ಹುಬ್ಬಳ್ಳಿ ನವೆಂಬರ್ 16: ಉತ್ತರ ಕರ್ನಾಟಕದ ಮಂದಿಗೆ ಹೀಗೊಂದು ಸಿಹಿ ಸುದ್ದಿ. ಅದೇನೆಂದರೆ ಹೈ-ಸ್ಪೀಡ್ ವಂದೇ ಭಾರತ್ ರೈಲು ಸೇವೆಯನ್ನು ಬೆಂಗಳೂರು-ಹುಬ್ಬಳ್ಳಿ ಮಾರ್ಗದಲ್ಲಿ ಒದಗಿಸಲು ಯೋಜನೆ ರೂಪಸಲಾಗುತ್ತಿದೆ. ಇದಕ್ಕೆ ಗ್ರೀನ್ ಸಿಗ್ನಲ್ ಸಿಕ್ಕರೆ ಮುಂದೊಂದು ದಿನ ಕರ್ನಾಟಕದಲ್ಲಿ ಎರಡನೇ ವಂದೇ ಭಾರತ್ ರೈಲು ಅದರಲ್ಲೂ ಉತ್ತರ ಕರ್ನಾಟಕದ ಕಡೆಗೆ ಪ್ರಯಾಣಿಸಲಿದೆ. ಕರ್ನಾಟಕದ ಬೆಂಗಳೂರು-ಹುಬ್ಬಳ್ಳಿ ಮಾರ್ಗದಲ್ಲಿ ಹೊಸ ಹೈ-ಸ್ಪೀಡ್ ವಂದೇ ಭಾರತ್ ರೈಲು ಸೇವೆಯನ್ನು ಪ್ರಾರಂಭಿಸಲು ನೈಋತ್ಯ ರೈಲ್ವೆ (SWR) ರೈಲ್ವೇ …
Read More »‘ಮುಂಬೈ ವಿರುದ್ಧ ಆಡಲಾರೆ.’: ಐಪಿಎಲ್ ತೊರೆದ ಕೈರನ್ ಪೊಲಾರ್ಡ್
ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಆಡಿದ ಶ್ರೇಷ್ಠ ವಿದೇಶಿ ಆಟಗಾರರಲ್ಲಿ ಒಬ್ಬರಾದ ಕೈರನ್ ಪೊಲಾರ್ಡ್ ಅವರು ಐಪಿಎಲ್ ಗೆ ವಿದಾಯ ಹೇಳಿದ್ದಾರೆ. ಐಪಿಎಲ್ ನಲ್ಲಿ ಇದುವರೆಗೆ ಕೇವಲ ಮುಂಬೈ ಇಂಡಿಯನ್ಸ್ ಗೆ ಆಡಿರುವ ಪೊಲಾರ್ಡ್ ಕಳೆದ 13 ಸೀಸನ್ ಗಳಲ್ಲಿ ಮುಂಬೈ ತಂಡದ ಆಧಾರ ಸ್ಥಂಭವಾಗಿದ್ದಾರೆ. ಕಳೆದ ಸೀಸನ್ ನಲ್ಲಿ ಕಳಪೆ ಪ್ರದರ್ಶನ ತೋರಿದ್ದ ಪೊಲಾರ್ಡ್ ಅವರನ್ನು ಈ ಬಾರಿ ಫ್ರಾಂಚೈಸಿ ಉಳಿಸಿಕೊಳ್ಳುವುದಿಲ್ಲ ಎಂಬ ವದಂತಿಗಳ ನಡುವೆ …
Read More »ಅರಮನೆಯಲ್ಲಿರುವ ಗುಂಬಜ್ ಮಾದರಿ ಗೋಪುರ ಕೆಡವಲು ತಾಕತ್ ಇದೆಯೇ?: ಸಿ.ಎಂ.ಇಬ್ರಾಹಿಂ ಪ್ರಶ್ನೆ
ಮೈಸೂರು: ಟಿಪ್ಪುಸುಲ್ತಾನ್ ಬಗ್ಗೆ ಬ್ರಿಟಿಷರು ಹಾಡಿ ಹೊಗಳಿದ್ದಾರೆ. ರಾಜಮನೆತನದವರು ಟಿಪ್ಪು ಹುತಾತ್ಮರಾದ ಮೇಲೆ ಹೇಳಿರುವ ಮಾತುಗಳು ಇತಿಹಾಸದಲ್ಲಿ ದಾಖಲಾಗಿದ್ದರೂ ಸಂಸದ ಪ್ರತಾಪ್ ಸಿಂಹ ಬಾಯಿಗೆ ಬಂದಂತೆ ಮಾತನಾಡುವುದನ್ನು ಬಿಡಬೇಕು. ಟಿಪ್ಪು ಬಗ್ಗೆ ಏನು ಅರಿಯದೆ ಸುಳ್ಳು ಹೇಳುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ವಾಗ್ದಾಳಿ ನಡೆಸಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಟಿಪ್ಪುಸುಲ್ತಾನ್ ಬ್ರಿಟಿಷರ ವಿರುದ್ಧ ಹೋರಾಡಿದ ಮಹಾನ್ ನಾಯಕ. ಅವರ ಕಾಲದಲ್ಲಿ ನಡೆದಿರುವ ಕ್ರಾಂತಿಕಾರಕ ಯೋಜನೆಗಳು, ಅಭಿವೃದ್ಧಿ, ಹೋರಾಡಿದನ್ನು …
