Breaking News

2022 ಆದರೂ ಅಚ್ಚೇ ದಿನ್ ಬಂದಿಲ್ಲ: ಸಿದ್ದರಾಮಯ್ಯ ತೀವ್ರ ವಾಗ್ದಾಳಿ

ಬಳ್ಳಾರಿ: ಪ್ರಧಾನಿ ಮೋದಿ 2014ರಲ್ಲಿ ಅಚ್ಚೇ ದಿನ್ ಬರುತ್ತದೆ ಅಂದರು, 2022 ಆದ್ರೂ ಅಚ್ಚೇ ದಿನ್ ಬಂದಿಲ್ಲ. ಪ್ರಧಾನಿ ಬರೀ ಸುಳ್ಳು ಹೇಳುತ್ತಾರೆ ಎಂದು ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.   ‘ಭಾರತ ಜೋಡೋ’ ಯಾತ್ರೆಯ ಅಂಗವಾಗಿ ಬಳ್ಳಾರಿಯಲ್ಲಿ ಅ. 15ರಂದು ಬೃಹತ್ ಸಮಾವೇಶ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮಂಗಳವಾರ ಮುನ್ಸಿಪಲ್ ಮೈದಾನಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ‘ಬಳ್ಳಾರಿ ಜಿಲ್ಲೆ ಕಾಂಗ್ರೆಸ್ …

Read More »

ಬೇರೆಯವರ ಹೆಂಡತಿ ಬಗ್ಗೆ ಮಾತನಾಡುವಾಗ ಎಲ್ಲರೂ ಹುಷಾರಾಗಿಬೇಕು

ಬೇರೆಯವರ ಹೆಂಡತಿ ಬಗ್ಗೆ ಮಾತನಾಡುವಾಗ ಎಲ್ಲರೂ ಹುಷಾರಾಗಿಬೇಕು ಎನ್ನುವುದಕ್ಕೆ ನಿದರ್ಶನವಾಗಿ ಚಿಕ್ಕೋಡಿಯಲ್ಲೊಂದು ಘಟನೆ ನಡೆದಿದೆ. ಆತ್ಮೀಯ ಸ್ನೇಹಿತರ ನಡುವೆ ಹೆಂಡತಿ ವಿಚಾರ ಬಂದು ಅದು ಕೊಲೆಯಲ್ಲಿ ಅಂತ್ಯಗೊಂಡಿದೆ. ಆಗಿದ್ದೇನೆಂದರೆ, ಹೆಂಡತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಗೆಳೆಯನನ್ನು ವ್ಯಕ್ತಿಯೊಬ್ಬ ಹೆಂಡ ಕುಡಿಸಿ ಕೊಲೆ ಮಾಡಿದ್ದಾನೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿಯ ಸುನೀಲ್ ಸಾಳುಂಕೆ(೩೪) ಕೊಲೆಯಾದವನು. ಮಹಾಂತೇಶ ಮತ್ತು ರಾಜು ಎಂಬವರನ್ನು ಈ ಕೊಲೆಗೆ ಸಂಬಂಧಿಸಿ ಬಂಧಿಸಲಾಗಿದೆ. ಅಕ್ಟೋಬರ್‌ ೭ರಂದು ಈ ಕೊಲೆ …

Read More »

ತಾಯಿ ಮತ್ತು ಮೂರು ಮಕ್ಕಳು ಸಾವು

ಬೆಳಗಾವಿ ಮೂಲದ ಮೂರು ಹೆಣ್ಣು ಮಕ್ಕಳು ಹಾಗೂ ತಾಯಿಯ ಶವ ಮಹಾರಾಷ್ಟ್ರದ ಜತ್ತ ತಾಲೂಕಿನ ಬಿಳ್ಳೂರು ಗ್ರಾಮದ ಕೆರೆಯಲ್ಲಿ ಪತ್ತೆಯಾಗಿದೆ.   ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದ ನಿವಾಸಿ ಆಗಿರುವ ಸುನಿತಾ ತುಕಾರಾಮ್ ಮಾಳಿ ಮತ್ತು ಪುತ್ರಿಯರಾದ ಅಮೃತಾ, ಅಂಕಿತಾ ಹಾಗೂ ಐಶ್ವರ್ಯಾ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದೆ. ಕಳೆದ ಭಾನುವಾರ ಮುಂಜಾನೆ ಮನೆ ಬಿಟ್ಟು ಹೋಗಿದ್ದ ಮಹಿಳೆ ಮತ್ತು ಮೂವರು ಪುಟ್ಟ ಹೆಣ್ಮಕ್ಕಳು ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. …

Read More »

