Breaking News

ತಂದೆಯಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದ: ನಟಿ ಖುಷ್ಬೂ

ಚೆನ್ನೈ: ನಟಿ ಹಾಗೂ ತಮಿಳುನಾಡು ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಅವರು ತಮ್ಮ ಜೀವನದಲ್ಲಿ ನಡೆದ ಕಹಿ ಘಟನೆಯೊಂದನ್ನು ಬಹಿರಂಗ ಮಾಡಿದ್ದಾರೆ. ‘ನಾನು ಎಂಟು ವರ್ಷದವಳಿದ್ದಾಗ ನನ್ನ ತಂದೆ ನನ್ನ ಮೇಲೆ ಲೈಂಗಿಕ ಶೋಷಣೆ ಮಾಡುತ್ತಿದ್ದರು’ ಎಂದು ಹೇಳಿದ್ದಾರೆ.   ಪತ್ರಕರ್ತೆ ಬರ್ಕಾ ದತ್ ಅವರ ದಿ ಮೋಜೊ ಸ್ಟೋರಿಯ ‘ವಿ ದಿ ವುಮನ್’ ಸಂದರ್ಶನದಲ್ಲಿ ಖುಷ್ಬೂ ಈ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ಖುಷ್ಬೂ ಇತ್ತೀಚೆಗಷ್ಟೇ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯಾಗಿ ಅಧಿಕಾರ …

Read More »

ಮಾಡಾಳ್ ವಿರುದ್ಧ ಕ್ರಮಕ್ಕೆ ವರದಿ ಸಲ್ಲಿಕೆ: B,S.Y

ಕಲಬುರಗಿ: ‘ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ(ಕೆಎಸ್‌ಡಿಎಲ್‌) ಅಧ್ಯಕ್ಷರೂ ಆಗಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರ ವಿರುದ್ಧ ಕ್ರಮಕ್ಕೆ ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿಗೆ ವರದಿ ಸಲ್ಲಿಸಲಾಗಿದೆ’ ಎಂದು ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದರು. ಕಲಬುರಗಿ ಜಿಲ್ಲೆಯ ಜೇವರ್ಗಿಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡುವ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು, ‘ಕ್ಷಮಿಸಲಾರದಂತಹ ಅಕ್ರಮ ಎಸಗಿ ತಪ್ಪು ಮಾಡಿದ್ದಾರೆ. ಹೀಗಾಗಿ ಅವರ …

Read More »

ಲೋಕಾಯುಕ್ತಕ್ಕೆ ಯಾವುದೇ ತಡೆ ಇಲ್ಲ : ಬೊಮ್ಮಾಯಿ

ಬೆಂಗಳೂರು: ‘ಶಾಸಕ ವಿರೂಪಾಕ್ಷಪ್ಪ ಮಾಡಾಳ್‌ ಪ್ರಕರಣದಲ್ಲಿ ಕಾನೂನಿನಲ್ಲಿ ಏನೆಲ್ಲ ಮಾಡಬೇಕೊ ಅದಕ್ಕೆ ಲೋಕಾಯುಕ್ತ ಸ್ವತಂತ್ರವಾಗಿದೆ. ಲೋಕಾಯುಕ್ತ ಎಲ್ಲವನ್ನೂ ಮಾಡಬಹುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ಲೋಕಾಯುಕ್ತಕ್ಕೆ ಯಾವುದೇ ತಡೆ ಇಲ್ಲ’ ಎಂದರು. ಮಂಡ್ಯದಲ್ಲಿ ಪ್ರಧಾನಿ ಕಾರ್ಯಕ್ರಮದ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಇನ್ನೂ ಯಾವುದೂ ಅಂತಿಮ ಆಗಿಲ್ಲ’ ಎಂದರು. ‘ಮಂಡ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ಯೋಜನೆ ಮಾಡಲಾಗಿದೆ. ಪ್ರಧಾನಿ ಕಚೇರಿ ಜೊತೆ …

Read More »

