ಬೆಂಗಳೂರು: ರಾಜ್ಯಾದ್ಯಂತ ಕಾಂಗ್ರೆಸ್ ಪರ ಗಾಳಿ ಬೀಸುತ್ತಿದ್ದು, ಬಿಜೆಪಿ ಹಿರಿಯ ಮುಖಂಡ ಪುಟ್ಟಣ್ಣ ಅವರು 4 ವರ್ಷದ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿರುವುದೇ ಸಾಕ್ಷಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಪುಟ್ಟಣ್ಣ ಅವರನ್ನು ಕಾಂಗ್ರೆಸ್‌ಗೆ ಸ್ವಾಗತಿಸಿ ಮಾತನಾಡಿದ ಅವರು, 4 ಬಾರಿ ಪರಿಷತ್ ಸದಸ್ಯರಾಗಿ, ಉಪಸಭಾಪತಿಯಾಗಿರುವ ಪುಟ್ಟಣ್ಣ ಅತ್ಯಂತ ಹಿರಿಯ ಹಾಗೂ ಅನುಭವಿ. ಶಿಕ್ಷಕರು, ಪದವೀಧರರು ಸೇರಿ ಶಿಕ್ಷಣ ಕ್ಷೇತ್ರದ ಸಮಸ್ಯೆಗಳ …
Read More »ಸಂಸದೆ ಸುಮಲತಾ ಇಂದು ಬಿಜೆಪಿಗೆ, ಬಿಜೆಪಿ ತೊರೆದ ಪುಟ್ಟಣ್ಣ ಕಾಂಗ್ರೆಸ್‌ಗೆ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗ ಪಕ್ಷಾಂತರ ಪರ್ವ ಜೋರಾಗಿ ಸದ್ದು ಮಾಡುತ್ತಿದೆ. ಆಡಳಿತಾರೂಢ ಬಿಜೆಪಿಗೆ ಈ ವಿಚಾರ ಈಗ ತೀವ್ರ ಪ್ರಮಾಣದಲ್ಲಿ ಒಳ ಏಟು ನೀಡಲಾರಂಭಿಸಿದ್ದು, ಪ್ರಬಲ “ವಿಕೆಟ್’ಗಳು ಉರುಳದಂತೆ ನೋಡಿಕೊಳ್ಳುವುದು ಕೇಸರಿ ಪಡೆಗೆ ಸವಾಲಾಗಿದೆ. ಕಾಂಗ್ರೆಸ್‌ನಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯುತ್ತಿರುವಾಗಲೇ ಬಿಜೆಪಿಯಿಂದ ವಲಸೆ ವಿಚಾರ ಸುದ್ದಿಯಾಗುತ್ತಿದೆ. ಈಗಾಗಲೇ ಪಕ್ಷದಿಂದ ಒಂದು ಕಾಲು ಹೊರಗಿಟ್ಟಿರುವ ಸಚಿವ ನಾರಾಯಣ ಗೌಡ ಜತೆಗೆ ಇನ್ನೂ ಮೂವರು …
Read More »A.P.M.C. ಪೊಲೀಸರ ಕಾರ್ಯಾಚರಣೆ ಕುಖ್ಯಾತ ಅಂತರರಾಜ್ಯ ವಂಚಕರಬಂಧನ
ಬೆಳಗಾವಿ : ಎಪಿಎಮ್‌ಸಿ ಪೊಲೀಸರು ಕಾರ್ಯಾಚರಣೆ ನಡೆಸಿ ಕುಖ್ಯಾತ ಅಂತರರಾಜ್ಯ ವಂಚಕರನ್ನು ಬಂಧಿಸಿದ್ದಾರೆ. ಅವರಿಂದ ಒಟ್ಟು ರೂ.೬,೦೯,೦೦೦ ಮೌಲ್ಯದ ಬಂಗಾರ, ನಗದು & ಮೋಟರ್ ಸೈಕಲ್‌ಗಳನ್ನು ಜಪ್ತಿ ಮಾಡಿದ್ದಾರೆ. ದಿನಾಂಕ. ೨೯/೧೧/೨೦೨೨ ಎ.ಪಿ.ಎಮ್.ಸಿ ಪೊಲೀಸ್ ಠಾಣೆಯ ವ್ಯಾಪ್ತಿಯ ಮುರಳಿಧರ ಕಾಲನಿಯ ಸೋಮಲಿಂಗ ಅಮ್ಮಣಗಿರವರ ಎ.ಟಿ.ಎಮ್ ಕಾರ್ಡನ್ನು ಬದಲಾಯಿಸಿಕೊಂಡು ಅವರ ಎ.ಟಿ.ಎಮ್ ಕಾರ್ಡಿಂದ ೪,೦೩,೭೮೯/- ರೂಗಳನ್ನು ತೆಗೆದುಕೊಂಡು ಮೋಸ ಮಾಡಿದ ಬಗ್ಗೆ ಎ.ಪಿ.ಎಮ್.ಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು . ಪಿಐ ರಮೇಶ …
