Breaking News

ವಾಹನ ಪಲ್ಟಿಯಾಗಿ ಹಲವರಿಗೆ ಗಾಯ: ಮಾನವೀಯತೆ ಮೆರೆದ ಶಾಸಕ ನಡಹಳ್ಳಿ

ಮುದ್ದೇಬಿಹಾಳ: ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹಳ್ಳಕ್ಕೆ ಉರುಳಿ ಬಿದ್ದು15 ಜನರು ಗಾಯಗೊಂಡ ಘಟನೆ ಬುಧವಾರ ಸಂಜೆ ಸಂಭವಿಸಿದೆ. ತಾಲೂಕಿನ ಅಡವಿ ಹುಲಗಬಾಳ ಗ್ರಾಮದ ಬೀರಪ್ಪನ ಬೆಟ್ಟದಲ್ಲಿ ದೀಪಾವಳಿ ಪಾಡ್ಯದಂದು ನಡೆದ ಜಾತ್ರೆ, ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಮುಗಿಸಿಕೊಂಡು ಸ್ವಗ್ರಾಮದತ್ತ ಹೊರಟಿದ್ದ ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹಳ್ಳಕ್ಕೆ ಉರುಳಿ ಬಿದ್ದು ಅದರಲ್ಲಿ ಇದ್ದ ಇಬ್ಬರು ಮಕ್ಕಳು, ಮೂವರು ವೃದ್ಧರು ಸೇರಿ …

Read More »

ಅಕ್ರಮ ಸಂಬಂಧಕ್ಕೆ ಅಡ್ಡಿ ಅಂತ ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಮುಗಿಸಿದ್ಳು!

ಬೆಂಗಳೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆ ಎಂದು ಪತ್ನಿಯೇ ಪತಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಸಿಲಿಕಾನ್ ಸಿಟಿಯ ಯಲಹಂಕದಲ್ಲಿ ನಡೆದಿದೆ. ಮೃತನನ್ನು ಚಂದ್ರಶೇಖರ್ ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ ಚಂದ್ರಶೇಖರ್ ಪತ್ನಿ ಶ್ವೇತಾ ಹಾಗೂ ಆಕೆಯ ಪ್ರಿಯಕರ ಹಿಂದೂಪುರ (Hindupura) ದ ಸುರೇಶ್‍ನನ್ನು ಪೊಲೀಸರು ಬಂಧಿಸಿದ್ದಾರೆ. ಚಂದ್ರಶೇಖರ್ (Chandrashekhar) ಮತ್ತು ಶ್ವೇತಾ (Shwetha) ಕಳೆದ ನಾಲ್ಕು ವರ್ಷಗಳ ಹಿಂದೆ ಮದುವೆ (Marriage) ಯಾಗಿದ್ದರು. ಇಬ್ಬರ ನಡುವೆ ಹದಿನಾರು ವರ್ಷದ ಅಂತರ ಇತ್ತು. …

Read More »

ನ. 1ಕ್ಕೆ JDS ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ : H.D.K

ಬೆಂಗಳೂರು: 2023ರ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್‌ಗಿಂತ ಮೊದಲೇ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗೋದು ಬಹುತೇಕ ಖಚಿತವಾಗಿದೆ. ನ. 1ರಂದು ಮುಳಬಾಗಿಲಿನಲ್ಲಿ ನಡೆಯಲಿರುವ ಪಂಚರತ್ನ ರಥಯಾತ್ರೆ ಸಮಾವೇಶದಲ್ಲಿ ಜೆಡಿಎಸ್‌ನ ಮೊದಲ ಪಟ್ಟಿ ರಿಲೀಸ್ ಮಾಡಲಾಗುತ್ತದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ತಿಳಿಸಿದರು. ಜೆಪಿ ಭವನದಲ್ಲಿ ಮಾತನಾಡಿದ ಅವರು, ಈಗಾಗಲೇ 123 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಫೈನಲ್ ಆಗಿದೆ. ಕಳೆದ ವಾರ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಅಭ್ಯರ್ಥಿಗಳ ಪಟ್ಟಿಗೆ ಪೂಜೆ ಸಲ್ಲಿಸಲಾಗಿದೆ. …

