ಬೆಂಗಳೂರು: ಟಿಪ್ಪರ್ ಲಾರಿ ಡಿಕ್ಕಿಯಾದ ಪರಿಣಾಮ ಬಯೋಮೆಟ್ರಿಕ್ ಹಾಜರಾತಿ ನೀಡಲು ತೆರಳುತ್ತಿದ್ದ ಪೌರ ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ದಾರುಣ ಘಟನೆ ಇಂದು ಬೆಂಗಳೂರಿನಲ್ಲಿ ನಡೆದಿದೆ. ವೆಸ್ಟ್ ಆಫ್ ಕಾರ್ಡ್ ರಸ್ತೆಯ ಶಿವನಗರ ಮೇಲ್ಸೇತುವೆಯ ಕೆಳಗೆ ಅಪಘಾತ ಸಂಭವಿಸಿದ್ದು, ಶ್ರೀರಾಂಪುರದ ನಿವಾಸಿ ಸರೋಜಮ್ಮ(51) ಸಾವನ್ನಪ್ಪಿದವರು. ಇಂದು ಬೆಳಗ್ಗೆ 6:30ಕ್ಕೆ ಕೆಲಸಕ್ಕೆ ಹಾಜರಾಗಲು ತೆರಳುತ್ತಿದ್ದ ಸರೋಜಮ್ಮ ಬಯೋಮೆಟ್ರಿಕ್ ಹಾಜರಾತಿ ನೀಡಲು ವಾರ್ಡ್ ಆಫೀಸ್ ಕಡೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ರಸ್ತೆ ಸಿಗ್ನಲ್ ದಾಟುವಾಗ ಟಿಪ್ಪರ್ …
Read More »ಮಂಗಳೂರು ವೈದ್ಯೆ ಅಫೀಫ ಫಾತಿಮಾ ದೇಶ ವಿರೋಧಿ ಪೋಸ್ಟ್
ಮಂಗಳೂರು, ಏಪ್ರಿಲ್ 29: ‘ಕಾಪಾಡಿ, ಕೊಳಕು ಹಿಂದೂಗಳು (Hindu) ನನ್ನ ಹಿಂದೆ ಬಿದ್ದಿದ್ದಾರೆ. ಹೌದು ನಾನು ಭಾರತೀಯಳು, ಹೌದು ನಾನು ಭಾರತವನ್ನು (India) ದ್ವೇಷಿಸುತ್ತೇನೆ’ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ (Mangalore) ವೈದ್ಯೆಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಸಂದೇಶ ಪ್ರಕಟಿಸಿದ್ದು ಇದೀಗ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ. ಜಮ್ಮು ಕಾಶ್ಮೀರದ ಪಹಲ್ಗಾಮ್ ದಾಳಿ ನಂತರ ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಉದ್ವಿಗ್ನ ಪರಿಸ್ಥಿತಿ ಇರುವ ಸಂದರ್ಭದಲ್ಲಿಯೇ ವೈದ್ಯೆ ಈ ರೀತಿ ಪೋಸ್ಟ್ ಮಾಡಿರುವುದಕ್ಕೆ ಹಿಂದೂ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಮಂಗಳೂರಿನ ಹೈಲ್ಯಾಂಡ್ …
Read More »ಬಸ್ ಡ್ರೈವರ್ ಆಗಿದ್ದ ಯಶ್ ತಂದೆ ಈಗ ನಿರ್ಮಾಪಕ;
ರಾಕಿಂಗ್ ಸ್ಟಾರ್ ಯಶ್ ಅವರ ತಂದೆ-ತಾಯಿ ಅರುಣ್ ಕುಮಾರ್ ಮತ್ತು ಪುಷ್ಪ ಅವರು ‘ಪಿಎ’ ಎಂಬ ಹೊಸ ನಿರ್ಮಾಣ ಸಂಸ್ಥೆಯನ್ನು ಆರಂಭಿಸಿದ್ದಾರೆ. ಪೃಥ್ವಿ ಅಂಬಾರ್ ನಟಿಸುವ ಮೊದಲ ಸಿನಿಮಾಗೆ ಇವರು ಬಂಡವಾಳ ಹೂಡಲಿದ್ದಾರೆ ಎನ್ನಲಾಗಿದೆ. ಯಶ್ ಅವರು ಬಾಲಿವುಡ್ನ ‘ರಾಮಾಯಣ’ ಚಿತ್ರದ ನಿರ್ಮಾಪಕರಾಗಿದ್ದಾರೆ. ಈಗ ಅವರ ಕುಟುಂಬದವರೂ ಸಿನಿಮಾ ನಿರ್ಮಾಣಕ್ಕೆ ಕಾಲಿಟ್ಟಿದ್ದಾರೆ. ರಾಕಿಂಗ್ ಸ್ಟಾರ್ ಯಶ್ (Yash) ಅವರು ಭಾರತೀಯ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಈಗ ಕೇವಲ ನಟ ಮಾತ್ರ ಅಲ್ಲ ನಿರ್ಮಾಪಕ …