Read More »ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಗ್ರಾಮ ಲೆಕ್ಕಿಗ ದೂರು
ದಾವಣಗೆರೆ: ಸಿಎಂ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದಡಿ ನ್ಯಾಮತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನ್ಯಾಮತಿ ತಾಲೂಕಿನ ಕುಂಕುವ ವೃತ್ತದ ಗ್ರಾಮಲೆಕ್ಕಿಗ ಎಸ್.ಪ್ರಶಾಂತ್‌ಕುಮಾರ್ ಎಂಬುವವರು, ಶಾಸಕ ರೇಣುಕಾಚಾರ್ಯ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸುವ ಜತೆಗೆ ತಮ್ಮನ್ನು ಸಾರ್ವಜನಿಕವಾಗಿ ನಿಂದಿಸಿದ್ದಾರೆ, ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಕೋರಿ ದೂರು ಸಲ್ಲಿಸಿದ್ದಾರೆ. ರೇಣುಕಾಚಾರ್ಯ ವಿರುದ್ಧ ಐಪಿಸಿ ಕಲಂ 186 ಅಡಿಯಲ್ಲಿ ದೂರು ದಾಖಲಾಗಿದೆ. ಈಚೆಗೆ …
Read More »ಲಂಚಕ್ಕೆ ಬೇಡಿಕೆಯಿಟ್ಟಿದ್ದ ವಿಶೇಷ ತಹಶೀಲ್ದಾರ್ ಸೆರೆ
ಬೆಂಗಳೂರು: ಜಮೀನಿನ ಖಾತಾ ಬದಲಾವಣೆಗೆ 10 ಲಕ್ಷ ರೂ.ಲಂಚಕ್ಕೆ ಬೇಡಿಕೆಯಿಟ್ಟಿದ್ದ ವಿಶೇಷ ತಹಶೀಲ್ದಾರ್ ಹಾಗೂ ಅವರಿಗೆ ಸಹಕರಿಸಿದ್ದ ಮಧ್ಯವರ್ತಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಉತ್ತರ ವಿಭಾಗದ ವಿಶೇಷ ತಹಶೀಲ್ದಾರ್ ವರ್ಷಾ ಒಡೆಯರ್ ಹಾಗೂ ಮಧ್ಯವರ್ತಿ ರಮೇಶ್ ಬಂಧಿತರು. ದಾಸನಪುರದ ನಿವಾಸಿ ಕಾಂತರಾಜು ಎಂಬುವವರು ತಮ್ಮ ಜಮೀನಿನ ಖಾತಾ ಬದಲಾವಣೆಗೆ ಅರ್ಜಿ ಸಲ್ಲಿಸಿದ್ದರು. ಖಾತಾ ಬದಲಾವಣೆ ಮಾಡಿಕೊಡಲು ಆರೋಪಿ ವರ್ಷಾ 10 ಲಕ್ಷ ರೂ.ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಲಂಚ ಕೊಡಲು ಇಚ್ಛಿಸದ …
Read More »ಬೆಂಗಳೂರು ಟೆಕ್ ಶೃಂಗಕ್ಕೆ ಇಂದು ಚಾಲನೆ