ಡಿಕೆಶಿ ತಾಲಿಬಾನ್ ಬೆಂಬಲಿಗರೇ? -ಪ್ರಲ್ಹಾದ ಜೋಶಿ

ಹೊಸಪೇಟೆ (ವಿಜಯನಗರ): ‘ಕುಕ್ಕರ್‌ ಬಾಂಬ್‌ ಸ್ಫೋಟವನ್ನು ನಾವೇ ಮಾಡಿದ್ದೇವೆ ಎಂದು ಐಎಸ್‌ಐಎಸ್‌ ಸಂಘಟನೆಯವರು ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರೇ ಈಗ ಐಎಸ್‌ಐಎಸ್‌ಗೆ ಸಪೋರ್ಟ್‌ ಮಾಡ್ತಿರಾ? ತಾಲಿಬಾನ್‌ಗೆ ಸಪೋರ್ಟ್‌ ಮಾಡ್ತಿರಾ? ಅಥವಾ ರಾಜ್ಯದ ಕ್ಷಮೆ ಕೇಳ್ತಿರಾ ಎನ್ನುವುದನ್ನು ತಿಳಿಸಬೇಕು’ ಎಂದು ಕೇಂದ್ರ ಗಣಿ, ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದರು. ನಗರದಲ್ಲಿ ಸೋಮವಾರ ಏರ್ಪಡಿಸಿದ್ದ ವಿಜಯನಗರ ಜಿಲ್ಲಾಮಟ್ಟದ ಫಲಾನುಭವಿಗಳ ಸಮ್ಮೇಳನದಲ್ಲಿ ಭಾಗವಹಿಸಿದ ನಂತರ ಪತ್ರಕರ್ತರೊಂದಿಗೆ …

Read More »

‘ಕೋಡಿಮಠದ ಶ್ರೀ’ ಭೇಟಿಯಾದ ಸಿದ್ದರಾಮಯ್ಯ : ರಾಜಕೀಯ ಭವಿಷ್ಯ ಕೇಳಿದ್ರಾ ಮಾಜಿ ಸಿಎಂ..?

ಹಾಸನ : ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಕೋಡಿಮಠಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಿ ಕೋಡಿಮಠದ ಶ್ರೀಗಳನ್ನು ಭೇಟಿಯಾಗಿದ್ದಾರೆ. ರಾಜಕೀಯ ಭವಿಷ್ಯ ನುಡಿಯುವ ಶಿವಾನಂದ ಶಿವಯೋಗಿ ಶ್ರೀಗಳನ್ನು ಸಿದ್ದರಾಮಯ್ಯ ಭೇಟಿ ಮಾಡಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.   ಸ್ವಾಮೀಜಿ ಬಳಿ ಸಿದ್ದರಾಮಯ್ಯ ಏನಾದರೂ ರಾಜಕೀಯ ಭವಿಷ್ಯ ಕೇಳಿದ್ರಾ..? ಎಂಬ ಪ್ರಶ್ನೆ ಮೂಡಿದೆ.ಸುಮಾರು 1 ಗಂಟೆಗಳ ಕಾಲ ಕೋಡಿಮಠದ ಶ್ರೀ ಗಳ ಜೊತೆ ಸಿದ್ದರಾಮಯ್ಯ ಮಾತುಕತೆ ನಡೆಸಿದರು. ಶ್ರೀಗಳು ಕೂಡ ಸಿದ್ದರಾಮಯ್ಯಗೆ …

Read More »

26ರಂದು ದೇವೇಗೌಡ ರೋಡ್‌ ಶೋ: H,D,K,

ಬೆಂಗಳೂರು: ಜೆಡಿಎಸ್‌ ಹಮ್ಮಿಕೊಂಡಿರುವ ಪಂಚರತ್ನ ರಥಯಾತ್ರೆಯ ಸಮಾರೋಪ ಮಾರ್ಚ್‌ 26ರಂದು ನಡೆಯಲಿದ್ದು, ಆ ದಿನ ಕುಂಬಳಗೋಡಿನಿಂದ ಆರಂಭವಾಗುವ ರೋಡ್‌ಶೋದಲ್ಲಿ ಪಕ್ಷದ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ಭಾಗವಹಿಸಲಿದ್ದಾರೆ. ನಾಗಮಂಗಲ ಕ್ಷೇತ್ರದ ಶಾಸಕ ಸುರೇಶ್‌ ಗೌಡ ಅವರು ನಗರದಲ್ಲಿ ಭಾನುವಾರ ನಗರದಲ್ಲಿ ಆಯೋಜಿಸಿದ್ದ ಕ್ಷೇತ್ರದ ನಿವಾಸಿಗಳ ಸಭೆಯಲ್ಲಿ ಮಾತನಾಡಿದ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಈ ವಿಷಯ ತಿಳಿಸಿದರು. ‘ಮಂಡ್ಯ ಮತ್ತು ಮೈಸೂರು ನಡುವಿನ ಸ್ಥಳವೊಂದರಲ್ಲಿ ಯಾತ್ರೆಯ ಸಮಾರೋಪ ನಡೆಯಲಿದೆ. ಸಮಾರೋಪದ …

Read More »