Read More »

ಬಸವಲಿಂಗ ಶ್ರೀ ವೀಡಿಯೋ ಕಾಲ್ ವೈರಲ್- ಮೂವರು ಮಹಿಳೆಯರ ಪ್ರತ್ಯೇಕ ವಿಚಾರಣೆ

ರಾಮನಗರ: ಮಾಗಡಿಯ (Magadi) ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮಹಿಳೆಯೊಬ್ಬರ ಜೊತೆ ಸ್ವಾಮೀಜಿ ವೀಡಿಯೋ ಕಾಲ್ (Video Call) ಮಾಡಿ ಮಾತನಾಡಿದ್ದಾರೆ ಎನ್ನಲಾದ ವೀಡಿಯೋ ಈಗಾಗಲೇ ವೈರಲ್ (Video Viral) ಆಗಿದ್ದು, ಈ ವೀಡಿಯೋ ಆಧರಿಸಿ ಅನುಮಾನಿತ ಮೂವರು ಮಹಿಳೆಯರನ್ನು (Woman) ಪೊಲೀಸರು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಬಂಡೆಮಠದ (Bande Mutt) ಬಸವಲಿಂಗ ಶ್ರೀಗಳ (Basavalinga Swamiji) ಆತ್ಮಹತ್ಯೆ ಪ್ರಕರಣ ಇದೀಗ …

Read More »

ಕನ್ನಡ ರಾಜ್ಯೋತ್ಸವದಂದು ಕರಾಳ ದಿನ ಆಚರಣೆಗೆ M.E.S.ಸಿದ್ಧತೆ

ಬೆಳಗಾವಿ: ನಾಡದ್ರೋಹಿ ಎಂಇಎಸ್‍ನಿಂದ (MES) ಮತ್ತೆ ಗಡಿ ಖ್ಯಾತೆ ಆರಂಭವಾಗಿದ್ದು, ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು (Kannada Rajyotsava) ಎಂಇಎಸ್ ಮುಖಂಡರು ಕರಾಳ ದಿನಾಚರಣೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ನಾಡದ್ರೋಹಿಗಳು ಕರಾಳ ದಿನ ಆಚರಿಸುವ ಕುರಿತಾಗಿ ಪೋಸ್ಟ್ ಹಾಕಿದ್ದಾರೆ. ನವೆಂಬರ್ 1ರಂದು ರಾಜ್ಯಾದ್ಯಂತ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ. ಅದರಲ್ಲೂ ಕುಂದಾನಗರಿ ಬೆಳಗಾವಿಯಲ್ಲಿ (Belagavi) ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ರಾಜ್ಯದ ಮೂಲೆಮೂಲೆಗಳಿಂದ ಕನ್ನಡ ರಾಜ್ಯೋತ್ಸವ ನೋಡಲು …

Read More »