Read More »ಲಾಂಗ್ ವೀಕೆಂಡ್ಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ವಿಶೇಷ ಬಸ್ ಸೌಲಭ್ಯ
ಹುಬ್ಬಳ್ಳಿ, ಏಪ್ರಿಲ್ 29: ಬಸವ ಜಯಂತಿ, ಕಾರ್ಮಿಕರ ದಿನಾಚರಣೆ ರಜೆ ಹಾಗೂ ವಾರಾಂತ್ಯದ ರಜೆಗಳ (Weekend Holidays) ಹಿನ್ನೆಲೆ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಉಂಟಾಗುವ ಸಾಧ್ಯತೆ ಇದ್ದು, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಶೇಷ ಬಸ್ಗಳ ಸೇವೆ (NWKRTC Special Buses) ಕಲ್ಪಿಸಲು ಮುಂದಾಗಿದೆ. ಈ ವಿಚಾರವಾಗಿ ಸಂಸ್ಥೆ ಪ್ರಕಟಣೆ ಹೊರಡಿಸಿದ್ದು, ಹೆಚ್ಚುವರಿ ಬಸ್ ಸಂಚಾರದ ಮಾಹಿತಿ ನೀಡಿದೆ. ಬೆಂಗಳೂರು (Bengalru) ಹಾಗೂ ಇತರ ಪ್ರಮುಖ ಸ್ಥಳಗಳಿಂದ ವಿಶೇಷ ಬಸ್ಗಳು ಕಾರ್ಯಾಚರಣೆ ನಡೆಸಲಿವೆ ಎಂದು ಪ್ರಕಟಣೆ ತಿಳಿಸಿದೆ. 30 …
Read More »ನೇಹಾ ಹಿರೇಮಠ ಕೊಲೆ ಪ್ರಕರಣ ಟ್ರಯಲ್ ಗೆ ಕಾಲ ಕೂಡಿ ಬಂದಿದೆ.
ಹುಬ್ಬಳ್ಳಿ, (ಏಪ್ರಿಲ್ 28): ಹುಬ್ಬಳ್ಳಿಯ (Hubballi) ಬಿವ್ಹಿಬಿ ಕಾಲೇಜಿನಲ್ಲಿ 2024 ಎಪ್ರಿಲ್ 18 ರಂದು ನಡೆದಿದ್ದ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ (Neha Hiremath murder case) ಟ್ರಯಲ್ ಗೆ ಈಗ ಕಾಲ ಕೂಡಿ ಬಂದಿದೆ. ಸಿಐಡಿಯಿಂದ (CID) ನೇಮಕವಾದ ವಕೀಲರಿಂದ ನೇಹಾ ಹಿರೇಮಠ ಪರವಾಗಿ ವಾದ ಮಂಡನೆ ಮಾಡಲಿದ್ದು, ಆರೋಪಿ ಫೈಯಾಜ್ ಪರವಾಗಿ ಹುಬ್ಬಳ್ಳಿಯ ಯಾವುದೇ ವಕೀಲರು ಕೇಸ್ ತೆಗೆದುಕೊಳ್ಳದ ಹಿನ್ನಲೆಯಲ್ಲಿ ಹುಬ್ಬಳ್ಳಿ ತಾಲ್ಲೂಕು ಕಾನೂನು ಸೇವಾ ಸಮಿತಿಯಿಂದ ವಕೀಲರ ನೇಮಕ ಮಾಡಲಾಗಿದೆ. ಆರೋಪಿ ಫೈಯಾಜ್ …
