ಮಾಂಸದಂಗಡಿಯಲ್ಲಿಯೇ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ಬಾಣತಿಕಟ್ಟೆಯ ಮೆಹಬೂಬ್ ನಗರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ಮು ಸವದತ್ತಿ ತಾಲ್ಲೂಕಿನ ಬೆಳವಾಡಿ ಗ್ರಾಮದ ಅಸ್ಫಾಕ್ ಬೇಪಾರಿ ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ಮನೆಯಲ್ಲಿ ಜಗಳ ಮಾಡಿಕೊಂಡು ಹುಬ್ಬಳ್ಳಿಯಲ್ಲಿರುವ ತಮ್ಮ ಸಂಬಂಧಿಯ ಮನೆಗೆ ಬಂದಿದ್ದ. ಆದ್ರೆ ಸಂಬಂಧಿಯ ಮಟನ್ ಶಾಪ್ ನಲ್ಲಿಯೇ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾನೆ. ಹೊಟ್ಟೆಗೆ ಹಾಗೂ ಕುತ್ತಿಗೆಗೆ ಚಾಕು ಹಾಕಿಕೊಂಡು ಸಾವನ್ನಪಿದ್ದು, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಬಗ್ಗೆ ಅನುಮಾನ …
Read More »ಎರಡು ಎಟಿಂಗಳಲ್ಲಿ ಕಳ್ಳರ ಕೈಚಳಕ
ಎರಡು ಎಟಿಎಂಗಳಲ್ಲಿ ಕಳ್ಳರು ಕೈಚಳಕ ತೋರಿರುವ ಘಟನೆ ವಿಜಯಪುರ ನಗರದ ಖಾಜಾ ಅಮೀನ್ ದರ್ಗಾ ಬಳಿ ಘಟನೆ ನಡೆದಿದೆ. ಎಸ್ಬಿಐ, ಐಸಿಐಸಿಐ ಬ್ಯಾಂಕ್ ಎಟಿಎಂಗಳಲ್ಲಿ ಕಳ್ಳರು ಎಟಿಎಂಗಳನ್ನು ಒಡೆದು ಹಣ ಕಳ್ಳತನಕ್ಕೆ ಯತ್ನಿಸಿದ್ದಾರೆ. ಎರಡು ಎಟಿಎಂಗಳು ಅಕ್ಕಪಕ್ಕದಿವೆ. ಆದ್ರೇ, ಎಟಿಎಂನಲ್ಲಿ ಎಷ್ಟು ಹಣ ಕಳ್ಳತನ ಆಗಿದೆ ಎನ್ನುವುದು ಪೊಲೀಸ ತನಿಖೆ ಬಳಿಕ ತಿಳಿದು ಬರಬೇಕಿದೆ. ಇನ್ನೂ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಆದರ್ಶನಗರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ …
Read More »ಕೆರೆಯಲ್ಲಿ ಮುಳುಗಿದ್ದ ಮೀನುಗಾರ ಶವವಾಗಿ ಪತ್ತೆ
ಖಾನಾಪುರ ತಾಲೂಕಿನ ಕೆರವಾಡ ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಕೆರೆ ಪಾಲಾಗಿದ್ದ ಮೀನುಗಾರನ ಶವ ಪತ್ತೆಯಾಗಿದೆ. : ಹೌದು ಇದೇ ಅಕ್ಟೋಬರ್ 11ರಂದು ಕೆರವಾಡ ಕೆರೆಯಲ್ಲಿ ಮೀನು ಹಿಡಿಯಲು ಬಲೆ ಹಾಕಲು ಹೋಗಿದ್ದ ವೇಳೆ ಕೆರೆಯಲ್ಲಿ ಮುಳುಗಿದ್ದ. ಘಟನಾ ಸ್ಥಳಕ್ಕೆ ನಂದಗಡ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿ ಆತನ ಶೋಧ ಕಾರ್ಯ ನಡೆಸಿದ್ದರು. ಸ್ಥಳಕ್ಕೆ ತಹಶೀಲ್ದಾರ್ ಪ್ರವೀಣ ಜೈನ್ ಕೂಡ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದರು. …
