ಹೊಸದಿಲ್ಲಿ: ಮುಂಬೈನ ಅಂಧೇರಿ ಪೂರ್ವದಲ್ಲಿ ನಡೆಯಲಿರುವ ಉಪ ಚುನಾವಣೆಗೆ ಶಿವಸೇನೆಯ ಉದ್ಧವ್ ಠಾಕ್ರೆ ಬಣವು ಮೂರು ಹೆಸರು ಮತ್ತು ಚಿಹ್ನೆಗಳ ಪಟ್ಟಿಯನ್ನು ನೀಡಿದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ. ಮೊದಲ ಆಯ್ಕೆಯ ಹೆಸರು ‘ಶಿವಸೇನಾ ಬಾಳಾಸಾಹೇಬ್ ಠಾಕ್ರೆ’ ಮತ್ತು ‘ಶಿವಸೇನಾ ಉದ್ಧವ್ ಬಾಳಾಸಾಹೇಬ್ ಠಾಕ್ರೆ’ ಎರಡನೇ ಆಯ್ಕೆಯಾಗಿದೆ ಎಂದು ಅವರು ಹೇಳಿದರು. ಚಿಹ್ನೆಯ ಆಯ್ಕೆ ವಿಚಾರದಲ್ಲಿ ತ್ರಿಶೂಲ ತನ್ನ ಮೊದಲ ಆಯ್ಕೆಯ ಚಿಹ್ನೆ ಮತ್ತು ಸುರ್ಯೋದಯದ ಚಿತ್ರ ಎರಡನೇ …
Read More »ಮುಸ್ಲಿಮರು ಕಾಂಡೋಮ್‌ಗಳನ್ನು ಹೆಚ್ಚು ಬಳಸುತ್ತಾರೆ : ಓವೈಸಿ ಹೇಳಿದ್ದೇನು?
ಹೈದರಾಬಾದ್ : ಇಬ್ಬರು ಮಕ್ಕಳ ನಡುವಿನ ಅಂತರವನ್ನು ಕಾಯ್ದುಕೊಳ್ಳಲು ಮುಸ್ಲಿಂ ಸಮುದಾಯದವರು ಕುಟುಂಬ ಯೋಜನಾ ಸಾಧನ ಕಾಂಡೋಮ್ ಅನ್ನು ಹೆಚ್ಚು ಬಳಸುತ್ತಾರೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಆರ್‌ಎಸ್‌ಎಸ್ ಸರಸಂಘ ಚಾಲಕ್ ಮೋಹನ್ ಭಾಗವತ್ ಅವರ ಇತ್ತೀಚಿನ ಜನಸಂಖ್ಯೆಯ ಅಸಮತೋಲನದ ಹೇಳಿಕೆಗೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ. ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಓವೈಸಿ, ಭಾಗವತ್ ಅವರು ಇದನ್ನು ಉಲ್ಲೇಖಿಸುವುದಿಲ್ಲ ಮತ್ತು ಜನಸಂಖ್ಯೆಯ ಬೆಳವಣಿಗೆಯನ್ನು ಚರ್ಚಿಸುವ ಮೊದಲು ಅವರು …
Read More »ತಡರಾತ್ರಿ ಆಗಮಿಸಿದ ಬಿಜೆಪಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ B.L. ಸಂತೋಷ್ ಶಾಲು ಹೊದೆಸಿ ಸ್ವಾಗತಿಸಿದ ಬಾಲಚಂದ್ರ ಜಾರಕಿಹೊಳಿ ಇಂದು ಕನ್ಹೇರಿ ಮಠದ ಸಮಾವೇಶದಲ್ಲಿ ಭಾಗಿ
ಬೆಳಗಾವಿ – ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ ಬೆಳಗಾವಿಗೆ ಆಗಮಿಸಿದ್ದಾರೆ. ಭಾನುವಾರ ರಾತ್ರಿ 11 ಗಂಟೆ ಹೊತ್ತಿಗೆ ಅವರು ಹುಬ್ಬಳ್ಳಿಯಿಂದ ರಸ್ತೆ ಮಾರ್ಗವಾಗಿ ಬೆಳಗಾವಿಗೆ ತಲುಪಿದರು. ಮಾಜಿ ಸಚಿವ, ಕೆಎಂಎಫ್ ಚೇರಮನ್ ಬಾಲಚಂದ್ರ ಜಾರಕಿಹೊಳಿ ಶಾಲು ಹೊದೆಸಿ ಸಂತೋಷ್ ಅವರನ್ನು ಸ್ವಾಗತಿಸಿದರು. ಈ ವೇಳೆ ರಾಜ್ಯ ಉಪಾಧ್ಯಕ್ಷ ನಿರ್ಮಲ ಕುಮಾರ ಸುರಾನಾ, ಸಂಸದೆ ಮಂಗಲಾ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಮಹಾಂತೇಶ ದೊಡ್ಡಗೌಡರ್, ಬಿಜೆಪಿ ಜಿಲ್ಲಾಧ್ಯಕ್ಷರಾದ …
Read More »ಮೀಸಲಾತಿ ಹೆಚ್ಚಿಸುವ ಮೂಲಕ ರಾಜ್ಯ ಸರಕಾರ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. : ಪ್ರಹ್ಲಾದ ಜೋಷಿ
ಹುಬ್ಬಳ್ಳಿ: ಮೀಸಲಾತಿ ಹೆಚ್ಚಿಸುವ ಮೂಲಕ ರಾಜ್ಯ ಸರಕಾರ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ಬಿಜೆಪಿ ಸರಕಾರ ಶೋಷಿತರು, ದಲಿತರು ಹಾಗೂ ಬಡವರ ಪರವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಯಾವಾಗಲೂ ಹಿಂದುಳಿದ ವರ್ಗಗಳ ಹೆಸರಿನಲ್ಲಿ ಮತ ಪಡೆದು ಅಧಿಕಾರ ಅನುಭವಿ ಸಿದೆ. ಅವರ ಕಲ್ಯಾಣದ ಬಗ್ಗೆ ಯಾವುದೇ ಕಾರ್ಯ ಗಳನ್ನು ಮಾಡಿಲ್ಲ ಎಂದರು. ಇನ್ನೂ ಕೆಲವು ಸಮುದಾಯಗಳಿಗೆ ಮೀಸಲಾತಿ ನೀಡುವ ಬಗ್ಗೆ ಮುಖ್ಯಮಂತ್ರಿ ಭರವಸೆ …
Read More »ಸಂಕೇಶ್ವರ: ಮೂರು ಕಾರು-ದ್ವಿಚಕ್ರ ವಾಹನ ನಡುವೆ ಸರಣಿ ಅಪಘಾತ, ತಾಯಿ ಮಗು ಸಾವು, ಹಲವರಿಗೆ ಗಾಯ
ಸಂಕೇಶ್ವರ : ಮೂರು ಕಾರುಗಳು ಹಾಗೂ ಒಂದು ದ್ವಿಚಕ್ರ ವಾಹನ ನಡುವೆ ನಡೆದ ಸರಣಿ ಅಪಘಾತದಲ್ಲಿ ತಾಯಿ ಹಾಗೂ ಮಗು ಇಬ್ಬರು ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಹುಕ್ಕೇರಿ ತಾಲೂಕಿನ ರಕ್ಷಿ ಕ್ರಾಸ್ ಹತ್ತಿರ ರವಿವಾರ ರಾತ್ರಿ 8 ಗಂಟೆಯ ಸುಮಾರಿಗೆ ನಡಿದಿದೆ. ಈ ಘಟನೆಯಲ್ಲಿ ಮೃತಪಟ್ಟವರನ್ನು ಬೈಲಹೊಂಗಲ ತಾಲೂಕಿನ ಬಾರತಿ (28) ಹಾಗೂ ವೇದಾಂತ ಪೂಜೇರಿ (6) ಇವರಿಬ್ಬರು ಮೃತಪಟ್ಟಿರುವ ದುರ್ದೈವಿಗಳಾಗಿದ್ದಾರೆ. ಇವರು ದ್ವಿಚಕ್ರ ವಾಹನ ಮೇಲೆ ಸಂಚರಿಸುತ್ತಿದ್ದರು ಎನ್ನಲಾಗಿದೆ. …
Read More »ಸರ್ಕಾರದ ಎಚ್ಚರಿಕೆಗೆ ಬಗ್ಗಿದ ಆ್ಯಪ್ ಆಧಾರಿತ ಟ್ಯಾಕ್ಸಿ ಸೇವಾ ಸಂಸ್ಥೆಗಳು: ಸೇವಾ ದರದಲ್ಲಿ ಇಳಿಕೆ