ಬೆಳಗಾವಿ: ಕಲುಷಿತ ನೀರು ಸೇವಿಸಿ 3 ದಿನಗಳ ಅಂತರದಲ್ಲಿ 50 ಕ್ಕೂ ಅಧಿಕ ಜನರು ಅಸ್ವಸ್ಥ

ಬೆಳಗಾವಿ: ಕಲುಷಿತ ನೀರು (Polluted Water) ಸೇವಿಸಿ 3 ದಿನಗಳ ಅಂತರದಲ್ಲಿ 50 ಕ್ಕೂ ಅಧಿಕ ಜನರು ಅಸ್ವಸ್ಥಗೊಂಡಿರುವ ಘಟನೆ ಮುದೇನೂರು ಗ್ರಾಮದಲ್ಲಿ ನಡೆದಿದೆ. ಸ್ಥಳಕ್ಕೆ ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿ (Belagavi) ಜಿಲ್ಲೆಯ ರಾಮದುರ್ಗ ತಾಲೂಕಿನ ಮುದೇನೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ದೀಪಾವಳಿ ಸಂಭ್ರಮದಲ್ಲಿ ಇರಬೇಕಿದ್ದ ಗ್ರಾಮಸ್ಥರು ಆಸ್ಪತ್ರೆಗಳಿಗೆ ಅಲೆದಾಡುತ್ತಿದ್ದಾರೆ. ಅಸ್ವಸ್ಥಗೊಂಡಿರುವ 50 ಕ್ಕೂ ಅಧಿಕ ಜನರು ರಾಮದುರ್ಗದ ಸರ್ಕಾರಿ ಹಾಗೂ ಖಾಸಗಿ …

Read More »

ಎಲ್ಲಾ ಕಡೆ ಬಿಜೆಪಿ ಇದೆ, ನಮಗೆ ರಕ್ಷಣೆ ಯಾವಾಗ?: ಹರ್ಷ ಸಹೋದರಿ ಪ್ರಶ್ನೆ

ಶಿವಮೊಗ್ಗ: ಹರ್ಷನ ಕಳಕೊಂಡು 8 ತಿಂಗಳು ಆಗಿದೆ, ಈಗಲೂ ಪ್ರೇಮಸಿಂಗ್ ಚೂರಿ ಇರಿತ ಸೇರಿದಂತೆ ಪ್ರಕರಣ ನಡೆಯುತ್ತಲೇ ಇದೆ. ಕೇಂದ್ರದಲ್ಲೂ, ರಾಜ್ಯದಲ್ಲೂ ಬಿಜೆಪಿ ಇದೆ, ಮೇಲಾಗಿ ಶಿವಮೊಗ್ಗ ನಗರದಲ್ಲಿ ಬಿಜೆಪಿ ಇದೆ.ನಮಗೆ ರಕ್ಷಣೆ ಯಾವಾಗ ಸಿಗುತ್ತದೆ ಎಂದು ಹರ್ಷ ಸಹೋದರಿ ಅಶ್ವಿನಿ ಮಂಗಳವಾರ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ.   ಸುದಿಗಾರರೊಂದಿಗೆ ಮಾತನಾಡಿ,ಹಿಂದುತ್ವದ ಕೆಲಸ ಮಾಡುತ್ತಿದ್ದ ಎಂದು ಹರ್ಷನ ಟಾರ್ಗೆಟ್ ಮಾಡಿ ಹೊಡೆದರು. ಅಂಥವನನ್ನೇ ಕೊಲ್ಲುತ್ತಾ ರೆಂದರೆ, ನಮಗೆ ಯಾವ ರಕ್ಷಣೆ …

Read More »

ಇಪ್ಪತ್ತರವರಲ್ಲಿ ಮುಂದಿನ ಐವತ್ತರ ಕನಸು

ಬೆಂಗಳೂರು: ಭವಿಷ್ಯದ ನಾಯಕತ್ವ ಸೃಷ್ಟಿಗಾಗಿ ಬೃಹತ್‌ ಪ್ರಮಾಣದಲ್ಲಿ ಯುವ ಸಮೂಹವನ್ನು ಪಕ್ಷಕ್ಕೆ ಸೆಳೆಯಲು ಬಿಜೆಪಿ ಮುಂದಾಗಿದೆ. ಇಪ್ಪತ್ತರಿಂದ ಮೂವತ್ತರೊಳಗಿನ ಎಲ್ಲ ಜಾತಿ ಸಮುದಾಯದ ಯುವಜನರನ್ನು ಬೂತ್‌ ಮಟ್ಟ ದಲ್ಲಿ ಪಕ್ಷಕ್ಕೆ ಸೆಳೆದು ಮುಂದಿನ 50 ವರ್ಷದ ರಾಜಕಾರಣಕ್ಕೆ ಅಣಿಗೊಳಿಸುವುದು ಇದರ ಉದ್ದೇಶ.   ಈ ಯುವಜನರ ಮೂಲಕ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಸಮುದಾಯ ಆಧಾರಿತ ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಅವುಗಳ ಫ‌ಲಾನುಭವಿಗಳ ಅಂಕಿ ಅಂಶಗಳನ್ನು ಮತದಾರರ ಮನೆ ಮನೆಗೆ ತಲುಪಿಸುವ …

