Breaking News

ಉಸ್ತುವಾರಿ ಸಚಿವ ಲಾಡ್ ಅವರಿಂದ ಅಬಕಾರಿ ಅಧಿಕಾರಿಗೆ ಖಡಕ್ ಎಚ್ಚರಿಕೆ

ಧಾರವಾಡ ಜಿಲ್ಲೆಯಲ್ಲಿ ಅಕ್ರಮ ಸಾರಾಯಿ ಧಂಧೆ ಎಗ್ಗಿಲ್ಲದೆ ಸಾಗುತ್ತಿದ್ದು. ಈಗ ಮುಂದುವರಿದು ಹಳ್ಳಿಗಳಿಗೂ ತನ್ನ ವ್ಯಾಪ್ತಿಯನ್ನು ಹೆಚ್ಚಿಸಿಕೊಂಡಿದೆ ಈ ಕುರಿತು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಇಂದು ಅಬಕಾರಿ ಅಧಿಕಾರಿಗೆ ಕ್ಲಾಸ್ ತೆಗೆದುಕೊಂಡರು.   ಅಕ್ರಮ ಸಾರಾಯಿ ಮಾರಾಟ ಮಾಡುವುದು ಧಾರವಾಡದಲ್ಲಿ ಅತಿಯಾಗಿ ನಡೆಯುತ್ತಿದೆ. ನೀವು ಇನ್ನೂ 2 ದಿನಗಳಲ್ಲಿ ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ನಾನು ನಿಮ್ಮ ಮೇಲೆ ಕಠಿಣ …

Read More »

ಕೇಂದ್ರ ಸರ್ಕಾರ ಎಷ್ಟೇ ತೊಂದರೆ ಕೊಟ್ಟರೂ ನಮ್ಮ ಯೋಜನೆ ಅನುಷ್ಠಾನ ಖಚಿತ :ಎಂ ಬಿ ಪಾಟೀಲ್

ಹುಬ್ಬಳ್ಳಿ : ನಮ್ಮ ಸರ್ಕಾರ ಕೊಟ್ಟ ಮಾತಿಗೆ ತಪ್ಪಲ್ಲ. ಕೊಟ್ಟ ಮಾತನ್ನು ನಾವು ಉಳಿಸಿಕೊಳ್ಳುತ್ತೇವೆ. ಎಲ್ಲಾ ಗ್ಯಾರಂಟಿ ಸ್ಕೀಮ್‌ಗಳನ್ನು ಅನುಷ್ಠಾನ ಮಾಡುತ್ತೇವೆ. ಕೇಂದ್ರದವರು ಎಷ್ಟೇ ತೊಂದರೆ ಕೊಟ್ಟರೂ ನಾವು ಅಕ್ಕಿ ಕೊಟ್ಟೇ ಕೊಡುತ್ತೇವೆ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಅಕ್ಕಿ ವಿಚಾರದಲ್ಲಿ ರಾಜಕಾರಣ ಮಾಡುತ್ತಿದೆ. ಬಡ ಜನರ ಅನ್ನದಲ್ಲೂ ರಾಜಕಾರಣ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ಹಿನ್ನಡೆಯಾಗಿದ್ದರಿಂದ ಕಾಂಗ್ರೆಸ್​ ಮೇಲಿರುವ ಸೇಡನ್ನು …

Read More »

ಬಿಜೆಪಿಯಲ್ಲಿ ಅಶಿಸ್ತಿಗೆ ವಲಸಿಗರೇ ಕಾರಣ; ಕಾಂಗ್ರೆಸ್ ಗಾಳಿ ನಮ್ಮ ಮೇಲೂ ಬಂದಿದೆ : ಕೆ.ಎಸ್​.ಈಶ್ವರಪ್ಪ

