಳು ಸಾವನ್ನಪ್ಪಿರುವುದು ಆತಂಕಕ್ಕೆ ಕಾರಣವಾಗಿದೆ. ನ.13ರಂದು 8, ನ.15ರಂದು 20, ನಿನ್ನೆ 16ರಂದು ಬೆಳಗ್ಗೆ 1 ಮತ್ತು ಸಂಜೆ …
Read More »ಕಿತ್ತೂರು ರಾಣಿ ಚನ್ನಮ್ಮ ಮೃಗಾಲಯದಲ್ಲಿ ಮತ್ತೊಂದು ಕೃಷ್ಣಮೃಗ ಸಾವು: 29ಕ್ಕೇರಿದ ಸಾವಿನ ಸಂಖ್ಯೆ
ಬೆಳಗಾವಿ: ಇಲ್ಲಿನ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ ಇಂದು ಮತ್ತೊಂದು ಕೃಷ್ಣಮೃಗ ಮೃತಪಟ್ಟಿದ್ದು, ಇದರಿಂದ ಕೃಷ್ಣಮೃಗಗಳ ಸಾವಿನ ಸಂಖ್ಯೆ 29ಕ್ಕೆ ಏರಿದೆ. ಕೃಷ್ಣಮೃಗಗಳ ಸಾವು ಪ್ರಾಣಿಪ್ರಿಯರ ಮನಸ್ಸಿಗೆ ನೋವುಂಟು ಮಾಡಿದೆ. ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿಯಿರುವ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸರಣಿ ಮುಂದುವರಿದಿದ್ದು, ಮತ್ತೊಂದು ಕೃಷ್ಣಮೃಗ ಇಂದು ಮೃತಪಟ್ಟಿದೆ. ನ.13 ರಂದು ಕಿರು ಮೃಗಾಲಯದಲ್ಲಿ 8 ಕೃಷ್ಣ ಮೃಗಗಳು ಸಾವನ್ನಪ್ಪಿದ್ದವು. ನಿನ್ನೆ ಒಂದೇ ದಿನ …
Read More »ಅಂಜುಮನ್ ಕಾಲೇಜಿನಿಂದ ಯುವಶಕ್ತಿ ಮತದಾನ ಜಾಗೃತಿ ಅಭಿಯಾನ ಯುವಶಕ್ತಿಯಿಂದ ಮತದಾನ ಜಾಗೃತಿ ಅಭಿಯಾನ
ಅಂಜುಮನ್ ಕಾಲೇಜಿನಿಂದ ಯುವಶಕ್ತಿ ಮತದಾನ ಜಾಗೃತಿ ಅಭಿಯಾನ ಯುವಶಕ್ತಿಯಿಂದ ಮತದಾನ ಜಾಗೃತಿ ಅಭಿಯಾನ ಅಂಜುಮನ್ ಪಿ ಯು ಸಿ ಮತ್ತು ಐಟಿಐ ವಿದ್ಯಾರ್ಥಿಗಳಿಂದ ಜಾಗೃತಿ ನಾಗರಿಕರ ಹಕ್ಕು ಮತ್ತು ಮತದ ಮೌಲ್ಯವನ್ನು ಜನರಿಗೆ ತಿಳಿಸುವ ಗುರಿ ಸಮರ್ಥ ಸರ್ಕಾರ ರಚನೆಯಾದರೆ ದೇಶದ ಭವಿಷ್ಯ ಉಜ್ವಲ; ಡಾ. ಹೆಚ್ ಐ ತಿಮ್ಮಾಪೂರ ಬೆಳಗಾವಿ: ದೇಶದ ಭವಿಷ್ಯವನ್ನು ಉತ್ತಮಗೊಳಿಸುವ ಸದುದ್ದೇಶದಿಂದ, ಅಂಜುಮನ್ ಪಿಯು ಮಹಾವಿದ್ಯಾಲಯ ಹಾಗೂ ಅಂಜುಮಾನ್ ಐಟಿಐ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಮತ್ತು …
Read More »ಡಾ.ಹೆಬ್ಬಾಳಕರ್ಸ್ ಕ್ಲಿನಿಕ್ ಆರಂಭ
ಡಾ.ಹೆಬ್ಬಾಳಕರ್ಸ್ ಕ್ಲಿನಿಕ್ ಆರಂಭ ಉದ್ಘಾಟಿಸಿ ಶುಭ ಹಾರೈಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ: ಡಾ. ಹಿತಾ ಮೃಣಾಲ್ ಹೆಬ್ಬಾಳಕರ್ ಅವರು ಆರಂಭಿಸಿರುವ ಸ್ಕಿನ್ ಆ‌್ಯಂಡ್ ಹೇರ್ ಕೇರ್ ಕ್ಲಿನಿಕ್ ನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾನುವಾರ ಸಂಜೆ ಉದ್ಘಾಟಿಸಿದರು. ಕಾಲೇಜು ರಸ್ತೆಯ ಹೋಟೆಲ್ ಸನ್ಮಾನ್ ಹಿಂಭಾಗದಲ್ಲಿರುವ ದಾಸಪ್ಪ ಶಾನಭಾಗ್ ಎಂಪೈರ್ ನಲ್ಲಿ ಕ್ಲಿನಿಕ್ ಆರಂಭವಾಗಿದೆ. ಹಿತಾ ಅವರು ಬಹಳಷ್ಟು ಅಧ್ಯಯನ ಮಾಡಿದ್ದು, ಅತ್ಯಾಧುನಿಕ ಯಂತ್ರೋಪಕರಣಗಳನ್ನು …