ಬೆಂಗಳೂರು: ಐಟಿ-ಬಿಟಿ ಮತ್ತು ಸಂಬಂಧಿತ ಉದ್ಯಮಗಳಿಗೆ ಉತ್ತೇಜನ ನೀಡುವ ಬೆಂಗಳೂರು ಟೆಕ್ ಶೃಂಗಸಭೆ (ಬಿಟಿಎಸ್)ಯ 25ನೇ ಆವೃತ್ತಿ ಬುಧವಾರ ಆರಂಭವಾಗಲಿದೆ. ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ (ಎಸ್‌ಟಿಪಿಐ) ಸಹಯೋಗ ದೊಂದಿಗೆ ಬೆಂಗಳೂರು ಅರಮನೆಯಲ್ಲಿ ಶೃಂಗ ಸಭೆ ನಡೆಸಲಾಗುತ್ತಿದೆ. ಶೃಂಗಸಭೆ ನ. 18ರ ವರೆಗೆ ನಡೆಯಲಿದೆ. ಬುಧವಾರ ಬೆಳಗ್ಗೆ 10 ಗಂಟೆಗೆ ಪ್ರಧಾನಿ ಮೋದಿ ಅವರ ಧ್ವನಿಮುದ್ರಿತ ಸಂದೇಶದೊಂದಿಗೆ ಶೃಂಗಸಭೆಗೆ ಚಾಲನೆ ದೊರೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಫಿನ್‌ಲ್ಯಾಂಡ್ ನ ವಿಜ್ಞಾನ …
Read More »ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಸರಕಾರದ ಹಂತಕ್ಕೆ
ಬೆಂಗಳೂರು: ಲೈಂಗಿಕ ಹಗರಣದಲ್ಲಿ ಸಿಲುಕಿರುವ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರು ಜೈಲು ಸೇರಿರುವ ಹಿನ್ನೆಲೆಯಲ್ಲಿ ಮಠಕ್ಕೆ ಆಡಳಿತಾಧಿಕಾರಿ ನೇಮಕ ವಿಚಾರ ಈಗ ಸರ್ಕಾರದ ಹಂತಕ್ಕೆ ತಲುಪಿದೆ. ಮಠದ ಆಡಳಿತಾಧಿಕಾರಿ ನೇಮಕ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಚಿತ್ರದುರ್ಗ ಜಿಲ್ಲಾಧಿಕಾರಿ ಕಡತವನ್ನು ಸರ್ಕಾರ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದ್ದು, ಸರ್ಕಾರ ಶೀಘ್ರದಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಬಹುದು ಎಂದು ಉನ್ನತ ಮೂಲಗಳು ತಿಳಿಸಿವೆ. ಈ ಕಡತ ಈಗ ಕಂದಾಯ ಇಲಾಖೆ ಕಾರ್ಯದರ್ಶಿ ಕಚೇರಿಯನ್ನು ತಲುಪಿದ್ದು, …
Read More »ಮಕ್ಕಳ ಅಭಿವೃದ್ಧಿ ಮೇಲಿದೆ ದೇಶದ ಭವಿಷ್ಯ; ಮಲಿಕಜಾನ
ಬೆಳಗಾವಿ: ಪ್ರತಿಯೊಂದು ದೇಶದ ಭವಿಷ್ಯ ಅಲ್ಲಿಯ ಮಕ್ಕಳ ಸಮಗ್ರ ಅಭಿವೃದ್ಧಿಯ ಮೇಲೆ ನಿಂತಿದೆ. ಮಕ್ಕಳ ಅಭಿವೃದ್ಧಿಯು ಅವರ ಶಿಕ್ಷಣದ ಮೇಲಿದೆ. ಹೀಗಾಗಿ ಎಲ್ಲ ವರ್ಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವತ್ತ ಹೆಚ್ಚಿನ ಗಮನ ಕೊಡಬೇಕಿದೆ ಎಂದು ಶಿಕ್ಷಕ ಮಲಿಕಜಾನ ಗದಗಿನ ಹೇಳಿದರು. ಕಣಬರಗಿಯ ಶ್ರೀ ರವಿಶಂಕರ ವಿದ್ಯಾವರ್ಧಕ ಸಂಸ್ಥೆಯ ಸಮತಾ ಶಾಲೆಯಲ್ಲಿ ಜರುಗಿದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು, ಪಂಚ ವಾರ್ಷಿಕ ಯೋಜನೆಗಳ ಮೂಲಕ ಕೃಷಿ, ಕೈಗಾರಿಕೆ …
Read More »300ರಲ್ಲಿ 43 ಹುದ್ದೆ ಭರ್ತಿಗೆ ಪ್ರಸ್ತಾವ; ಉದ್ಯೋಗ ಆಕಾಂಕ್ಷಿಗಳ ಆಕ್ರೋಶ
ಬೆಂಗಳೂರು: ಕೆಎಎಸ್ (ಕಿರಿಯ ಶ್ರೇಣಿ) 40 ಹುದ್ದೆಗಳು ಸೇರಿದಂತೆ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ 300ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇದ್ದರೂ, ಕೇವಲ 43 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಕರ್ನಾಟಕ ಲೋಕಸೇವಾ ಆಯೋಗಕ್ಕೆ (ಕೆಪಿಎಸ್‌ಸಿ) ಪ್ರಸ್ತಾವ ಕಳುಹಿಸಿರುವುದು ಉದ್ಯೋಗ ಆಕಾಂಕ್ಷಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಆದರೆ, ಪ್ರಸ್ತಾವದ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಡಿಪಿಎಆರ್) ಸ್ಪಷ್ಟನೆ ಕೇಳಿರುವ ಕೆಪಿಎಸ್‌ಸಿ, ನ. 1ರಿಂದ …
Read More »ಸುರಕೋಡ: ಪ್ರೀತಿಸಿ ಮದುವೆಯಾದ ಜೋಡಿಗೆ ಸ್ವಜಾತಿಯವರಿಂದಲೇ ಬಹಿಷ್ಕಾರ
ನರಗುಂದ (ಗದಗ ಜಿಲ್ಲೆ): ಪ್ರೀತಿಸಿ ಮದುವೆಯಾದ ಒಂದೇ ಜಾತಿಯ ಯುವಕ, ಯುವತಿ 14 ವರ್ಷಗಳ ನಂತರ ಗ್ರಾಮಕ್ಕೆ ಬಂದಿದ್ದು, ಅವರ ಕುಟುಂಬವನ್ನು ಅದೇ ಜಾತಿಯವರು ಬಹಿಷ್ಕರಿಸಿದ ಪ್ರಕರಣ ತಾಲ್ಲೂಕಿನ ಸುರಕೋಡದಲ್ಲಿ ನಡೆದಿದೆ. ಶೋಭಾ ಮತ್ತು ಶಿವಾನಂದ ಅವರ ಕುಟುಂಬ ಬಹಿಷ್ಕಾರಕ್ಕೊಳಗಾಗಿದೆ. ಶೋಭಾ ಮತ್ತು ಶಿವಾನಂದ ಅವರ ಕುಟುಂಬ ಬಹಿಷ್ಕಾರಕ್ಕೊಳಗಾಗಿದೆ. ‘ಶೋಭಾ ಮನೆಯವರು ಕೆಲವರೊಂದಿಗೆ ಬಂದು ಶಿವಾನಂದ ಸುರಕೋಡ (ಮಾದರ) ಅವರ ತಂದೆ ಸಾಬಣ್ಣನವರ ಮನೆಗೆ ಕೀಲಿ ಹಾಕಿ ಕುಟುಂಬವನ್ನು ಹೊರಹಾಕಿದ್ದಾರೆ. …
Read More »
Laxmi News 24×7