ಬಲಗೈ ಸಮುದಾಯಕ್ಕೆ ಪ್ರಾತಿನಿಧ್ಯ ಕೊಡಲು ನಾರಾಯಣಸ್ವಾಮಿ ಒತ್ತಾಯ

ಹುಬ್ಬಳ್ಳಿ: ‘ಬಲಗೈ ಸಮುದಾಯದವರಿಗೆ ಪಕ್ಷದಲ್ಲಿ ಕಡಿಮೆ ಅವಕಾಶ ನೀಡಲಾಗಿದೆ. ‌ಪಕ್ಷಕ್ಕೆ ಈ ಸಮುದಾಯದ ಬಗ್ಗೆ ತಪ್ಪು ಕಲ್ಪನೆ ಮೂಡಿಸಲಾಗಿದ್ದು, ಜನಸಂಖ್ಯೆಗೆ ಅನುಗುಣವಾಗಿ ಸೂಕ್ತ ಪ್ರಾತಿನಿಧ್ಯ ಸಿಗಬೇಕು’ ಎಂದು ಛಲವಾದಿ ನಾರಾಯಣಸ್ವಾಮಿ ಒತ್ತಾಯಿಸಿದರು.   ನಗರದಲ್ಲಿ ಭಾನುವಾರ ನಡೆದ ದಮನಿತರ ಚಿಂತನ ಸಭೆಯಲ್ಲಿ ಮಾತನಾಡಿ, ‘ಪಕ್ಷದಲ್ಲಷ್ಟೇ ಅಲ್ಲದೆ, ಸರ್ಕಾರ ಮತ್ತು ಅಧಿಕಾರಶಾಹಿ ವರ್ಗದಲ್ಲೂ ಆಯಕಟ್ಟಿನ ಹುದ್ದೆಗಳನ್ನು ನೀಡಬೇಕು’ ಎಂದರು. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ‌ಸಂತೋಷ್ ಮಾತನಾಡಿ, ‘ಹಿಂದೂ ಧರ್ಮದಲ್ಲಿರುವ …

Read More »

ಕೆಜಿಐಡಿ: ಆನ್‌ಲೈನ್‌ನಲ್ಲೇ ಎಲ್ಲ ಸೇವೆ

ಬೆಂಗಳೂರು : ಕರ್ನಾಟಕ ಸರ್ಕಾರಿ ವಿಮಾ ಇಲಾಖೆ (ಕೆಜಿಐಡಿ) ಸೇವೆಗಳು 22 ಜಿಲ್ಲೆಗಳ ವ್ಯಾಪ್ತಿಯಲ್ಲಿ ಸಂಪೂರ್ಣ ಕಂಪ್ಯೂಟರೀಕರಣಗೊಂಡಿದೆ.   ಕೆಜಿಐಡಿ ಸೇವೆಗಳನ್ನು ಕಂಪ್ಯೂಟರೀಕರಣ ಮಾಡುವ ಯೋಜನೆಯನ್ನು ಬೆಂಗಳೂರು ನಗರ, ಬೆಳಗಾವಿ, ಚಿಕ್ಕಮಗಳೂರು, ಧಾರವಾಡ, ಮಂಡ್ಯ, ಮೈಸೂರು, ಕೊಡಗು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನಕ್ಕೆ ತರಲಾಗಿತ್ತು. ಸೋಮವಾರದಿಂದ 22 ಜಿಲ್ಲೆಗಳಲ್ಲಿ ಜಾರಿಗೊಳಿಸಿದ್ದು, ನಂತರ ಎಲ್ಲ ಜಿಲ್ಲೆಗಳಲ್ಲೂ ಅನುಷ್ಠಾನಕ್ಕೆ ತರಲಾಗುವುದು ಎಂದು ಕೆಜಿಐಡಿ ನಿರ್ದೇಶಕರು ತಿಳಿಸಿದ್ದಾರೆ. ‘ಇನ್ನು ಮುಂದೆ ಕೆಜಿಐಡಿ ಪಾಲಿಸಿಗಳ ಮೇಲೆ …

Read More »

