ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕಂಚುಗಲ್ ಬಂಡೆಮಠದ ಶ್ರೀ ಬಸವಲಿಂಗ ಸ್ವಾಮಿಜೀಗಳು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ರೂಂ.ನ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಅಪಪ್ರಚಾರ ಮಾಡಿದ್ದಕ್ಕೆ ಮನನೊಂದಿದ್ದರು ಎಂದು ಹೇಳಲಾಗುತ್ತಿದೆ. ಹಲವು ಜನರಿಂದ ಬೆದರಿಕೆ ಕರೆ ಕೂಡ ಬಂದಿರುವುದಾಗಿ ಡೆತ್‌ನೋಟ್‌ನಲ್ಲಿ ಬರೆದುಕೊಂಡಿದ್ದಾರೆ ಎನ್ನಲಾಗಿದೆ.
Read More »ಚನ್ನಮ್ಮ ಕಿತ್ತೂರು ಉತ್ಸವ-2022ರ ಭವ್ಯ ಮೆರವಣಿಗೆಗೆ ಚಾಲನೆ
ವೀರರಾಣಿ ಚನ್ನಮ್ಮ ಕಿತ್ತೂರು ಉತ್ಸವ-2022ಕ್ಕೆ ವಿದ್ಯುಕ್ತ ಚಾಲನೆ ಸಿಕ್ಕಿದ್ದು, ವೀರಜ್ಯೋತಿಯ ಸ್ವಾಗತ, ಆನೆಯ ಮೇಲೆ ವೀರಮಾತೆ ಚನ್ನಮ್ಮಾಜಿಯ ಭವ್ಯ ಮೆರವಣಿಗೆಗೆ ಕಿತ್ತೂರು ಕಲ್ಮಠದ ರಾಜಯೋಗಿಂದ್ರ ಸ್ವಾಮೀಜಿ ಸಮ್ಮುಖದಲ್ಲಿ ಚಾಲನೆ ನೀಡಲಾಯಿತು. ಈ ಅದ್ಭುತ ಕ್ಷಣಕ್ಕೆ ಹಲವು ಗಣ್ಯರು, ಸಾವಿರಾರು ಅಭಿಮಾನಿಗಳು ಸಾಕ್ಷಿಯಾದರು. ಬೆಂಗಳೂರಿನಿಂದ ಆರಂಭವಾಗಿ ಇಡೀ ರಾಜ್ಯ ಸಂಚರಿಸಿ ಬೈಲಹೊಂಗಲದ ಚನ್ನಮ್ಮಾಜಿ ಸಮಾಧಿಯಿಂದ ಆಗಮಿಸಿದ ವೀರಜ್ಯೋತಿಯನ್ನು ಕಿತ್ತೂರು ಪಟ್ಟಣದ ಚೆನ್ನಮ್ಮ ವೃತ್ತದಲ್ಲಿ ಸೋಮವಾರ ಬೆಳಿಗ್ಗೆ 10 ಗಂಟೆಗೆ ಸ್ವಾಗತಿಸಲಾಯಿತು. ಈ …
Read More »ಬಸ್ ಪ್ರಯಾಣ ದರ ದುಬಾರಿ: ಒಂದು ಸಾವಿರ ಪ್ರಕರಣ ದಾಖಲು
ಬೆಂಗಳೂರು: ಬಸ್ ಪ್ರಯಾಣ ದರ ದುಬಾರಿ ಆಗಿರುವುದರಿಂದ ಕಾರ್ಯಾಚರಣೆ ನಡೆಸಿರುವ ಸಾರಿಗೆ ಇಲಾಖೆ ಅಧಿಕಾರಿಗಳು, ರಾಜ್ಯದಲ್ಲಿ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದ್ದಾರೆ. ‘ಬೆಂಗಳೂರಿನಲ್ಲೇ 450 ಪ್ರಕರಣಗಳನ್ನು ದಾಖಲಿಸಲಾಗಿದ್ದು, ರಾಜ್ಯದ ವಿವಿಧೆಡೆಯೂ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಒಟ್ಟಾರೆ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣ ದಾಖಲಿಸಿದ್ದಾರೆ. ಪ್ರಯಾಣ ದರ ಹೆಚ್ಚಳವಷ್ಟೇ ಅಲ್ಲದೇ, ದಾಖಲೆಗಳು ಸಮರ್ಪಕವಾಗಿ ಇಲ್ಲದ ಪ್ರಕರಣಗಳೂ ಇದರಲ್ಲಿ ಸೇರಿವೆ’ ಎಂದು ಸಾರಿಗೆ ಇಲಾಖೆ ಅಧಿಕಾರಿಯೊಬ್ಬರು ವಿವರಿಸಿದರು. ‘ದಸರಾ …
Read More »ಹೂಡಿಕೆದಾರರ ಸಮಾವೇಶದ 5 ನಿಮಿಷದ ಕಿರುಚಿತ್ರಕ್ಕೆ ₹ 4.5 ಕೋಟಿ!
