ಚಿತ್ರದುರ್ಗ: ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಹಾಸ್ಟೆಲ್‌ಗಳಿಗೆ ಪಾತ್ರೆ ಮತ್ತಿತರೆಪರಿಕರಗಳನ್ನು ಸರಬರಾಜು ಮಾಡಿದ ಗುತ್ತಿಗೆದಾರರಿಗೆ ಬಿಲ್ ಪಾವತಿಸಲು ಲಂಚದ ಬೇಡಿಕೆ ಇಟ್ಟಿದ್ದ ಸಹಾಯಕ ನಿರ್ದೇಶಕರ ಕಚೇರಿ ಪ್ರಥಮ ದರ್ಜೆ ಸಹಾಯಕನನ್ನು ಲೋಕಾಯುಕ್ತ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಚಿತ್ರದುರ್ಗ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಪ್ರಥಮ ದರ್ಜೆ ಸಹಾಯಕ ನರಸಿಂಹಮೂರ್ತಿ ಬಂಧಿತ ಆರೋಪಿ.ಸಜ್ಜನಕೆರೆ ಗ್ರಾಮದ ಕಲ್ಲೇಶ್ವರ ಏಜೆನ್ಸಿ ಮಾಲಿಕ ಎಸ್.ಬಿ.ಲೋಕೇಶ್, ಆಗಸ್ಟ್ 2 ರಂದು ಸಮಾಜ ಕಲ್ಯಾಣ ಇಲಾಖೆ …
Read More »ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂ; ‘ಲಂಚ ಕೇಸ್’ ಅರ್ಜಿ ವಿಚಾರಣೆಗೆ ಮಧ್ಯಂತರ ತಡೆ
ಹೊಸದಿಲ್ಲಿ: ಭ್ರಷ್ಟಾಚಾರ ತಡೆ ಕಾಯ್ದೆಯಡಿ ತಮ್ಮ ಮತ್ತು ಇತರರ ವಿರುದ್ಧ ದಾಖಲಾಗಿದ್ದ ಲಂಚದ ದೂರಿನ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಪೊಲೀಸ್ ತನಿಖೆಗೆ ತಡೆ ನೀಡುವಂತೆ ಅವರು ಸಲ್ಲಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ‘ತನಿಖೆಗೆ ಮಧ್ಯಂತರ ತಡೆ’ ನೀಡಿದೆ. ಯಡಿಯೂರಪ್ಪ, ಪುತ್ರ ವಿಜಯೇಂದ್ರ, ಮೊಮ್ಮಗ ಶಶಿಧರ ಮರಡಿ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಅಧಿಕಾರಿಗಳು, ಗುತ್ತಿಗೆದಾರರನ್ನು ಆರೋಪಿಗಳನ್ನಾಗಿಸಿ ಸಾಮಾಜಿಕ ಕಾರ್ಯಕರ್ತ …
Read More »ಹೋಟೆಲ್ ನಲ್ಲಿ ಚಟ್ನಿ ವಿಚಾರಕ್ಕೆ ಕಿರಿಕ್;ಪೊಲೀಸರೆದುರು ಬ್ಲೇಡ್ ನಿಂದ ಕುತ್ತಿಗೆ ಕುಯ್ದ ಯುವಕ
ಹುಬ್ಬಳ್ಳಿ: ಹೊಟೇಲ್ ನಲ್ಲಿ ಊಟದ ವಿಷಯವಾಗಿ ಮಾಲಿಕರೊಂದಿಗೆ ಗಲಾಟೆ ಮಾಡಿಕೊಂಡಿದ್ದ ಓರ್ವನನ್ನು ಠಾಣೆಗೆ ವಿಚಾರಣೆಗೆಂದು ಪೊಲೀಸರ ಬಳಿ ಕರೆದುಕೊಂಡು ಬಂದಾಗ, ಆತ ಕುತ್ತಿಗೆಗೆ ಬ್ಲೇಡ್ ನಿಂದ ಕೊಯ್ದುಕೊಂಡು ಬೆದರಿಕೆ ಹಾಕಲು ಮುಂದಾದ ಘಟನೆ ಇಲ್ಲಿನ ಹಳೇಹುಬ್ಬಳ್ಳಿ ಠಾಣೆಯಲ್ಲಿ ಗುರುವಾರ ರಾತ್ರಿ ನಡೆದಿದೆ. ಇಲ್ಲಿನ ಗಣೇಶಪೇಟೆ ಮೀನು ಮಾರುಕಟ್ಟೆಯ ರಾಘವೇಂದ್ರ ನಾಯಕ ಎಂಬಾತನೆ ಕುತ್ತಿಗೆಗೆ ಬ್ಲೇಡ್ ಇರಿದುಕೊಂಡವ. ಈತನು ಗುರುವಾರ ಇಂಡಿ ಪಂಪ್ ವೃತ್ತ ಬಳಿಯ ಬಿರಿಯಾನಿ ಹೌಸ್ ಅಂಗಡಿಯ …
Read More »ವಿಜಯಪುರದಲ್ಲಿ ಜನಸ್ನೇಹಿ ಪೊಲೀಸ್ ಠಾಣೆ!
