Breaking News

ರಾಜ್ಯ ಮಟ್ಟದ ಕಿತ್ತೂರು ಉತ್ಸವಕ್ಕೆ ಸಕಲ ಸಿದ್ಧತೆ: ಮಹಾಂತೇಶ ದೊಡ್ಡಗೌಡರ

ಇದೇ ಅಕ್ಟೋಬರ್ 23, 24 ಹಾಗೂ 25ರಂದು ಮೂರು ದಿನಗಳ ಕಾಲ ಕಿತ್ತೂರು ರಾಣಿ ಚನ್ನಮ್ಮಾಜಿ ವಿಜಯೋತ್ಸವವನ್ನು ಆಚರಿಸಲಾಗುತ್ತಿದೆ. ಈ ವರ್ಷ ವಿಶೇಷವಾಗಿ ಸಿಎಂ ಬೊಮ್ಮಾಯಿ ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವನ್ನಾಗಿ ಘೋಷಣೆ ಮಾಡಿದ್ದಾರೆ. ಈಗಾಗಲೇ ಉತ್ಸವಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ಮಾಹಿತಿ ನೀಡಿದ್ದಾರೆ. ಹೌದು ಸೂರ್ಯ ಮುಳುಗದ ಸಾಮ್ರಾಜ್ಯ ಎಂದು ಸೊಕ್ಕಿನಿಂದ ಮೆರೆಯುತ್ತಿದ್ದ ಬ್ರಿಟಿಷರಿಗೆ ಸೋಲಿನ ರುಚಿ ತೋರಿಸಿದ್ದು ನಮ್ಮ …

Read More »

ಪುನೀತ್ ನೆನಪಲ್ಲಿ ವೇದಿಕೆ ಮೇಲೆ ಒಂದಾದ ದೊಡ್ಮನೆ ಕುಟುಂಬ

ಮೈಸೂರು ಅರಸರ ಕುಟುಂಬದ ಬಳಿಕ ಕರ್ನಾಟಕದ ಜನ ಅತಿ ಹೆಚ್ಚು ಪ್ರೀತಿಸಿದ, ಗೌರವಿಸಿದ ಕುಟುಂಬವೆಂದರೆ ಅದು ದೊಡ್ಮನೆ ಕುಟುಂಬ. ದೊಡ್ಮನೆ ಕುಟುಂಬದ ಬಹುತೇಕ ಸದಸ್ಯರು ಇಂದು ಪುನೀತ ಪರ್ವ ಕಾರ್ಯಕ್ರಮದಲ್ಲಿ ಒಟ್ಟಿಗೆ ವೇದಿಕೆ ಏರಿ ಅಪ್ಪುವನ್ನು ಭಾವುಕವಾಗಿ ನೆನಪು ಮಾಡಿಕೊಂಡರು.   ‘ಪುನೀತ ಪರ್ವ’ ಕಾರ್ಯಕ್ರಮದಲ್ಲಿ ವಿಜಯಪ್ರಕಾಶ್ ಅವರು ಅಪ್ಪು ‘ಗೊಂಬೆ ಹೇಳುತೈತೆ’ ಹಾಡು ಹಾಡಿದರು. ಹಾಡು ಮುಗಿವ ವೇಳೆಗೆ ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್‌ಕುಮಾರ್, …

Read More »

ಎಐಸಿಸಿ ಅಧ್ಯಕ್ಷರಾಗಿ ಖರ್ಗೆ ನೇಮಕ: ಬಿಜೆಪಿಗೆ ಒಳಗೊಳಗೆ ತಳಮಳ; ಹಿಂದುಳಿದ ವರ್ಗಗಳ ಮತಗಳ ಕ್ರೋಡೀಕರಣಕ್ಕಾಗಿ ಕಟೀಲ್ ಗೆ ಗೇಟ್ ಪಾಸ್?

