ಇದೇ ಮೊದಲ ಬಾರಿ ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವನ್ನಾಗಿ ಆಚರಿಸಲಾಗುತ್ತಿರುವುದರಿಂದ ಪ್ರತಿ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಲು ಅನುಕೂಲವಾಗುವಂತೆ ಒಟ್ಟು 15 ಉಪ ಸಮಿತಿಗಳನ್ನು ರಚಿಸಲಾಗಿದೆ. ಸಮಿತಿಯ ಅಧ್ಯಕ್ಷರು ಮಾತ್ರವಲ್ಲದೆ ಎಲ್ಲ ತಾಲ್ಲೂಕುಗಳ ತಹಶೀಲ್ದಾರರನ್ನು ಕೂಡ ಉತ್ಸವದ ಕೆಲಸಕ್ಕೆ ನಿಯೋಜಿಸಲಾಗಿದೆ. ಎಲ್ಲ ಉಪ ಸಮಿತಿಯ ಅಧ್ಯಕ್ಷರು ಮುಂದಿನ ಐದು ದಿನಗಳ ಕಾಲ ಕಿತ್ತೂರಿನಲ್ಲಿಯೇ ಉಪಸ್ಥಿತರಿದ್ದು, ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.ಕಿತ್ತೂರು ಉತ್ಸವದ ಹಿನ್ನೆಲೆಯಲ್ಲಿ ಚನ್ನಮ್ಮನ ಕಿತ್ತೂರಿನಲ್ಲಿ …
Read More »ಗೋಕಾಕ: ರಮೇಶ ಜಾರಕಿಹೊಳಿ, ಹೇಳಿಕೆ
ಗೋಕಾಕ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಜಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಗುರುವಾರದಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಪಂಚಮಸಾಲಿ ಸಮಾಜದ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು, ಕೂಡಲ ಸಂಗಮ ಪೀಠದ ಜಗದ್ಗುರು ಜಯ ಮೃತ್ಯುಂಜಯ ಸ್ವಾಮಿಜಿಯವ ನೇತ್ರತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ ಮಕ್ಕಳ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ 2ಎ ಮೀಸಲಾತಿ ನೀಡಬೇಕೆನ್ನುವ ಅವರ ಹೋರಾಟ …
Read More »487 ಹುದ್ದೆಗಳ ನೇಮಕಾತಿಗೆ ಮುಂದಾದ ಕೆಎಂಎಫ್
ಕರ್ನಾಟಕ ಹಾಲು ಒಕ್ಕೂಟದಲ್ಲಿ (Karnataka Milk Federation) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಡೆಪ್ಯೂಟಿ ಡೈರೆಕ್ಟರ್, ಜೂನಿಯರ್ ಟೆಕ್ನಿಷಿಯನ್ ಸೇರಿದಂತೆ ಒಟ್ಟು 487 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್ 19 ಆಗಿದೆ. ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, …
Read More »ಸಿದ್ದರಾಮಯ್ಯ ರಾಯಚೂರಿಗೆ ಬಂದಾಗ ಅಡ್ಡಗಟ್ಟಿ ಚಪ್ಪಲಿ ಎಸೆಯುವ ಮೂಲಕ ಖಂಡಿಸಲಾಗುವುದು : ಗುಂಜಳ್ಳಿ, ಸುರೇಶ ದುಗುನೂರು