ಚುನಾವಣಾ ಆಯೋಗವು ಅಧಿಕಾರದಲ್ಲಿರುವ ‘ಗುಲಾಮ’; ಉದ್ಧವ್ ಠಾಕ್ರೆ ಟೀಕೆ

ಮುಂಬೈ: ಪಕ್ಷದ ಚಿಹ್ನೆ ಮತ್ತು ಹೆಸರನ್ನು ಕಳೆದುಕೊಂಡು ಕೆರಳಿರುವ ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ, ಮತ್ತೊಮ್ಮೆ ಚುನಾವಣಾ ಆಯೋಗದ ವಿರುದ್ಧ ಕಿಡಿಕಾರಿದ್ದಾರೆ. ಚುನಾವಣಾ ಆಯೋಗವನ್ನು ಅಧಿಕಾರದಲ್ಲಿರುವವರ ‘ಗುಲಾಮ’ ಎಂದು ಕರೆದಿದ್ದಾರೆ.   “ನೀವು (ಚುನಾವಣಾ ಆಯೋಗ) ನಮ್ಮಿಂದ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಕಿತ್ತುಕೊಂಡಿದ್ದೀರಿ, ಆದರೆ ನೀವು ನನ್ನಿಂದ ಶಿವಸೇನೆಯನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ” ಎಂದು ರತ್ನಗಿರಿ ಜಿಲ್ಲೆಯ ಖೇಡ್‌ನಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಉದ್ಧವ್ ಹೇಳಿದರು. ಭಾರತೀಯ ಜನತಾ ಪಕ್ಷವು …

Read More »

ಪ್ರಧಾನಿ ಮೋದಿ ವಿದ್ಯಾರ್ಥಿಗಳು ಮತ್ತು ಬಡವರ ಶಾಪ ಎದುರಿಸಲಿದ್ದಾರೆ: ಅರವಿಂದ ಕೇಜ್ರಿವಾಲ್

ಹೊಸದಿಲ್ಲಿ: ದಿಲ್ಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಬಂಧನವನ್ನು ವಿರೋಧಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿಸೋಡಿಯಾ ಅವರನ್ನು ‘ಸಂತ ಮತ್ತು ಮಹಾನ್ ಚೇತನ’ ಎಂದು ಬಣ್ಣಿಸಿರುವ ಕೇಜ್ರಿವಾಲ್, ಜೈಲಿಗೆ ಹಾಕಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳು ಮತ್ತು ಬಡವರ ಶಾಪವನ್ನು ಎದುರಿಸಲಿದ್ದಾರೆ ಎಂದು ಹೇಳಿದ್ದಾರೆ.   ಭಾನುವಾರ ಛತ್ತೀಸ್‌ ಗಢದ ರಾಜಧಾನಿ ರಾಯ್ಪುರದ ಹೊರವಲಯದಲ್ಲಿರುವ ಜೋರಾ ಮೈದಾನದಲ್ಲಿ ಆಪ್ ಕಾರ್ಯಕರ್ತರ …

Read More »

ರಾಜಕೀಯ ಅಸ್ತಿತ್ವಕ್ಕಾಗಿ ಕಾಂಗ್ರೆಸ್ ನಿಂದ ಬಂದ್ ಕರೆ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಭ್ರಷ್ಟಾಚಾರದ ಕೂಪ ಕಾಂಗ್ರೆಸ್, ಅವರು ಮಾಡಿರುವ ಕರ್ಮಕಾಂಡ ಒಂದಾ ಎರಡೇ. ಕಾಂಗ್ರೆಸ್ ಪಕ್ಷವೇ ಬಂದಾಗುತ್ತಿದೆ. ಇಂತಹ ಪ್ರತಿಭಟನೆ ಮೂಲಕ ಮುಂದಿನ ಚುನಾವಣೆ ನಡೆಸಬೇಕು ಎಂದುಕೊಂಡಿದ್ದಾರೆ. ಜನರು ಬಹಳ ಬುದ್ಧಿವಂತರು ಎಂದು‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.   ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ವಿರುಪಾಕ್ಷಪ್ಪ ಮಾಡಾಳ ಅವರ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜಕೀಯ ಅಸ್ತಿತ್ವಕ್ಕಾಗಿ ಬಂದ್ ಗೆ ಕರೆ ಕೊಟ್ಟಿದ್ದಾರೆ. ಆರೋಪ ಮಾಡುವವರು ಮೊದಲು ಶುದ್ಧ …

Read More »

ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಶಾಸಕ ಮಾಡಾಳು ವಿರೂಪಾಕ್ಷಪ್ಪ

ಬೆಂಗಳೂರು: ಲಂಚ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ಯಿರುವ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಮಾಡಾಳು ವಿರೂಪಾಕ್ಷಪ್ಪ ಅವರು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಬೇಕೆಂದು ವಕೀಲರು ಮನವಿ ಮಾಡಿದರು.     ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ನ್ಯಾಯಪೀಠವು ಮಂಗಳವಾರ ಅರ್ಜಿ ವಿಚಾರಣೆ ನಡೆಸುವುದಾಗಿ ಹೇಳಿದೆ. ರಾಜ್ಯ ಬಂದ್‌ ಗೆ ಕಾಂಗ್ರೆಸ್‌ ಕರೆ ಇತ್ತ ವಿರೂಪಾಕ್ಷಪ್ಪ ಅವರ ಬಂಧನ ಮತ್ತು …

Read More »