ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕಲಬುರಗಿ ಜಿಲ್ಲೆಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 412 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯಲ್ಲಿ 89 ಅಂಗನವಾಡಿ ಕಾರ್ಯಕರ್ತೆಯರು ಮತ್ತು 323 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಲಭ್ಯವಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 16ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಅಗತ್ಯ. ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ …
Read More »2 ವರ್ಷದ ಮಗುವಿಗೆ ನೇಣು ಹಾಕಿ ತಾಯಿ ಸಹ ಆತ್ಮಹತ್ಯೆ
ತುಮಕೂರು: ಎರಡು ವರ್ಷದ ಮಗುವಿನ ಜೊತೆ ತಾಯಿ ಒಂದೇ ಕುಣಿಕೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಹಾಗಲವಾಡಿಯಲ್ಲಿ ನಡೆದಿದೆ, ಗಂಗಾಮಣಿ(30), ಪ್ರೇಕ್ಷಾ (2) ಮೃತರು. ಗಂಗಾಮಣಿ ತನ್ನೊಟ್ಟಿಗೆ ಏನು ಅರಿಯದ 2 ವರ್ಷದ ಮಗುವಿನ ಕುತ್ತಿಗೆಗೆ ಕುಣಿಕೆ ಹಾಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಗರ್ಭಕೋಶದ ಸಮಸ್ಯೆಯಿಂದ ಮನನೊಂದು ಮಹಿಳೆ ಈ ದುಡುಕಿನ ನಿರ್ಧಾರ ಕೈಗೊಂಡಿದ್ದಾಳೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಇನ್ನೆರಡು ಮಕ್ಕಳು ಸಾವಿನ ಮನೆಯಿಂದ …
Read More »ಸಿಂಗಾಪುರ್ ಮಾದರಿಯಲ್ಲಿ ಮೆಜೆಸ್ಟಿಕ್ ಬಸ್ ನಿಲ್ದಾಣ ಅಭಿವೃದ್ಧಿ: ರಾಮಲಿಂಗಾ ರೆಡ್ಡಿ
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣವನ್ನು ಸಿಂಗಾಪುರ್‌ಗಿಂತಲೂ ಉತ್ತಮವಾದ ಅಂತಾರಾಷ್ಟ್ರೀಯ ಬಸ್ ನಿಲ್ದಾಣ ಮಾಡೋದಾಗಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ವಿಧಾನ ಪರಿಷತ್ ಕಲಾಪದಲ್ಲಿ ನಿಯಮ 330ರ ಅಡಿ ಕಾಂಗ್ರೆಸ್ ಸದಸ್ಯ ನಾಗರಾಜ್ ಯಾದವ್ ವಿಷಯ ಪ್ರಸ್ತಾಪ ಮಾಡಿದರು. ಬೆಂಗಳೂರು ಕೆಂಪೇಗೌಡ ಬಸ್ ನಿಲ್ದಾಣವನ್ನು ಅಂತಾರಾಷ್ಟ್ರೀಯ ಬಸ್ ನಿಲ್ದಾಣದ ಮಾದರಿಯಲ್ಲಿ ಮರು ಅಭಿವೃದ್ಧಿ ಮಾಡಬೇಕು. ಮೆಜೆಸ್ಟಿಕ್ ನಿಲ್ದಾಣ 40 ಎಕರೆ ಜಾಗದಲ್ಲಿ ಮೆಟ್ರೋ, ಕೆಎಸ್‌ಆರ್‌ಟಿಸಿ ಸ್ವಲ್ಪ ಜಾಗ ನೀಡಲಾಗಿದೆ. 32 …
Read More »ಪರಿಷತ್ ಶಿಕ್ಷಕರ, ಪದವೀಧರ ಕ್ಷೇತ್ರ; ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್
ಬೆಂಗಳೂರು: ವಿಧಾನ ಪರಿಷತ್ ಖಾಲಿ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ. ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಶಶೀಲ್ ಜಿ.ನಮೋಜಿ, ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಎಸ್.ವಿ.ಸಂಕನೂರ ಮತ್ತು ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಕೆ.ಎಂ.ಸುರೇಶ್ ಅವರನ್ನು ಅಭ್ಯರ್ಥಿಗಳನ್ನಾಗಿ ಘೋಷಿಸಲಾಗಿದೆ. ಮಾಜಿ ಸಚಿವ ಎಸ್.ಎ.ರವೀಂದ್ರನಾಥ್ ಆಪ್ತನಾಗಿದ್ದ ಕೆ.ಎಂ.ಸುರೇಶ್ ಮೂರು ದಶಕಗಳಿಂದ ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತರಾಗಿದ್ದಾರೆ. ಹಾಲಿ ಎಂಎಲ್ಸಿ ಶಶೀಲ್ ನಮೋಶಿ ಅವರನ್ನು ಮತ್ತೆ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಪಕ್ಷ ಅಧಿಕೃತವಾಗಿ …
