ಬೆಳಗಾವಿ ನಗರದಲ್ಲಿ ಕಳೆದ ಎರಡು ದಿನಗಳ ಹಿಂದೆ ಉದ್ಘಾಟನೆಯಾಗಿದ್ದ ಬ್ರಿಡ್ಜ್ ಮೇಲಿನ ರಸ್ತೆ ಹಾಳಾಗಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸೇತುವೆ ಉದ್ಘಾಟನೆಯದ ಎರಡೇ ದಿನಗಳಲ್ಲಿ ರಸ್ತೆ ಹಾಳಾಗಿದ್ದು ಸಾರ್ವಜನಿಕರ ಬೇಸರಕ್ಕೆ ಕಾರಣವಾಗಿದೆ. ಒಂದೆಡೆ ತಗ್ಗು ಬಿದ್ದಿರುವ ರಸ್ತೆಯಲ್ಲಿಯೇ ಸಾಗುತ್ತಿರುವ ಭಾರೀ ವಾಹನಗಳು, ಎಲ್ಲಾ ತಮ್ಮ ವಾಹನ ಬಿದ್ದು ಬಿಡುತ್ತೋ ಎಂಬ ಭಾವನೆಯಿಂದ ಭಯದಲ್ಲೇ ಪ್ರಯಾಣ ಮಾಡುತ್ತಿರೋ ಪ್ರಯಾಣಿಕರು ಒಂದೆಡೆಯಾದ್ರೆ, ಎಡಗೈಯ್ಯಲ್ಲಿ ಪ್ರಾಣ ಹಿಡಿದುಕೊಂಡು ಸಾಗುತ್ತಿರೋ ಪ್ರಯಾಣಿಕರು. ಹೌದು ಈ ಎಲ್ಲಾ …
Read More »ಹಾವು ಕಚ್ಚಿದ ಬಾಲಕನ ಪ್ರಾಣ ಉಳಿಸಿದ ಕಾಂಗ್ರೆಸ್ ಕಾರ್ಯಕರ್ತ..
ಹಾವು ಕಚ್ಚಿ ಪ್ರಜ್ಞಾಹೀನವಾಗಿ ಬಿದ್ದಿದ್ದ ಬಾಲಕನನ್ನು ಸೂಕ್ತ ಸಮಯಕ್ಕೆ ಅಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿ ಮಗುವಿನ ಪ್ರಾಣವನ್ನು ಕಾಪಾಡಿ ಮಾನವೀಯತೆ ಮೆರೆದ ಘಟನೆ ಬೆಳಗಾವಿ ತಾಲೂಕಿನ ದೇಸೂರು ಗ್ರಾಮದಲ್ಲಿ ನಡೆದಿದಿದೆ. ಹೌದು ಬೆಳಗಾವಿ ತಾಲೂಕಿನ ದೇಸೂರು ಗ್ರಾಮದಲ್ಲಿ ಗಣೇಶ ಅಜೀತ್ ಲೋಹಾರ್(11) ಎಂಬ ಬಾಲಕನಿಗೆ ಹಾವು ಕಚ್ಚಿತ್ತು. ಈ ವೇಳೆ ಪ್ರಜ್ಞಾಹೀನನಾಗಿ ಬಿದ್ದಿದ್ದ ಬಾಲಕ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ. ಈ ವೇಳೆ ದೇಸೂರಿನ ಕಾಂಗ್ರೆಸ್ ನಿಷ್ಟಾವಂತ ಕಾರ್ಯಕರ್ತ ಹಾಗೂ …
Read More »ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆಗೆ ಹೊರಟ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು
ಕಾಂಗ್ರೆಸ್ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಲು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನೇತೃತ್ವದಲ್ಲಿ ಇಂದು ಸಾವಿರಾರು ಕಾರ್ಯಕರ್ತರು ತೆರಳುತ್ತಿದ್ದಾರೆ. ಹೌದು ರಾಜ್ಯದಲ್ಲಿ ಮುಂಬರುತ್ತಿರುವ ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆಯನ್ನು ಪ್ರಾರಂಭಿಸಿದೆ. ಈ ಹಿನ್ನೆಲೆ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲು ಇಂದು ಶುಕ್ರವಾರ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನೇತೃತ್ವದಲ್ಲಿ ಸಾವಿರಾರು ಜನ ಕಾಂಗ್ರೆಸ್ ಕಾರ್ಯಕರ್ತರು ಅತ್ಯಂತ ಉತ್ಸಾಹದಿಂದ ಪ್ರಯಾಣ …
Read More »ಹಾಪ್ ಐರನ್ ಮ್ಯಾನ್ ಆಗಿ ಹೊರಹೊಮ್ಮಿದ್ದಾರೆ ಘಟಪ್ರಭಾC.P.I.
