Breaking News

KSRTC ಬಸ್​ ಚಾಲಕನ ರೀಲ್ಸ್​ ಶೋಕಿಗೆ ಎತ್ತುಗಳು ಬಲಿ, ರೈತನ ಸ್ಥಿತಿ ಗಂಭೀರ

ಹುಬ್ಬಳ್ಳಿ: ಇತ್ತೀಚಿನ ವರ್ಷಗಳಲ್ಲಿ ಜನರ ರೀಲ್ಸ್​ ಹುಚ್ಚಾಟಕ್ಕೆ ಅಮೂಲ್ಯ ಜೀವಗಳು ಬಲಿಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುವ ಭರದಲ್ಲಿ ಒಂದಿಲ್ಲೊಂದು ಕೆಲಸಕ್ಕೆ ಕೈ ಹಾಕಿ ಜನರು ಇನ್ನಿಲ್ಲದ ಪೇಚಿಗೆ ಸಿಲುಕುತ್ತಾರೆ. ಇದೀಗ ಹುಬ್ಬಳ್ಳಿಯಲ್ಲಿ KSRTC ಚಾಲಕನೋರ್ವ ಬಸ್​ ಚಾಲನೆ ವೇಳೆ ರೀಲ್ಸ್​ ಮಾಡಲು ಹೋಗಿ ಎರಡು ಎತ್ತು ಹಾಗೂ ರೈತನ ಜೀವಕ್ಕೆ ಕುತ್ತು ತಂದಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಬಳಿ ನಡೆದಿದೆ.   ಸರ್ಕಾರಿ ಬಸ್ ಚಾಲಕನ ರೀಲ್ಸ್ ಹುಚ್ಚಾಟಕ್ಕೆ …

Read More »

ಬೆಂಗಳೂರಿನ ‘ಪಾರ್ಕಿಂಗ್’ ಸಮಸ್ಯೆ ನಿವಾರಣೆಗೆ ಹೊಸ ನೀತಿ ಜಾರಿಗೆ ; ಗೃಹ ಸಚಿವ

ಬೆಂಗಳೂರು : ಬೆಂಗಳೂರಿನಲ್ಲಿರುವ ಪಾರ್ಕಿಂಗ್ ಸಮಸ್ಯೆ ನಿವಾರಣೆಗೆ ಹೊಸ ನೀತಿ ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿರುವ ಗೃಹ ಸಚಿವ .ಪರಮೇಶ್ವರ್ ಬೆಂಗಳೂರಿನಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿದೆ. ಪಾರ್ಕಿಂಗ್ ನೀತಿ ಇಲ್ಲದಿರುವುದು ಈ ಸಮಸ್ಯೆಗೆ ಕಾರಣ. ಬೆಂಗಳೂರಿನಲ್ಲಿರುವ ಪಾರ್ಕಿಂಗ್ ಸಮಸ್ಯೆ ನಿವಾರಣೆಗೆ ಹೊಸ ನೀತಿ ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಬಿಬಿಎಂಪಿ, ಪೊಲೀಸ್ ಮತ್ತು ಸಾರಿಗೆ ಇಲಾಖೆಗಳ ಜೊತೆ ಚರ್ಚಿಸಿ …

Read More »

ವೈದ್ಯಕೀಯ ಸೀಟು ಕೊಡಿಸುವುದಾಗಿವಂಚನೆ:

ಬೆಳಗಾವಿ: ನೀಟ್‌ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳನ್ನು ಸಂಪರ್ಕಿಸಿ ವಿವಿಧ ಕಾಲೇಜುಗಳಲ್ಲಿ ವೈದ್ಯಕೀಯ ಸೀಟು ಕೊಡಿಸುವುದಾಗಿ ವಂಚಿಸಿದ ಅಂತಾರಾಜ್ಯ ಆರೋಪಿಯನ್ನು ಬೆಳಗಾವಿ ಪೊಲೀಸರು ಬಂಧಿ ಸಿ 12 ಲಕ್ಷ ರೂ. ನಗದು ಹಾಗೂ 15 ಕಂಪ್ಯೂಟರ್‌, ಡೆಬಿಟ್‌ / ಕ್ರೆಡಿಟ್‌ ಕಾರ್ಡ್‌ ಸೇರಿ 12 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಕೊಂಡಕಲ್‌ನ ಅರಗೊಂಡ ಅರವಿಂದ ಉರೂಫ್‌ ಅರುಣ ಕುಮಾರ (47) ಬಂಧಿತ ಆರೋಪಿ. ಬೆಳಗಾವಿ …

Read More »