ವಿಜಯಪುರ: ಸಾಮಾನ್ಯವಾಗಿ ಪೊಲೀಸ್ ಠಾಣೆ ಅಂದಾಕ್ಷಣ ಕಣ್ಮುಂದೆ ಬರೋದು ಠಾಣೆ ಮುಂದೆ ನಿಂತ ನಾಲ್ಕಾರು ಹಳೆ ವಾಹನಗಳು, ಬಣ್ಣ ಮಾಸಿದ ಗೋಡೆ, ಗಿಡ ಗಂಟಿಗಳು ಬೆಳೆದು ನಿಂತ ಇಕ್ಕಟ್ಟಾದ ಪ್ರದೇಶ. ಇಂತಹ ಠಾಣೆಗಳಿಗೆ ಜನ ಬರುವುದಕ್ಕೂ ಹಿಂದೆ ಮುಂದೆ ನೋಡುವ ಇಂದಿನ ದಿನಗಳಲ್ಲಿ ಜಿಲ್ಲೆಯ ಆದರ್ಶ ನಗರ ಪೊಲೀಸ್ ಠಾಣೆ ಸಾಕಷ್ಟು ಡಿಫರೆಂಟ್ ಆಗಿ ಜನ ಸಾಮಾನ್ಯರನ್ನ ಆಕರ್ಷಿಸುತ್ತಿದೆ. ಮಾತ್ರವಲ್ಲದೇ ಬಂದಂತಹ ಜನಸಾಮಾನ್ಯರಿಗೆ ಪೊಲೀಸ್ ವ್ಯವಸ್ಥೆ ಕುರಿತು ಅಗತ್ಯ ಮಾಹಿತಿ ಒದಗಿಸುವ …
Read More »ಕಾಂಗ್ರೆಸ್, ಜೆಡಿಎಸ್ ಧರಣಿ ನಡುವೆ ನಾಲ್ಕು ವಿಧೇಯಕಗಳ ಅಂಗೀಕಾರ: ಪರಿಷತ್ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ
ಬೆಂಗಳೂರು: ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ನಾಲ್ಕು ವಿಧೇಯಕಗಳನ್ನು ಪ್ರತಿಪಕ್ಷಗಳ ಧರಣಿ ನಡುವೆ ವಿಧಾನ ಪರಿಷತ್ನಲ್ಲಿ ಅಂಗೀಕಾರ ಮಾಡಲಾಗಿದ್ದು, ಕಲಾಪವನ್ನು ಅನಿರ್ದಿಷ್ಟಾವದಿಗೆ ಮುಂದೂಡಿಕೆ ಮಾಡಲಾಯಿತು. ವಿಧಾನ ಪರಿಷತ್ ಶೂನ್ಯವೇಳೆ ಕಲಾಪ ಮುಗಿಯುತ್ತಿದ್ದಂತೆ ಮಾತನಾಡಿದ ಪ್ರತಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್, ನಿನ್ನೆ ಗದ್ದಲದ ನಡುವೆ ಮಾಣಿಪ್ಪಾಡಿ ವರದಿ ಮಂಡಿಸಿದ್ದಾರೆ. ನಮಗೆ ಅದರ ಪ್ರತಿ ಕೊಡಿ ಎಂದು ಮಾಣಿಪ್ಪಾಡಿ ವರದಿ ಕುರಿತು ನಿಯಮ 59 ರ ಅಡಿ ಚರ್ಚೆಗೆ ಅವಕಾಶ ಕೋರಿ ನಿಲುವಳಿ ಸೂಚನೆ …
Read More »ರಸ್ತೆ ತಡೆದು ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಬೆಂಗಳೂರು: ನೂರಾರು ಕೋಟಿಯ ನಕಲಿ ಬಿಲ್ಲು, ಕಳಪೆ ಕಾಮಗಾರಿ ವಿರುದ್ಧ ಕಾಂಗ್ರೆಸ್ ಪಕ್ಷದ ಮುಖಂಡ ಅನೂಪ್ ಅಯ್ಯಂಗಾರ್ ನೇತೃತ್ವದಲ್ಲಿ ಇಂದು ಕಾವೇರಿ ಥೀಯಟರ್ ಮುಖ್ಯ ರಸ್ತೆಯಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದರು. ಸ್ಥಳೀಯ ಶಾಸಕ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ವಿರುದ್ಧ 100ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ರಸ್ತೆಯಲ್ಲೇ ಕುಳಿತು ಪ್ರತಿಭಟಿಸಿದರು. ಪಾಲಿಕೆಯ ವಾರ್ಡ್‌ಗಳಲ್ಲಿ ನಕಲಿ ಬಿಲ್ಲುಗಳನ್ನು ಪಾಸ್ ಮಾಡಲಾಗಿದೆ. ಬಿಬಿಎಂಪಿ ಅಧಿಕಾರಿಗಳೇ ತಮ್ಮ ಅಸಹಾಯತೆ ವ್ಯಕ್ತಪಡಿಸಿದ್ದಾರೆ. ಇದನ್ನು ಸಂಪೂರ್ಣವಾಗಿ ವಿಚಾರಣೆಗೆ ಒಳಪಡಿಸಬೇಕು. …
Read More »ಔಷಧ ಚೀಟಿಯಿಂದಲೇ ಸಾಮಾಜಿಕ ಜಾಲತಾಣದಲ್ಲಿ ಸ್ಟಾರ್ ಆಗುತ್ತಿರುವ ಡಾಕ್ಟರ್ ಇವರು! ಅಂಥದ್ದೇನಿದೆ ಈ ಚೀಟಿಯಲ್ಲಿ?
ಕೊಚ್ಚಿ: ಔಷಧ ಚೀಟಿಯ ಮೇಲೆ ಬರೆಯುವ ವೈದ್ಯರ ಬರವಣಿಗೆಯು ಮೆಡಿಕಲ್ ಶಾಪ್ ಸಿಬ್ಬಂದಿಗೆ ಮಾತ್ರ ಅರ್ಥವಾಗುತ್ತೆ ಎಂಬುದು ಜನರ ಸಾಮಾನ್ಯ ನಂಬಿಕೆಯಾಗಿದೆ. ಅದು ನಿಜವೂ ಹೌದು. ಬಹುತೇಕ ವೈದ್ಯರು ಬರಹ ಅಸ್ಪಷ್ಟವಾಗಿರುತ್ತದೆ. ಆದರೆ, ಎಲ್ಲಾ ವೈದ್ಯರು ಬರವಣಿಗೆ ಅಸ್ಪಷ್ಟವಾಗಿರುತ್ತದೆ ಎಂದು ಸಾಮಾನ್ಯೀಕರಿಸಲು ಸಾಧ್ಯವಿಲ್ಲ. ಏಕೆಂದರೆ, ಇಲ್ಲೂ ಬದಲಾವಣೆಯ ಗಾಳಿ ಬೀಸುತ್ತಿದೆ. ಕೇರಳದ ಮಕ್ಕಳ ತಜ್ಞರೊಬ್ಬರು ಬರೆದಿರುವ ಔಷಧ ಚೀಟಿಯು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಕೇರಳದ ಪಾಲಕ್ಕಾಡ್‌ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದ …
Read More »ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಅಕ್ಕಿ ದರ ಮತ್ತಷ್ಟು ಹೆಚ್ಚಳ ಸಾಧ್ಯತೆ
ನವದೆಹಲಿ: ಮುಂದಿನ ದಿನಗಳಲ್ಲಿ ಅಕ್ಕಿ ಬೆಲೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಖಾರಿಫ್ ಋತುವಿನಲ್ಲಿ ಕಡಿಮೆ ಇಳುವರಿ, ರಫ್ತು ಇತರೆ ಕಾರಣದಿಂದ ಅಕ್ಕಿ ಬೆಲೆ ಏರಿಕೆ ಮುಂದುವರೆಯಬಹುದು ಎಂದು ಹೇಳಲಾಗಿದೆ. ರಫ್ತು ನೀತಿಯಲ್ಲಿ ಬದಲಾವಣೆ ಆಹಾರ ಸಚಿವಾಲಯ ನೀಡಿದ ಮಾಹಿತಿಯಲ್ಲಿ, ಭಾರತದ ಅಕ್ಕಿ ರಫ್ತು ನೀತಿಯಲ್ಲಿ ಇತ್ತೀಚಿನ ತಿದ್ದುಪಡಿಗಳ ಹಿಂದಿನ ವಿವರವಾದ ಕಾರಣಗಳನ್ನು ವಿವರಿಸಲಾಗಿದೆ. ಭಾರತದ ಅಕ್ಕಿ ರಫ್ತು ನಿಯಮಗಳಲ್ಲಿ ಇತ್ತೀಚಿನ ಬದಲಾವಣೆಗಳು ರಫ್ತಿಗೆ ಲಭ್ಯತೆಯನ್ನು ಕಡಿಮೆ ಮಾಡದೆ “ದೇಶೀಯ ಬೆಲೆಗಳನ್ನು …