ಬೆಂಗಳೂರು: ಸರ್ಕಾರದ ಛಾಟಿಗೆ ಬಗ್ಗಿದ ತಂತ್ರಾಂಶ ಆಧಾರಿತ ಟ್ಯಾಕ್ಸಿ ಸೇವಾ ಸಂಸ್ಥೆಗಳು ಕೊನೆಗೂ ತಮ್ಮ ಆಟೋ ಸೇವಾ ದರಗಳನ್ನು ಇಳಿಕೆ ಮಾಡಿವೆ. ಕರ್ನಾಟಕ ಸರ್ಕಾರವು ತಮ್ಮ ಸೇವೆಯನ್ನು ನಿಲ್ಲಿಸುವಂತೆ ಆದೇಶಿಸಿದ್ದರೂ, ಅಗ್ರಿಗೇಟರ್ಗಳು ಆಟೋರಿಕ್ಷಾಗಳು ಕನಿಷ್ಠ ದರವನ್ನು ಇಳಿಸಿ ತಮ್ಮ ಸೇವೆಯನ್ನು ಮುಂದುವರೆಸಿವೆ. ನಿಯಮ ಉಲ್ಲಂಘಿಸಿಲ್ಲ : ಹೆಚ್ಚುವರಿ ದರ ವಿಧಿಸಿ ನಿಯಮ ಉಲ್ಲಂಘಿಸಿರುವ ಆರೋಪವನ್ನು ರಾಪಿಡೊ, ಓಲಾ, ಉಬರ್ ಕಂಪನಿಗಳು ತಳ್ಳಿ ಹಾಕಿವೆ. ಇದೀಗ ಸಾರಿಗೆ ಇಲಾಖೆ ನೋಟಿಸ್ ನೀಡಿದ ಬಳಿಕ ದರಗಳನ್ನು …
Read More »ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ ಆರೋಗ್ಯ ಸ್ಥಿತಿ ಗಂಭೀರ
ನಾಟಕಕಾರ ಹಾಗೂ ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ನಟ ಟಿ.ಎಸ್. ಲೋಹಿತಾಶ್ವ ಅವರಿಗೆ ಭಾನುವಾರ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಕುಮಾರಸ್ವಾಮಿ ಲೇಔಟ್ನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ‘ಮಾತನಾಡಿರುವ ಲೋಹಿತಾಶ್ವ ಅವರ ಪುತ್ರ ಶರತ್ ಲೋಹಿತಾಶ್ವ, ತಂದೆಯವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರು ಕೂಡ ತಂದೆಗೆ ಚಿಕಿತ್ಸೆ …
Read More »ಚುನಾವಣೆ ನಡೆದು ಒಂದೂವರೆ ವರ್ಷದ ಬಳಿಕ ಮರು ಮತ ಎಣಿಕೆ ನಡೆಸಲು ಕೋರ್ಟ್ ಆದೇಶ
ಚಿಕ್ಕೋಡಿ(ಬೆಳಗಾವಿ): ಪಂಚಾಯತ್ ಚುನಾವಣೆ ನಡೆದು ಒಂದೂವರೆ ವರ್ಷ ಕಳೆದ ಬಳಿಕ ಮರು ಮತ ಎಣಿಕೆ ನಡೆಸಲು ನ್ಯಾಯಾಲಯ ಆದೇಶ ಹೊರಡಿಸಿದ್ದು, ಎಲ್ಲರ ಚಿತ್ತ ಕೋರ್ಟ್ನತ್ತ ನೆಟ್ಟಿದೆ. ಈ ಆದೇಶ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಬರುವ ಅ.20 ರಂದು ನ್ಯಾಯಾಧೀಶರ ಸಮ್ಮುಖದಲ್ಲಿ ಮರು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೆಬ್ಬಾಳ ಗ್ರಾಮ ಪಂಚಾಯಿತಿಗೆ ಕಳೆದ 2020 ಡಿಸೆಂಬರ್ 23 ರಂದು ಚುನಾವಣೆ ನಡೆದಿತ್ತು. ಚುನಾವಣಾ ಫಲಿತಾಂಶ …
