Breaking News

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಜನ್ಮದಿನ ಸರ್ಕಾರದಿಂದಲೇ ‘ಸ್ಪೂರ್ತಿ ದಿನ’ವಾಗಿ ಆಚರಣೆ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಜನ್ಮದಿನವನ್ನು ಸ್ಫೂರ್ತಿ ದಿನ ಎಂದು ಸರ್ಕಾರದ ವತಿಯಿಂದಲೇ ಆಚರಿಸಲಾಗುವುದು. ಈ ಕುರಿತಾಗಿ ಇಂಧನ ಸಚಿವ ಸುನಿಲ್ ಕುಮಾರ್ ಅವರು ಮಾಡಿದ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಅಪ್ಪು ಜನ್ಮದಿನವಾದ ಮಾರ್ಚ್ 17 ಇನ್ನು ಮುಂದೆ ಸ್ಪೂರ್ತಿ ದಿನವೆಂದು ಆಚರಿಸಲು ಒಪ್ಪಿಗೆ ಸೂಚಿಸಿದ್ದಾರೆ. ಈ ಮೂಲಕ ಅಪ್ಪು ಜನ್ಮದಿನ ನಾಡಿನ ಲಕ್ಷಾಂತರ ಯುವಕರಿಗೆ ಸ್ಫೂರ್ತಿಯಾಗಲಿದೆ.

Read More »

ಪ್ರಧಾನಿ ಮೋದಿ ಜನ್ಮದಿನಕ್ಕೆಂದೇ ಸಿದ್ಧವಾಯ್ತು ’56 ಇಂಚಿನ ಮೋದಿ ಜಿ’ ಥಾಲಿ.

ದೆಹಲಿ : ಸೆಪ್ಟೆಂಬರ್ 17 ರಂದು(ನಾಳೆ) ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ. ಈ ವಿಶೇಷ ಸಂದರ್ಭದಲ್ಲಿ ದೆಹಲಿ ಮೂಲದ ರೆಸ್ಟೋರೆಂಟ್‌ನಲ್ಲಿ ವಿಶೇಷ ಥಾಲಿ(ವಿವಿಧ ಬಗೆರ ಆಹಾರಗಳನ್ನು ಒಳಗೊಂಡಿರುವ ಊಟ)ನ್ನು ನೀಡಲಿದೆ. ಅದರ ಹೆಸರು ʻ56 ಇಂಚಿನ ಮೋದಿಜಿʼ.   ದೆಹಲಿಯ ಕನ್ನಾಟ್ ಪ್ಲೇಸ್‌ನಲ್ಲಿರುವ ARDOR 2.1 ರೆಸ್ಟೊರೆಂಟ್ ಸುಮಾರು 56 ಬಗೆಯ ಆಹಾರಗಳನ್ನು ಹೊಂದಿರುವ ದೊಡ್ಡ ಗಾತ್ರದ ಥಾಲಿಯನ್ನು ನೀಡಲು ನಿರ್ಧರಿಸಿದೆ. ರೆಸ್ಟೋರೆಂಟ್ ಮಾಲೀಕ ಸುಮಿತ್ ಕಲ್ರಾ ಮಾತನಾಡಿ, …

Read More »

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ ಗ್ರಾ.ಪಂ.ಗಳಲ್ಲಿ ಖಾಲಿ ಇರುವ 326 ಪಿಡಿಒ, 625 SDA, 487 ಕಾರ್ಯದರ್ಶಿ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಗ್ರಾಮಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.   ವಿಧಾನಪರಿಷತ್ ನಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು, ಗ್ರಾಮಪಂಚಾಯಿತಿಗಳಿಗೆ ಸರ್ಕಾರದ 30 ಕ್ಕೂ ಹೆಚ್ಚು ಇಲಾಖೆಗಳ ಕಾರ್ಯಕ್ರಮ, ಯೋಜನೆಗಳನ್ನು ಜಾರಿ ಮಾಡುವ ಜವಾಬ್ದಾರಿಗಳನ್ನು ನೀಡಲಾಗಿದೆ. ಹೀಗಾಗಿ ಕೆಲಸದ ಒತ್ತಡ ಕಡಿಮೆ ಮಾಡಲು 3-4 ತಿಂಗಳಲ್ಲಿ ಪಿಡಿಒ ಸೇರಿದಂತೆ …

