Breaking News

ವಿಮಾನಕ್ಕಿಂತ ಬಸ್‌ ಪ್ರಯಾಣ ದುಬಾರಿ-ದೀಪಾವಳಿಗೆ ಊರಿಗೆ ಹೊರಟವರಿಗೆ ದರ ಏರಿಕೆ ಬಿಸಿ

ಬೆಂಗಳೂರು: ದೀಪಾವಳಿ ಹಬ್ಬದ ಸಾಲು ಸಾಲು ರಜೆಗಳಲ್ಲಿ ಬಸ್‌ನಲ್ಲಿ ಪ್ರಯಾಣ ಮಾಡುವರಿಗೆ ಟಿಕೆಟ್ ದರ ಏರಿಕೆಯ ಬಿಸಿ ತಟ್ಟಿದೆ. ಸಾಮಾನ್ಯ ದಿನಗಳ ದರಕ್ಕೆ ಹೋಲಿಸಿದರೆ ಮೂರರಿಂದ ನಾಲ್ಕು ಪಟ್ಟು ಹೆಚ್ಚಿಸಲಾಗಿದ್ದು, ವಿಮಾನ ಪ್ರಯಾಣ ದರಕ್ಕಿಂತಲೂ ಬಸ್ ಪ್ರಯಾಣ ದರ ದುಬಾರಿಯಾಗಿದೆ.   ಹಬ್ಬ ಮತ್ತು ಸರ್ಕಾರಿ ರಜೆಗಳ ಸಂದರ್ಭದಲ್ಲಿ ಪ್ರಯಾಣ ದರ ಹೆಚ್ಚಳವಾಗದಂತೆ ಕ್ರಮ ಕೈಗೊಳ್ಳುವುದಾಗಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಭರವಸೆ ನೀಡಿದ್ದರು. ಈ ಸಂಬಂಧ ಬಸ್‌ ಮಾಲೀಕರ …

Read More »

ಕಿತ್ತೂರು ಉತ್ಸವ ನಾಳೆಗೆ ಮುಂದೂಡಿಕೆ….

ಕಿತ್ತೂರು :ಉತ್ಸವ ನಾಳೆಗೆ ಮುಂದೂಡಿಕೆ..   ಚನ್ನಮ್ಮನ ಕಿತ್ತೂರಿನಲ್ಲಿ ಇಂದು ನಡೆಯಬೇಕಿದ್ದ ಕಿತ್ತೂರು ಉತ್ಸವವನ್ನು ನಾಳೆ ಸೋಮವಾರ(ಅ.24)ಕ್ಕೆ ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.

Read More »

ಧಾರವಾಡ: ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣ, ಆರೋಪಿಯ ಬಂಧನ

ಧಾರವಾಡ:ನಗರದಲ್ಲಿ ಯುವಕನೊಬ್ಬನನ್ನು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಸಲಿಂಗಕಾಮಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಪವನ್ ಬಯಾಲಿ ಎಂದು ಗುರುತಿಸಲಾಗಿದೆ. ಮೃತ ಯಾಸಿನ್ ರೊಟ್ಟಿವಾಲೆ ಪೋಷಕರು ನೀಡಿದ ದೂರಿನ ಮೇರೆಗೆ ಪವನ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.   ಅತ್ತಿಕೊಲ್ಲ ನಿವಾಸಿ ಯಾಸಿನ್ ಅಕ್ಟೋಬರ್ 12ರಂದು ನಾಪತ್ತೆಯಾಗಿದ್ದ. ನಂತರ, ಅವನ ದೇಹವು ಕೆಳಗೇರಿ ಕೆರೆಯಲ್ಲಿ ಪತ್ತೆಯಾಗಿತ್ತು. ಯಾಸಿನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪವನ್ …

Read More »

‘ಬನಾರಸ್’ ವೇದಿಕೆಯಲ್ಲಿ ದರ್ಶನ್ ಬಿಚ್ಚು ಮಾತು

ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ ನಟಿಸಿರುವ ಮೊದಲ ಸಿನಿಮಾ ‘ಬನಾರಸ್’ನ ಪ್ರೀ ರಿಲೀಸ್ ಇವೆಂಟ್ ಇಂದು (ಅಕ್ಟೋಬರ್ 22) ರಂದು ಅದ್ಧೂರಿಯಾಗಿ ಹುಬ್ಬಳ್ಳಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ನಟ ದರ್ಶನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದು, ಸಿನಿಮಾದ ಬಗ್ಗೆ ಹಾಗೂ ಝೈದ್ ಖಾನ್, ಅವರ ತಂದೆ ಜಮೀರ್ ಅಹ್ಮದ್ ಬಗ್ಗೆ ಮಾತನಾಡಿದರು.   ತಮ್ಮ ಎಂದಿನ ಶೈಲಿಯಲ್ಲಿ, ವೇದಿಕೆ ಮೇಲೆ ಚಪ್ಪಲಿ ಬಿಟ್ಟು, ತಮ್ಮ ಅಭಿಮಾನಿಗಳಿಗೆ ‘ಸೆಲೆಬ್ರಿಟಿ’ ಎಂದು ಸಂಭೋದಿಸುತ್ತಾ …