Read More »ಒಳಮೀಸಲಾತಿ ಕುರಿತು ಇದೆ 27ರ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರ ಆಹಾರ ಸಚಿವ:- ಕೆಹೆಚ್. ಮುನಿಯಪ್ಪ
ಬೆಂಗಳೂರು: ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಹಾಗೂ ಅಬಕಾರಿ ಸಚಿವರಾದ ಆರ್ .ಬಿ.ತಿಮ್ಮಾಪುರ ರವರ ನೇತೃತ್ವದಲ್ಲಿ ನಿಯೊಗವು ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಬೇಟಿ ಮಾಡಿ ಚರ್ಚಿಸಿದರು ನೇಮಕಾತಿಯಲ್ಲಿ ಒಳಮೀಸಲಾತಿ ಹಳವಡಿಸಿ ನೇಮಕಾತಿ ಪ್ರಕ್ರಿಯೆಯಾಗಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ ಒಳಮೀಸಲಾತಿ ಅನುಷ್ಠಾನಗೊಳಿಸಲು ನಮ್ಮ ಸರ್ಕಾರಕ್ಕೆ ಬದ್ದತೆ ಇದ್ದು ನಾವು ಒಳಮೀಸಲಾತಿ ಅನುಷ್ಠಾನ ಮಾಡುವಲ್ಲಿ ನಾವು ಯಾವುದೇ ವ್ಯತ್ಯಾಸಗಳಾಗದಂತೆ ಸರ್ಕಾರವು ನೂರೊಂದು ಜಾತಿಗಳಿಗೂ ಸರಿ ಸಮನಾದ ನ್ಯಾಯವನ್ನು ಒದಗಿಸಿಕೊಡಲಿದೆ ಎಂದರು ಒಳಮೀಸಲಾತಿ …
Read More »ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ’ ಅಸ್ತು
ನವದೆಹಲಿ: ದೇಶಾದ್ಯಂತ `ಏಕರೂಪ ನಾಗರಿಕ ಸಂಹಿತೆ’ ಜಾರಿಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದೆ. ದೇಶದ ಎಲ್ಲಾ ಮಹಿಳೆಯರಿಗೆ ಸಮಾನ ಹಕ್ಕುಗಳನ್ನು ಖಾತ್ರಿಪಡಿಸುವ ಏಕೈಕ ಮಾರ್ಗವೆಂದರೆ ದೇಶಾದ್ಯಂತ ಯುಸಿಸಿ ಜಾರಿಗೆ ತರುವುದು ಎಂದಿದೆ. ಮುಸ್ಲಿಂ ವೈಯಕ್ತಿಕ ಕಾನೂನು (ಶರಿಯತ್) ಅಡಿಯಲ್ಲಿ ಮಹಿಳೆಯರ ಹಕ್ಕುಗಳ ಉಲ್ಲಂಘನೆಯನ್ನು ಆರೋಪಿಸಿ ಒಂದು ಬ್ಯಾಚ್ ಅರ್ಜಿಯ ವಿಚಾರಣೆ ನಡೆಸುತ್ತಿರುವ ಸಿಜೆ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಆರ್ ಮಹದೇವನ್ ಮತ್ತು ಜಾಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ನ್ಯಾಯಪೀಠ ಈ ತೀರ್ಪು ನೀಡಿದೆ. ಮುಸ್ಲಿಂ …
Read More »ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ 6 ವರ್ಷ – ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಪಾರ್ಟಿ
ಬೆಂಗಳೂರು: ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಇಂದಿಗೆ 6 ವರ್ಷ ತುಂಬಿದೆ. ಈ ಹಿನ್ನೆಲೆಯಲ್ಲಿ ಇಂದು ರಾತ್ರಿ ಪಕ್ಷದ ಶಾಸಕರಿಗೆ ಭೋಜನಕೂಟ ಆಯೋಜಿಸಿದ್ದರು. ರಾಜಕೀಯ ಲೆಕ್ಕಾಚಾರ, ಪವರ್ ಶೇರಿಂಗ್ ಗೊಂದಲದ ನಡುವೆ ಡಿಸಿಎಂ ಡಿನ್ನರ್ ಕೂಟ ಸಾಕಷ್ಟು ಕುತೂಹಲ ಮೂಡಿಸಿದೆ ಎನ್ನಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವರು ಹಾಗೂ ಶಾಸಕರು ಇಂದಿನ ಭೋಜನ ಕೂಟದಲ್ಲಿ ಭಾಗಿಯಾಗಿದ್ದರು. ಇತ್ತೀಚೆಗಷ್ಟೇ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಟ್ಟು ಕೊಡೋ ಬಗ್ಗೆ ಡಿಕೆಶಿ ಸುಳಿವು ಕೊಟ್ಟಿದ್ದರು. ಬಿಜೆಪಿ …
