Breaking News

ರಾಜ್ಯದ ಜನತೆಗೆ ನೆಮ್ಮದಿಯ ಸುದ್ದಿ : ಹಾಲಿನ ಬೆಲೆ ಹೆಚ್ಚಳ ಪ್ರಸ್ತಾವನೆಗೆ ಸಿಎಂ ಬೊಮ್ಮಾಯಿ ಬ್ರೇಕ್!

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿದ್ದ ರಾಜ್ಯದ ಜನತೆಗೆ ಸಿಎಂ ಬಸವರಾಜ ಬೊಮ್ಮಾಯಿ ನೆಮ್ಮದಿಯ ಸುದ್ದಿ ನೀಡಿದ್ದು, ಹಾಲಿನ ಬೆಲೆ ಹೆಚ್ಚಳದ ಕೆಎಂಎಫ್ ಪ್ರಸ್ತಾವನೆಗೆ ಸಿಎಂ ಬಸವರಾಜ ಬೊಮ್ಮಾಯಿ ಬ್ರೇಕ್ ಹಾಕಿದ್ದಾರೆ.   ಹಾಲಿನ ಬೆಲೆಯನ್ನು ಪ್ರತಿ ಲೀಟರ್ ಗೆ 3 ರೂ. ಹೆಚ್ಚಳ ಮಾಡುವಂತೆ ಕೆಎಂಎಫ್ ಸಲ್ಲಿಸಿರುವ ಪ್ರಸ್ತಾವನೆಗೆ ಸಿಎಂ ಬಸವರಾಜ ಬೊಮ್ಮಾಯಿ ಒಪ್ಪಿಗೆ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ.   ಹಾಲಿನ ಬೆಲೆ ಹೆಚ್ಚಳ ಮಾಡುವುದರಿಂದ ಗ್ರಾಹಕರಿಗೆ …

Read More »

ಅಂಬಾರಿ’ಯಲ್ಲಿ ಮಧ್ಯರಾತ್ರಿವರೆಗೂ ದೀಪಾಲಂಕಾರ ವೀಕ್ಷಿಸಿದ ಸಿಎಂ

ಮೈಸೂರು: ದಸರಾ ಅಂಗವಾಗಿ ನಗರದಲ್ಲಿ ಮಾಡಿರುವ ವಿದ್ಯುತ್‌ ದೀಪಾಲಂಕಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್‌ ಮತ್ತು ಇಂಧನ ಸಚಿವ ಸುನೀಲ್‌ಕುಮಾರ್‌ ಭಾನುವಾರ ಮಧ್ಯರಾತ್ರಿವರೆಗೂ ವೀಕ್ಷಿಸಿದರು.   ರಾತ್ರಿ 10.30ರ ಸುಮಾರಿಗೆ ನಗರ ಪ್ರದಕ್ಷಿಣೆ ಆರಂಭಿಸಿದ ಅವರು, ರ‍್ಯಾಡಿಷನ್ ಬ್ಲೂ ಹೋಟೆಲ್‌ನಿಂದ ಕೆಎಸ್‌ಆರ್‌ಟಿಸಿಯ ಎರಡು ವೋಲ್ವೋ ಬಸ್ ಮೂಲಕ ಜೆಎಸ್‌ಎಸ್‌ ಮಹಾವಿದ್ಯಾಪೀಠ ವೃತ್ತಕ್ಕೆ ಬಂದರು. ಅಲ್ಲಿಂದ ಪ್ರವಾಸೋದ್ಯಮ ನಿಗಮದ ‘ಅಂಬಾರಿ’ ಡಬ್ಬಲ್ ಡೆಕ್ಕರ್ …

Read More »