ನಾಗರಾಳ: ಮಂಗಳಮುಖಿಯರ ಸ್ವ-ಉದ್ಯೋಗಕ್ಕೆ ಆರ್ಥಿಕ ನೆರವು

ಗುಳೇದಗುಡ್ಡ: ತಾಲ್ಲೂಕಿನ ನಾಗರಾಳ ಎಸ್.ಪಿ ಗ್ರಾಮದಲ್ಲಿ ತೃತೀಯ ಲಿಂಗಿಗಳನ್ನು ಸ್ವಸಹಾಯ ಸಂಘದ ಸದಸ್ಯರನ್ನಾಗಿಸಿ, ಸ್ವಯಂ ಉದ್ಯೋಗಕ್ಕಾಗಿ ಸಾಲ ನೀಡಿರುವ ಜಿಲ್ಲಾ ಪಂಚಾಯಿತಿ, ಅವರು ಸ್ವಾವಲಂಬಿಗಳಾಗಲು ಅವಕಾಶ ಮಾಡಿಕೊಟ್ಟಿದೆ. ಸಂಘದಲ್ಲಿ ಇಂತಹ 20 ಸದಸ್ಯರಿದ್ದು, ಮೇಕೆ ಸಾಕಾಣಿಕೆ ಮಾಡುತ್ತಿದ್ದಾರೆ. ಅವರು ಸಾಲವನ್ನೂ ಸಮಯಕ್ಕೆ ಸರಿಯಾಗಿ ಮರುಪಾವತಿ ಮಾಡುತ್ತಿದ್ದಾರೆ. ಬಾಗಲಕೋಟೆ ಜಿ.ಪಂ ಸಿಇಒ ಟಿ. ಬೂಬಾಲನ್, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ನಿರ್ವಹಣೆ ಮಿಷನ್‌ (ಎನ್‌ಆರ್‌ಎಲ್‌ಎಂ) ತಾಲ್ಲೂಕು ಪ್ರೋಗ್ರಾಮರ್ ಗುರುಲಿಂಗಯ್ಯ ಗೌಡರ ಅವರು ಜಿಲ್ಲಾ ಪಂಚಾಯಿತಿಯಲ್ಲಿ …

Read More »

ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ವೃದ್ಧ ಸಾವು

ಗದಗ: ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಮುಳಗುಂದ ಪಟ್ಟಣದಲ್ಲಿ ನಡೆದಿದೆ. ತಿಮ್ಮಣ್ಣ (50) ಮೃತರು. ಸತತವಾಗಿ ಸುರಿದಿದ್ದ ಮಳೆಗೆ ಮನೆ ಗೋಡೆ ಸಂಪೂರ್ಣವಾಗಿ ಶಿಥಿಲಗೊಂಡಿತ್ತು. ಮನೆಯಲ್ಲಿ ಮಲಗಿದ್ದಾಗ ಏಕಾಏಕಿ ಗೋಡೆ ಕುಸಿದು ಮೈಮೇಲೆ ಬಿದ್ದಿದೆ. ಕೂಡಲೇ ಅಕ್ಕಪಕ್ಕದ ಮನೆಯವರು ಸೇರಿ ಮಣ್ಣಿನ ಅಡಿ ಸಿಲುಕಿದ್ದ ತಿಮ್ಮಣ್ಣ ಅವರ ರಕ್ಷಣೆಗೆ ಧಾವಿಸಿದ್ದಾರೆ. ಆದರೆ ಮಣ್ಣಿನ ಅಡಿಯಲ್ಲಿ ಸಿಲುಕಿದ್ದ ತಿಮ್ಮಣ್ಣ ಅಲಿಯಾಸ್​ ಅಪ್ಪಣ್ಣ ಕಳ್ಳಿಮನಿ …

Read More »

ಇದು ಬರೀ ಜೈಲಲ್ಲೋ ಅಣ್ಣ .. ಕೃಷಿ ಜೊತೆ ಮನಪರಿವರ್ತನಾ ಕೇಂದ್ರ

ಹಾವೇರಿ: ಕಾರಾಗೃಹಗಳು ಕೈದಿಗಳನ್ನು ತಿದ್ದುವ ಮನಪರಿವರ್ತನಾ ಕೇಂದ್ರಗಳಾಗಬೇಕು. ಅಂದಾಗ ಮಾತ್ರ ಸಮಾಜದಲ್ಲಿ ಅಪರಾಧ ಮಾಡುವ ಮನಸ್ಸುಗಳು ಕಡಿಮೆಯಾಗುತ್ತವೆ. ಅಲ್ಲದೆ ಅಪರಾಧಗಳ ಸಂಖ್ಯೆ ಕಡಿಮೆಯಾಗುತ್ತವೆ ಎನ್ನುವ ಮಾತಿದೆ. ಈ ಮಾತಿಗೆ ತಕ್ಕಂತೆ ಇದೆ ಹಾವೇರಿ ಜಿಲ್ಲಾ ಕಾರಾಗೃಹ. ಜಿಲ್ಲಾ ಕೇಂದ್ರದ ಸಮೀಪ ಇರುವ ಕೆರಿಮತ್ತಿಹಳ್ಳಿ ಗ್ರಾಮದ ಬಳಿಯ ಜಿಲ್ಲಾ ಕಾರಾಗೃಹ ಕಳೆದ ಕೆಲವು ವರ್ಷಗಳಿಂದ ತನ್ನದೇ ಆದ ವಿಶೇಷ ಚಟುವಟಿಕೆಗಳ ಮೂಲಕ ಗಮನ ಸೆಳೆಯುತ್ತಿದೆ. ಕಾರಾಗೃಹದಲ್ಲಿ ಶುದ್ಧ ಕುಡಿಯವ ನೀರಿನ ಘಟಕ, ಸ್ವತಂತ್ರ …