Read More »ವೈಭವ್ ಸೂರ್ಯವಂಶಿ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಹೀಗೆ ಹೊಸ ಇತಿಹಾಸ ನಿರ್ಮಿಸಿದ್ದು 14 ವರ್ಷದ ವೈಭವ್ ಸೂರ್ಯವಂಶಿ (Vaibhav Suryavanshi). ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ವೈಭವ್ ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ.ಈ ಶತಕದೊಂದಿಗೆ ಐಪಿಎಲ್ ಇತಿಹಾಸದಲ್ಲೇ ಶತಕ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಐಪಿಎಲ್ನಲ್ಲಿ ಅತೀ ವೇಗವಾಗಿ ಶತಕ ಸಿಡಿಸಿದ ಭಾರತೀಯ ಬ್ಯಾಟರ್ …
Read More »ಜನಿವಾರ, ಮಾಂಗಲ್ಯ ತೆಗೆಯಿಸದೇ ರೈಲ್ವೆ ನೇಮಕಾತಿ ಪರೀಕ್ಷೆ ಬರೆಯಲು ಅನುವು : ಕೇಂದ್ರ ಸಚಿವ ವಿ ಸೋಮಣ್ಣ
ಜನಿವಾರ, ಮಾಂಗಲ್ಯ ತೆಗೆಯಿಸದೇ ರೈಲ್ವೆ ನೇಮಕಾತಿ ಪರೀಕ್ಷೆ ಬರೆಯಲು ಅನುವು : ಕೇಂದ್ರ ಸಚಿವ ವಿ ಸೋಮಣ್ಣ ಬೆಂಗಳೂರು : ದಿನಾಂಕ ಇಂದು (28), 29 ಮತ್ತು 30 ಏಪ್ರಿಲ್ 2025ರಂದು ರೈಲ್ವೆ ಇಲಾಖೆಯಲ್ಲಿ ನೇಮಕಾತಿಗಾಗಿ ಪರೀಕ್ಷೆ ನಡೆಯುತ್ತಿದೆ. ಇತರ ಎಲ್ಲಾ ಪರೀಕ್ಷಾ ನಿಯಮವನ್ನು ಪಾಲಿಸಿ, ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅನುವು ಮಾಡಿಕೊಡಲು ಸೂಚಿಸಲಾಗಿದೆ ಎಂದು ಕೇಂದ್ರ ಸಚಿವ ವಿ ಸೋಮಣ್ಣ ಅವರು ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ …
Read More »ರಾಜ್ಯದಲ್ಲಿ ಎಲ್ಲಿಯೂ ಕಾರ್ಯಕ್ರಮ ಮಾಡಲು ಬಿಡಲ್ಲ : ಬಿಜೆಪಿ ನಾಯಕರಿಗೆ ಡಿಸಿಎಂ ಡಿ. ಕೆ. ಶಿವಕುಮಾರ್ ಎಚ್ಚರಿಕೆ
ಬೆಳಗಾವಿ : ನಿಮ್ಮ ಪಕ್ಷದ ಕಾರ್ಯಕರ್ತರಿಗೆ ನೀವೇ ಬುದ್ಧಿವಾದ ಹೇಳಿ, ಸರಿಪಡಿಸಬೇಕು. ಇಲ್ಲದಿದ್ದರೆ ನೀವು ಎಲ್ಲಿಯೂ ಕಾರ್ಯಕ್ರಮ ಮಾಡಲು ನಾನು ಬಿಡುವುದಿಲ್ಲ. ಎಲ್ಲ ರೀತಿಯ ಪ್ರತಿಹೋರಾಟಕ್ಕೆ ನಾವೂ ಸಿದ್ಧರಿದ್ದೇವೆ. ನಾನು ಮನವಿ ಮಾಡಿಕೊಳ್ಳುತ್ತಿಲ್ಲ. ಇದು ನಿಮಗೆ ಎಚ್ಚರಿಕೆ ಗಂಟೆ ಎಂದು ಬಿಜೆಪಿ ನಾಯಕರಿಗೆ ಡಿಸಿಎಂ ಡಿ. ಕೆ. ಶಿವಕುಮಾರ್ ಸವಾಲು ಹಾಕಿದರು. ಕಾಂಗ್ರೆಸ್ ಪ್ರತಿಭಟನಾ ಸಮಾವೇಶ ಮುಗಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಇದೇ ಮೊದಲ ಬಾರಿ ಬಿಜೆಪಿಯವರು ನಾಲ್ಕು …
Read More »ಪೊಲೀಸ್ ಎನ್ಕೌಂಟರ್ ನಲ್ಲಿ ಸಾವನ್ನಪ್ಪಿದ ಬಾಲಕಿ ಅತ್ಯಾಚಾರ ಮತ್ತು ಕೊಲೆ ಕೇಸ್ ನ ಆರೋಪಿಯ ಮೃತದೇಹವನ್ನು ಸಮಾಧಿ ಮಾಡಲು ಹೈಕೋರ್ಟ್ ಅನುಮತಿ ನೀಡಿದೆ.
