Breaking News

ಬೆಳಗಾವಿಯ ಸನೀಹದ ರಸ್ತೆ ಪಕ್ಕದ ಗೂಡಂಗಡಿಯಲ್ಲಿ ಟೀ ಕುಡಿದ ಸಚಿನ್ ತೆಂಡೋಲ್ಕರ್.

ಕ್ರಿಕೇಟ್​​ನ ದಿಗ್ಗಜ, ಕ್ರಿಕೇಟ್​ನ ದೇವರು ಎಂದೇ ಕ್ಯಾತಿಯಾಗಿ ಮಾಸ್ಟರ್ ಬ್ಲಾಸ್ಟರ್ ಸಚಿನ್‌ ತೆಂಡೂಲ್ಕರ್‌ ( Sachin Tendulkar ) ಇಂದು (ಅ.31) ಬೆಳಗಾವಿಯ ಸನೀಹದ ರಸ್ತೆ ಪಕ್ಕದ ಗೂಡಂಗಡಿಯಲ್ಲಿ ಟೀ ಕುಡಿದಿದ್ದಾರೆ. ಸಚಿನ್‌ ತೆಂಡೂಲ್ಕರ್‌ ಮುಂಬೈಯಿಂದ ಬೆಳಗಾವಿ ಮಾರ್ಗವಾಗಿ ಗೋವಾಗೆ ತೆರಳುತ್ತಿದ್ದರು. ಈ ವೇಳೆ ಬೆಳಗಾವಿ ಹೊರ ವಲಯದ ಮಚ್ಚೆ ಬಳಿಯ ರಾಷ್ಟ್ರೀಯ ಹೆದ್ದಾರಿ 4 (ಎ) ಮೇಲಿರುವ ವೈಜು ನಿತೂರ್ಕರ್ ಎಂಬುವವರ ಫೌಜಿ ಟೀ ಸ್ಟಾಲ್​ನಲ್ಲಿ ಚಹಾ ಸವಿದಿದ್ದಾರೆ. …

Read More »

ಬೆಳಗಾವಿ: ಹೆಂಡತಿ ಚುಡಾಯಿಸುತ್ತಿರುವುದನ್ನು ಪ್ರಶ್ನೆ ಮಾಡಿದ ಗಂಡನ ಬರ್ಬರ ಹತ್ಯೆ

ಬೆಳಗಾವಿ: ಹೆಂಡತಿಯನ್ನ ಚುಡಾಯಿಸುತ್ತಿರುವುದನ್ನು ಪ್ರಶ್ನೆ ಮಾಡಿದ್ದಕ್ಕೆ ವ್ಯಕ್ತಿಯನ್ನು ಕಟ್ಟಿಗೆಯಿಂದ ಹೊಡೆದು, ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಖಾನಾಪೂರದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಖಾನಾಪುರ ಪಟ್ಟಣದ ಬಾಹೇರ್ ಗಲ್ಲಿಯ ನಿವಾಸಿ ಮಾರುತಿ ಜಾಧವ್ (40) ಕೊಲೆಯಾದ ವ್ಯಕ್ತಿ. ಪಕ್ಕದ ಮನೆಯ ಪ್ರಶಾಂತ್ ನಾರ್ವೇಕರ್ (35) ಹತ್ಯೆ ಮಾಡಿದ ಆರೋಪಿ. ಕಳೆದ ಕೆಲ ದಿನಗಳಿಂದ ಆರೋಪಿ ಪ್ರಶಾಂತ್, ಮಾರುತಿ ಪತ್ನಿಯನ್ನ ಚುಡಾಯಿಸುತ್ತಿದ್ದನಂತೆ.‌ ಈ ಬಗ್ಗೆ ನಿನ್ನೆ ರಾತ್ರಿ ಮಾರುತಿ ಪ್ರಶ್ನೆ …

Read More »

ರಾಜ್ಯದಲ್ಲಿ ಒಟ್ಟು‌ 29 ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜು ಘೋಷಣೆ ಮಾಡಲಾಗಿದೆ.

