ರಾಯಚೂರು: ಮಾದಿಗ ಸಮಾಜಕ್ಕೆ ಒಳ ಮೀಸಲಾತಿ ಕಲ್ಪಿಸುವಲ್ಲಿ ತನ್ನ ಅಧಿಕಾರದ ಅವಧಿಯಲ್ಲಿ ನಿರ್ಲಕ್ಷ್ಯ ವಹಿಸಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಅಕ್ಟೋಬರ್ 21 ಹಾಗೂ 22ರಂದು ಗೋಬ್ಯಾಕ್ ಚಳವಳಿ ಮಾಡಿ ಚಪ್ಪಲಿ ಎಸೆದು ಪ್ರತಿಭಟನೆ ಮಾಡಲಾಗುವುದು ಎಂದು ಮಾದಿಗ ದಂಡೋರ (ಎಂಆರ್ ಪಿಎಸ್) ರಾಜ್ಯ ಅಧ್ಯಕ್ಷ ಬಿ.ನರಸಪ್ಪ ದಂಡೋರ ತಿಳಿಸಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2013ರಿಂದ 2018ರವರೆಗೆ ಅಧಿಕಾರದಲ್ಲಿದ್ದ ಸಿದ್ದರಾಮಯ್ಯನವರು ಮಾದಿಗ ಸಮಾಜದ ಒಳ …
Read More »ಖೋಟಾ ನೋಟು ಚಲಾವಣೆ ಮಾಡಲು ಬಂದಿದ್ದ ಖತರ್ನಾಕ್ ಕಿಲಾಡಿಗಳ ಬಂಧನ
ಖೋಟಾ ನೋಟು ಚಲಾವಣೆ ಮಾಡಲು ಬಂದಿದ್ದ ಖತರ್ನಾಕ್ ಕಿಲಾಡಿಗಳನ್ನು ಬಂಧನ ಮಾಡುವಲ್ಲಿ ಹುಬ್ಬಳ್ಳಿಯ ಉಪನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಹೌದು, ಬಿಜಾಪುರದಿಂದ ಖೋಟಾ ನೋಟು ಚಲಾವಣೆ ಮಾಡಲು ಹುಬ್ಬಳ್ಳಿಯ ಖಾಸಗಿ ಹೋಟೆಲ್ನಲ್ಲಿರುವ ಕುರಿತಂತೆ ಖಚಿತ ಮಾಹಿತಿ ಮೇಲೆ ಉಪನಗರ ಪೊಲೀಸರು ಲಾಡ್ಜ್ ಮೇಲೆ ದಾಳಿ ಮಾಡಿದ್ದು, ದಾಳಿಯ ಸಮಯದಲ್ಲಿ ಮೂವರು ಆರೋಪಿಗಳು ಸಿಕ್ಕಿ ಬಿದ್ದು ಒಬ್ಬ ಆರೋಪಿ ಪರಾರಿ ಆಗಿದ್ದಾನೆ. ಇನ್ನು ಬಂದಿತರಿಂದ 200 ರೂ ಮುಖ ಬೆಲೆಯ 129 ಖೋಟಾ …
Read More »ತೋಟದ ರಸ್ತೆಯಲ್ಲಿ ಯಮಸ್ವರೂಪಿ ತಗ್ಗಗುಂಡಿಗಳು
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಶಿಂಧೆ ತೋಟದ ರಸ್ತೆಗಳು ಹದಗೆಟ್ಟು ಹೋಗಿವೆ.ರಸ್ತೆಗಳು ಹದಗೆಟ್ಟ ಪರಿಣಾಮ ಗ್ರಾಮದ ಶಿಂಧೆ ತೋಟದ ಸುಮಾರು 30 ಮನೆಗಳು ಸಂಪರ್ಕ ಕಡಿತವಾಗಿವೆ. ಮಳೆಗಾಲ ಪ್ರಾರಂಭವಾದರೆ ಸಾಕು ಶಿಂಧೆ ತೋಟದ ಜನರ ಪರಿಸ್ಥಿತಿ ಹೇಳತೀರದಾಗಿದೆ. 2 ಅಡಿಯಷ್ಟು ದೊಡ್ದ ದೊಡ್ಡ ಗುಂಡಿಗಳು,ಆ ಗುಂಡಿಗಳಲ್ಲಿ ನೀರು ಸಂಗ್ರಹ. ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗುವ ಪರಿಸ್ಥಿತಿ ಇಲ್ಲಿ ನಿರ್ಮಾಣವಾಗಿದೆ. ಇದರಿಂದಾಗಿ ದಿನಪ್ರತಿ ವಿದ್ಯಾರ್ಥಿಗಳು ಶಾಲೆಗೆ ಹೋಗುವಾಗ ಜಾರಿ …