Read More »ಮತ್ತೆ 4 ದಿನ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಮಾಲಿದ್ದಾರೆ. ಸಿದ್ದರಾಮಯ್ಯ
ಬೆಳಗಾವಿ: ಮಾಜಿ ಮುಖ್ಯಮಂತ್ರಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತೆ 4 ದಿನ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಮಾಲಿದ್ದಾರೆ. ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯ ಮುಂದುವರಿದ ಭಾಗವಾಗಿ ಸಿದ್ದರಾಮಯ್ಯ ಈ ಪ್ರವಾಸ ಮಾಡಲಿದ್ದಾರೆ. ಮಾರ್ಚ್ 14ರಿಂದ 17ರವರೆಗೆ ಅವರು ಜಿಲ್ಲೆಯ ವಿವಿಧೆಡೆ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರ. ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ….
Read More »170 ಕ್ಷೇತ್ರಗಳ ಅಭ್ಯರ್ಥಿ ಕುರಿತು ಚರ್ಚೆ ಮಾಡಲಾಗಿದ್ದು, ಇನ್ನು 50 ಕ್ಷೇತ್ರಗಳ ಬಗ್ಗೆ ಮಾತ್ರ ಚರ್ಚೆ ಬಾಕಿ ಇದೆ ಎಂದ ಡಿ.ಕೆ.ಶಿ.
ಬೆಂಗಳೂರು: ಪಕ್ಷದ ಸ್ಕ್ರೀನಿಂಗ್ ಕಮಿಟಿ ಕಳೆದ ಮೂರು ದಿನಗಳಿಂದ ಸಭೆ ನಡೆಸುತ್ತಿದ್ದು, ಸುಮಾರು 170 ಕ್ಷೇತ್ರಗಳ ಅಭ್ಯರ್ಥಿ ಕುರಿತು ಚರ್ಚೆ ಮಾಡಲಾಗಿದ್ದು, ಇನ್ನು 50 ಕ್ಷೇತ್ರಗಳ ಬಗ್ಗೆ ಮಾತ್ರ ಚರ್ಚೆ ಬಾಕಿ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ತಿಳಿಸಿದ್ದಾರೆ. ಚರ್ಚೆಯಾಗಿರುವ ಕ್ಷೇತ್ರಗಳ ಅಭ್ಯರ್ಥಿ ಪಟ್ಟಿಯನ್ನು ಕೇಂದ್ರ ನಾಯಕರಿಗೆ ಕಳುಹಿಸಿಕೊಟ್ಟಿದ್ದೇವೆ. ಎಲ್ಲ ಕಡೆಗಳಲ್ಲಿ ಒಮ್ಮತದ ತೀರ್ಮಾನವನ್ನು ತೆಗೆದುಕೊಂಡಿದ್ದು, ಎಲ್ಲ ಪ್ರಕ್ರಿಯೆ ಸುಗಮವಾಗಿ ಸಾಗುತ್ತಿದೆ. ಪಕ್ಷದಲ್ಲಿ ನಾಯಕರ ಸಂದಾನ ವಿಚಾರವಾಗಿ ಕೇಳಿದ …