ಬೆಂಗಳೂರು: ಶಿಕ್ಷಣ ಇಲಾಖೆಯಿಂದ (Education Department) ಹೊಸ ಪಿಯು ಕಾಲೇಜು ಪ್ರಾರಂಭಿಸಲು ಆದೇಶ ನೀಡಲಾಗಿದೆ. ರಾಜ್ಯದಲ್ಲಿ ಒಟ್ಟು‌ 29 ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜು ಘೋಷಣೆ ಮಾಡಲಾಗಿದೆ. ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜನ್ನು ಮಂಜೂರು ಮಾಡಲಾದ ಸ್ಥಳಗಳ ಪಟ್ಟಿ ಈ ಕೆಳಗಿನಂತಿದೆ. 1.ಸರ್ಕಾರಿ ಪದವಿ ಪೂರ್ವ ಕಾಲೇಜು, ದೇವತ್ಕಲ್, ಸುರಪೂರ ತಾಲ್ಲೂಕು, ಯಾದಗಿರಿ ಜಿಲ್ಲೆ. 2. ಸರ್ಕಾರಿ ಪದವಿ ಪೂರ್ವ ಕಾಲೇಜು, ಹುಣಸಗಿ, ಸುರಪೂರ ತಾಲ್ಲೂಕು, ಯಾದಗಿರಿ …

Read More »

ಅಂಗವೈಕಲ್ಯದ ಮಧ್ಯೆಯೂ ಕ್ರೀಡಾ ಕ್ಷೇತ್ರದಲ್ಲಿ ಬೆಳಗಾವಿಯ ಈಜುಪಟು ರಾಘವೇಂದ್ರ ಅಣ್ವೇಕರ್‌ಗೆ ರಾಜ್ಯೋತ್ಸವ ಪ್ರಶಸ್ತಿ

ಬೆಳಗಾವಿಯ ಈಜುಪಟು ರಾಘವೇಂದ್ರ ಅಣ್ವೇಕರ್‌ಗೆ ರಾಜ್ಯೋತ್ಸವ ಪ್ರಶಸ್ತಿ ಬೆಳಗಾವಿ: ಇಲ್ಲಿನ ಸಹ್ಯಾದ್ರಿ ನಗರದ ನಿವಾಸಿ, ಅಂಗವಿಕಲ ಈಜುಪಟು ರಾಘವೇಂದ್ರ ರತ್ನಾಕರ ಅಣ್ವೇಕರ್‌(35) ಕ್ರೀಡಾ ಕ್ಷೇತ್ರದ ಸಾಧನೆಗಾಗಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಅವರು ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವರು. ಎಂ.ಎ(ರಾಜ್ಯಶಾಸ್ತ್ರ) ಸ್ನಾತಕೋತ್ತರ ಪದವಿ ಗಳಿಸಿದ್ದಾರೆ. 2014ರಿಂದ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಗುಮಾಸ್ತರಾಗಿ ಕೆಲಸ ಮಾಡುತ್ತಿದ್ದಾರೆ. 14ನೇ ವಯಸ್ಸಿನಿಂದ ಈಜು ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿರುವ ಅವರು, ಹಾಂಕಾಂಗ್‌, ಮಲೇಷ್ಯಾ, ಡೆನ್ಮಾರ್ಕ್‌ ಮತ್ತಿತರ …

Read More »

ಸ್ವಾಮೀಜಿ ವಿರುದ್ಧ ಸೇಡು ತೀರಿಸಿಕೊಳ್ಳಲು ‘ಹನಿ ಟ್ರ್ಯಾಪ್’ ಗೆ ಮುಂದಾಗಿದ್ದಳಾ ಇಂಜಿನಿಯರಿಂಗ್ ವಿದ್ಯಾರ್ಥಿನಿ ?

ಕಂಚುಗಲ್ ಬಂಡೆ ಮಠದ ಬಸವಲಿಂಗ ಶ್ರೀಗಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಕಣ್ಣೂರು ಮಠದ ಶ್ರೀ ಮೃತ್ಯುಂಜಯ ಸ್ವಾಮೀಜಿ, ತುಮಕೂರಿನ ವಕೀಲ ಮಹಾದೇವಯ್ಯ ಹಾಗೂ ದೊಡ್ಡಬಳ್ಳಾಪುರದ ಇಂಜಿನಿಯರಿಂಗ್ ವಿದ್ಯಾರ್ಥಿನಿ ನೀಲಾಂಬಿಕೆ ಬಂಧಿತರಾದವರಾಗಿದ್ದಾರೆ.   ಕಂಚುಗಲ್ ಬಂಡೆ ಮಠದ ಪೀಠಾಧಿಪತಿ ಆಗಬೇಕೆಂಬ ಹಂಬಲ ಹೊಂದಿದ್ದ ಮೃತ್ಯುಂಜಯ ಸ್ವಾಮೀಜಿ, ವಕೀಲ ಮಹದೇವಯ್ಯ ಅವರೊಂದಿಗೆ ಸೇರಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ನೀಲಾಂಬಿಕೆ ಉರ್ಫ್ ಚಂದು ಎಂಬಾಕೆಯನ್ನು ಬಳಸಿಕೊಂಡು ಹನಿ ಟ್ರ್ಯಾಪ್ ಖೆಡ್ಡಾ ತೋಡಿದ್ದರು …