Read More »ಭಾರಿ ಮಳೆಗೆ ಉಕ್ಕಿ ಹರಿಯುತ್ತಿವೆ ಹಳ್ಳಗಳು
ವಿಜಯಪುರ ಜಿಲ್ಲೆಯಲ್ಲಿ ತಡರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಹಳ್ಳಗಳು ಉಕ್ಕಿ ಹರಿಯುತ್ತಿವೆ. ಉಕ್ಕಿ ಬಂದ ಹಳ್ಳದಿಂದ ಚವನಭಾವಿ ನಾಲತವಾಡ ರಸ್ತೆ ಸಂಪರ್ಕ ಬಂದ್ ಆಗಿದೆ. 108 ವಾಹನ ಅಂಬುಲೆನ್ಸ್ ವಾಹನ ಸಂಚಾರಕ್ಕೂ ಹಳ್ಳ ಅಡ್ಡಿಯಾಗಿದೆ. ಕೆಳ ಹಂತದ ಸೇತುವೆ ಮೇಲೆ ಹಳ್ಳದ ನೀರು ಹರಿಯುತ್ತಿರು ವದರಿಂದ 108 ಸಿಬ್ಬಂದಿ ಪರದಾಡಬೇಕಾದ ಪರಿಸ್ಥಿತಿ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕಿನ ಚವನಭಾವಿ ಗ್ರಾಮದಲ್ಲಿ ಘಟನೆ ನಡೆದಿದೆ. ಭಾರೀ ಮಳೆಯಿಂದ ಹಳ್ಳದ ನೀರು ತುಂಬಿ …
Read More »ವಿರೋಧ ಮಧ್ಯೆಯೂ ಬೆಳಗಾವಿಯಲ್ಲಿ ಗಣೇಶ ಮಂದಿರ ಮುಂಭಾಗದ ಶೆಡ್ ತೆರವು
ಬೆಳಗಾವಿ ಮಹಾನಗರ ಪಾಲಿಕೆ ವತಿಯಿಂದ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿದಿದ್ದು. ಒತ್ತುವಾರಿಯಾಗಿದ್ದ ಗಣೇಶ ಮಂದಿರ ಮುಂಭಾಗದ ತಗಡಿನ ಶೆಡ್ ತೆರವಿಗೆ ದಕ್ಷಿಣ ಶಾಸಕ ಅಭಯ್ ಪಾಟೀಲ್‍ರ ಮನವಲಿಕೆ ಹಿನ್ನೆಲೆ ದೇವಸ್ಥಾನ ಮಂಡಳಿಯವರು ಒಪ್ಪಿಗೆ ಸೂಚಿಸಿದರು. : ಹೌದು ಬೆಳಗಾವಿಯ ಬಸವೇಶ್ವರ ವೃತ್ತದ ಬಳಿಯ ಗಣೇಶ ದೇವಸ್ಥಾನ ಎದುರು ಹಾಕಲಾಗಿದ್ದ ತಗಡಿನ ಶೆಡ್‍ನ್ನು ಮಹಾನಗರ ಪಾಲಿಕೆ ಅಧಿಕಾರಿಗಳು ಬುಧವಾರ ರಾತ್ರಿ ತೆರವು ಮಾಡಿದ್ದಾರೆ. ದೇವಸ್ಥಾನ ಆಡಳಿತ ಮಂಡಳಿಯವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. …
Read More »ಮುಚ್ಚಂಡಿ ಗ್ರಾಮದ ಹೊರ ವಲಯದಲ್ಲಿ ಹೈಸ್ಕೂಲ್ ವಿದ್ಯಾರ್ಥಿಯ ಬರ್ಬರ ಹತ್ಯೆ