Read More »

ಶಿಕ್ಷಕರನ್ನು ನೇಮಿಸದಿದ್ದರೆ ಪರೀಕ್ಷೆ ಇಲ್ಲದೆ ಮಕ್ಕಳನ್ನು ಪಾಸ್ ಮಾಡಿ: BJP ಶಾಸಕ ರಾಜುಗೌಡ ಆಗ್ರಹ

ಬೆಂಗಳೂರು, ಸೆ. 15: ‘ಕಲ್ಯಾಣ ಕರ್ನಾಟಕ(ಹೈ.ಕ) ಭಾಗದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಕೂಡಲೇ ನೇಮಕ ಮಾಡಬೇಕು. ಇಲ್ಲವಾದರೆ ಪರೀಕ್ಷೆ ಇಲ್ಲದೆ ಮಕ್ಕಳನ್ನು ಪಾಸ್ ಮಾಡುವ ವ್ಯವಸ್ಥೆಯನ್ನಾದರೂ ತರಬೇಕು’ ಎಂದು ಸರಕಾರದ ವಿರುದ್ಧ ಆಡಳಿತ ಪಕ್ಷದ ಸದಸ್ಯ ನರಸಿಂಹ ನಾಯಕ್(ರಾಜುಗೌಡ) ಆಗ್ರಹಿಸಿದ ಪ್ರಸಂಗ ನಡೆಯಿತು.   ಗುರುವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಶಿಕ್ಷಕರ ಕೊರತೆ ವಿಷಯ ಪ್ರಸ್ತಾಪಿಸಿದ ಅವರು, ‘ರಾಜ್ಯದ ಇತರೆ ಕಡೆಗಳಲ್ಲಿ 16 ಮಕ್ಕಳಿಗೆ ಒಬ್ಬರು ಶಿಕ್ಷಕರಿದ್ದರೆ, ಹೈಕ …

Read More »

CUET-UG 2022 ಪರೀಕ್ಷಾ ಫಲಿತಾಂಶ ಪ್ರಕಟ

ನವ ದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ (ಪದವಿ ಪೂರ್ವ) 2022 ಫಲಿತಾಂಶವನ್ನು ಬಿಡುಗಡೆ ಮಾಡಿದೆ. ವಿಶ್ವವಿದ್ಯಾನಿಲಯಗಳಿಗೆ ಪದವಿಪೂರ್ವ ಪ್ರವೇಶಕ್ಕಾಗಿ ಎನ್‌ಟಿಎಯು ಜುಲೈ 15 ರಿಂದ ಆಗಸ್ಟ್ 30 ರ ನಡುವೆ ಆರು ಹಂತಗಳಲ್ಲಿ (ಸಿಯುಇಟಿ-ಯುಜಿ) 2022 ಪರೀಕ್ಷೆ ನಡೆಸಿತ್ತು. ಪ್ರವೇಶ ಪರೀಕ್ಷೆ ಬರೆದ ಎಲ್ಲಾ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿಗಳನ್ನು ಅಧಿಕೃತ CUET UG ವೆಬ್‌ಸೈಟ್ cuet.samarth.ac.in ನಲ್ಲಿ ಡೌನ್‌ಲೋಡ್ ಮಾಡಬಹುದು. ಪದವಿಪೂರ್ವ ಕೋರ್ಸ್‌ಗಳ …

Read More »