Read More »

ಕೋಟಿ ಮೀರಿತು ಕನ್ನಡ ಗಾಯನಕ್ಕೆ ಕಂಠ ನೋಂದಣಿ

ಬೆಂಗಳೂರು: ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಇದೇ ತಿಂಗಳು 28 ರಂದು ಆಯೋಜಿಸಿರುವ ” ಕೋಟಿ ಕಂಠ ಗಾಯನ” ಕಾರ್ಯಕ್ರಮದಲ್ಲಿ ಭಾಗವಹಿಸಲು ಬರೋಬ್ಬರಿ 1 ಕೋಟಿ 10 ಲಕ್ಷ ಜನರು ತಮ್ಮ ಹೆಸರು ನೋಂದಣಿ ಮಾಡಿಕೊಂಡಿದ್ದು, ನಿರೀಕ್ಷೆಗೂ ಮೀರಿ ಜನಸ್ಪಂದನೆ ವ್ಯಕ್ತವಾಗಿದೆ.   ದೇಶ- ವಿದೇಶಗಳಿಂದ ಈ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೆ ಕನ್ನಡಿಗರು ಉತ್ಸಾಹದಿಂದ ಮುಂದೆ ಬಂದಿದ್ದು, ಅಕ್ಟೋಬರ್ 28 ರಂದು ಕೋಟಿ ಕಂಠ ಗಳಲ್ಲಿ ಕನ್ನಡದ ವೃಂದ ಗಾಯನ ಮೊಳಗಿ …

Read More »

ಚುನಾವಣೆ ಬಂತೆಂದರೆ ಸಾಕು, ಹುಟ್ಟುಹಬ್ಬವೂ ಉತ್ಸವವೇ!..

ಬೆಳಗಾವಿ: 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಧಾರವಾಡ ಗಡಿಯಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಫುಲ್​ ಆಯಕ್ಟಿವ್ ಆಗಿದ್ದಾರೆ. ಚುನಾವಣೆ ಹೊಸ್ತಿಲಲ್ಲೇ ಇರುವಾಗ ಅದ್ಧೂರಿ ಜನ್ಮದಿನ ಆಚರಿಸಿಕೊಳ್ಳಲು ವಿನಯ ಕುಲಕರ್ಣಿ ಭರ್ಜರಿ ತಯಾರಿ ನಡೆಸಿದ್ದಾರೆ. ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರಕ್ಕೆ ಹೊಂದಿಕೊಂಡಿರುವ ಕಿತ್ತೂರು ಪಟ್ಟಣದಲ್ಲಿ ಜನ್ಮದಿನ ಆಚರಣೆಗೆ ಎಲ್ಲಾ ರೀತಿಯ ಸಿದ್ಧತೆಗಳು ನಡೆದಿವೆ. ಹಿಂದೆ ಧಾರವಾಡ ಜಿಲ್ಲೆ ಪ್ರವೇಶಕ್ಕೆ ಮಾಜಿ ಸಚಿವ ವಿನಯ್​ ಕುಲಕರ್ಣಿಗೆ ನಿಷೇಧ ಹೇರಲಾಗಿತ್ತು. ಈ ಹಿನ್ನೆಲೆಯಲ್ಲಿ …

Read More »