ಜಮೀನು ವರ್ಗಾವಣೆ: 15 ದಿನಗಳಲ್ಲಿ ವರದಿ‌ ನೀಡಿ

ಬೆಳಗಾವಿ: ನಗರದ ಕ್ಯಾಂಟೋನ್ಮೆಂಟ್‌ನ ವಸತಿ ಪ್ರದೇಶವನ್ನು ಮಹಾನಗರ ಪಾಲಿಕೆಯಲ್ಲಿ ಸೇರಿಸುವುದಕ್ಕೆ ಸಂಬಂಧಿಸಿದಂತೆ ಕ್ಯಾಂಟೋನ್ಮೆಂಟ್‌ ಬೋರ್ಡ್‌ನ ಒಟ್ಟು 1763.78 ಎಕರೆ ಜಾಗೆಯ ಸಮೀಕ್ಷೆ ಕೈಗೊಂಡು 15 ದಿನಗಳೊಳಗಾಗಿ ವರದಿ ಸಲ್ಲಿಸಬೇಕು’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ನೀಡಿದ್ದಾರೆ.   ರಕ್ಷಣಾ ಸಚಿವಾಲಯದ ಜಂಟಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಮಂಗಳವಾರ ಜರುಗಿದ ವಿಡಿಯೊ ಸಂವಾದ ಸಭೆಯ ಬಳಿಕ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಕ್ಯಾಂಟೋನ್ಮೆಂಟ್‌ ಪ್ರದೇಶಗಳನ್ನು …

Read More »

ಭಾರಿ ಮಳೆ ಭಾಗಶಃ ಭರ್ತಿಯಾದ ರಕ್ಕಸಕೊಪ್ಪ ಜಲಾಶಯ

ಪಶ್ಚಿಮ ಘಟ್ಟದಲ್ಲಿ ಭಾರಿ ಮಳೆ ಹಿನ್ನೆಲೆ‌; ಭಾಗಶಃ ಭರ್ತಿಯಾದ ರಕ್ಕಸಕೊಪ್ಪ ಜಲಾಶಯ ಬೆಳಗಾವಿ, ಜುಲೈ 16: ಪಶ್ಚಿಮ ಘಟ್ಟದಲ್ಲಿ ಬರೆದ ಭಾರಿ ಮಳೆಯ ಕಾರಣದಿಂದ ಬೆಳಗಾವಿ ಜಿಲ್ಲೆಯ ರಕ್ಕಸೊಪ್ಪ ಜಲಾಶಯ ಭಾಗಶಃ ಭರ್ತಿಯಾಗಿದೆ. ಬೆಳಗಾವಿ ನಗರಕ್ಕೆ ನೀರು ಕೊಡುವ ಏಕೈಕ ಜಲಾಶಯವು ಬಹುತೇಕ ಭರ್ತಿಯಾದ ಹಿನ್ನೆಲೆಯಲ್ಲಿ ನಗರ ನಿವಾಸಿಗಳಲ್ಲಿ ಸಂತಸ ಮೂಡಿದೆ. ಬೆಳಗಾವಿ ತಾಲೂಕಿನ ರಕ್ಕಸೊಪ್ಪ ಗ್ರಾಮದ ಬಳಿ ಇರುವ ಈ ಡ್ಯಾಂವು 0.60 ಟಿಎಂಸಿ ಸಾಮರ್ಥ್ಯವನ್ನು ಹೊಂದಿದ್ದು, ಈಗಾಗಲೇ …

Read More »

ಜೂನ್ ತಿಂಗಳ ರೇಷನ್‌ ಬಿಡುಗಡೆ

ಬೆಂಗಳೂರು : ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ಜೂನ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್‍ಗೆ 21 ಕೆ.ಜಿ ಅಕ್ಕಿ, ರಾಗಿ ಪ್ರತಿ ಕಾರ್ಡ್‍ಗೆ 14 ಕೆ.ಜಿ, ಆದ್ಯತಾ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ 3 ಕೆ.ಜಿ ಅಕ್ಕಿ, 2 ಕೆ.ಜಿ.ರಾಗಿ ಪ್ರತಿ ಸದಸ್ಯರಿಗೆ ಉಚಿತವಾಗಿ ವಿತರಣೆ ಮಾಡಲಾಗುತ್ತದೆ. ಎಪಿಎಲ್ ಸದಸ್ಯರ ಪಡಿತರ ಚೀಟಿಗೆ 5 ಕೆಜಿ ಅಕ್ಕಿ, 2 …

Read More »