Read More »ಸುಪ್ರೀಂಕೋರ್ಟ್ `ಹಿಜಾಬ್’ ತೀರ್ಪಿಗೆ ಕ್ಷಣಗಣನೆ : ಕರ್ನಾಟಕದಲ್ಲಿ ಹೈ ಅಲರ್ಟ್
ನವದೆಹಲಿ: ಹಿಜಾಬ್ ( Hijab Row) ವಿವಾದದ ಕುರಿತು ಸುಪ್ರೀಂಕೋರ್ಟ್ ಅಕ್ಟೋಬರ್ 13 ರ ಇಂದು ಬೆಳಗ್ಗೆ 10:30 ಕ್ಕೆ ತೀರ್ಪು ಪ್ರಕಟಿಸುವ ಸಾಧ್ಯತೆ ಇದ್ದು,ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಉಡುಪಿ, ತುಮಕೂರು ಹಾಗೂ ಬೆಂಗಳೂರು ನಗರದಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗುತ್ತಿದೆ. ಸೂಕ್ತ ಭದ್ರತೆ ಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರು …
Read More »ಜನ ಸಂಕಲ್ಪಯಾತ್ರೆ: ದೊಡ್ಡನಗೌಡ ಅಭ್ಯರ್ಥಿ- ಗೊಂದಲಕ್ಕೆ ತೆರೆ
ಕುಷ್ಟಗಿ: ಪಟ್ಟಣದಲ್ಲಿ ಬಿಜೆಪಿ ಸಂಘಟಿಸಿದ್ದ ‘ಜನ ಸಂಕಲ್ಪಯಾತ್ರೆ’ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರಲ್ಲಿ ಹೊಸ ಹುರುಪು ಮೂಡಿಸಿದ್ದು ಕಂಡುಬಂತು. ಪಟ್ಟಣ ಸೇರಿದಂತೆ ತಾಲ್ಲೂಕಿನ ಹಳ್ಳಿಗಳಿಂದ ಸಹಸ್ರ ಸಂಖ್ಯೆ ಅಭಿಮಾನಿಗಳು ಆಗಮಿಸಿದ್ದರು. ಪಕ್ಷದ ಬಾವುಟಗಳನ್ನು ಹಿಡಿದು, ಕೊರಳಲ್ಲಿ ಕಮಲದ ಶಾಲು ಹಾಕಿಕೊಂಡು ಯುವಕರು ಉತ್ಸಾಹದಿಂದ ಓಡಾಡುತ್ತಿದ್ದು ಕಂಡುಬಂತು. ಎರಡು ತಾಸು ತಡವಾಗಿ ಆರಂಭಗೊಂಡಿತು. ಹವಾಮಾನ ವೈಪರೀತ್ಯದಿಂದ ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಬಿ.ಎಸ್.ಯಡಿಯೂರಪ್ಪ ರಸ್ತೆ ಮಾರ್ಗದ ಮೂಲಕ ಪಟ್ಟಣಕ್ಕೆ ಬಂದರು. ಕಾರ್ಯಕ್ರಮದ ಆರಂಭಕ್ಕೆ …
Read More »ಸಿದ್ದು ಡ್ರಗ್ ಮಾಫಿಯಾ ಗುರು: ಡ್ರಗ್ಸ್, ಗಾಂಜಾ ಶಾಲಾ, ಕಾಲೇಜುಗಳಲ್ಲಿ ಯಾವುದೇ ಭಯವಿಲ್ಲದೇ ಸಿಗುತ್ತಿತ್ತು: ಕಟೀಲ್