ಬಿಜೆಪಿಯ ಹಿರಿಯ ನಾಯಕರ ಆರಂಭಿಕ ವಿಶ್ಲೇಷಣೆಯ ಪ್ರಕಾರ, ದಲಿತರಾದ ಖರ್ಗೆ ಅವರು ಪಕ್ಷದ ಉನ್ನತ ಹಂತವನ್ನು ತಲುಪಿರುವುದರಿಂದ ದಲಿತ ಮತಗಳು, ವಿಶೇಷವಾಗಿ ಪರಿಶಿಷ್ಟ ಜಾತಿಗಳು ಕ್ರೋಢೀಕರಿಸಲ್ಪಟ್ಟು ಕಾಂಗ್ರೆಸ್ ಪರವಾಗಿ ಹೋಗಬಹುದು. ಬೆಂಗಳೂರು: ಕಾಂಗ್ರೆಸ್ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಎಐಸಿಸಿ ಅಧ್ಯಕ್ಷರನ್ನಾಗಿ ಮಾಡುವುದರಿಂದ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ, ಮುಳುಗುತ್ತಿರುವ ದೋಣಿಯ ಕ್ಯಾಪ್ಟನ್ ಮಾತ್ರ ಎಂದು ಬಿಜೆಪಿ ಸಾರ್ವಜನಿಕವಾಗಿ ಪ್ರತಿಕ್ರಿಯಿಸಿದ್ದರೂ ಒಳಗೊಳಗೆ ತಳಮಳ ಆರಂಭವಾಗಿದೆ, …

Read More »

ಗೋಕಾಕ ತಾಲೂಕಿನ ಸಜ್ಜೆಹಾಳ ಗ್ರಾಮದಲ್ಲಿ ಸಂತೋಷ ಜಾರಕಿಹೊಳಿ ಅವರ ಶ್ರೇಷ್ಠ ಫೌಂಡೇಶನ್ ವತಿಯಿಂದ ಈ ವಾರದ ಅನ್ನ ಸಂತರ್ಪಣೆ

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಸಜ್ಜೆಹಾಳ ಗ್ರಾಮದಲ್ಲಿ ಕಮಲಾದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ರಾಯಪ್ಪ ತಿರ್ಕಣ್ಣವರ, ಸಿದ್ದಪ್ಪ ಅವರಾದಿ, ವಾಸು ಗಲಗಲಿ, …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಸ್ಕೌಟ್ಸ್ ಗೈಡ್ಸ್ ಹಾಗೂ ಕ್ರೀಡಾಪಟುಗಳಿಗೆ ಸಮವಸ್ತ್ರ ವಿತರಣೆ

ಶ್ರೇಷ್ಠ ಫೌಂಡೇಶನ್ ವತಿಯಿಂದ ಸ್ಕೌಟ್ಸ್ ಗೈಡ್ಸ್ ಹಾಗೂ ಕ್ರೀಡಾಪಟುಗಳಿಗೆ ಸಮವಸ್ತ್ರ ವಿತರಣೆ ಗೋಕಾಕ : ಹಿರೇನಂದಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಸ್ಕೌಟ್ಸ್, ಗೈಡ್ಸ್ ಹಾಗೂ ಕ್ರೀಡಾಪಟುಗಳಿಗೆ ಸಮವಸ್ತ್ರವನ್ನು ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿತರಿಸಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು ಸಿಬ್ಬಂದಿ ವರ್ಗ ವಿದ್ಯಾರ್ಥಿಗಳು ಮತ್ತು ಶಾಲಾ ಸುಧಾರಣಾ ಸಮಿತಿಯವರು ಉಪಸ್ಥಿತರಿದ್ದರು.

Read More »

‘ಗೊಂಬೆ ಹೇಳುತೈತೆ’ ಹಾಡು ಕೇಳುತ್ತಾ ದುಃಖ ಉಮ್ಮಳಿಸಿ ಕೈ ಮುಗಿದು ಅಳುತ್ತಾ ಹೊರಟ ಅಶ್ವಿನಿ ಪುನೀತ್ ರಾಜ್‌ಕುಮಾರ್!