ಬೆಂಗಳೂರು: ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದು ಪೊಲೀಸ್ ಎನ್ಕೌಂಟರ್ ನಲ್ಲಿ ಸಾವನ್ನಪ್ಪಿದ ಬಿಹಾರದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎಂಬಾತನ ಮೃತದೇಹವನ್ನು ಸಮಾಧಿ ಮಾಡಲು ಹೈಕೋರ್ಟ್ ಇಂದು ಅನುಮತಿ ನೀಡಿತು. ರಿತೇಶ್ ಕುಮಾರ್ ಮೃತದೇಹ ಇಡೀ ಪ್ರಕರಣಕ್ಕೆ ಪ್ರಮುಖ ಸಾಕ್ಷಿಯಾಗಿದೆ. ಮೃತದೇಹವನ್ನು ದಹನ ಮಾಡದಂತೆ ಹಾಗೂ ಸಂರಕ್ಷಿಸಿಡುವಂತೆ ನಿರ್ದೇಶನ ನೀಡಬೇಕು ಎಂದು ಕೋರಿ ಪಿಯುಸಿಎಲ್ ಸಂಘಟನೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆಯನ್ನು ಮುಖ್ಯ …
Read More »ಲೋಕಾಯುಕ್ತ ಅಧಿಕಾರಿಗಳ ಭರ್ಜರಿ ಬೇಟೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ, ಉಪಾಧ್ಯಕ್ಷ, ಮೂವರು ಸದಸ್ಯರು
ಹಾವೇರಿ: ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಇ-ಸ್ವತ್ತು ಉತಾರ ಪೂರೈಸಲು ಲಂಚ ಸ್ವೀಕಾರ ಮಾಡುತ್ತಿದ್ದ ಗ್ರಾಮ ಪಂಚಾಯತ್ ಪಿಡಿಒ ಸಹಿತ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಹಾಗೂ ಗ್ರಾಮ ಪಂಚಾಯತ್ನ ಮೂವರು ಸದಸ್ಯರನ್ನು ಬಂಧಿಸಿದ್ದಾರೆ. ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹಲಗೇರಿ ಗ್ರಾಮ ಪಂಚಾಯತ್ ಪಿಡಿಒ, ಉಪಾಧ್ಯಕ್ಷ ಹಾಗೂ ಗ್ರಾಮ ಪಂಚಾಯತ್ನ ಮೂವರು ಸದಸ್ಯರು ಲೋಕಾಯುಕ್ತದಿಂದ ಬಂಧಿತರಾದ ಆರೋಪಿಗಳು. ಪಿಡಿಒ ಕೆ.ಮಂಜುನಾಥ, ಉಪಾಧ್ಯಕ್ಷ ಮಲ್ಲಪ್ಪ ಬೂದಿಹಾಳ, ಗ್ರಾಮ ಪಂಚಾಯತ್ ಸದಸ್ಯರಾದ …
Read More »