Read More »

ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ರಾಮದುರ್ಗ: ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಪಿಯು ಕಾಲೇಜುಗಳ ಕ್ರೀಡಾಕೂಟದಲ್ಲಿ ಇಲ್ಲಿನ ಸುಶೀಲಾತಾಯಿ ಕುಲಗೋಡ ಪಿಯು ಕಾಲೇಜಿನ ವಿದ್ಯಾರ್ಥಿಗಳು ನೆಟ್ ಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನ ಗಳಿಸಿ, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಸನಗೌಡಾ ದ್ಯಾಮನಗೌಡ್ರ-ಕಬಡ್ಡಿ, ವಿಜಯ ಕಳಸಗೌಡರ-5 ಕಿ.ಮೀ ನಡಿಗೆ ಮತ್ತು ಸಾನೀಯಾ ನಾಸಿಪೂರ ಜಾವಲಿನ್‌ ಎಸೆತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾ ಪ್ರಸಾರಕ ಸಮಿತಿಯ ಅಧ್ಯಕ್ಷ ಎಸ್.ಎ. ಶೆಟ್ಟಿಸದಾವರ್ತಿ, ಉಪಾಧ್ಯಕ್ಷ ಕೆ.ಮೋಹನ, ಗೌರವ ಕಾರ್ಯದರ್ಶಿ ಎಸ್.ಎಸ್. ಸುಲ್ತಾನಪೂರ, ಪ್ರಾಚಾರ್ಯ ಪ್ರೊ.ಎಂ.ಬಿ. …

Read More »

ರಾಜ್ಯೋತ್ಸವ: ಅದ್ಧೂರಿ ಆಚರಣೆಗೆ ಸೂಚನೆ

ನಿಪ್ಪಾಣಿ: ‘ಈ ಬಾರಿ ರಾಜ್ಯೋತ್ಸವವನ್ನು ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸೋಣ. ಎಲ್ಲರೂ ಭಾಗವಹಿಸಿ ಕಾರ್ಯಕ್ರಮಕ್ಕೆ ಶೋಭೆ ತನ್ನಿ’ ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಕರೆ ನೀಡಿದರು. ಇಲ್ಲಿನ ನಗರಸಭೆಯಲ್ಲಿ ಶುಕ್ರವಾರ ತಾಲ್ಲೂಕು ಆಡಳಿತ ಮತ್ತು ಕನ್ನಡಪರ ಸಂಘಟನೆಗಳ ಆಶ್ರಯದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು.   ‘ಎಲ್ಲ ಇಲಾಖೆಯ ಕಾರ್ಯಾಲಯಗಳನ್ನು ಅಲಂಕರಿಸಿ ಹಬ್ಬದ ವಾತಾವರಣ ಸೃಷ್ಟಿಸಬೇಕು. ಅ.28ರಂದು ರಾಜ್ಯದಾದ್ಯಂತ ನಡೆಯುವ ಕೋಟಿ ಕಂಠ ಗೀತಗಾಯನ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ …

Read More »

ಮಕ್ಕಳಲ್ಲಿ ದೇಶಾಭಿಮಾನ ಮೂಡಿಸಿ’

ಬೈಲಹೊಂಗಲ: ‘ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣನ ತ್ಯಾಗ, ಬಲಿದಾನ, ರಾಷ್ಟ್ರಪ್ರೇಮದ ಕುರಿತು ಮಕ್ಕಳಿಗೆ ತಿಳಿಸಿ, ಅವರಲ್ಲಿ ದೇಶಾಭಿಮಾನ ಬೆಳೆಸಬೇಕು’ ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು. ಪಟ್ಟಣದ ಕಿತ್ತೂರು ಚನ್ನಮ್ಮನ ಸಮಾಧಿ ಸ್ಥಳದಲ್ಲಿ ಶನಿವಾರ ವೀರಜ್ಯೋತಿ ವಾಹನಕ್ಕೆ ಪೂಜೆ ಸಲ್ಲಿಸುವ ಮೂಲಕ ಸ್ವಾಗತಿಸಿ ಅವರು ಮಾತನಾಡಿದರು.   ‘ಇದೇ ಮೊದಲ ಬಾರಿಗೆ ರಾಜ್ಯದಾದ್ಯಂತ ಸಂಚರಿಸಿದ ಜ್ಯೋತಿ ವಾಹನಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಬರುವ ದಿನಗಳಲ್ಲಿ ಕಿತ್ತೂರು ಉತ್ಸವ ರಾಷ್ಟ್ರ ಮಟ್ಟದಲ್ಲಿ …

Read More »

ಇಂದಿನಿಂದ 3 ದಿನ `ಕಿತ್ತೂರು ಉತ್ಸವ’