ಅರಮನೆ ಮೈದಾನದಲ್ಲಿ ನಡೆದ ‘ಪುನೀತ ಪರ್ವ’ ಕಾರ್ಯಕ್ರಮ ಯಶಸ್ವಿಯಾಗಿ ಮುಕ್ತಾಯವಾಗಿದೆ. ಕಾರ್ಯಕ್ರಮದ ಕೊನೆಗೆ ಡಾ. ರಾಜ್‌ಕುಮಾರ್ ಕುಟುಂಬ ಸದಸ್ಯರೆಲ್ಲಾ ಸೇರಿ ‘ಗೊಂಬೆ ಹೇಳುತೈತೆ’ ಹಾಡು ಹಾಡಿದರು. ಗಾಯಕ ವಿಜಯ ಪ್ರಕಾಶ್ ಜೊತೆ ಹಾಡು ಹಾಡುತ್ತಾ ಎಲ್ಲರೂ ಭಾವುಕರಾದರು. ಹಾಡಿನುದ್ದಕ್ಕೂ ಭಾವುಕರಾಗಿ ನಿಂತಿದ್ದ ಅಶ್ವಿನಿ ಪುನೀತ್ ರಾಜ್‌ಕುಮಾರ್ ಕೊನೆಗೆ ದುಃಖ ತಾಳಲಾರದೇ ಎಲ್ಲರಿಗೂ ಕೈ ಮುಗಿದು ಅಳುತ್ತಾ ವೇದಿಕೆಯಿಂದ ಹೊರಟುಬಿಟ್ಟರು. ಅಶ್ವಿನಿ ಪುನೀತ್ ರಾಜ್‌ಕುಮಾರ್ ಕಾರ್ಯಕ್ರಮದಲ್ಲಿ ಮಾತನಾಡುತ್ತಾರೆ ಎಂದು ಎಲ್ಲರೂ ಅಂದುಕೊಂಡಿದ್ದರು. …

Read More »

ಬೆಳಗಾವಿ: ವಿಷ ಸೇವಿಸಿ ಪತಿ ಆತ್ಮಹತ್ಯೆ, ಮಗು ಕೊಂದು ನೇಣಿಗೆ ಶರಣಾದ ಪತ್ನಿ

ಬೆಳಗಾವಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿ, ಪತ್ನಿ ಹಾಗೂ ಪುಟ್ಟ ಮಗು ಸಾವನ್ನಪ್ಪಿದ ಘಟನೆ ಬೆಳಗಾವಿ ತಾಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಹೊಳೆಪ್ಪ ಮಾರುತಿ ಮಸ್ತಿ (25), ಇವರ ಪತ್ನಿ ವಾಸಂತಿ (22) ಹಾಗೂ ಇವರ ಒಂದೂವರೆ ವರ್ಷದ ಮಗು ಮೃತಪಟ್ಟರು. ಮದ್ಯದ ಅಮಲಿನಲ್ಲಿ ಹೊಳೆಪ್ಪ ಗುರುವಾರ ಪತ್ನಿಯೊಂದಿಗೆ ಜಗಳವಾಡಿದ್ದ. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೆದರಿಸುವ ಉದ್ದೇಶದಿಂದ ವಿಷ ಕುಡಿದಿದ್ದ. ತಕ್ಷಣ ಸ್ನೇಹಿತರು ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. …

Read More »