ವಿಮ್ಸ್ ಆಸ್ಪತ್ರೆ ದುರಂತ: ಮೃತ ಮೂವರು ರೋಗಿಗಳ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಬಳ್ಳಾರಿ/ಬೆಂಗಳೂರು: ಬಳ್ಳಾರಿಯ ವಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಸಾವನ್ನಪ್ಪಿರುವ ಮೂವರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಸರ್ಕಾರ ಹಾಗೂ ಉನ್ನತ ಶಿಕ್ಷಣ ಇಲಾಖೆಯ ವತಿಯಿಂದ ಕೆ.ಆರ್.ವೃತ್ತದ ಯುವಿಸಿಇಯಲ್ಲಿ ಆಯೋಜಿಸಿದ್ದ ವಿಶ್ವೇಶ್ವರಯ್ಯ ಇಂಜಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದ ಲೋಕಾರ್ಪಣೆ ಹಾಗೂ ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯ ಅವರ 162ನೇ ಜನ್ಮ ದಿನೋತ್ಸವದ ನಿಮಿತ್ತ ನಡೆದ ಅಭಿಯಂತರರ ದಿನಾಚರಣೆಯನ್ನು ಸಿಎಂ ಬೊಮ್ಮಾಯಿ ಉದ್ಘಾಟಿಸಿದರು. …

Read More »

ಕರೆಂಟ್ ಹೋದಾಗ ಮಶೀನ್‍ಗಳೆಲ್ಲ ಬಂದ್ ಆದವು ಕೆಲವೇ ಕ್ಷಣಗಳಲ್ಲಿ ನನ್ನ ಮಗ ಸತ್ತು ಹೋದ”: ಬಳ್ಳಾರಿ: ವಿಮ್ಸ್​ ತೀವ್ರ ನಿಗಾ ಘಟಕದಲ್ಲಿದ್ದ 8 ವರ್ಷದ ಬಾಲಕ ಸಾವು

ಬಳ್ಳಾರಿ: ವಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಾಗಿದ್ದ 8 ವರ್ಷದ ಬಾಲಕ ಬುಧವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಮೃತಪಟ್ಟಿರುವುದು ತಡವಾಗಿ ಬೆಳಕಿಗೆ ಬಂದಿದೆ. ಸಿರುಗುಪ್ಪದ ಕೆ.ಮಹೇಶ್ ಹಾಗೂ ಈರಮ್ಮ ದಂಪತಿಯ ಪುತ್ರ ನಿಖಿಲ್ (8) ಮೃತ ಬಾಲಕ. ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಈತನನ್ನು ಸೆ.11ರಂದು ವಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿತ್ತು. ಬುಧವಾರ ಸರಣಿ ಸಾವು ಪ್ರಕರಣ ಹೊರ ಬೀಳುತ್ತಿದ್ದಂತೆಯೇ ಈ ವಿಚಾರ ಗುರುವಾರ ಸಂಜೆಯ ವೇಳೆಗೆ ಬಹಿರಂಗವಾಗಿದೆ. …

Read More »

ದೇಶದ ಆಂತರಿಕ ಭದ್ರತೆಗೆ ಧಕ್ಕೆ ತರುವ ಕೃತ್ಯ: ಐವರು ಆರೋಪಿಗಳ ಬಂಧನ

ಬೆಂಗಳೂರು: ಅಂತರರಾಷ್ಟ್ರೀಯ ಮೊಬೈಲ್‌ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿ ಪರಿವರ್ತಿಸಿ ವಂಚಿಸುತ್ತಿದ್ದ ಕೇರಳದ ಐವರು ಆರೋಪಿಗಳನ್ನು ನಗರದ ಸಿಸಿಬಿ ಹಾಗೂ ಆರ್ಥಿಕ ಅಪರಾಧ ದಳದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಬುಧವಾರ ಬಂಧಿಸಿದ್ದಾರೆ.   ಕೇರಳದ ದಿನೇಶ್‌ ಪಾವೂರ್‌, ಕೆ.ಪಿ.ವಿಪಿನ್‌, ಸುಭಾಷ್‌, ಬೆಜಿನ್‌ ಜೋಸೆಫ್‌, ಷಮದ್‌ ಷಹಜನ್‌ ಬಂಧಿತರು. ಕೇಂದ್ರ ಸರ್ಕಾರದ ದೂರ ಸಂಪರ್ಕ ಇಲಾಖೆಯ ಮಾಹಿತಿ ಆಧರಿಸಿ ನಗರದ ಕೋರಮಂಗಲ, ಮೈಕೋ ಲೇಔಟ್‌ ಹಾಗೂ ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ …

Read More »

ಸಿಂಧುತ್ವ ಪ್ರಮಾಣಪತ್ರಕ್ಕೆ ಲಂಚ: ಉಪ ತಹಶೀಲ್ದಾರ್‌ ಬಂಧನ

ಬೆಂಗಳೂರು : ಜಮೀನಿನ ಒಡೆತನಕ್ಕೆ ಸಂಬಂಧಿಸಿದ ಸಿಂಧುತ್ವ ಪ್ರಮಾಣ ಪತ್ರ ನೀಡಲು ₹45,000 ಲಂಚ ಪಡೆಯುತ್ತಿದ್ದ ಬೆಂಗಳೂರು ಉತ್ತರ ತಾಲ್ಲೂಕು ಕಚೇರಿಯ ಉಪ ತಹಶೀಲ್ದಾರ್‌ ಪಿ.ಎಂ. ಶ್ರೀಕಾಂತ್‌ ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಬಂಧಿಸಿದ್ದಾರೆ.   ರಘುಶಂಕರ್‌ ಎಬುವವರಯ ಯಶವಂತಪುರ ಹೋಬಳಿ ಕೊಡಿಗೆಹಳ್ಳಿಯಲ್ಲಿ ಹೊಂದಿರುವ ಜಮೀನನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಸ್ವಾಧೀನಪಡಿಸಿಕೊಂಡಿತ್ತು. ಈ ಜಮೀನಿನ ಬಾಬ್ತು ಪರಿಹಾರದ ಮೊತ್ತ ಪಡೆಯಲು ಜಮೀನು ಮಾಲೀಕರು ಸಿಂಧುತ್ವ ಪ್ರಮಾಣಪತ್ರ ಸಲ್ಲಿಸಬೇಕಿತ್ತು. ಇದಕ್ಕಾಗಿ ಸಿಂಧುತ್ವ …

Read More »

ಅಭಯ್ ಪಾಟೀಲ್ ಸುಳ್ಳು ಕೇಸ್‍ನಲ್ಲಿ ನನ್ನ ಸಿಲುಕಿಸಲು ಪ್ರಯತ್ನಿಸುತ್ತಿದ್ದಾರೆ: ಸುಜೀತ್ ಮುಳಗುಂದ ಆರೋಪ

ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಖೊಟ್ಟಿ ಪ್ರಕರಣದಲ್ಲಿ ನನ್ನನ್ನು ಸಿಲುಕಿಸುವ ಪ್ರಯತ್ನ ನಡೆಸಿದ್ದಾರೆ. ಹೀಗಾಗಿ ನನಗೆ ಸೂಕ್ತ ರಕ್ಷಣೆ ನೀಡುವಂತೆ ಸಾಮಾಜಿಕ ಕಾರ್ಯಕರ್ತ ಸುಜೀತ್ ಮುಳಗುಂದ ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಹೌದು 2012ರಲ್ಲಿ ಶಾಸಕ ಅಭಯ್ ಪಾಟೀಲ್ ವಿರುದ್ಧ ಕಾನೂನು ಬಾಹಿರವಾಗಿ ಆಸ್ತಿ ಗಳಿಸಿದ ಕುರಿತು ಲೋಕಾಯುಕ್ತ ನ್ಯಾಯಾಲಯದಲ್ಲಿ ಸಾಮಾಜಿಕ ಕಾರ್ಯಕರ್ತ ಸುಜೀತ್ ಮುಳಗುಂದ ದೂರು ನೀಡಿದ್ದಾರೆ. ಇದರಿಂದ ಶಾಸಕ ಅಭಯ್ ಪಾಟೀಲ್ ಸುಮಾರು ಬಾರಿ …

Read More »