Read More »ವಿಜಯಪುರ: ಸರ್ಕಾರಿ ನೌಕರಿ ಕೊಡಿಸುವುದಾಗಿ ಹೇಳಿ ಹಣ ಪಡೆಯಲು ಬಂದಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ
ವಿಜಯಪುರ: ಸರ್ಕಾರಿ ನೌಕರಿ ಕೊಡಿಸುವುದಾಗಿ ಹೇಳಿ ಹಣ ಪಡೆಯಲು ಬಂದಿದ್ದ ವ್ಯಕ್ತಿಯನ್ನು ಯುವಕರು ಹಿಡಿದು ಪೊಲೀಸರಿಗೊಪ್ಪಿಸಿರುವ ಘಟನೆ ಜಿಲ್ಲೆಯ ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ನಡೆದಿದೆ. ಹೋಂ ಗಾರ್ಡ್ ಶಾಂತೇಶ್ ಕೊರ್ತಿ ಎಂಬಾತ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ 8 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ ಎಂದು ಆರೋಪಿಸಲಾಗಿದೆ. ಹಣ ನೀಡುವುದಾಗಿ ಕರೆಸಿದ ಯುವಕರು ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶ್ರೀಕಾಂತ್ ಎಂಬುವವರ ಬಳಿ ಹಣ ಪಡೆಯಲು ಶಾಂತೇಶ್ ಕೊರ್ತಿ ಬಂದಿದ್ದ. …
Read More »ಕಾಂಗ್ರೆಸ್ ‘ಪೇ ಸಿಎಂ’ ಬಾಣಕ್ಕೆ ಬಿಜೆಪಿಯಿಂದ ‘ಸ್ಕ್ಯಾಮ್ ರಾಮಯ್ಯ’ ಪ್ರತಿಬಾಣ
ಬೆಂಗಳೂರು: ರಾಜ್ಯ ಸರಕಾರದ ವಿರುದ್ಧ ಹೋರಾಟ ತೀವ್ರಗೊಳಿಸಿದ್ದ ಕಾಂಗ್ರೆಸ್ ಈಗ ” ಪೇಸಿಎಂ” ಎಂಬ ವಿಶಿಷ್ಟ ಅಭಿಯಾನ ಆರಂಭಿಸಿದ್ದು, ಬಿಜೆಪಿ ‘ಸ್ಕ್ಯಾಮ್ ರಾಮಯ್ಯ’ ಎಂದು ತಿರುಗೇಟು ನೀಡುತ್ತಿದೆ. ಬೆಂಗಳೂರಿನ ಆಯಕಟ್ಟಿನ ಸ್ಥಳಗಳಲ್ಲಿ “ಪೇಸಿಎಂ” ಪೋಸ್ಟರ್ ಅಂಟಿಸಿ, ಸಾಮಾಜಿಕ ಜಾಲತಾಣದಲ್ಲೂ ” ಪೇಸಿಎಂ” ಅಭಿಯಾನ ತೀವ್ರಗೊಳಿಸಿತ್ತು. ಪ್ರತಿಯಾಗಿ ಬಿಜೆಪಿ ಹೋರಾಟಕ್ಕಿಳಿದು ಸಿದ್ದರಾಮಯ್ಯ ವಿರುದ್ಧ ಸಮರ ಸಾರಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಗುರುವಾರ ಸುದ್ದಿಗೋಷ್ಠಿ ನಡೆಸಿ ‘ಸ್ಕ್ಯಾಮ್ ರಾಮಯ್ಯ’ …
Read More »