ಗಜೇಂದ್ರಗಡ: ಡಿನೋಟಿಫಿಕೇಷನ್ ವಿಚಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಚುನಾವಣೆಗೂ ಮುನ್ನವೇ ಜೈಲು ಸೇರಲಿದ್ದಾರೆ. ಆಗ ಕಾಂಗ್ರೆಸ್ ಎರಡು ಹೋಳಾಗುತ್ತದೆ. ಒಂದು ಸಿದ್ದರಾಮಯ್ಯ ಪಾರ್ಟಿ, ಮತ್ತೊಂದು ಡಿ.ಕೆ.ಶಿವಕುಮಾರ್ ಪಾರ್ಟಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ್ ಕಟೀಲ್ ಭವಿಷ್ಯ ನುಡಿದರು. ಪಟ್ಟಣದ ಶಾಸಕರ ನಿವಾಸದ ಆವರಣದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಂಕಲ್ಪ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಈಗಾಗಲೇ ಸರ್ಕಾರಿ ಸ್ವತ್ತನ್ನು ಡಿನೋಟಿಫಿಕೇಶನ್ ಮಾಡಿ ಪ್ರಭಾವಿ ಬಿಲ್ಡರ್ಗಳಿಗೆ ಅನುಕೂಲ ಮಾಡಿಕೊಡಲು ಅಧಿಕಾರ …
Read More »ಶ್ಮಶಾನ ಕಾರ್ಮಿಕರ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶಕ್ಕೆ ಕ್ರಮ: ಕೋಟ
ಬೆಂಗಳೂರು: ದುರ್ಬಲ ವರ್ಗದ ಮಕ್ಕಳನ್ನು ಪ್ರತಿಷ್ಠಿತ ಶಾಲೆಗೆ ಸೇರಿಸುವ ಇಲಾಖೆಯ ಯೋಜನೆಯ ವ್ಯಾಪ್ತಿಗೆ ಶ್ಮಶಾನ ಕಾರ್ಮಿಕರ ಮಕ್ಕಳನ್ನು ತರಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಶ್ಮಶಾನ ಕಾರ್ಮಿಕರಿಗೆ ಸೌಲಭ್ಯ ಒದಗಿಸುವ ಸಂಬಂಧ ಬುಧವಾರ ವಿಧಾನಸೌಧದಲ್ಲಿ ಸಭೆ ನಡೆಸಿದ ಸಚಿವರು, ಸಮಾಜ ಕಲ್ಯಾಣ ಇಲಾಖೆ ಯೋಜನೆಯಾಗಿರುವ ದುರ್ಬಲರ ಮಕ್ಕಳನ್ನು ಪ್ರತಿಷ್ಠಿತ ಶಾಲೆಗೆ ಸೇರಿಸುವ ಯೋಜನೆ ವ್ಯಾಪ್ತಿಗೆ ಶ್ಮಶಾನ ಕಾರ್ಮಿಕರ ಮಕ್ಕಳಿಗೆ ಆದ್ಯತೆ ಮೇಲೆ ಪ್ರವೇಶ ಕಲ್ಪಿಸಲಾಗುವುದು ಎಂದರು. …
Read More »ಯಶಸ್ವಿನಿ ಯೋಜನೆ ಮರು ಜಾರಿ: ನವೆಂಬರ್ 1ರಿಂದ ನೋಂದಣಿ ಪ್ರಾರಂಭ, ಮಾರ್ಗಸೂಚಿ ನಿಗದಿ
ಬೆಂಗಳೂರು : ಮುಖ್ಯಮಂತ್ರಿಗಳು 2022-23ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಯಶಸ್ವಿನಿ ಯೋಜನೆಯನ್ನು ಪರಿಷ್ಕರಿಸಿ ಮರು ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ನವೆಂಬರ್ 1 ರಿಂದ ಸದಸ್ಯರ ನೋಂದಣಿ ಪ್ರಾರಂಭವಾಗಲಿದೆ. ಈ ಕುರಿತು ಇಂದು ಸರ್ಕಾರಿ ಆದೇಶ ಹೊರಡಿಸಲಾಗಿದೆ. ಗ್ರಾಮೀಣ ಪ್ರದೇಶದ ಸಹಕಾರಿ ಸಂಘಗಳ ಸದಸ್ಯರಿಗೆ ನಾಲ್ಕು ಜನರ ಕುಟುಂಬಕ್ಕೆ ತಲಾ 500 ರೂ. ಹಾಗೂ ನಗರ ಪ್ರದೇಶದ ಸಹಕಾರಿಗಳಿಗೆ 1000 ರೂ. ವಂತಿಗೆ ನಿಗದಿ ಪಡಿಸಲಾಗಿದೆ. ನಾಲ್ಕು ಮಂದಿಗಿಂತ …