ಹುಬ್ಬಳ್ಳಿ : ಬಹಿರಂಗವಾಗಿ ಅಡ್ಜಸ್ಟ್‌ಮೆಂಟ್ ರಾಜಕಾರಣದ ಬಗ್ಗೆ ಚರ್ಚೆ ಆಗುತ್ತಿರುವುದು ದುರ್ದೈವ. ಬಹಿರಂಗವಾಗಿ ಹೀಗೆ ಮಾತಾಡಬಾರದು. ನಾಲ್ಕು ಗೋಡೆಗಳ ಮಧ್ಯೆ ಮಾತಾಡಬೇಕು. ಬಿಜೆಪಿಯಲ್ಲಿ ಅಶಿಸ್ತು ಬರಲು ಮೂಲ ಕಾರಣ ವಲಸಿಗರೇ. ಕಾಂಗ್ರೆಸ್ ಗಾಳಿ ನಮ್ಮ ಮೇಲೂ ಬಂದಿದೆ. ಕಾಂಗ್ರೆಸ್ ನಾಯಕರನ್ನು ಕರೆದುಕೊಂಡು ಬಂದಿದ್ದಕ್ಕೆ ನಾವು ಇದನ್ನೆಲ್ಲ ಅನುಭವಿಸುತ್ತಿದ್ದೇವೆ ಎಂದು ಪರೋಕ್ಷವಾಗಿ ಆಪರೇಷನ್ ಕಮಲದ ವಿರುದ್ದ ಬಿಜೆಪಿ ಹಿರಿಯ ಮುಖಂಡ ಕೆ.ಎಸ್​ ಈಶ್ವರಪ್ಪ ಅಸಮಾಧಾನ ಹೊರ ಹಾಕಿದ್ದಾರೆ. ನಗರದಲ್ಲಿಂದು ಜಂಟಿ ಪತ್ರಿಕಾಗೋಷ್ಠಿ ಏರ್ಪಡಿಸಿ …

Read More »

ಗ್ರಾಮೀಣ ಶಾಲೆಗಳ ಮಕ್ಕಳ ಕೈ, ಪಾದಗಳಲ್ಲಿ ಕಪ್ಪು ಚುಕ್ಕೆಗಳು, ಪೋಷಕರಲ್ಲಿ ಆತಂಕ

ತುಮಕೂರು: ಜಿಲ್ಲೆಯ ಗ್ರಾಮೀಣ ಪ್ರದೇಶಗಳ ಶಾಲಾ ಮಕ್ಕಳ ಕೈ ಹಾಗೂ ಪಾದಗಳಲ್ಲಿ ಇದ್ದಕ್ಕಿದ್ದಂತೆ ಕಪ್ಪು ಚುಕ್ಕೆಗಳು ಕಾಣಿಸಿಕೊಂಡಿವೆ. ಮಕ್ಕಳಿಗೆ ಅನಾರೋಗ್ಯ ಕಾಡುತ್ತಿದ್ದು ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ. ತುರುವೇಕೆರೆ ಹಾಗೂ ಕೊರಟಗೆರೆ ತಾಲೂಕುಗಳ ಗ್ರಾಮಗಳ ಶಾಲಾ ಮಕ್ಕಳ ಕೈ ಮತ್ತು ಪಾದಗಳಲ್ಲಿ ಚರ್ಮದ ಸೋಂಕು ಕಂಡುಬಂದಿದೆ. ತುರುವೇಕೆರೆ ತಾಲ್ಲೂಕಿನ ಕುಣಿಕೇನಹಳ್ಳಿಯ ಗ್ರಾಮದ 21 ಮಕ್ಕಳ ಪಾದಗಳಲ್ಲಿ ಕಪ್ಪು ಚುಕ್ಕೆಗಳು ಕಂಡುಬಂದಿವೆ. ಕೊರಟಗೆರೆ ತಾಲ್ಲೂಕಿನ ಯಲಚೇನಹಳ್ಳಿ ಗ್ರಾಮದ 5 ಮಕ್ಕಳ ಕೈ ಹಾಗೂ ಪಾದಗಳಲ್ಲಿ …

Read More »

ಮಾಜಿ ಸಿಎಂ ಯಡಿಯೂರಪ್ಪ ಪ್ರತಿಭಟನೆ ಹೇಳಿಕೆ ಒಂದು ರಾಜಕೀಯ ಗಿಮಿಕ್ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರ ಧರಣಿ ಸತ್ಯಾಗ್ರಹ ಒಂದು ರಾಜಕೀಯ ಗಿಮಿಕ್ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ನೆಲಮಂಗಲದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಎಸ್​ವೈ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸುತ್ತ, ಯಡಿಯೂರಪ್ಪರಿಗೆ ಪ್ರತಿಭಟನೆ ಮಾಡುವ ಯಾವುದೇ ನೈತಿಕ ಹಕ್ಕು ಇಲ್ಲ. ಯಡಿಯೂರಪ್ಪ ಸರ್ಕಾರದಲ್ಲಿದ್ದಾಗ ಅವರು ತಮ್ಮ ಪ್ರಣಾಳಿಕೆಯ ಭರವಸೆಗಳನ್ನು ಈಡೇರಿಸಿದ್ದರಾ? ಎಂದು ಪ್ರಶ್ನಿಸಿದರು.   ನಾವು ನೀಡಿದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು …

Read More »

ಒಂದು ವರ್ಷದಲ್ಲಿ ಬೆಂಗಳೂರು ಪೊಲೀಸರು ವಶಪಡಿಸಿಕೊಂಡ ಮಾದಕ ವಸ್ತುಗಳ ವಿವರ

ಬೆಂಗಳೂರುಸಂದರ್ಭದಲ್ಲಿ ಬೆಂಗಳೂರು ನಗರ ಪೊಲೀಸರು ಮಾದಕ ಸರಬರಾಜುಗಾರರು ಮತ್ತು ಮಾದಕ ವ್ಯಸನಿಗಳ ವಿರುದ್ಧ ಕೈಗೊಳ್ಳಲಾಗಿದ್ದ ವಿಶೇಷ ಕಾರ್ಯಾಚರಣೆಯಲ್ಲಿ ವಶಪಡಿಸಿಕೊಂಡ ಮತ್ತು ನಾಶಪಡಿಸಲಿರುವ ಮಾದಕ ವಸ್ತುಗಳ ವಿವರ ಇಂತಿದೆ..   2022-23ನೇ ಸಾಲಿನಲ್ಲಿ ದಾಖಲಾದ ಪ್ರಕರಣಗಳು: ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ 2022 ಮತ್ತು 2023ನೇ ಸಾಲಿನಲ್ಲಿ (ಜೂನ್ 22ರವರೆಗೆ) ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆ ಮಾಡುವವರ ವಿರುದ್ಧ ಒಟ್ಟು 6,191 ಪ್ರಕರಣಗಳನ್ನು ದಾಖಲಿಸಲಾಗಿದ್ದು, ಒಟ್ಟು 7,723 ಭಾರತೀಯರು ಹಾಗೂ 159 …

Read More »

ಚಿಕ್ಕೋಡಿ: ಮದ್ಯ ಅಂಗಡಿ ಸ್ಥಳಾಂತರಕ್ಕೆ ಒತ್ತಾಯಿಸಿ ಮಹಿಳೆಯರ ಪ್ರತಿಭಟನೆ

ಚಿಕ್ಕೋಡಿ (ಬೆಳಗಾವಿ): ಗ್ರಾಮದ ಪಕ್ಕದಲ್ಲಿ ಮದ್ಯದ ಅಂಗಡಿ ಇರುವುದರಿಂದ ಗ್ರಾಮದ ಮಹಿಳೆಯರಿಗೆ ಮತ್ತು ಶಾಲಾ ಹೆಣ್ಣು ಮಕ್ಕಳಿಗೆ ಮದ್ಯ ಪ್ರಿಯರು ತೊಂದರೆ ಕೊಡುತ್ತಿದ್ದಾರೆ ಇಲ್ಲಿಂದ ಅಂಗಡಿಯನ್ನು ಸ್ಥಳಾಂತರ ಮಾಡುವಂತೆ ಆಗ್ರಹಿಸಿ ಗ್ರಾಮದ ಮಹಿಳೆಯರು ಬೀಗ ಜಡಿದು ಪ್ರತಿಭಟನೆ ನಡೆಸಿದರು.   ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಂದಿಕುರಳಿ ಗ್ರಾಮದಲ್ಲಿ ಶ್ರೀ ಲಕ್ಷ್ಮೀ ವೈನ್ಸ್‌ ಸ್ಥಳಾಂತರ ಮಾಡುವಂತೆ ಗ್ರಾಮದ ಮಹಿಳೆಯರು ಪಟ್ಟು ಹಿಡಿದು ಮದ್ಯ ಮಾರಾಟ ಅಂಗಡಿ ಮಾಲೀಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. …

Read More »