ಪೊಲೀಸ್ ಇಲಾಖೆ ಎಂದರೆ ಬಿಡುವಿಲ್ಲದ ಹಾಗೂ ಒತ್ತಡದ ಕೆಲಸ ಅನ್ನುವುದು ಎಲ್ಲರಿಗೂ ಗೊತ್ತು.ಆದ್ರೆ, ಇಂತಹ ಕೆಲಸಗಳ ನಡುವೆಯೂ ಘಟಪ್ರಭಾ ಪೊಲೀಸ್ ಠಾಣೆಯ ಸಿಪಿಐಯೊಬ್ಬರು ಯುವ ಸಮುದಾಯಕ್ಕೆ ಮಾದರಿಯಾಗುವ ಕೆಲಸ ಮಾಡಿದ್ದಾರೆ.ಅವರ ಕಾರ್ಯಕ್ಕೆ ಪೊಲೀಸ್ ಇಲಾಖೆ ಡಿಜಿಪಿ ಪ್ರವೀಣ ಸೂದ್,ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಅಲೋಕುಮಾರ್ ಟ್ವಿಟ್ ಮಾಡಿ ಶುಭಾಶಯ ತಿಳಿಸಿದ್ದಾರೆ. ಹಾಗಾದರೆ ಘಟಪ್ರಭಾ ಸಿಪಿಐ ವರ್ಲ್ಡ್ ರಿಕಾರ್ಡ್ ಕಟ್ಟು ಮಸ್ತಾದ ದೇಹ. ದೇಹಕ್ಕೆ ತಕ್ಕಂತೆ ಹೈಟು. ಸರ್ಕಾರಿ ಕೆಲಸವೇ ದೇವರ …
Read More »ಪುಣ್ಯಕೋಟಿ ದತ್ತು ಯೋಜನೆಗೆ ಸರ್ಕಾರಿ ನೌಕರರಿಂದ ಸಿಎಂ ಬೊಮ್ಮಾಯಿಗೆ ೧೦೦ ಕೋಟಿ
ರಾಜ್ಯ ಸರ್ಕಾರಿ ನೌಕರರು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪುಣ್ಯಕೋಟಿ ದತ್ತು ಯೋಜನೆಗೆ ತಮ್ಮ ಒಂದು ದಿನದ ಸಂಬಳ ನೀಡಿ, ಸರ್ಕಾರಕ್ಕೆ 100 ಕೋಟಿ ರೂ. ದೇಣಿಗೆ ನೀಡುವ ಪತ್ರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯವರಿಗೆ ನೀಡಿದರು. ಈ ಸಂದರ್ಭದಲ್ಲಿ ಪಶು ಸಂಗೋಪನಾ ಸಚಿವ ಪ್ರಭುಚೌಹ್ವಾಣ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಾಕ್ಷರಿ ಹಾಗೂ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಹಾಜರಿದ್ದರು.