Read More »ಮುಂದುವರಿದ ಅಹೋರಾತ್ರಿ ಧರಣಿ; 5500 ರೂ. ದರ ನಿಗದಿಗೆ ಒತ್ತಾಯ
ಮುಂದುವರಿದ ಅಹೋರಾತ್ರಿ ಧರಣಿ; 5500 ರೂ. ದರ ನಿಗದಿಗೆ ಒತ್ತಾಯ ಬೆಳಗಾವಿ: ಪ್ರತಿ ಟನ್ ಕಬ್ಬಿಗೆ 5500 ರೂ. ದರ ನಿಗದಿ ಮಾಡುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಮಂಗಳವಾರ ಎರಡನೇ ದಿನವೂ ಮುಂದುವರಿದಿದ್ದು, ಪೊಲೀಸರ ಮನವೊಲಿಕೆಗೂ ಬಗ್ಗದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಯೇ ಠಿಕಾಣಿ ಹೂಡಿದ್ದಾರೆ. ಬೆಂಗಳೂರಿನಲ್ಲಿ ಸಕ್ಕರೆ ಸಚಿವರು ಸಭೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಅಲ್ಲಿಯವರೆಗೆ ಪ್ರತಿಭಟನೆ ಹಿಂಪಡೆಯುವಂತೆ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವೀಂದ್ರ …
Read More »ಹಿರಣ್ಯಕೇಶಿ ಹಂಗಾಮಿಗೆ ಚಾಲನೆ; 14 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
ಹುಕ್ಕೇರಿ: ಸುಮಾರು 7 ದಶಕಗಳ ಹಿಂದೆ ರೈತರ ಬದುಕು ಕಟ್ಟಿಕೊಡುವ ನಿಟ್ಟಿನಲ್ಲಿ ದೇಶದಲ್ಲಿ ಪ್ರಥಮವಾಗಿ ಕಾರ್ಖಾನೆಗಳ ಪ್ರಾರಂಭದ ಹಂತದಲ್ಲಿ ದಿ| ಅಪ್ಪಣಗೌಡ ಪಾಟೀಲರ ನೇತೃತ್ವದಲ್ಲಿ ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆಯು ಸ್ಥಾಪನೆಯಾಗಿ ರೈತರ ಬಾಳಿಗೆ ವರದಾನವಾಗಿರುವುದು ನಮ್ಮೆಲ್ಲರ ಭಾಗ್ಯ ಎಂದು ನಿಡಸೋಸಿ ಸಿದ್ದ ಸಂಸ್ಥಾನಮಠದ ಪಂಚಮಶಿವಲಿಂಗೇಶ್ವರ ಸ್ವಾಮಿಗಳು ಹೇಳಿದರು. ಮಂಗಳವಾರ ಸಂಕೇಶ್ವರದ ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆಯ 62ನೇ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ ಸಾನ್ನಿಧ್ಯ ವಹಿಸಿ ಮಾತನಾಡಿದ ಶ್ರೀಗಳು, ನಮ್ಮೆಲ್ಲರ ಆರ್ಥಿಕ …
Read More »
Laxmi News 24×7