Read More »

ಕರ್ನಾಟಕ ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದೆ. ಕಳೆದ ರಾತ್ರಿ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತ

ಬೆಂಗಳೂರು/ಹುಬ್ಬಳ್ಳಿ: ರಾಜ್ಯದಲ್ಲಿ ಅಕಾಲಿಕ ಮಳೆ ಮುಂದುವರೆದಿದೆ. ಸೋಮವಾರ ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ಸಂಜೆಯಾಗುತ್ತಿದ್ದಂತೆ ವ್ಯಾಪಕ ಮಳೆಯಾಗ್ತಿದೆ. ಇದರಿಂದಾಗಿ ಉಭಯ ನಗರಗಳಲ್ಲಿ ವಾಹನ ಸವಾರರು ಪರದಾಡುವಂತಾಯಿತು. ಧಾರಾಕಾರ ಮಳೆಗೆ ವಾಹನ ಸವಾರರ ಪರದಾಟ: ಸಂಜೆ ಸಿಲಿಕಾನ್ ಸಿಟಿಯಲ್ಲಿ ವರುಣದ ಆರ್ಭಟಕ್ಕೆ ವಾಹನ ಸವಾರರು ತತ್ತರಿಸಿ ಹೋದರು. ಮೆಜೆಸ್ಟಿಕ್, ಮಲ್ಲೇಶ್ವರಂ, ಜಯನಗರ, ಶಿವಾಜಿನಗರ, ಯಶವಂತಪುರ, ಜಯನಗರ, ಜೆ ಪಿ ನಗರ ಸೇರಿದಂತೆ ಹೊಸೂರು, ಸರ್ಜಾಪುರ ಭಾಗದಲ್ಲಿ ವ್ಯಾಪಕ ಮಳೆಯಾಗಿದೆ. ಅರ್ಧಗಂಟೆಗೂ ಹೆಚ್ಚುಕಾಲ ಧಾರಾಕಾರ ಮಳೆಯಾಗಿದ್ದರಿಂದ …

Read More »

ಬೆಂಗಳೂರು: ಉದ್ಘಾಟನೆಗೊಂಡ ತಿಂಗಳೊಳಗೆ ಕುಸಿದ 25 ಕೋಟಿ ಕಾಮಗಾರಿ ರಸ್ತೆ!

ಬೆಂಗಳೂರು: ಭಾನುವಾರ ಮಹದೇವಪುರ ಕ್ಷೇತ್ರದ ಮಾರತ್ತಹಳ್ಳಿ ಸಮೀಪದ ಕುಂದಲಹಳ್ಳಿ ಜಂಕ್ಷನ್ ಸಮೀಪ ಕಳಪೆ ಕಾಮಗಾರಿ ಪರಿಣಾಮದಿಂದಾಗಿ ರಸ್ತೆ ಕುಸಿದಿದೆ. ಪರಿಣಾಮ ಬಿಜೆಪಿ 40% ಕಮಿಷನ್​ಗೆ ಇದು ಸೂಕ್ತ ಉದಾಹರಣೆಯಾಗಿದೆ ಎಂದು ಜನ ಆರೋಪ ಮಾಡುತ್ತಿದ್ದಾರೆ. ತಿಂಗಳ ಹಿಂದೆಯಷ್ಟೇ ಈ ಅಂಡರ್ ಪಾಸ್ ಅನ್ನು ಉದ್ಘಾಟಿಸಿಲಾಗಿತ್ತು. 2019 ರಲ್ಲಿ 25 ಕೋಟಿ ವೆಚ್ಚದಲ್ಲಿ ಈ ಕಾಮಗಾರಿಯನ್ನು ಆರಂಭಿಸಲಾಗಿತ್ತು. ಕಾಮಗಾರಿ ಪೂರ್ಣಗೊಂಡ ಬಳಿಕ ಇತ್ತೀಚೆಗಷ್ಟೇ ವಾಹನ ಸಂಚಾರಕ್ಕೆ ಅನುಕೂಲ ಮಾಡಲಾಗಿತ್ತು. ಆದ್ರೆ ಭಾನುವಾರ ಅಂಡರ್ …

Read More »