ಬೆಳಗಾವಿ : ಇಂದಿನಿಂದ ಬೆಳಗಾವಿ ಜಿಲ್ಲೆಯ ಚನ್ನಮ್ಮನ್ನ ಕಿತ್ತೂರಿನಲ್ಲಿ ಮೂರು ದಿನಗಳ ಕಾಲ ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರವು ಕಿತ್ತೂರು ಉತ್ಸವವನ್ನು ರಾಜ್ಯ ಮಟ್ಟದಲ್ಲಿ ಉತ್ಸವವಾಗಿ ಆಚರಿಸುತ್ತಿದೆ. ಇಂದು ಸಂಜೆ 7 ಗಂಟೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಿತ್ತೂರು ಉತ್ಸವ ಉದ್ಘಾಟಿಸಲಿದ್ದು, ಅಕ್ಟೋಬರ್ 23,24,25 ರಂದು ಕಾರ್ಯಕ್ರಮಗಳು ನಡೆಯಲಿವೆ. ಮೂರು ದಿನಗಳ ಉತ್ಸವದಲ್ಲಿ ಮೂರು ವೇದಿಕೆಗಳನ್ನು ನಿರ್ಮಿಸಲಾಗಿದೆ.   ಕಿತ್ತೂರು ರಾಣಿ ಚನ್ನಮ್ಮ ಮುಖ್ಯ ವೇದಿಕೆ ಹಾಗೂ …

Read More »

ವಿಧಾನಸಭೆ ಉಪಸಭಾಪತಿ, ಸವದತ್ತಿ ಶಾಸಕ ಆನಂದ ಮಾಮನಿ ವಿಧಿವಶ

ಬೆಳಗಾವಿ: ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ‌ ಚಂದ್ರಶೇಖರ ಮಾಮನಿ ಅವರು ಅನಾರೋಗ್ಯದಿಂದ ಶನಿವಾರ ರಾತ್ರಿ ಕೊನೆಯುಸಿರೆಳೆದರು. ಅನಾರೋಗ್ಯದಿಂದ ಬಳಲುತ್ತಿದ್ದ ಅನಂದ ಮಾಮನಿ ಅವರು ಬೆಂಗಳೂರಿನ‌ ಖಾಸಗಿ ಆಸ್ಪತ್ರೆಯಲ್ಲಿ ಅನೇಕ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ. ರವಿವಾರ ಪಾರ್ಥಿವ ಶರೀರ ತವರು ಜಿಲ್ಲೆಗೆ ಆಗಮಿಸಲಿದೆ.‌ ಶಾಸಕ ಆನಂದ ಮಾಮನಿ ನಿಧನದಿಂದ ಜಿಲ್ಲೆಯಾದ್ಯಂತ ಶೋಕ ಮಡುಗಟ್ಟಿದ್ದು, ಹಿರಿಯ ರಾಜಕೀಯ ನೇತಾರನನ್ನು ಕಳೆದುಕೊಂಡ ಜಿಲ್ಲೆ …

Read More »

೧ ನವೆಂಬರ್ ಕರಾಳದಿನಕ್ಕೆ  ಮಹಾರಾಷ್ಟ್ರ ಸರ್ಕಾರದ ಪ್ರತಿನಿಧಿಗಳು ಉಪಸ್ಥಿತರಿರಲಿದ್ದಾರೆ.: ಏಕನಾಥ್ ಶಿಂಧೆ

ಈ ಬಾರಿ ನಡೆಯಲಿರುವ ೧ ನವೆಂಬರ್ ಕರಾಳದಿನಕ್ಕೆ  ಮಹಾರಾಷ್ಟ್ರ ಸರ್ಕಾರದ ಪ್ರತಿನಿಧಿಗಳು ಉಪಸ್ಥಿತರಿರಲಿದ್ದಾರೆ. ಈ ಕುರಿತು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಮಹಾರಾಷ್ಟ್ರ ಏಕೀಕರಣ ಸಮಿತಿಯ ನಾಯಕರಿಗೆ ಮಾತು ಕೊಟ್ಟಿದ್ದಾರೆ.   ಮಹಾರಾಷ್ಟ್ರ ಏಕೀಕರಣ ಸಮಿತಿಯ ಪ್ರಮುಖರು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರಿಗೆ ಫೋನಾಯಿಸಿ ೧ ನವೆಂಬರ್ ಕರಾಳದಿನಕ್ಕೆ ಮಹಾರಾಷ್ಟ್ರದ ಪ್ರತಿನಿಧಿಗಳನ್ನು ಕಳುಹಿಸಿಕೊಡುವಂತೆ ಆಗ್ರಹಿಸಿದ್ದಾರೆ. ಮಧ್ಯವರ್ತಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ಖಜಾಂಚಿ ಪ್ರಕಾಶ ಮರಗಾಳೆ ಅವರ ಬೇಡಿಕೆಗೆ ಮಹಾ ಸಿಎಂ …

Read More »