ಭ್ರಷ್ಟಾಚಾರ ಮುಚ್ಚಲು ಜಾತಿ ಮೊರೆ ಹೋದ ಬಿಜೆಪಿ: ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿಯವರ ಭ್ರಷ್ಟಾಚಾರ, ತಪ್ಪುಗಳನ್ನು ಮುಚ್ಚಿಕೊಳ್ಳಲು ಜಾತಿ ಮೊರೆ ಹೋಗಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಕಾಂಗ್ರೆಸ್‌ನ ಪೇಸಿಎಂ ಅಭಿಯಾನ ಲಿಂಗಾಯತ ಮುಖ್ಯಮಂತ್ರಿಗೆ ಅಪಮಾನ ಮಾಡುವ ಷಡ್ಯಂತ್ರ ಎಂಬ ಆರೋಪಕ್ಕೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಗುತ್ತಿಗೆದಾರರ ಸಂಘದವರು ಶೇ. 40 ಪರ್ಸೆಂಟೆಜ್‌ ಬಗ್ಗೆ ಬಿಜೆಪಿ ಸರಕಾರದ ವಿರುದ್ಧ ಆರೋಪ ಮಾಡಿದ್ದಾರೆ. ಕಳೆದ 1 ವರ್ಷದಿಂದ ಈ ಬಗ್ಗೆ ಚರ್ಚೆಗಳು ನಡೆಯುತ್ತಿದೆ. ಈ ವಿಚಾರವನ್ನು ಅಸೆಂಬ್ಲಿಯಲ್ಲಿ ಎತ್ತಿದರೆ ಜಾತಿ ವಿಚಾರ ಹೇಗೆ …

Read More »

ವಿಧಾನಸಭೆ ಬಳಿಕವೇ ತಾ.ಪಂ.-ಜಿ.ಪಂ ಚುನಾವಣೆ?

ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭೆಯ ಚುನಾವಣೆಗೆ “ಉಪಾಂತ್ಯ’ ಎಂದೇ ಪರಿಗಣಿಸಲಾಗಿದ್ದ ತಾ.ಪಂ.- ಜಿ.ಪಂ. ಚುನಾ ವಣೆ ಗಳು 2023ರ ಮೇ ಒಳಗೆ ನಡೆಯವುದಕ್ಕೆ ಸಾಧ್ಯವೇ ಇಲ್ಲ. ರಾಜ್ಯ ಸರಕಾರದಲ್ಲಿನ ಈಗಿನ ಬೆಳ ವಣಿಗೆಗಳನ್ನು ಗಮನಿಸಿದರೆ ವಿಧಾನಸಭೆ ಚುನಾವಣೆ ಬಳಿಕವಷ್ಟೇ ತಾ.ಪಂ. ಮತ್ತು ಜಿ.ಪಂ. ಚುನಾವಣೆಗಳು ನಡೆಯಲಿವೆ. ಒಂದು ಕಡೆ ಕ್ಷೇತ್ರಗಳ ಗಡಿ ನಿಗದಿಗೆ ಸೀಮಾ ನಿರ್ಣಯ ಆಯೋಗ ಇನ್ನೂ ಮೂರು ತಿಂಗಳು ಕಾಲಾವಕಾಶ ಕೇಳಿದೆ. ಇನ್ನೊಂದಡೆ ಕ್ಷೇತ್ರಗಳು ನಿಗದಿಯಾದ ಅನಂತರ ಮೀಸಲಾತಿ ಪ್ರಕ್ರಿಯೆ ಪೂರ್ಣಗೊಳಿಸಲು ರಾಜ್ಯ …

Read More »

ಸಿಎಂ ತಂಟೆಗೆ ಬರಬೇಡಿ: ಕಾಂಗ್ರೆಸ್ ವಿರುದ್ಧ ಲಿಂಗಾಯತ ಸಮುದಾಯ ಆಕ್ರೋಶ

ಕಲಬುರ್ಗಿ: ‘ಪೇ ಸಿಎಂ’ ಅಭಿಯಾನಕ್ಕೆ ಲಿಂಗಾಯತ ಸಮುದಾಯದಿಂದ ಆಕ್ರೋಶ ವ್ಯಕ್ತವಾಗಿದೆ. ಕಾಂಗ್ರೆಸ್ ನವರೇ ಸಮುದಾಯದ ತಂಟೆಗೆ ಬರಬೇಡಿ, ಬಂದಲ್ಲಿ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಕೆಯ ಪೋಸ್ಟರ್ ಗಳನ್ನು ಕಲಬುರ್ಗಿ ನಗರದ ವಿವಿಧಡೆ ಹಚ್ಚಲಾಗಿದೆ.   ವೀರಶೈವ ಲಿಂಗಾಯತ ಸ್ವಾಭಿಮಾನಿ ಬಳಗ, ಅಖಿಲ ಭಾರತ ವೀರಶೈವ ಮಹಾಸಭಾ ಪದಾಧಿಕಾರಿಗಳು, ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಅವಮಾನ ಮಾಡಿದಂತಾಗಿದೆ. ವೀರಶೈವ ಲಿಂಗಾಯತರ ಭಾವನೆಗಳಿಗೆ ಅವಮಾನ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ಸಿಗರೇ …