Read More »ಸರಕಾರ ಉತ್ತರ ಕರ್ನಾಟಕ ಕಬ್ಬು ಬೆಳೆಗಾರ ರೈತರನ್ನು ನಿರ್ಲಕ್ಷಿಸುತ್ತಿದೆ: ಮೋದಗಿ
ಸಿಎಂ ಬೊಮ್ಮಾಯಿ ನೇತೃತ್ವದ ಸರಕಾರ ಉತ್ತರ ಕರ್ನಾಟಕ ಕಬ್ಬು ಬೆಳಗಾರ ರೈತರನ್ನು ಕಡೆಗಣಿಸುತ್ತಿದೆ ಎಂದು ಬೆಳಗಾವಿಯಲ್ಲಿ ರೈತಪರ ಸಂಘಟನೆಗಳು ಆರೋಪಿಸಿ ಬೃಹತ್ ಪ್ರತಿಭಟನಾ ರ್ಯಾಲಿಯನ್ನು ನಡೆಸಿದವು. ಹೌದು ಬೆಳಗಾವಿ ನಗರದಲ್ಲಿ ಇಂದು ವಿವಿಧ ರೈತಪರ ಸಂಘಟನೆಗಳು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತ, ಸರಕಾರ ಉತ್ತರ ಕರ್ನಾಟಕ ಭಾಗದ ಕಬ್ಬು ಬೆಳಗಾರ ರೈತರನ್ನು ನಿರ್ಲಕ್ಷ ಮಾಡುತ್ತಿದೆ. ಹಾಗಾಗಿ ಕಬ್ಬು ಬೆಳಗಾರ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾಗಾಗಿ ಕೂಡಲೇ ರಾಜ್ಯ ಸರಕಾರ …
Read More »ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ತಲ್ವಾರ್ ದಾಳಿ ಯತ್ನ
ಬಂಟ್ವಾಳ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ದಾಳಿಗೆ ಯತ್ನಿಸಿದ ಘಟನೆ ಅ. 13ರ ರಾತ್ರಿ ಸುಮಾರು 11.30 ಗಂಟೆಯ ಸಮಯದಲ್ಲಿ ನಡೆದಿದೆ. ಶಾಸಕರು ರಾತ್ರಿ ಮಂಗಳೂರು ವಿಮಾನ ನಿಲ್ದಾಣದಿಂದ ಬೆಳ್ತಂಗಡಿಗೆ ಪ್ರಯಾಣಿಸುತ್ತಿದ್ದ ಸಂದರ್ಭ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಬಳಿ ಸ್ಕಾರ್ಪಿಯೋ ಕಾರ್ ನಲ್ಲಿ ಬಂದ ಒಂದು ತಂಡ ಶಾಸಕರ ಕಾರನ್ನು ಅಡ್ಡಗಟ್ಟಿ ದಾಳಿಗೆ ಯತ್ನಿಸಿದೆ ಎಂದು ತಿಳಿದು ಬಂದಿದೆ. ಶಾಸಕರು ತಮ್ಮ ಕಾರನ್ನು ಬಿಟ್ಟು ಸಂಬಂಧಿಯೋರ್ವರ …
Read More »ಮಂಡ್ಯದ ಐದು ರೂಪಾಯಿ ವೈದ್ಯ ಖ್ಯಾತಿಯ ಶಂಕರೇಗೌಡರಿಗೆ ‘ಇಂಡಿಯನ್ ಆಫ್ ದಿ ಇಯರ್’ ಪ್ರಶಸ್ತಿ
ಬೆಂಗಳೂರು: ತಮ್ಮ ಕ್ಲಿನಿಕ್ ಗೆ ಬರುವ ರೋಗಿಗಳಿಗೆ ಕೇವಲ ಐದು ರೂಪಾಯಿ ಶುಲ್ಕ ಪಡೆದು ಚಿಕಿತ್ಸೆ ನೀಡುತ್ತಿರುವ ಮಂಡ್ಯದ ಪ್ರಸಿದ್ದ ವೈದ್ಯ ಶಂಕರೇಗೌಡ ಅವರಿಗೆ ಸಿಎನ್ಎನ್ ನ್ಯೂಸ್18 ಸಂಸ್ಥೆ ವತಿಯಿಂದ ನೀಡಲಾಗುವ ಈ ಬಾರಿಯ ‘ಇಂಡಿಯನ್ ಆಫ್ ದಿ ಇಯರ್-2022’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಸಾಮಾಜಿಕ ಬದಲಾವಣೆ ವಿಭಾಗದಲ್ಲಿ ಡಾ.ಶಂಕರೇಗೌಡರಿಗೆ ‘ಇಂಡಿಯನ್ ಆಫ್ ದಿ ಇಯರ್-2022’ ಪ್ರಶಸ್ತಿ ನೀಡಲಾಗಿದೆ. ಹೊಸದಿಲ್ಲಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ …
Read More »ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ : ಸರ್ಕಾರದಿಂದ ಶನಿವಾರ ‘ಬ್ಯಾಗ್ ಲೆಸ್ ಡೇ’ ಆಚರಣೆ
ಬೆಂಗಳೂರು: ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು, ರಾಜ್ಯ ಸರ್ಕಾರ ಶನಿವಾರ ಬ್ಯಾಗ್ ಹೊರೆಯಿಂದ ಮುಕ್ತಿ ನೀಡುವ ಚಿಂತನೆ ನಡೆಸಿದೆ. ಹೌದು, ಪ್ರತಿನಿತ್ಯ ಪುಸ್ತಕದ ಭಾರ ಹೊತ್ತು ಶಾಲೆಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಇನ್ನು ಮುಂದೆ ಶನಿವಾರ ಬ್ಯಾಗ್ ಬೆನ್ನಿಗೇರಿಸಿ ಮಕ್ಕಳು ಶಾಲೆಗೆ ಹೋಗಬೇಕಾದ ಅಗತ್ಯ ಇಲ್ಲ . ರಾಜ್ಯದಲ್ಲಿ ಶನಿವಾರ ಬ್ಯಾಗ್ ಲೆಸ್ ಡೇ ಆಚರಿಸಲು ಸರ್ಕಾರ ಚಿಂತನೆ ನಡೆದಿದೆ. ಶನಿವಾರ ಪಾಠದ ಬದಲಾಗಿ ಪಠ್ಯೇತರ …
Read More »ನಕಲಿ ಜಾತಿ ಪ್ರಮಾಣಪತ್ರ ನೀಡಿ ಸರ್ಕಾರಿ ಉದ್ಯೋಗ : 20ಕ್ಕೂ ಹೆಚ್ಚು ಮಂದಿ ಸೇವೆಯಿಂದ ವಜಾ
ಬೆಂಗಳೂರು: ಪಿಎಸ್ಐ, ಎಎಸ್ಐ, ಪೊಲೀಸ್ ಕಾನ್ಸ್ಟೆಬಲ್, ರೈಲ್ವೆ ಪೊಲೀಸ್, ಸರಕಾರಿ ಸ್ವಾಮ್ಯದ ಬ್ಯಾಂಕ್ ಅಧಿಕಾರಿಗಳು, ಇನ್ಶೂರೆನ್ಸ್ ಕಂಪನಿ ಅಧಿಕಾರಿಗಳು, ಕೆಎಸ್ಆರ್ಟಿಸಿ, ಬಿಎಂಟಿಸಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಎಚ್ಎಎಲ್, ವಾಣಿಜ್ಯ ತೆರಿಗೆ, ಆರೋಗ್ಯ, ಕೃಷಿ, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ನೌಕರರು, ಸಿ ಆರ್ಪಿಎಫ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹಲವರು ಸುಳ್ಳು ಜಾತಿ ಪ್ರಮಾಣ ಪತ್ರವನ್ನು ನೀಡಿ ಉದ್ಯೋಗ ಪಡೆದುಕೊಂಡಿದ್ದಾರೆ. ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಸರ್ಕಾರಿ …
Read More »
Laxmi News 24×7