ಬೆಂಗಳೂರು: ನವೆಂಬರ್ 2ರಿಂದ 4ರವರೆಗೆ ನಡೆಯುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ (ಜಿಮ್) ಪ್ರದರ್ಶಿಸಲು ₹ 4.5 ಕೋಟಿ ವೆಚ್ಚದಲ್ಲಿ ಕಿರುಚಿತ್ರವೊಂದನ್ನು ನಿರ್ಮಿಸುವ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಯತ್ನಕ್ಕೆ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ತಡೆಯೊಡ್ಡಿದ್ದಾರೆ. ರಾಜ್ಯದಲ್ಲಿ ಹೂಡಿಕೆಗೆ ಇರುವ ಅವಕಾಶಗಳು, ಕೈಗಾರಿಕಾ ಮೂಲಸೌಕರ್ಯದ ಲಭ್ಯತೆ ಮತ್ತಿತರ ಅಂಶಗಳನ್ನು ವಿವರಿಸುವ ಐದು ನಿಮಿಷಗಳ ಕಿರುಚಿತ್ರ ನಿರ್ಮಿಸಿ, ಜಿಮ್‌ನಲ್ಲಿ ಪ್ರದರ್ಶಿಸಲು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ನಿರ್ಧರಿಸಿತ್ತು. ₹ 4.5 ಕೋಟಿ …
Read More »ಸಿಪಿಐ ಉಮೇಶ್ ವಿರುದ್ಧ ಅತ್ಯಾಚಾರ ಪ್ರಕರಣ
ಚಿತ್ರದುರ್ಗ : ಚಳ್ಳಕೆರೆ ಠಾಣೆಯ ಸಿಪಿಐ ಜಿ.ಬಿ.ಉಮೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ನಿವೇಶನದ ಸಮಸ್ಯೆ ಹಿನ್ನೆಲೆ ಸಹಾಯ ಮಾಡುವ ನೆಪದಲ್ಲಿ ಯುವತಿಯೋರ್ವಳ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಸೋದರ ಮಾವನ ಮಗನಾದ ಚಳ್ಳಕೆರೆ ಠಾಣೆಯ ಸಿಪಿಐ ಜಿ.ಬಿ.ಉಮೇಶ್ ವಿರುದ್ಧವೇ ಯುವತಿ ಠಾಣೆಯಲ್ಲಿ ದೂರು ನೀಡಿದ್ದಾರೆ, ಘಟನೆ ವಿವರ : ದೂರುದಾರ ಯುವತಿಗೆ ಉಮೇಶ್ ಸೋದರ ಮಾವನ ಮಗನಾಗಬೇಕು, ಉಮೇಶ್ ಕಳೆದ ಐದು ವರ್ಷದ ಹಿಂದೆ ದಾವಣಗೆರೆಯಲ್ಲಿ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿದ್ದರು …
Read More »ಬೆಳಗಾವಿ: ದೀಪಾವಳಿ ಬಟ್ಟೆ ಖರೀದಿಗೆ ಬಂದಿದ್ದ ಬಾಲಕ ಮಾಂಜಾ ದಾರಕ್ಕೆ ಬಲಿ