Read More »

ರಾಷ್ಟ್ರಪತಿಗೆ ಸ್ವಾಗತ ಕೋರುವ ಬ್ಯಾನರ್‌ನಲ್ಲಿ ಎಡವಟ್ಟು ಮಾಡಿಕೊಂಡ ಶಾಸಕ

ಧಾರವಾಡ: ರಾಷ್ಟ್ರಪತಿಗೆ ಸ್ವಾಗತ ಕೋರುವ ತರಾತುರಿಯಲ್ಲಿ ನಗರದ ಶಾಸಕರೊಬ್ಬರು ಎಡವಟ್ಟು ಮಾಡಿಕೊಂಡಿದ್ದಾರೆ. ಭಾರತದ ಮೊದಲ ಮಹಿಳಾ ರಾಷ್ಟ್ರಪತಿ ದ್ರೌಪದಿ ಮುರ್ಮು ಎಂದು ಬ್ಯಾನರ್‌ನಲ್ಲಿ ಬರೆಸಿರುವುದು ಟೀಕೆಗೆ ಕಾರಣವಾಗಿದೆ. ಸೆ.26ರಂದು ದಸರಾ ಉದ್ಘಾಟನೆಗೆ ಮೈಸೂರಿಗೆ ಆಗಮಿಸಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಬಳಿಕ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಿಂದ ಆಯೋಜಿಸಿರುವ ʼಪೌರ ಸನ್ಮಾನʼ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಆದರೆ, ರಾಷ್ಟ್ರಪತಿ ಸ್ವಾಗತದ ಕೋರುವ ತರಾತುರಿಯಲ್ಲಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ್ ಬೆಲ್ಲದ್ ಅವರು, …

Read More »

ವೈಭವದ ನಾಡಹಬ್ಬಕ್ಕೆ ಇಂದು ರಾಷ್ಟ್ರಪತಿ ಚಾಲನೆ: ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟಿಸಲಿರುವ ದ್ರೌಪದಿ ಮುರ್ಮು

ಮೈಸೂರು: ಸಾಂಸ್ಕೃತಿಕ ಸಿರಿ ಮತ್ತು ಧಾರ್ವಿುಕ ಐಸಿರಿಯ ಸಮ್ಮಿಲನವಾದ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವೊಂದು ಸುಂದರ ದೃಶ್ಯಕಾವ್ಯ. ವರ್ಷಕ್ಕೊಮ್ಮೆ ಬರುವ ಈ ರಮಣೀಯ ಘಳಿಗೆಗೆ ಸಾಂಸ್ಕೃತಿಕ ನಗರಿ ಮದುವಣಗಿತ್ತಿಯಂತೆ ಸಿಂಗಾರಗೊಂಡು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಕೋವಿಡ್ ಸಂಕ್ರಮಣದಿಂದ ಕಳೆದ 2 ವರ್ಷ ಸರಳವಾಗಿ ನಡೆದಿದ್ದ ಉತ್ಸವದಲ್ಲಿ ಈ ಬಾರಿ ಸಡಗರ ಮೇಳೈಸಲಿದೆ. ಸೆ. 26ರಂದು ನಾಡಹಬ್ಬದ ಅಂಕದ ಪರದೆ ಗರಿ ಬಿಚ್ಚಲಿದೆ. ಮೊದಲ ಬಾರಿಗೆ ರಾಷ್ಟ್ರಪತಿಯಿಂದ ಚಾಲನೆ: ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ …

Read More »

ಜಮ್ಮು ಕಾಶ್ಮೀರದಲ್ಲಿ ಕರ್ನಾಟಕದ ‘ಯೋಧ’ ಹುತಾತ್ಮ

ಜಮ್ಮು ಕಾಶ್ಮೀರದ ಗುರೇಜ್ ನಲ್ಲಿ ರಾಜ್ಯದ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಬೇಡಕುಂದಾ ಗ್ರಾಮದ ಯೋಧ ರಾಮ್ ದಾಸ್ ಚಂದಾಪುರ ಹುತಾತ್ಮರಾಗಿದ್ದು, ಕರ್ತವ್ಯದ ವೇಳೆ ಆಮ್ಲಜನಕ ಕೊರತೆಯಿಂದ ಯೋಧ ಹುತಾತ್ಮರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 15 ವರ್ಷದಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು ಎಂದು ತಿಳಿದು ಬಂದಿದೆ.