ರಾಯಚೂರು: ಮಾದಿಗ ಸಮಾಜಕ್ಕೆ ಒಳ ಮೀಸಲಾತಿ ಕಲ್ಪಿಸುವಲ್ಲಿ ತನ್ನ ಅಧಿಕಾರದ ಅವಧಿಯಲ್ಲಿ ನಿರ್ಲಕ್ಷ್ಯ ವಹಿಸಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಅಕ್ಟೋಬರ್ 21 ಹಾಗೂ 22ರಂದು ಗೋಬ್ಯಾಕ್ ಚಳವಳಿ ಮಾಡಿ ಚಪ್ಪಲಿ ಎಸೆದು ಪ್ರತಿಭಟನೆ ಮಾಡಲಾಗುವುದು ಎಂದು ಮಾದಿಗ ದಂಡೋರ (ಎಂಆರ್ ಪಿಎಸ್) ರಾಜ್ಯ ಅಧ್ಯಕ್ಷ ಬಿ.ನರಸಪ್ಪ ದಂಡೋರ ತಿಳಿಸಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2013ರಿಂದ 2018ರವರೆಗೆ ಅಧಿಕಾರದಲ್ಲಿದ್ದ ಸಿದ್ದರಾಮಯ್ಯನವರು ಮಾದಿಗ ಸಮಾಜದ ಒಳ …
Read More »ಖೋಟಾ ನೋಟು ಚಲಾವಣೆ ಮಾಡಲು ಬಂದಿದ್ದ ಖತರ್ನಾಕ್ ಕಿಲಾಡಿಗಳ ಬಂಧನ
ಖೋಟಾ ನೋಟು ಚಲಾವಣೆ ಮಾಡಲು ಬಂದಿದ್ದ ಖತರ್ನಾಕ್ ಕಿಲಾಡಿಗಳನ್ನು ಬಂಧನ ಮಾಡುವಲ್ಲಿ ಹುಬ್ಬಳ್ಳಿಯ ಉಪನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಹೌದು, ಬಿಜಾಪುರದಿಂದ ಖೋಟಾ ನೋಟು ಚಲಾವಣೆ ಮಾಡಲು ಹುಬ್ಬಳ್ಳಿಯ ಖಾಸಗಿ ಹೋಟೆಲ್ನಲ್ಲಿರುವ ಕುರಿತಂತೆ ಖಚಿತ ಮಾಹಿತಿ ಮೇಲೆ ಉಪನಗರ ಪೊಲೀಸರು ಲಾಡ್ಜ್ ಮೇಲೆ ದಾಳಿ ಮಾಡಿದ್ದು, ದಾಳಿಯ ಸಮಯದಲ್ಲಿ ಮೂವರು ಆರೋಪಿಗಳು ಸಿಕ್ಕಿ ಬಿದ್ದು ಒಬ್ಬ ಆರೋಪಿ ಪರಾರಿ ಆಗಿದ್ದಾನೆ. ಇನ್ನು ಬಂದಿತರಿಂದ 200 ರೂ ಮುಖ ಬೆಲೆಯ 129 ಖೋಟಾ …
Read More »ತೋಟದ ರಸ್ತೆಯಲ್ಲಿ ಯಮಸ್ವರೂಪಿ ತಗ್ಗಗುಂಡಿಗಳು
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಶಿಂಧೆ ತೋಟದ ರಸ್ತೆಗಳು ಹದಗೆಟ್ಟು ಹೋಗಿವೆ.ರಸ್ತೆಗಳು ಹದಗೆಟ್ಟ ಪರಿಣಾಮ ಗ್ರಾಮದ ಶಿಂಧೆ ತೋಟದ ಸುಮಾರು 30 ಮನೆಗಳು ಸಂಪರ್ಕ ಕಡಿತವಾಗಿವೆ. ಮಳೆಗಾಲ ಪ್ರಾರಂಭವಾದರೆ ಸಾಕು ಶಿಂಧೆ ತೋಟದ ಜನರ ಪರಿಸ್ಥಿತಿ ಹೇಳತೀರದಾಗಿದೆ. 2 ಅಡಿಯಷ್ಟು ದೊಡ್ದ ದೊಡ್ಡ ಗುಂಡಿಗಳು,ಆ ಗುಂಡಿಗಳಲ್ಲಿ ನೀರು ಸಂಗ್ರಹ. ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗುವ ಪರಿಸ್ಥಿತಿ ಇಲ್ಲಿ ನಿರ್ಮಾಣವಾಗಿದೆ. ಇದರಿಂದಾಗಿ ದಿನಪ್ರತಿ ವಿದ್ಯಾರ್ಥಿಗಳು ಶಾಲೆಗೆ ಹೋಗುವಾಗ ಜಾರಿ …
Read More »ಭಾರಿ ಮಳೆಗೆ ಉಕ್ಕಿ ಹರಿಯುತ್ತಿವೆ ಹಳ್ಳಗಳು
ವಿಜಯಪುರ ಜಿಲ್ಲೆಯಲ್ಲಿ ತಡರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಹಳ್ಳಗಳು ಉಕ್ಕಿ ಹರಿಯುತ್ತಿವೆ. ಉಕ್ಕಿ ಬಂದ ಹಳ್ಳದಿಂದ ಚವನಭಾವಿ ನಾಲತವಾಡ ರಸ್ತೆ ಸಂಪರ್ಕ ಬಂದ್ ಆಗಿದೆ. 108 ವಾಹನ ಅಂಬುಲೆನ್ಸ್ ವಾಹನ ಸಂಚಾರಕ್ಕೂ ಹಳ್ಳ ಅಡ್ಡಿಯಾಗಿದೆ. ಕೆಳ ಹಂತದ ಸೇತುವೆ ಮೇಲೆ ಹಳ್ಳದ ನೀರು ಹರಿಯುತ್ತಿರು ವದರಿಂದ 108 ಸಿಬ್ಬಂದಿ ಪರದಾಡಬೇಕಾದ ಪರಿಸ್ಥಿತಿ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕಿನ ಚವನಭಾವಿ ಗ್ರಾಮದಲ್ಲಿ ಘಟನೆ ನಡೆದಿದೆ. ಭಾರೀ ಮಳೆಯಿಂದ ಹಳ್ಳದ ನೀರು ತುಂಬಿ …