ಕಾವೇರಿ ನೀರು ಬಿಡದಿದ್ದರೆ ಕೋರ್ಟ್‌ಗೆ: ತಮಿಳುನಾಡು ಬೆದರಿಕೆ

ಚೆನ್ನೈ: ಕರ್ನಾಟಕದಿಂದ ಕಾವೇರಿ ನೀರಿ ಪಡೆಯಲು ಅಗತ್ಯ ಬಿದ್ದರೆ ಸುಪ್ರೀಂ ಕೋರ್ಟ್‌ ಮೊರೆ ಹೋಗುವ ಬಗ್ಗೆ ತಮಿಳುನಾಡಿನ ಸರ್ವಪಕ್ಷ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ(CWRC) ಆದೇಶದಂತೆ ನಿತ್ಯ 1 ಟಿಎಂಸಿ ನೀರು ಬಿಡಲು ಕರ್ನಾಟಕ ಸರ್ಕಾರವು ನಿರಾಕರಿಸಿದ್ದ ಹಿನ್ನೆಲೆಯಲ್ಲಿ ಸಿಎಂ ಎಂ.ಕೆ. ಸ್ಟಾಲಿನ್‌ ನೇತೃತ್ವದ ತಮಿಳುನಾಡು ಸರ್ಕಾರ, ಮಂಗಳವಾರ ಸರ್ವಪಕ್ಷ ಸಭೆ ಕರೆದಿತ್ತು. ಸಭೆಯಲ್ಲಿ ಕರ್ನಾಟಕದ ನಿರ್ಧಾರವನ್ನು ತೀವ್ರವಾಗಿ ಖಂಡಿಸಿ, ನಿರ್ಣಯ ಕೈಗೊಳ್ಳಲಾಯಿತು. ಜತೆಗೆ, ಸುಪ್ರೀಂ …

Read More »

ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದಿದ್ದೀರಿ. ಶುಭ್ರತೆಯ ಪೋಸ್‌ ಬಿಟ್ಟುಬಿಡಿ..

ಮುಡಾ ಹಗರಣ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಂಟಿದ ಕಳಂಕವಷ್ಟೇ ಅಲ್ಲ, ಅವರ ಇಡಿ ವçಕ್ತಿತ್ವಕ್ಕೆ ಮೆತ್ತಿಕೊಂಡ ಕೆಸರು. ರಾಜ್ಯದ ಜನತೆಯ ಮುಂದೆ ಶುಭ್ರತೆಯ ಪೋಸು ನೀಡುತ್ತಿದ್ದ ಸಿದ್ದರಾಮಯ್ಯ ಈ ಬಾರಿ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದಿದ್ದಾರೆ. ರಾಜೀನಾಮೆ ಕೊಟ್ಟರೂ ಈ ಕಳಂಕಿತ ಚಾರಿತ್ರ್ಯದಿಂದ ಅವರಿಗೆ ಮುಕ್ತಿ ಸಿಗುವುದಿಲ್ಲ ಎಂದು ವಿಪಕ್ಷ ನಾಯಕ ಆರ್‌.ಅಶೋಕ ಅಭಿಪ್ರಾಯಪಟ್ಟಿದ್ದಾರೆ. “ಉದಯವಾಣಿ’ಗೆ ನೀಡಿದ ನೇರಾನೇರ ಸಂದರ್ಶನದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಹತ್ತು-ಹದಿನೈದು ವರ್ಷದಿಂದ ಹಂತಹಂತವಾಗಿ …

Read More »

2025ರ ಡಿ.31 ರೊಳಗೆ 197 ಕೆರೆಗೆ ಭದ್ರಾ ನೀರು: ಡಿಸಿಎಂ ಡಿಕೆಶಿ

ವಿಧಾನಸಭೆ: ಭದ್ರಾ ಉಪ ಜಲಾನಯನ ಪ್ರದೇಶದಿಂದ ಏತ ವ್ಯವಸ್ಥೆ ಮೂಲಕ ನೀರನ್ನೆತ್ತಿ 197 ಕೆರೆಗಳನ್ನು ತುಂಬಿಸುವ ಯೋಜನೆಯನ್ನು 2025 ರ ಡಿ.31 ರೊಳಗಾಗಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು. ಕಾಂಗ್ರೆಸ್‌ನ ಎಚ್‌.ಡಿ. ತಮ್ಮಯ್ಯ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್‌, 2020ರಲ್ಲೇ 1281.80 ಕೋಟಿ ರೂ. ಮೊತ್ತದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ವಿವಿಧ ಹಂತಗಳಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಈ ಪೈಕಿ ಕಡೂರು ಕೆರೆ …

Read More »

ಕಾರ್ಮಿಕ ಇಲಾಖೆಯಿಂದ ಸಿನಿ ಕಾರ್ಮಿಕರಿಗೆ ಭರ್ಜರಿ ಗಿಫ್ಟ್!

ಬೆಂಗಳೂರು, ಜುಲೈ 17: ಸಿನಿಮಾ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಕೆಲಸ ಮಾಡುವ ಕಾರ್ಮಿಕರ ಕಲ್ಯಾಣಕ್ಕಾಗಿ ಕರ್ನಾಟಕ ಸಿನಿಮಾ ಮತ್ತು ಸಾಂಸ್ಕೃತಿಕ ಕಾರ್ಯಕರ್ತಕರ (ಕಲ್ಯಾಣ) ವಿಧೇಯಕ, 2024 ನ್ನು ರೂಪಿಸಿ ಜಾರಿಗೆ ತರಲು ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾಗಿದ್ದು, ವಿಧಾನ ಮಂಡಲದಲ್ಲಿ ಸಹ ಅಂಗೀಕಾರ ಪಡೆಯಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು. ಈ ವಿಧೇಯಕದಿಂದ ಈ ಕ್ಷೇತ್ರದಲ್ಲಿ ಕೆಲಸ ಮಾಡುವ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಿದ ಶ್ರೇಯ …

Read More »