Read More »

ನ.8ರಂದು ಖಗ್ರಾಸ ಚಂದ್ರಗ್ರಹಣ; ದೇಶದ ಹಲವು ಭಾಗಗಳಲ್ಲಿ ಗ್ರಹಣ ಗೋಚರ

 ದೀಪಾವಳಿಯ ಸಮಯದಲ್ಲೇ ಪಾರ್ಶ್ವ ಸೂರ್ಯಗ್ರಹಣವನ್ನು ಕಂಡ ಜಗತ್ತು ಈಗ ಮತ್ತೊಂದು ಗ್ರಹಣಕ್ಕೆ ಸಜ್ಜಾಗುತ್ತಿದೆ. ನ.8ರಂದು ಖಗ್ರಾಸ ಚಂದ್ರಗ್ರಹಣ ಉಂಟಾಗಲಿದ್ದು, ಕೋಲ್ಕತ್ತಾ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಗ್ರಹಣ ಗೋಚರಿಸಲಿದೆ.   ಅಲ್ಲದೇ ಪಾಕಿಸ್ತಾನ, ಅಫ್ಘಾನಿಸ್ತಾನ, ರಷ್ಯಾ, ಅಮೆರಿಕ, ಆಸ್ಟ್ರೇಲಿಯಾ, ಉತ್ತರ ಅಟ್ಲಾಂಟಿಕ್‌ ಸಮುದ್ರ, ಪೆಸಿಫಿಕ್‌ ಸಮುದ್ರ ಪ್ರದೇಶದಿಂದಲೂ ಈ ಖಗೋಳ ವಿಸ್ಮಯವನ್ನು ವೀಕ್ಷಿಸಬಹುದು ಎಂದು ಖಗೋಳವಿಜ್ಞಾನಿಗಳು ತಿಳಿಸಿದ್ದಾರೆ. ನ.8ರಂದು ಮಧ್ಯಾಹ್ನ 2.39ಕ್ಕೆ ಭಾಗಶಃ ಚಂದ್ರಗ್ರಹಣ ಆರಂಭವಾಗಲಿದ್ದು, 3.46ರ ವೇಳೆಗೆ ಅದು …

Read More »

2023 ರಲ್ಲಿ ಮತ್ತೆ ನಾವು ಅಧಿಕಾರಕ್ಕೆ ಬರುತ್ತೇವೆ: ಸಿಎಂ ಬೊಮ್ಮಾಯಿ

ಕಲಬುರಗಿ: ಮುಂದಿನ ವರ್ಷ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಗೆಲುವು ಸಾಧಿಸಿ ವಿಧಾನಸೌಧದ ಮೂರನೇ ಮಹಡಿಯಲ್ಲಿ ಕೂರಲಿದ್ದೇವೆ. ಸಮಾವೇಶದಲ್ಲಿ ಪಾಲ್ಗೊಂಡ ಜನಸಾಗರ ನೋಡಿ ಆನೆ ಬಲ ಬಂದಂತಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.   ಒಬಿಸಿ ವಿರಾಟ ಸಮಾವೇಶದಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ಸಂಕಲ್ಪ ನಮ್ಮದು. 1,500 ಕೋಟಿ ಅನುದಾನವನ್ನು 3 ಸಾವಿರ ಕೋಟಿಗೆ ಈಗಾಗಲೇ ಹೆಚ್ಚಿಸಿದ್ದು, ಮುಂದಿನ ವರ್ಷ ಅದನ್ನು 5 ಸಾವಿರ ಕೋಟಿ ರೂ.ಗೆ …

Read More »