Read More »ಸಹಕಾರಿ ತತ್ವ, ಆದರ್ಶದಡಿ ಕೆಲಸ : ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ
ವೈಯಕ್ತಿಕ ದ್ವೇಷ ಬದಿಗಿಟ್ಟರಷ್ಟೇ ಸಹಕಾರಿ ಕ್ಷೇತ್ರದಲ್ಲಿ ಯಶಸ್ಸು* 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆ *ಬೆಳಗಾವಿ:* ಚುನಾವಣೆ ವೇಳೆ ಬರುವ ಮನಸ್ತಾಪ, ವೈಯಕ್ತಿಕ ದ್ವೇಷಗಳನ್ನು ಬದಿಗಿಟ್ಟು, ಜನ ಸಾಮಾನ್ಯರಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಸಹಕಾರಿ ತತ್ವ, ಆದರ್ಶದಡಿ ಕೆಲಸ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ ಹೇಳಿದ್ದಾರೆ. ಹಿರೇಬಾಗೇವಾಡಿಯ ಶ್ರೀ ಜಾಲಿಕರೆಮ್ಮ ದೇವಿ ಮಂಗಲ ಕಾರ್ಯಾಲಯದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿಯಮಿತ ಬೆಂಗಳೂರು ಹಾಗೂ …
Read More »6 ಲಕ್ಷ ರೂ ಅಧಿಕ ಮೌಲ್ಯದ 15.100 ಕೆಜಿ ಹಸಿ ಗಾಂಜಾ ಜಪ್ತಿ
ವಿಜಯಪುರ :6 ಲಕ್ಷ ರೂ ಅಧಿಕ ಮೌಲ್ಯದ 15.100 ಕೆಜಿ ಹಸಿ ಗಾಂಜಾ ಜಪ್ತಿ ಕಬ್ಬು ಬೆಳೆಗಳ ಮಧ್ಯೆ ಬೆಳೆದಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ 15 ಕೆಜಿ 100 ಗ್ರಾಂ ಹಸಿ ಗಾಂಜಾವನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿರುವ ಘಟನೆ ತಿಕೋಟಾ ತಾಲ್ಲೂಕಿನ ಕೋಟ್ಯಾಳ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚಂದ್ರಶೇಖರ ಶಿವಪ್ಪ ಪಾಟೀಲ ಎಂಬ ಆರೋಪಿಯನ್ನು ಬಂಧಿಸಿ, ಅಂದಾಜು 6.ಲಕ್ಷ 40 ಸಾವಿರ ರೂಪಾಯಿ ಮೌಲ್ಯದ ಗಾಂಜಾ ಗಿಡಗಳನ್ನು ವಶಕ್ಕೆ …
Read More »ಕಳೆದ 20 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜೇಂದ್ರ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಮೈಸೂರು: ದರೋಡೆ ನೆಪದಲ್ಲಿ ಪತ್ನಿಯೇ ತನ್ನ ಪತಿಯ ಕೊಲೆಗೆ ಸ್ಕೆಚ್ ಹಾಕಿದ್ದರು ಎನ್ನಲಾದ ಪ್ರಕರಣದಲ್ಲಿ ತೀವ್ರವಾಗಿ ಹಲ್ಲೆಗೊಳಗಾಗಿದ್ದ ಪತಿ ಚಿಕಿತ್ಸೆ ಫಲಿಸದೆ ಭಾನುವಾರ ಸಾವನ್ನಪ್ಪಿದ್ದಾರೆ. ಡ್ರ್ಯಾಗರ್ ಹಾಗೂ ಲಾಂಗ್ನಿಂದ ಹಲ್ಲೆಗೊಳಗಾದ ರಾಜೇಂದ್ರ ಎಂಬವರು ಇಪ್ಪತ್ತು ದಿನಗಳಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದರು. ಭಾನುವಾರ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಪತಿಯ ಕೊಲೆಗೆ ಪತ್ನಿಯೇ ದರೋಡೆ ತಂತ್ರ ರೂಪಿಸಿದ್ದಳು ಎಂದು ಮೃತ ವ್ಯಕ್ತಿಯ ಸಂಬಂಧಿಕರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು, ವಿಚಾರಣೆ …