Read More »ಮಗನನ್ನು ನೋಡಲು ಬಿಡಲಿಲ್ಲವೆಂದು ಮಾವನ ಕೊಂದ ಅಳಿಯ
ದೊಡ್ಡಬಳ್ಳಾಪುರ: ಹೆಂಡತಿಯ ತವರು ಮನೆಯಲ್ಲಿ ತನ್ನ ಮಗನನ್ನು ನೋಡಲು ಅವಕಾಶ ನೀಡಲಿಲ್ಲ ಎಂದು ಕುಪಿತಗೊಂಡು ಮಾವನ ಕೊಲೆಗೈದು ಪರಾರಿಯಾಗಿದ್ದ ಅಳಿಯನನ್ನು ದೊಡ್ಡಬೆಳವಂಗಲ ಪೊಲೀಸರು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಆರೂಢಿ ಗ್ರಾಮದ ಸುಬ್ಬರಾಯಪ್ಪನನ್ನು ಅಳಿಯ ಪ್ರತಾಪ್ ಕೊಲೆ ಮಾಡಿ ಪರಾರಿಯಾಗಿದ್ದ. ಆರೋಪಿ ಪ್ರತಾಪ್ನನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಚಾಲಕನಾಗಿದ್ದ ಪ್ರತಾಪ್ಗೆ ಪಿಣ್ಯಾದಲ್ಲಿ ಹೋಟೆಲ್ ನಡೆಸುತ್ತಿದ್ದ ಶಿಲ್ಪಾಳ ಪರಿಚಯವಾಗಿತ್ತು, ಪರಿಚಯ ಪ್ರೀತಿಗೆ ತಿರುಗಿ ನಾಲ್ಕು ವರ್ಷದ ಹಿಂದೆ ಮದುವೆಯಾಗಿದ್ದರು. ಬಳಿಕ ಶಿಲ್ಪಾ ಹೆರಿಗೆಗಾಗಿ ತವರು …
Read More »ವಾಲ್ಮೀಕಿ ಜಯಂತಿ ಆಚರಣೆ ಮಾಡಿಲ್ಲ ಎಂದು ಆಕ್ರೋಶ , ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ದ ಆಕ್ರೋಶ
ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ. ಗ್ರಾಮ ಪಂಚಾಯತಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ದ ಆಕ್ರೋಶ ಹೊರಹಾಕಿರುವ ಘಟನೆ ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ತಾಲೂಕಿನ ಕೊಂಡಗೂಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮ ಪಂಚಾಯತಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ ಮಾಡಿಲ್ಲ ಎಂದು ವಾಲ್ಮೀಕಿ ಸಮುದಾಯದ ಜನರಿಂದ ಅಸಮಾಧಾನ ವ್ಯಕ್ತವಾಗಿದೆ. ಕೊಂಡಗೂಳಿ ಗ್ರಾಮದಲ್ಲಿ ವಾಲ್ಮೀಕಿ ಸಮುದಾಯದ ಜನರು ಹೆಚ್ಚಿದ್ದೇವೆ. ನಮ್ಮ ಸಮುದಾಯಕ್ಕೆ ಗ್ರಾಪಂ ಸಿಬ್ಬಂದಿಗಳು ಅವಮಾನ ಮಾಡಿದ್ದಾರೆಂದು ಹಾಗೂ ಅಧಿಕಾರಿಗಳು …
Read More »