10,000 ಕ್ಕೂ ಹೆಚ್ಚು ಮಸೀದಿಗಳಿಗೆ ಧ್ವನಿವರ್ಧಕ ಪರವಾನಗಿ ನೀಡಿದ ರಾಜ್ಯ ಸರ್ಕಾರ

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯಾದ್ಯಂತ 10,889 ಮಸೀದಿಗಳಲ್ಲಿ ಇಸ್ಲಾಮಿಕ್ ಕರೆಯಾದ ಅಜಾನ್ ಕೂಗಲು ಧ್ವನಿ ವರ್ಧಕ ಬಳಕೆಗೆ ಪರವಾನಗಿ ನೀಡಿದೆ. ರಾಜ್ಯ ಸರ್ಕಾರವು ಧ್ವನಿವರ್ಧಕ ಬಳಕೆ ಕುರಿತಂತೆ ಅರ್ಜಿಗಳನ್ನು ಪರಿಶೀಲನೆ ಪೂರ್ಣಗೊಳಿಸಿದ್ದು, ಎರಡು ವರ್ಷಗಳ ಅವಧಿಗೆ ಧ್ವನಿವರ್ಧಳ ಬಳಕೆಗೆ 450 ರೂ. ಶುಲ್ಕ ವಿಧಿಸಲಾಗಿದೆ. ರಾಜ್ಯದಲ್ಲಿ 10,889 ಕ್ಕೂ ಹೆಚ್ಚು ಮಸೀದಿಗಳು ಸೇರಿದಂತೆ ಮಂದೀರ, ಚರ್ಚ್ ಗಳ 17,850 ಧ್ವನಿವರ್ಧಕಗಳ ಬಳಕೆಗೆ ಪರವಾನಗಿ ನೀಡಿದೆ. ಬೆಂಗಳೂರು : ರಾಜ್ಯ …

Read More »

ಗಂಧದ ಗುಡಿ ‘ ಮುಂದಿನ ಪೀಳಿಗೆಗೆ ದಂತಕತೆಯಾಗಲಿದೆ:C.M.

ಬೆಂಗಳೂರು: ಅಪ್ಪು ಅವರಂತೆ ಈ ಸಿನೆಮಾ ಮುಂದಿನ ಪೀಳಿಗೆಗೆ ಒಂದು ದಂತಕಥೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ಅವರು ಪುನೀತ್ ರಾಜ್ ಕುಮಾರ್ ಅವರ ‘ ಗಂಧದ ಗುಡಿ ‘ ಚಿತ್ರ ಬಿಡುಗಡೆಯ ಪೂರ್ವಭಾವಿಯಾಗಿ ಆಯೋಜಿಸಲಾಗಿದ್ದ ಪುನೀತ ಪರ್ವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.   ಕನ್ನಡ ನಾಡು ಮತ್ತು ಗಂಧದ ಗುಡಿಯನ್ನು ಬೇರ್ಪಡಿಸಲು ಸಾಧ್ಯವಿಲ್ಲ. ಅಂತಹ ವಿಚಾರ ದೊಂದಿಗೆ, ಕಾಡು, ನಿಸರ್ಗ, ಪ್ರಾಣಿಗಳನ್ನು ಇಟ್ಟುಕೊಂಡು ಅಪ್ಪು ಮಾಡಿದ …

Read More »

ಒಂಬತ್ತು ಜಿಲ್ಲಾಧಿಕಾರಿಗಳ ವರ್ಗಾವಣೆ

ಬೆಂಗಳೂರು : ಮೈಸೂರು, ದಕ್ಷಿಣ ಕನ್ನಡ, ಚಿತ್ರದುರ್ಗ ಒಳಗೊಂಡಂತೆ ಒಂಬತ್ತು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸೇರಿದಂತೆ 21 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಟಿ.ಕೆ. ಅನಿಲ್‌ಕುಮಾರ್-ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ, ಭೂಮಿ). ಎನ್.ವಿ. ಪ್ರಸಾದ್-ಕಾರ್ಯದರ್ಶಿ, ಕಾರ್ಮಿಕ ಇಲಾಖೆ. ಎನ್. ಜಯರಾಮ್-ಕಾರ್ಯದರ್ಶಿ, ಕಂದಾಯ ಇಲಾಖೆ. ಬಗಾದಿ ಗೌತಮ್- ನಿರ್ದೇಶಕ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ. ಪಿ.ಐ. ಶ್ರೀವಿದ್ಯಾ- ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಇ-ಆಡಳಿತ. ಡಿ.ಎಸ್. ರಮೇಶ್-ಜಿಲ್ಲಾಧಿಕಾರಿ, ಚಾಮರಾಜನಗರ. ಎಚ್.ಎನ್. ಗೋಪಾಲಕೃಷ್ಣ- ಜಿಲ್ಲಾಧಿಕಾರಿ, …

Read More »