ಜುಲೈ 7ಕ್ಕೆ 3.25 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡನೆಗೆ ಸಿದ್ಧತೆ.. ಪಂಚ ಗ್ಯಾರಂಟಿಗಾಗಿ ರಾಜಸ್ವ ಸಂಗ್ರಹದ ಟಾರ್ಗೆಟ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪಂಚ ಗ್ಯಾರಂಟಿ ಯೋಜನೆಗಳ ಕೇಂದ್ರೀಕೃತ ಬಜೆಟ್ ಮಂಡನೆಗೆ ಸಿದ್ಧತೆ ನಡೆಸುತ್ತಿದ್ದಾರೆ. ನಿರ್ಗಮಿತ ಬಿಜೆಪಿ ಸರ್ಕಾರ ಮಂಡಿಸಿದ ಬಜೆಟ್​ ಅನ್ನು ಅಲ್ಪ ಪರಿಷ್ಕೃರಣೆಯೊಂದಿಗೆ ಸಿಎಂ ಸಿದ್ದರಾಮಯ್ಯ ಅಂದಾಜು 3.25 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಲು ತಯಾರಿ ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ತಮ್ಮ 14ನೇ ಬಜೆಟ್ ಮಂಡನೆಗೆ ಸಕಲ ಸಿದ್ಧತೆ ನಡೆಸುತ್ತಿದ್ದಾರೆ. ಜುಲೈ 7ಕ್ಕೆ ನೂತನ ಕಾಂಗ್ರೆಸ್ ಸರ್ಕಾರದ ಬಜೆಟ್ ಮಂಡನೆಯಾಗಲಿದೆ. ಈಗಾಗಾಲೇ ನಿರ್ಗಮಿತ ಬಿಜೆಪಿ ಸರ್ಕಾರ …

Read More »

ಊರಿಗೆ ತೆರಳಲು ನಿಲ್ಲಿಸದ ಬಸ್​ಗೆ ಕಲ್ಲೆಸೆದ ಮಹಿಳೆ.. 5000 ದಂಡ,

ಕೊಪ್ಪಳ: ತನ್ನ ಊರಿಗೆ ತೆರಳಲು ಯಾವುದೊಂದು ಬಸ್​ ನಿಲ್ಲಿಸದ ಕಾರಣ, ಕೊಪ್ಪಳದಿಂದ – ಹೊಸಪೇಟೆಗೆ ಹೊರಟಿದ್ದ ನಾನ್ ಸ್ಟಾಪ್ ಬಸ್​ಗೆ ಮಹಿಳೆಯೊಬ್ಬರು ಕಲ್ಲೆಸೆದ ಘಟನೆ ಕೊಪ್ಪಳದಲ್ಲಿ ಜರುಗಿದೆ. ಕೊಪ್ಪಳದ ಹೊಸಲಿಂಗಾಪುರ ಬಳಿ ಈ ಘಟನೆ ನಡೆದಿದೆ. ಇಲಕಲ್ಲ ಬಳಿಯ ಪಾಪನಳ್ಳಿ ನಿವಾಸಿ ಲಕ್ಷ್ಮಿ ಎಂಬಾಕೆ ಕೊಪ್ಪಳದ ಹುಲಿಗಿಯ ಹುಲಿಗೆಮ್ಮ ದೇವಿ ದರ್ಶನಕ್ಕೆ ಬಂದಿದ್ದರು. ಹುಲಿಗೆಮ್ಮನ ದರ್ಶನ ಪಡೆದು ಲಿಂಗಾಪುರ ಬಳಿ ಬಸ್​ಗಾಗಿ ಮಳೆಯಲ್ಲಿ ಕಾದು ಕುಳಿತಿದ್ದ ಲಕ್ಷ್ಮಿಗೆ ತನ್ನ ಊರಿಗೆ ತೆರಳಲು …

Read More »

ಜುಲೈ 2 ರಂದು ಜಿಲ್ಲಾ ಮಟ್ಟದ ಪತ್ರಿಕಾ ದಿನಾಚಾರಣೆ: ದೀಲಿಪ ಕುರಂದವಾಡೆ

ಜುಲೈ 2 ರಂದು ಬೆಳಗಾವಿ ನಗರದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚಾರಣೆ ಆಚರಿಸಲಾಗುವದು ಎಂದು ಜಿಲ್ಲಾ ಅದ್ಯಕ್ಷ ದೀಲಿಪ ಕುರಂದವಾಡೆ ಹೇಳಿದರು.  ಬೆಳಗಾವಿ ನಗರದಲ್ಲಿ ಜರುಗಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಣಿ ಸಭೆಯ ಅದ್ಯಕ್ಷತೆ ವಹಿಸಿ ಮಾತನಾಡುತ್ತಾ ಬೆಳಗಾವಿ ನಗರದಲ್ಲಿ ಅಂತರಾಷ್ಟ್ರೀಯ ಮಟ್ಟದ ಪತ್ರಕರ್ತರ ಸಮ್ಮೇಳನ ಮತ್ತು ಜಿಲ್ಲಾ ಮಟ್ಟದ ಪತ್ರಿಕಾ ದಿನಾಚಾರಣೆ ಆಚರಿಸುವ ಕುರಿತು ರೂಪ ರೆಷೆಗಳಂತೆ ಜಿಲ್ಲಾ ಮಟ್ಟದ …

Read More »