Read More »B,J,P,ಮೊದಲ ವಿಕೆಟ್ ಪತನ; M.L.C. ಪುಟ್ಟಣ್ಣ ಕಾಂಗ್ರೆಸ್ ಸೇರ್ಪಡೆ
ಬೆಂಗಳೂರು: ಬಿಜೆಪಿಯ ಹಾಲಿ ಎಂಎಲ್ ಸಿ ಪುಟ್ಟಣ್ಣ ಅವರು ಇಂದು ತಮ್ಮ ಎಂ ಎಲ್ ಸಿ ಸ್ಥಾನಕ್ಕೆ ಹಾಗೂ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಪಕ್ಷ ಸೇರಲು ಇಚ್ಛಿಸಿದ್ದಾರೆ. ಶಿಕ್ಷಣ ಕ್ಷೇತ್ರಕ್ಕೆ ಪುಟ್ಟಣ್ಣ ಅವರ ಕೊಡುಗೆ ಅಪಾರವಾಗಿದೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲಿ ಸತತ ನಾಲ್ಕು ಬಾರಿ ಗೆಲವು ಸಾಧಿಸಿದ್ದಾರೆ. ಇನ್ನು ಕೆಲವು ವರ್ಷಗಳ ಕಾಲ ಅಧಿಕಾರವಿದ್ದರೂ ಬಿಜೆಪಿ ಆಡಳಿತಕ್ಕೆ ಬೇಸತ್ತು, ತಮ್ಮ ಕ್ಷೇತ್ರದ ಜನರಿಗೆ ನ್ಯಾಯ …
Read More »6 ನಿಗಮಗಳಿಗೆ ನಿರ್ದೇಶಕರ ನೇಮಕ ಮಾಡಿದ ಸರ್ಕಾರ
ಬೆಂಗಳೂರು: ವಿಧಾನಸಭಾ ಚುನಾವಣೆ ಘೋಷಣೆಗೆ ಒಂದು ತಿಂಗಳು ಬಾಕಿಯಿರುವ ಹೊತ್ತಲ್ಲಿ ರಾಜ್ಯ ಸರ್ಕಾರ 6 ನಿಗಮಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಸಿಎಂ ಬಸವರಾಜ್ ಬೊಮ್ಮಾಯಿ ತವರು ಜಿಲ್ಲೆ ಹಾವೇರಿಯ 11 ಜನರನ್ನು ನಿಗಮಗಳಿಗೆ ನಿರ್ದೇಶಕರನ್ನಾಗಿ ನೇಮಿಸಲಾಗಿದೆ. ಅದರಲ್ಲೂ ಪ್ರಮುಖವಾಗಿ ಸಿಎಂ ಕ್ಷೇತ್ರ ಶಿಗ್ಗಾವಿ ವ್ಯಾಪ್ತಿಯ 6 ಜನರಿಗೆ ನಿಗಮದಲ್ಲಿ ಸ್ಥಾನ ನೀಡಲಾಗಿದೆ. ದೇವರಾಜ್ ಅರಸು ಅಭಿವೃದ್ಧಿ ನಿಗಮ, ವಿಶ್ವಕರ್ಮ ಅಭಿವೃದ್ಧಿ ನಿಗಮ, ಮರಾಠಾ ಅಭಿವೃದ್ಧಿ ನಿಗಮ, …
Read More »1 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದ 6 ಪ್ರಾಥಮಿಕ ಶಾಲೆಯ ನೂತನ ಕೊಠಡಿಗಳನ್ನು ಉದ್ಘಾಟಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ: ದೇಶದ ಅಭಿವೃದ್ಧಿ ಶಿಕ್ಷಣದಿಂದ ಮಾತ್ರ ಸಾಧ್ಯ. ಕಾರಣ ವಿದ್ಯಾರ್ಥಿಗಳು ವ್ಯಾಸಂಗಕ್ಕೆ ಹೆಚ್ಚಿನ ಗಮನ ನೀಡಬೇಕು. ನಿಮಗೆ ಬೇಕಾದ ಸಹಾಯ, ಸಹಕಾರ ನೀಡಲು ನಾನು ಸದಾ ಬದ್ಧನಿದ್ದೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಯಮಕನಮರಡಿ ಮತಕ್ಷೇತ್ರದ ಮುಚ್ಚಂಡಿ ಗ್ರಾಮದಲ್ಲಿ ಸರ್ಕಾರಿ ಮಾದರಿ ಕನ್ನಡ ಶಾಲೆ ಸನ್ 2022 – 23 ರಲ್ಲಿ ” 4059″ ಕಟ್ಟಡಗಳ ಯೋಜನೆಯಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದ 6 ಪ್ರಾಥಮಿಕ …
Read More »ಎಲ್ಲಾ ಜಿಲ್ಲೆಗಳ ಅಭಿವೃದ್ಧಿ ಸೂಚ್ಯಂಕದಲ್ಲಿ ಹೆಚ್ಚಳ: ಬಡತನ ನಾಡಿಗೆ ಸವಾಲು
ಬೆಂಗಳೂರು: ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ (ಎಚ್‌ಡಿಐ) ಏರಿಕೆಯಾಗಿದೆ. ಆದರೆ, ಬಡತನ ಮತ್ತು ಅಪೌಷ್ಟಿಕತೆಯ ಸಮಸ್ಯೆಗಳೂ ಸವಾಲಾಗಿ ಬೆಳೆಯುತ್ತಿವೆ ಎಂಬುದನ್ನು ‘ಕರ್ನಾಟಕ ಮಾನವ ಅಭಿವೃದ್ಧಿ ವರದಿ-2022’ ಹೇಳಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿನಿಧಿಸುವ ಹಾವೇರಿಯೂ ಸೇರಿದಂತೆ ಉತ್ತರ ಕರ್ನಾಟಕದ ಹತ್ತು ಜಿಲ್ಲೆಗಳು ಬಹು ಆಯಾಮದ ಬಡತನ ಸೂಚ್ಯಂಕದ (ಎಂಪಿಐ) ವಿಷಯದಲ್ಲಿ ಅತ್ಯಂತ ಕಳಪೆ ಸಾಧನೆ ಮಾಡಿವೆ. ಕೆಲವು ಜಿಲ್ಲೆಗಳು ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಪ್ರಗತಿ ಸಾಧಿಸಿದ್ದರೂ, ಬಡತನ …
Read More »852 ಕೊಟಿಯಲ್ಲಿ ಐಐಟಿ ಧಾರವಾಡದ ಮೊದಲ ಹಂತ ಸಿದ್ಧ
ಧಾರವಾಡ: ‘ಐಐಟಿ ಧಾರವಾಡದ ನೂತನ ಕ್ಯಾಂಪಸ್‌ನ ಮೊದಲ ಹಂತ ಸಿದ್ಧಗೊಂಡಿದ್ದು, ಇದೇ 12ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ’ ಎಂದು ಸಂಸ್ಥೆಯ ನಿರ್ದೇಶಕ ಡಾ. ವೆಂಕಪ್ಪಯ್ಯ ಆರ್. ದೇಸಾಯಿ ಹೇಳಿದರು. ‘2016ರಲ್ಲಿ ಕೇಂದ್ರ ಸರ್ಕಾರ ಐಐಟಿ ಧಾರವಾಡ ಘೋಷಿಸಿತು. ರಾಜ್ಯ ಸರ್ಕಾರವು 65 ಎಕರೆ ಮೀಸಲು ಅರಣ್ಯ ಪ್ರದೇಶ ಹಾಗೂ 470 ಎಕರೆ ಜಾಗ ಸೇರಿ ಒಟ್ಟು 535 ಎಕರೆ ಜಾಗವನ್ನು ನೀಡಿತ್ತು. ಅಲ್ಲಿ ಪ್ರಥಮ ಹಂತದಲ್ಲಿ ₹852ಕೋಟಿ …
Read More »
Laxmi News 24×7