ಬೆಳಗಾವಿ: ದೀಪಾವಳಿ ಹಬ್ಬಕ್ಕೆ ಬಟ್ಟೆ ಖರೀದಿಸಿ ಊರಿಗೆ ದ್ವಿಚಕ್ರ ವಾಹನದ ಮೇಲೆ ಹೊರಟಿದ್ದಾಗ ಮಾಂಜಾ ದಾರ ಕುತ್ತಿಗೆಗೆ ಬಿಗಿದು ಐದು ವರ್ಷದ ಬಾಲಕ ಸ್ಥಳದಲ್ಲಿಯೇ ಮೃತಪಟ್ಟ ದುರ್ಘಟನೆ ಇಲ್ಲಿಯ ಗಾಂಧಿ ನಗರದ ರಾಷ್ಟ್ರೀಯ ಹೆದ್ದಾರಿ 4ಲ್ಲಿ ರವಿವಾರ ಮಧ್ಯಾಹ್ನ ನಡೆದಿದೆ. ಯಮಕನಮರಡಿ ಸಮೀಪದ ಅನಂತಪುರ ಗ್ರಾಮದ ವರ್ಧನ ಈರಣ್ಣ ಬೇಲಿ(5) ಎಂಬ ಬಾಲಕ ಮೃತಪಟ್ಟಿದೆ. ಗಾಂಧಿ ನಗರದ ಹಣ್ಣಿನ ಮಾರುಕಟ್ಟೆ ಎದುರಿನ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬಾಲಕನ ಕುತ್ತಿಗೆಗೆ ಮಾಂಜಾ …
Read More »ಪಟಾಕಿ ಸಿಡಿಸುವ ವೇಳೆ ಮುನ್ನೆಚ್ಚರಿಕೆ ಅಗತ್ಯ
ಬೆಂಗಳೂರು: ಇಂದಿನಿಂದ ಮೂರು ದಿನ ಎಲ್ಲೆಡೆ ಬೆಳಕಿನ ಹಬ್ಬದ ಸಡಗರ. ಕಳೆದ ಎರಡು ವರ್ಷಗಳಿಂದ ಕಾಣಿಸದ ಸಂಭ್ರಮ ಈ ವರ್ಷ ಎಲ್ಲೆಡೆ ಕಾಣಿಸಲಾರಂಭಿಸಿದೆ. ಮಕ್ಕಳು-ಹಿರಿಯರೆನ್ನದೆ ಎಲ್ಲ ವಯೋಮಾನದವರೂ ಮನೆಯ ಅಂಗಳ, ತಾರಸಿ ಏರಿ ಪಟಾಕಿ ಸುಡುವ ಮೂಲಕ ಹಬ್ಬವನ್ನು ಭಾರಿ ಸದ್ದು ಗದ್ದಲದೊಂದಿಗೆ ದೀಪಾವಳಿ ಆಚರಿಸಿ ಸಂಭ್ರಮಿಸುತ್ತಾರೆ. ಪಟಾಕಿ ಸಿಡಿಸುವ ವೇಳೆ ಆಗುವ ಅನನುಕೂಲ ಮತ್ತು ದುರಂತದ ಬಗ್ಗೆ ಹಿಂದಿ ನಿಂದಲೂ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಲೇ ಬರಲಾಗಿದೆ. ಅಜಾಗ ರೂಕತೆಯಿಂದ …
Read More »ಕನ್ನಡ ಭವನ ನಿರ್ಮಾಣಕ್ಕೆ ಗೋವಾ ಸರಕಾರ ಜಾಗ ಕಲ್ಪಿಸಿಕೊಡಬೇಕು : ಜೋಶಿ
ಪಣಜಿ: ಗೋವಾದಲ್ಲಿ ಕನ್ನಡಿಗರ ಬಹು ವರ್ಷಗಳ ಕನಸು ಕನ್ನಡ ಭವನ ನಿರ್ಮಾಣವಾಗಬೇಕು ಎಂಬುದು ದೊಡ್ಡ ಕನಸು. ಗೋವಾ ಸರ್ಕಾರದ ಬಳಿ ನಮ್ಮದು ಮನವಿಯಿದೆ. ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರವು ಈಗಾಗಲೇ ನಿಧಿಯನ್ನು ಕೂಡ ಮಂಜೂರು ಮಾಡಿದೆ. ಆದರೆ ಇಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಜಾಗದ ಅಗತ್ಯವಿದೆ. ಗೋವಾ ಸರ್ಕಾರವು ಕನ್ನಡ ಭವನ ನಿರ್ಮಾಣಕ್ಕೆ ಜಾಗ ಕಲ್ಪಿಸಿಕೊಡಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಕರ್ನಾಟಕ ರಾಜ್ಯಾಧ್ಯಕ್ಷ ನಾಡೋಜ ಡಾ. ಮಹೇಶ್ …
Read More »ಆನಂದ ಮಾಮನಿ ಅವರ ಅಂತಿಮ ದರ್ಶನವನ್ನು ಪಡೆದುಕೊಂಡ C.M.