Read More »

ರಾಜ್ಯ ಸರ್ಕಾರ’ದಿಂದ ಬಿಗ್ ಆರ್ಡರ್: ‘ಸರ್ಕಾರಿ ಕಚೇರಿ ಲಂಚ ಮುಕ್ತ’ಕ್ಕೆ ಖಡಕ್ ಕ್ರಮ

ಬೆಂಗಳೂರು: ನನಗೆ ಯಾರೂ ಲಂಚ ಕೊಡಬೇಕಾಗಿಲ್ಲ, ನಾನು ಭ್ರಷ್ಟ ಅಧಿಕಾರಿಯಾಗಲಾರೆ ಎಂಬ ಶೀರ್ಷಿಕೆಯ ನಾಮಫಲಕವನ್ನು ಅಳವಡಿಸಲು ರಾಜ್ಯ ಸರ್ಕಾರ ಆದೇಶ ಮಾಡಿದೆ. ಈ ಮೂಲಕ ಪೇ ಸಿಎಂ ಪೋಸ್ಟರ್ ಕಾಂಗ್ರೆಸ್ ಅಭಿಯಾನಕ್ಕೆ ರಾಜ್ಯ ಸರ್ಕಾರದಿಂದ ಟಕ್ಕರ್ ಕೊಡಲಾಗಿದೆ.     ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಅಳವಡಿಸಲು ಅದೇಶ ಮತ್ತು ಸುತ್ತೋಲೆ ಹೊರಡಿಸಲಾಗಿದೆ. ರಾಜ್ಯ ಸರ್ಕಾರದ ವಿರುದ್ಧ ಸರಣಿ ಭ್ರಷ್ಟಾಚಾರ ಆರೋಪ ಹಿನ್ನಲೆಯಲ್ಲಿ ಮುಖ್ಯ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ …

Read More »

ವಿಜಯಪುರ: ಮಕ್ಕಳ ಕಳ್ಳರ ವದಂತಿ; ಮಹಿಳೆಯರು ಸೇರಿ ನಾಲ್ವರಿಗೆ ಸಾರ್ವಜನಿಕರಿಂದ ಥಳಿತ

ವಿಜಯಪುರ: ರಾಜ್ಯದಲ್ಲಿ ಮಕ್ಕಳ ಕಳ್ಳರ ಹಾವಳಿಯ ವದಂತಿ ಹಿನ್ನೆಲೆಯಲ್ಲಿ ಶನಿವಾರ ನಗರದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ತಿರುಗುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರನ್ನು ಹಿಡಿದ ಸಾರ್ವಜನಿಕರು ಧರ್ಮದೇಟು ನೀಡಿದ ಘಟನೆ ನಗರದಲ್ಲಿ ನಡೆದಿದೆ.   ನಗರದ ಗ್ಯಾಂಗ್ ಬಾವಡಿ ಪರಿಸರದಲ್ಲಿ ಅಪರಿಚಿತ ಇಬ್ಬರು ಮಹಿಳೆಯರು, ಇಬ್ಬರು ಪುರುಷರು ಉತ್ತರ ಭಾರತದ ಶೈಲಿಯಲ್ಲಿ ಮಾತನಾಡಿದ್ದು, ಅನುಮಾನದ ಬಂದ ಸ್ಥಳೀಯರು, ಮಕ್ಕಳ ಕಳ್ಳರೆಂದು ಶಂಕಿಸಿ, ಸಾರ್ವಜನಿಕರ ಸಹಕಾರದಿಂದ ನಾಲ್ವರನ್ನೂ ಹಿಡಿದು ಥಳಿಸಿದ್ದಾರೆ. ನಗರಕ್ಕೆ ಉತ್ತರ ಭಾರತದಿಂದ …

Read More »