ಬಿಲ್‌ ಪಾವತಿಗೆ ಶೇ.40 ಕಮಿಷನ್‌ ಬೇಡಿಕೆ; ಗುತ್ತಿಗೆದಾರನಿಂದ ದಯಾಮರಣಕ್ಕೆ ಅರ್ಜಿ

ಹುಬ್ಬಳ್ಳಿ: ಕೋವಿಡ್‌-19 ವೇಳೆ ಗ್ರಾ.ಪಂ.ಗಳಿಗೆ ಪರಿಕರ ಪೂರೈಸಿದ್ದ ಬಿಲ್‌ ಪಾವತಿಗೆ ಅಧಿಕಾರಿಗಳು ಶೇ.40ಕ್ಕಿಂತ ಹೆಚ್ಚಿನ ಕಮಿಷನ್‌ ಕೇಳಿ ಬಿಲ್‌ ತಡೆ ಹಿಡಿದಿದ್ದಾರೆ. ಈಗ ತಾನು ಸಾಲದಿಂದ ಕಂಗೆಟ್ಟಿದ್ದು, ಆದ್ದರಿಂದ ದಯಾಮರಣಕ್ಕೆ ಅವಕಾಶ ನೀಡುವಂತೆ ನಗರದ ಗುತ್ತಿಗೆದಾರರೊಬ್ಬರು ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.   ಕೇಶ್ವಾಪುರ ಸುಳ್ಳ ರಸ್ತೆ ಮನೋಜ ಪಾರ್ಕ್‌ ನಿವಾಸಿ, ಗುತ್ತಿಗೆದಾರ ಬಸವರಾಜ ಅಮರಗೋಳ ಅವರು ದಯಾಮರಣ ಕೋರಿ ರಾಷ್ಟ್ರಪತಿ, ಪ್ರಧಾನಿ, ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. 2020-21ರಲ್ಲಿ ಕೇಂದ್ರ …

Read More »

ನಂದಿನಿ ಪ್ರತಿ ಲೀಟರ್‌ ಹಾಲಿಗೆ 3 ರೂ.ಹೆಚ್ಚಳದರ ಏರಿಕೆಯಿಂದ ರೈತರಿಗೆ ವರದಾನವಾಗಲಿದೆ: ಬಾಲಚಂದ್ರ ಜಾರಕಿಹೊಳಿ:

ಬೆಳಗಾವಿ: ಶೀಘ್ರದಲ್ಲೇ ನಂದಿನಿ ಹಾಲಿನ ದರ ಪರಿಷ್ಕರಣೆ ಮಾಡಲಾಗುವುದು. ಪ್ರತಿ ಲೀಟರ್‌ ಹಾಲಿಗೆ 3 ರೂ. ಹೆಚ್ಚಳ ಮಾಡಲಾಗುವುದು. ಈ ದರ ಏರಿಕೆಯಿಂದ ರೈತರಿಗೆ ವರದಾನವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.   ಭಾನುವಾರ ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ.ದಿಂದ ಚನ್ನಮ್ಮನ ಕಿತ್ತೂರಿನ ಹೂಲಿಕಟ್ಟಿ ಕ್ರಾಸ್‌ನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಹೂಲಿಕಟ್ಟಿ ಶೀಥಲೀಕರಣ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿ …

Read More »

ಕೊಪ್ಪಳ :ಪಠ್ಯ ವಿಷಯವನ್ನೇ ನಾಟಕ, ಹಾಡು, ಕಥೆಗೆ ಬದಲಾಯಿಸಿ ಕಲಿಯುವ ವಿದ್ಯಾರ್ಥಿಗಳು

ಕೊಪ್ಪಳ : ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಹನುಮಸಾಗರ ಸರ್ಕಾರಿ ಪದವಿ ಪೂರ್ವ ಕಾಲೇಜ್ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಈಗ ಸಮಾಜವಿಜ್ಞಾನದ ಪಠ್ಯ ವಿಷಯವನ್ನೇ ನಾಟಕ, ಹಾಡು, ಕಥೆ, ಕವನದ ರೂಪಕ್ಕೆ ಬದಲಾಯಿಸಿಕೊಂಡು ಕಲಿಕೆ ಸರಳೀಕರಣಗೊಳಿಸಿಕೊಂಡು ಅಭ್ಯಾಸ ಮಾಡುತ್ತಿದ್ದಾರೆ.   ಸಮಾಜವಿಜ್ಞಾನ ಶಿಕ್ಷಕ ಕಿಶನರಾವ್ ಕುಲಕರ್ಣಿ ಸಮಾಜ ವಿಜ್ಞಾನದ ಎಲ್ಲ ಸಿಲೆಬಸ್ ಅನ್ನು ನಾಟಕ ಹಾಗೂ ಕಥೆಗಳಿಗೆ ಬದಲಾವಣೆ ಮಾಡಿದ ಕಾರಣಕ್ಕಾಗಿ ವಿದ್ಯಾರ್ಥಿಗಳು ಅಭಿನಯಿಸುವದರೊಂದಿಗೆ ಕಲಿಕೆ ದೃಢೀಕರಿಸಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳು ಸಮಾಜ ವಿಜ್ಞಾನ …

Read More »