ಅನಾರೋಗ್ಯದ ಹಿನ್ನೆಲೆಯಲ್ಲಿ ನಿಧನರಾದ ಕರ್ನಾಟಕ ವಿಧಾನಸಭೆ ಉಪ ಸಭಾಧ್ಯಕ್ಷರಾದ ಆನಂದ ಮಾಮನಿ ಅವರ ಅಂತಿಮ ದರ್ಶನವನ್ನು ಪಡೆದುಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಸರಕಾರದ ಪರವಾಗಿ ಅಂತಿಮ ನಮನ ಸಲ್ಲಿಸಿದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೆಲವು ವಾರಗಳಿಂದ ಚಿಕಿತ್ಸೆಯನ್ನು ಪಡೆಯುತ್ತಿದ್ದ ಉಪ ಸಭಾಧ್ಯಕ್ಷ ಆನಂದ ಮಾಮನಿ(56) ಅವರು ಭಾನುವಾರ(ಅ.23) ನಿಧನರಾಗಿದ್ದರು. ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿರುವ ತಾಲ್ಲೂಕು ಕ್ರೀಡಾಂಗಣದಲ್ಲಿ ಮಾಮನಿಯವರ ಪಾರ್ಥೀವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿತ್ತು. ಬೆಂಗಳೂರಿನಿಂದ ಆಗಮಿಸಿದ ಮುಖ್ಯಮಂತ್ರಿ …
Read More »ಬಿಜೆಪಿಗೆ ಶಕ್ತಿ ತುಂಬಿದ್ದ ಉಪಸಭಾಪತಿ ಆನಂದ್ ಮಾಮನಿ ಅವರ ಅಗಲಿಕೆಯಿಂದ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ: ಶೆಟ್ಟರ್
ಬಿಜೆಪಿಗೆ ಶಕ್ತಿ ತುಂಬಿದ್ದ ಉಪಸಭಾಪತಿ ಆನಂದ್ ಮಾಮನಿ ಅವರ ಅಗಲಿಕೆಯಿಂದ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು. ಹುಬ್ಬಳ್ಳಿ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಹಲವಾರು ದಿನಗಳಿಂದ ಆನಂದ್ ಮಾಮನಿ ಅವರು ಅನಾರೋಗ್ಯ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಇದ್ದ ಸಂದರ್ಭದಲ್ಲಿ ನಾನು ಆಸ್ಪತ್ರೆಗೆ ಹೋಗಿ ಭೇಟಿ ಮಾಡಿ ನಾನು ಹಾರೈಸಿ ಬಂದಿದ್ದೆ, ಆನಂದ್ ಮಾಮನಿ ಅವರು ಬಹಳ ಕ್ರೀಯಾಶೀಲ ವ್ಯಕ್ತಿಯಾಗಿದ್ದರು ಸವದತ್ತಿ ಕ್ಷೇತ್ರದಲ್ಲಿ …
Read More »
Laxmi News 24×7