Read More »ಬೆಂಗಳೂರಿನ ಮಹಿಳೆಗೆ ಡಿಜಿಟಲ್ ಅರೆಸ್ಟ್: 31.83 ಕೋಟಿ ರೂ ಕಳೆದುಕೊಂಡ ಟೆಕ್ಕಿ
ಬೆಂಗಳೂರು: ಐಟಿ ಕ್ಷೇತ್ರದ ಹಿರಿಯ ಮಹಿಳಾ ಉದ್ಯೋಗಿಯೊಬ್ಬರಿಗೆ ಡಿಜಿಟಲ್ ಅರೆಸ್ಟ್ ಬೆದರಿಕೆಯೊಡ್ಡಿದ ಬರೋಬ್ಬರಿ 31.83 ಕೋಟಿ ರೂ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಇಂದಿರಾನಗರದ ನಿವಾಸಿಯಾಗಿರುವ 57 ವರ್ಷ ವಯಸ್ಸಿನ ಮಹಿಳೆಯೊಬ್ಬರು ನೀಡಿರುವ ದೂರಿನನ್ವಯ ಪೂರ್ವ ವಿಭಾಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ರಾಜ್ಯದಲ್ಲಿ ವ್ಯಕ್ತಿಯೊಬ್ಬರು ಕಳೆದುಕೊಂಡ ಗರಿಷ್ಠದ ಮೊತ್ತದ ಹಣ ಇದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೂರುದಾರರಿಗೆ 2024ರ ಸೆಪ್ಟೆಂಬರ್ 15ರಂದು ಡಿಹೆಚ್ಎಲ್ ಕೊರಿಯರ್ ಕಂಪನಿಯ …
Read More »ಕಟೀಲು ಕ್ಷೇತ್ರದ ಯಕ್ಷಗಾನಕ್ಕೆ ಹೆಚ್ಚಿದ ಬೇಡಿಕೆ: ಏಳನೇ ಮೇಳ ಆರಂಭ
ಮಂಗಳೂರು(ದಕ್ಷಿಣ ಕನ್ನಡ): ಕರಾವಳಿಯ ಪ್ರಸಿದ್ಧ ಜನಪದೀಯ ಕಲೆ ಯಕ್ಷಗಾನ ಮನೋರಂಜನೆ ಮಾತ್ರವಲ್ಲದೆ ಧಾರ್ಮಿಕ ನಂಬುಗೆಯ ಆಚರಣೆಯೂ ಹೌದು. ಅದರಲ್ಲೂ ಶ್ರೀ ಕ್ಷೇತ್ರ ಕಟೀಲು ಯಕ್ಷಗಾನಕ್ಕೆ ವಿಶೇಷ ಧಾರ್ಮಿಕ ಮಹತ್ವವಿದ್ದು, ಕ್ಷೇತ್ರದ ಯಕ್ಷಗಾನಕ್ಕಿರುವ ವಿಪರೀತ ಬೇಡಿಕೆಯಿಂದಾಗಿ ಇದೀಗ ಏಳನೇ ಮೇಳವನ್ನು ಆರಂಭಿಸಲಾಗಿದೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಿಂದ ಹೊರಡುವ ಪುರಾತನ ಯಕ್ಷಗಾನ ಮೇಳಗಳು ಕರ್ನಾಟಕದ ಸಾಂಸ್ಕೃತಿಕ ಮತ್ತು ಧಾರ್ಮಿಕ ಜಗತ್ತಿನಲ್ಲಿ ಅಪೂರ್ವ ಸ್ಥಾನ ಪಡೆದಿವೆ. ಈ ಮೇಳಗಳು ಕೇವಲ ಕಲಾ ಪ್ರದರ್ಶನಕ್ಕೆ ಸೀಮಿತವಲ್ಲ, …
Read More »ರಾಜೇಂದ್ರ ಬಡೇಸಗೋಳ ರವರಿಗೆ ಕವಿವಿ ಪಿಎಚ್‌ಡಿ ಪದವಿ ಪ್ರದಾನ
ರಾಜೇಂದ್ರ ಬಡೇಸಗೋಳ ರವರಿಗೆ ಕವಿವಿ ಪಿಎಚ್‌ಡಿ ಪದವಿ ಪ್ರದಾನ ಬೆಳಗಾವಿ: ಕರ್ನಾಟಕ ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಸಂಶೋಧನಾ ವಿದ್ಯಾರ್ಥಿ ರಾಜೇಂದ್ರ ಉದಯ ಬಡೇಸಗೋಳ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ ‘ಕರ್ನಾಟಕ ಪೊಲೀಸ್ ಇಲಾಖೆ ಮತ್ತು ಸಾರ್ವಜನಿಕ ಸಂಪರ್ಕ ಒಂದು ಅಧ್ಯಯನ’ ಎಂಬ ಸಂಶೋಧನಾ ಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯವು ರಾಜೇಂದ್ರ ಬಡೇಸಗೋಳ ಅವರಿಗೆ ಪಿ.ಎಚ್.ಡಿ ಪದವಿ ಪ್ರದಾನ ಮಾಡಿದೆ. ಕರ್ನಾಟಕ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ …
Read More »
Laxmi News 24×7