Read More »15 ಸಾವಿರ ಶಿಕ್ಷಕರ ಹುದ್ದೆಗಳ ನೇಮಕ ಪ್ರಕ್ರಿಯೆಗೆ ಕ್ರಮ : ಮಧು ಬಂಗಾರಪ್ಪ
ಬೆಂಗಳೂರು : ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ 15 ಸಾವಿರ ಶಿಕ್ಷಕರ ಹುದ್ದೆಗಳ ನೇಮಕ ಪ್ರಕ್ರಿಯೆಗೆ ಕ್ರಮ ವಹಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸೋಮವಾರ ವಿಧಾನಪರಿಷತ್ತಿನ ಕಲಾಪದ ಪ್ರಶೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಎಚ್.ಎಸ್.ಗೋಪಿನಾಥ್ ಪ್ರಶ್ನೆಗೆ ಉತ್ತರಿಸಿದ ಸಚಿವರು, 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ವಹಿಸಲಾಗುವುದು ಎಂದರು. ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ ಆಗದಂತೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ರಾಜ್ಯದ …
Read More »ಬೆಳಗಾವಿಯಲ್ಲಿ ಕಾರು- ಬೊಲೆರೊ ನಡುವೆ ಭೀಕರ ಅಪಘಾತ | ನಾಲ್ವರಿಗೆ ಗಾಯ
ಬೆಳಗಾವಿ : ಕಾರು ಮತ್ತು ಬೊಲೆರೊ ನಡುವೆ ಭೀಕರ ಅಪಘಾತ ಸಂಭವಿಸಿರುವ ಪರಿಣಾಮ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಬೆಳಗಾವಿಯ ಬೈಲಹೊಂಗಲ ತಾಲೂಕಿನ ಕೆಂಗಾನೂರ- ಗರ್ಜೂರು ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿರುವವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಬೈಲಹೊಂಗಲ ತಾಲೂಕಿನ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣವು ಬೈಲಹೊಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ. ಅಪಘಾತದ ಕುರಿತು ಪೊಲೀಸರು ಸ್ಥಳಕ್ಕೆ ಭೇಟಿ …
Read More »ಫೇಸ್ಬುಕ್ ಪರಿಚಯದಿಂದ ಹನಿಟ್ರ್ಯಾಪ್: ಶ್ರೀಮಂತರನ್ನೇ ಟಾರ್ಗೆಟ್ ಮಾಡಿದ ಮಹಿಳೆ ಬೆಳಗಾವಿಯಲ್ಲಿ ಬಂಧನ
ಬೆಳಗಾವಿ: ಸಾಮಾಜಿಕ ಜಾಲತಾಣಗಳ ಮೂಲಕ ಶ್ರೀಮಂತ ವ್ಯಕ್ತಿಗಳನ್ನು ಬಲೆಗೆ ಬೀಳಿಸಿ ಹನಿಟ್ರ್ಯಾಪ್ ಮೂಲಕ ಮೋಸ ಮಾಡುತ್ತಿದ್ದ ಮಹಿಳೆಯನ್ನು ಬೆಳಗಾವಿಯ ಟಿಳಕವಾಡಿ ಪೊಲೀಸರು ಬಂಧಿಸಿದ್ದಾರೆ. ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂ ಮೂಲಕ ಪರಿಚಯ ಮಾಡಿಕೊಂಡು, ನಂತರ ಲಾಡ್ಜ್ಗೆ ಕರೆಸಿ ಹಣ, ಚಿನ್ನ ಸೇರಿದಂತೆ ಅಮೂಲ್ಯ ವಸ್ತುಗಳನ್ನು ದೋಚುತ್ತಿದ್ದ ಆರೋಪ ಆಕೆಯ ಮೇಲೆ ಇದೆ. ಬಂಧಿತ ಆರೋಪಿಯನ್ನು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಮೂಲದ ದೀಪಾ ಅವಟಗಿ (33) ಎಂದು ಗುರುತಿಸಲಾಗಿದೆ. ಫ್ಯಾಶನ್ ಡಿಸೈನರ್ ಆಗಿದ್ದ …
Read More »
Laxmi News 24×7