Read More »ವಿರೋಧ ಮಧ್ಯೆಯೂ ಬೆಳಗಾವಿಯಲ್ಲಿ ಗಣೇಶ ಮಂದಿರ ಮುಂಭಾಗದ ಶೆಡ್ ತೆರವು
ಬೆಳಗಾವಿ ಮಹಾನಗರ ಪಾಲಿಕೆ ವತಿಯಿಂದ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿದಿದ್ದು. ಒತ್ತುವಾರಿಯಾಗಿದ್ದ ಗಣೇಶ ಮಂದಿರ ಮುಂಭಾಗದ ತಗಡಿನ ಶೆಡ್ ತೆರವಿಗೆ ದಕ್ಷಿಣ ಶಾಸಕ ಅಭಯ್ ಪಾಟೀಲ್‍ರ ಮನವಲಿಕೆ ಹಿನ್ನೆಲೆ ದೇವಸ್ಥಾನ ಮಂಡಳಿಯವರು ಒಪ್ಪಿಗೆ ಸೂಚಿಸಿದರು. : ಹೌದು ಬೆಳಗಾವಿಯ ಬಸವೇಶ್ವರ ವೃತ್ತದ ಬಳಿಯ ಗಣೇಶ ದೇವಸ್ಥಾನ ಎದುರು ಹಾಕಲಾಗಿದ್ದ ತಗಡಿನ ಶೆಡ್‍ನ್ನು ಮಹಾನಗರ ಪಾಲಿಕೆ ಅಧಿಕಾರಿಗಳು ಬುಧವಾರ ರಾತ್ರಿ ತೆರವು ಮಾಡಿದ್ದಾರೆ. ದೇವಸ್ಥಾನ ಆಡಳಿತ ಮಂಡಳಿಯವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. …
Read More »ಮುಚ್ಚಂಡಿ ಗ್ರಾಮದ ಹೊರ ವಲಯದಲ್ಲಿ ಹೈಸ್ಕೂಲ್ ವಿದ್ಯಾರ್ಥಿಯ ಬರ್ಬರ ಹತ್ಯೆ
ಹೈಸ್ಕೂಲ್ ವಿದ್ಯಾರ್ಥಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಮುಚ್ಚಂಡಿ ಗ್ರಾಮದ ಹೊರ ವಲಯದಲ್ಲಿ ನಡೆದಿದೆ. ನಿನ್ನೆ ರಾತ್ರಿ ವಿದ್ಯಾರ್ಥಿಯನ್ನು ಕೊಲೆ ಮಾಡಿ ಮುಚ್ಚಂಡಿ ಗ್ರಾಮದ ಹೊರಭಾಗದಲ್ಲಿ ಹಂತಕರು ಎಸೆದು ಹೋಗಿದ್ದಾರೆ. ಬೆಳಗಾವಿಯ ಛತ್ರಪತಿ ಶಿವಾಜಿ ನಗರದ ಪ್ರಜ್ವಲ್ ಶಿವಾನಂದ ಕರಿಗಾರ ಕೊಲೆಯಾದ ವಿದ್ಯಾರ್ಥಿ. ನಗರದ ಜಿ.ಎ.ಹೈಸ್ಕೂಲ್ ನಲ್ಲಿ ಓದುತ್ತಿದ್ದ ವಿದ್ಯಾರ್ಥಿ. ವಿದ್ಯಾರ್ಥಿಯ ಶಾಲಾ ಸಮವಸ್ತ್ರದಿಂದ ಗುರುತು ಪತ್ತೆಯಾಗಿದೆ. ಬೆಳಗಾವಿಯ ಜಿಎ ಹೈಸ್ಕೂಲಿನಲ್ಲಿ10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ ಎಂದು …
Read More »ದೀಪಾವಳಿ ಹಬ್ಬದ ಪ್ರಯುಕ್ತ ಬೆಂಗಳೂರು- ಬೆಳಗಾವಿ ವಿಶೇಷ ರೈಲು……
ಮೂಡಲಗಿ:- ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿAದ ಬೆಳಗಾವಿಗೆ ದಿ.21 ಮತ್ತು ದಿ.22ರಂದು ಬೆಳಗಾವಿಗೆ ಹಾಗೂ ದಿ.26ರಂದು ಬೆಳಗಾವಿಯಿಂದ ಯಶವಂತಪುರಕ್ಕೆ ವಿಶೇಷ ರೈಲುಗಳನ್ನು ಬಿಡಲಾಗಿದ್ದು ಪ್ರಯಾಣಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳ ಬಹುವುದೆಂದು ರಾಜ್ಯಸಭಾ ಸದಸ್ಯ ಹಾಗೂ ನೈರುತ್ಯ ರೈಲ್ವೆ ಸಲಹಾ ಸಮಿತಿ ಸದಸ್ಯರಾಗಿರುವ ಈರಣ್ಣ ಕಡಾಡಿ ತಿಳಿಸಿದ್ದಾರೆ. ಈ ಬಗ್ಗೆ ಸಂಸದರು ಇಂದು ದೂರವಾಣಿ ಮುಖಾಂತರ ಪತ್ರಿಕೆಗೆ ಹೇಳಿಕೆ ನೀಡಿದ್ದು ಸಾವಿರಾರು ಸಂಖ್ಯೆಯಲ್ಲಿ ದೀಪಾವಳಿ ಹಬ್ಬಕ್ಕೆ ಪ್ರಯಾಣಿಕರು ತಮ್ಮ …
Read More »