ಹೈಸ್ಕೂಲ್ ವಿದ್ಯಾರ್ಥಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಮುಚ್ಚಂಡಿ ಗ್ರಾಮದ ಹೊರ ವಲಯದಲ್ಲಿ ನಡೆದಿದೆ. ನಿನ್ನೆ ರಾತ್ರಿ ವಿದ್ಯಾರ್ಥಿಯನ್ನು ಕೊಲೆ ಮಾಡಿ ಮುಚ್ಚಂಡಿ ಗ್ರಾಮದ ಹೊರಭಾಗದಲ್ಲಿ ಹಂತಕರು ಎಸೆದು ಹೋಗಿದ್ದಾರೆ. ಬೆಳಗಾವಿಯ ಛತ್ರಪತಿ ಶಿವಾಜಿ ನಗರದ ಪ್ರಜ್ವಲ್ ಶಿವಾನಂದ ಕರಿಗಾರ ಕೊಲೆಯಾದ ವಿದ್ಯಾರ್ಥಿ. ನಗರದ ಜಿ.ಎ.ಹೈಸ್ಕೂಲ್ ನಲ್ಲಿ ಓದುತ್ತಿದ್ದ ವಿದ್ಯಾರ್ಥಿ. ವಿದ್ಯಾರ್ಥಿಯ ಶಾಲಾ ಸಮವಸ್ತ್ರದಿಂದ ಗುರುತು ಪತ್ತೆಯಾಗಿದೆ. ಬೆಳಗಾವಿಯ ಜಿಎ ಹೈಸ್ಕೂಲಿನಲ್ಲಿ10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ ಎಂದು …
Read More »ದೀಪಾವಳಿ ಹಬ್ಬದ ಪ್ರಯುಕ್ತ ಬೆಂಗಳೂರು- ಬೆಳಗಾವಿ ವಿಶೇಷ ರೈಲು……
ಮೂಡಲಗಿ:- ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿAದ ಬೆಳಗಾವಿಗೆ ದಿ.21 ಮತ್ತು ದಿ.22ರಂದು ಬೆಳಗಾವಿಗೆ ಹಾಗೂ ದಿ.26ರಂದು ಬೆಳಗಾವಿಯಿಂದ ಯಶವಂತಪುರಕ್ಕೆ ವಿಶೇಷ ರೈಲುಗಳನ್ನು ಬಿಡಲಾಗಿದ್ದು ಪ್ರಯಾಣಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳ ಬಹುವುದೆಂದು ರಾಜ್ಯಸಭಾ ಸದಸ್ಯ ಹಾಗೂ ನೈರುತ್ಯ ರೈಲ್ವೆ ಸಲಹಾ ಸಮಿತಿ ಸದಸ್ಯರಾಗಿರುವ ಈರಣ್ಣ ಕಡಾಡಿ ತಿಳಿಸಿದ್ದಾರೆ. ಈ ಬಗ್ಗೆ ಸಂಸದರು ಇಂದು ದೂರವಾಣಿ ಮುಖಾಂತರ ಪತ್ರಿಕೆಗೆ ಹೇಳಿಕೆ ನೀಡಿದ್ದು ಸಾವಿರಾರು ಸಂಖ್ಯೆಯಲ್ಲಿ ದೀಪಾವಳಿ ಹಬ್ಬಕ್ಕೆ ಪ್ರಯಾಣಿಕರು ತಮ್ಮ …
Read More »ದೆವ್ವ ಕರೆದರೆ ಹೋಗಲು ಆಗುತ್ತಾ? : ಸುಮಲತಾರಿಗೆ ರವೀಂದ್ರ ಶ್ರೀಕಂಠಯ್ಯ ತಿರುಗೇಟು
ಮೈಸೂರು : ”ಅವರು ಕರೆದಾಕ್ಷಣ ಹೋಗಲಾಗುವುದಿಲ್ಲ,ಉತ್ತಮರು ಕರೆದರೇ ಹೋಗಬಹುದು, ದೆವ್ವ ಕರೆದರೆ ಹೋಗಲು ಆಗುತ್ತಾ? ದೆವ್ವದ ಬಾಯಲ್ಲಿ ಭಗವದ್ಗೀತೆ ಕೇಳಲು ಸಾಧ್ಯವೇ?” ಎಂದು ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು ಸಂಸದೆ ಸುಮಲತಾ ಅವರಿಗೆ ತಿರುಗೇಟು ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಜೆಡಿಎಸ್ ಶಾಸಕರನ್ನು ಆಣೆ ಪ್ರಮಾಣ ಮಾಡಲು ಬರುವಂತೆ ಸುಮಲತಾ ಅವರು ಆಹ್ವಾನ ನೀಡಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ, ”ಸುಮಲತಾ ಜತೆಯಲ್ಲಿರುವವರು ಭ್ರಷ್ಟಾತಿಭ್ರಷ್ಟರು.ಮೈಸೂರು ಬೆಂಗಳೂರು ಹೈವೇ ಕಾಮಗಾರಿಯಲ್ಲಿ ನೂರಾರು ಕೋಟಿ …
Read More »ಚೇತನ್ ಹಿಂದೂ ಧರ್ಮ ಟಾರ್ಗೆಟ್ ಮಾಡೋದನ್ನ ಬಿಡಲಿ: ಚಕ್ರವರ್ತಿ ಕಿಡಿ
ರಬಕವಿ-ಬನಹಟ್ಟಿ : ನಟ ಚೇತನ್‌ರಿಗೆ ಸಿನಿಮಾ ಮಾಡಿ ಹಿಟ್ ಮಾಡಿಕೊಳ್ಳುವ ಸಾಮರ್ಥ್ಯವಿಲ್ಲ, ಬದಲಾಗಿ ಒಂದಲ್ಲ ಒಂದು ವಿಚಾರದಿಂದ ಸನಾತನ ಹಿಂದೂ ಧರ್ಮವನ್ನು ಟಾರ್ಗೆಟ್ ಮಾಡುತ್ತಾ ಸದಾ ಸುದ್ದಿಯಲ್ಲಿರಬೇಕೆಂಬ ಹುಚ್ಚು ಮನಸ್ಸು ಅವರದಾಗಿದೆ. ಈಗ ರಿಷಬ್ ಶೆಟ್ಟಿಯವರ ಕಾಂತಾರ ಚಿತ್ರದಿಂದ ಮತ್ತೆ ವಿವಾದಎಬ್ಬಿಸಿರುವುದು ಹೊಸತೇನಲ್ಲವೆಂದು ಚಕ್ರವರ್ತಿ ಸೂಲಿಬೆಲೆ ಕಿಡಿಕಾರಿದರು. ಬಾಗಲಕೋಟೆ ಜಿಲ್ಲೆಯ ಬನಹಟ್ಟಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗುವ ಸಂದರ್ಭ ಮಾತನಾಡಿ, ಬುಡಕಟ್ಟು ಜನಾಂಗ, ಭಾರತೀಯ ಮೂಲ ಭಾರತೀಯ ಸಂಸ್ಕೃತಿ ಬೇರೆ ಎಂಬುದು ಎಡಪಂಕ್ತಿಯರ …
Read More »ಪುನೀತ್ ರಾಜಕುಮಾರ್ ಪುಣ್ಯ ಸ್ಮರಣೆ, 3 ಸಾವಿರ ಜನರಿಗೆ ಬಾಡೂಟ
ಶಿವಮೊಗ್ಗ ನಗರದಲ್ಲಿ ಅಭಿಮಾನಿಗಳಿಂದ ನಟ ಪುನೀತ್ ರಾಜಕುಮಾರ್ ಅವರ ಮೊದಲ ವರ್ಷದ ಪುಣ್ಯ ಸ್ಮರಣೆ ಮಾಡಲಾಯಿತು. ಮೂರು ಸಾವಿರ ಜನರಿಗೆ ಬಾಡೂಟ ಬಡಿಸಿ, ಯುವಕರು ತಮ್ಮ ನೆಚ್ಚಿನ ನಟನಿಗೆ ನಮನ ಸಲ್ಲಿಸಿದರು. ವಿದ್ಯಾನಗರದ ಯಾಲಕಪ್ಪನಕೇರಿಯ ಶ್ರೀ ವೀರಕೇಸರಿ ಯುವಕರ ಸಂಘದ ವತಿಯಿಂದ ನಟ ಪುನೀತ್ ರಾಜಕುಮಾರ್ ಮೊದಲ ವರ್ಷದ ಪುಣ್ಯ ಸ್ಮರಣೆ ಮಾಡಲಾಯಿತು. ಬಿ.ಹೆಚ್.ರಸ್ತೆ ಪಕ್ಕದಲ್ಲೇ ವಿದ್ಯಾನಗರದಲ್ಲಿ ವಿವಿಧ ಹೂವುಗಳಿಂದ ಅಲಂಕೃತ ಮಂಟಪ ನಿರ್ಮಿಸಲಾಗಿತ್ತು. ಅದರಲ್ಲಿ ನಟ ಪುನೀತ್ …
Read More »
Laxmi News 24×7