ಹುಬ್ಬಳ್ಳಿ: ‘ಸ್ವಾತಂತ್ರ್ಯದ ಅಮೃತಮಹೋತ್ಸವದ ಸಂದರ್ಭದಲ್ಲಿ ನಾವಿದ್ದರೂ, ನಮ್ಮದೇ ನೆಲದಲ್ಲಿ ಹಬ್ಬ ಆಚರಿಸಲು ಕೋರ್ಟ್ ಕಟ್ಟೆಗೆ ಹೋಗುವ ಪರಿಸ್ಥಿತಿ ಎದುರಾಗುತ್ತಿದೆ’ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಅಸಮಾಧಾನ ವ್ಯಕ್ತಪಡಿಸಿದರು. ಈದ್ಗಾ ಮೈದಾನದಲ್ಲಿ ಪ್ರತಿಷ್ಠಾಪನೆ ಮಾಡಲಾದ ಗಣೇಶ ಮೂರ್ತಿಯ ವಿಸರ್ಜನೆ ಹಿನ್ನೆಲೆಯಲ್ಲಿ ಶುಕ್ರವಾರ ವಿಶೇಷ ಪೂಜೆ ಸಲ್ಲಿಸಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ‘ಇದೀಗ ಹಿಂದೂಗಳೆಲ್ಲರೂ ಒಂದಾಗಿದ್ದಾರೆ. ರಾಣಿ ಚನ್ನಮ್ಮ ಮೈದಾನದಲ್ಲಿ ನಡೆದ ಗಣೇಶೋತ್ಸವವೇ ಇದಕ್ಕೆ ಸಾಕ್ಷಿ. ಪ್ರಥಮ ಬಾರಿಗೆ ಇಲ್ಲಿ …
Read More »ಪ್ಲ್ಯಾಸ್ಟಿಕ್ ಚೀಲದಲ್ಲಿ ನವಜಾತ ಶಿಶು ಮರಕ್ಕೆ ನೇತು ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.
ಬೆಳಗಾವಿ: ಕಳೆದ ಒಂದು ವಾರದ ಹಿಂದೆ ಪ್ಲಾಸ್ಟಿಕ್ ಕವರ್ನಲ್ಲಿ ಸಿಕ್ಕಿದ್ದ ನವಜಾತ ಶಿಶುವನ್ನು ಮರಕ್ಕೆ ನೇತು ಹಾಕಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೋಕ್ಸೋ ಪ್ರಕರಣದಡಿ ಒಬ್ಬ ಆರೋಪಿಯನ್ನ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ನೆರಸಾ – ಗೌಳಿವಾಡ ಗ್ರಾಮದ ಮಲ್ಲು ಪಿಂಗಳೆ (19) ಬಂಧಿತ ಆರೋಪಿಯಾಗಿದ್ದಾನೆ. ಪ್ರಕರಣದ ಹಿನ್ನೆಲೆ ನೋಡುವುದಾದರೆ, ಕಳೆದ ಆರು ದಿನಗಳ ಹಿಂದೆ (ಆ.25ರಂದು) ಪ್ಲ್ಯಾಸ್ಟಿಕ್ ಚೀಲದಲ್ಲಿ ನವಜಾತ ಶಿಶುವನ್ನು ಮರಕ್ಕೆ ನೇತು ಹಾಕಲಾಗಿತ್ತು. …
Read More »ನ್ಯಾಯಾಧೀಶರ ಸೂಚನೆ ಮೇರೆಗೆ ಕೋರ್ಟ್ಗೆ ಮುರುಘಾ ಶ್ರೀ ಹಾಜರು
ಚಿತ್ರದುರ್ಗ: ಪೋಕ್ಸೋ ಪ್ರಕರಣ ಸಂಬಂಧ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರನ್ನು ನ್ಯಾಯಾಲಯಕ್ಕೆ ಕರೆದುಕೊಂಡು ಬರುವಂತೆ ಜಿಲ್ಲಾ ಸೆಷನ್ ನ್ಯಾಯಾಲಯದ ನ್ಯಾಯಾಧೀಶೆ ಕೋಮಲಾ ಅವರು ಸೂಚಿಸಿದ್ದು, ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಈಗಾಗಲೇ ಶ್ರೀಗಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನ್ಯಾಯಾಲಯವು ಒಪ್ಪಿಸಿದೆ. ನಂತರ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದ್ದು ಚಿಕಿತ್ಸೆಗೆ ಒಳಪಡಿಸಲಾಗಿದ್ದು, ಐಸಿಯು ಘಟಕದಲ್ಲಿ ದಾಖಲಿಸಲಾಗಿದೆ. ಇದೀಗ ಮುರುಘಾ ಶರಣರು ಆಸ್ಪತ್ರೆಯಿಂದ ನೇರವಾಗಿ ನ್ಯಾಯಾಲಯಕ್ಕೆ ಬರುವಂತೆ ಜಿಲ್ಲಾ …
Read More »ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲು ಮಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ
ಕರಾವಳಿ ಭಾಗದ ಅಭಿವೃಧ್ಧಿಗೆ ಬಲವನ್ನು ತುಂಬುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿರವರು ವಿವಿಧ ಕಾಮಗಾರಿಗೆ ಚಾಲನೆಯನ್ನು ನೀಡುವ ಉದ್ದೇಶಿದಿಂದ ಇಂದು ಮಂಗಳೂರಿಗೆ ಆಗಮಿಸಿದರು. ಹೌದು ಮಂಗಳೂರು ಭಾಗದಲ್ಲಿ ಅಭಿವೃದ್ಧಿ ಹಿನ್ನೆಲೆಯಲ್ಲಿ ಬಂದರು ಪ್ರಾಧಿಕಾರದ ೩೮೦೦ ಕೋಟಿ ರೂಪಾಯಿ ಮೊತ್ತದ ವಿವಿಧ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ನೆರವೇರಿಸುವ ಉದ್ದೇಶದಿಂದ ಇಂದು ಪ್ರಧಾನಿ ನರೇಂದ್ರ ಮೋದಿ ನವ ಮಂಗಳೂರಿಗೆ ಬಂದಿಳಿದಿದ್ದಾರೆ. ಈ ವೇಳೆ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್, ಸಿಎಂ ಬಸವರಾಜ್ ಬೊಮ್ಮಾಯಿ, …
Read More »ಜಾರಕಿಹೊಳಿ ಬ್ರದರ್ಸ ಬಿಟ್ಟು ಯಮಕನಮರಡಿಯಲ್ಲಿ ಕಾರ್ಯಕ್ರಮ ಮಾಡಿದ್ದು ತಪ್ಪು: ಸಂಜಯ್ ಪಾಟೀಲ್
ನಿಗಮ ಮಂಡಳಿ ಅಧ್ಯಕ್ಷರಾದ ಹಿನ್ನೆಲೆ ಮಾರುತಿ ಅಷ್ಟಗಿ ಅವರಿಗೆ ಯಮಕನಮರಡಿಯಲ್ಲಿ ಅವರ ಕಾರ್ಯಕರ್ತರು ಅಭಿನಂದನಾ ಸಮಾರಂಭ ಮಾಡಿದ್ದರು. ಅದಕ್ಕೆ ನಾವು ಪಕ್ಷದ ಶಿಷ್ಟಾಚಾರ ಹಾಕಲು ಬರುವುದಿಲ್ಲ. ಆದರೆ ಜಾರಕಿಹೊಳಿ ಬ್ರದರ್ಸ ಬಿಟ್ಟು ಕಾರ್ಯಕ್ರಮ ಮಾಡಿದ್ದು ತಪ್ಪು ಎನ್ನುವ ಮೂಲಕ ತಮ್ಮದೇ ಪಕ್ಷದ ಮುಖಂಡರ ವಿರುದ್ಧ ಬೆಳಗಾವಿ ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ್ ಪಾಟೀಲ್ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ. ಎಂ.ಕೆ.ಹುಬ್ಬಳ್ಳಿಯಲ್ಲಿ ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ …
Read More »ಮುರಘಾ ಶ್ರೀ ಬಂಧನ ಕಾಯ್ದೆ ಪ್ರಕಾರ ಸರ್ಕಾರ ಏನು ಕ್ರಮ ತಗೆದುಕೊಳ್ಳಬೇಕೋ ತಗೆದುಕೊಳ್ಳುತ್ತಿದ್ದಾರೆ: ಪ್ರಭಾಕರ್ ಕೋರೆ
ಮುರಘಾ ಶ್ರೀಗಳ ಬಂಧನ ಈಗ ಸರಕಾರದ ಮುಂದಿದೆ. ಸರಕಾರ ಕಾಯ್ದೆ ಪ್ರಕಾರ ಏನು ಕ್ರಮ ಕೈಗೊಳ್ಳಬೇಕೋ ತೆಗೆದುಕೊಳ್ಳುತ್ತೆ. ತಪ್ಪು ಮಾಡಿದವರ ಮೇಲೆ ಕ್ರಮ ಆಗೇ ಆಗುತ್ತೆ ಎಂದು ಕೆಎಲ್‍ಇ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ್ ಕೋರೆ ಹೇಳಿದ್ದಾರೆ. ಪೆÇೀಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗಳ ಬಂಧನ ವಿಚಾರ ಕುರಿತಂತೆ ಎಂಕೆ ಹುಬ್ಬಳ್ಳಿ ಪಟ್ಟಣದಲ್ಲಿ ಮೊದಲು ಪ್ರತಿಕ್ರಿಯಿಸಲು ಕೆಎಲ್‍ಇ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ್ ಕೋರೆ ನಿರಾಕರಿಸಿದ್ದರು. ಮಹಾಂತೇಶ ಕವಟಗಿಮಠ ಪ್ರತಿಕ್ರಿಯಿಸುತ್ತಾರೆ ಎಂದು ಕವಟಗಿಮಠರತ್ತ ಬೊಟ್ಟು …
Read More »ಬಿಜೆಪಿಯವ್ರು ಚಂಬಲ್ ಕಣಿವೆ ಡಕಾಯಿತರಿಗಿಂತ ದೊಡ್ಡ ಡಕಾಯಿತರು:
ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಚಂಬಲ್ ಕಣಿವೆಯ ಡಕಾಯಿತರಿಗಿಂತ ದೊಡ್ಡ ಡಕಾಯಿತವಾಗಿದೆ. ಜಿಎಸ್‍ಟಿ ಹೆಸರಲ್ಲಿ ಜನಸಾಮಾನ್ಯರಿಂದ ದೊಡ್ಡ ಪ್ರಮಾಣದಲ್ಲಿ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮಾಜಿ ಶಾಸಕ ರಮೇಶ ಕುಡಚಿ ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಮಾಜಿ ಶಾಸಕ ರಮೇಶ ಕುಡಚಿ ಈಗಾಗಲೇ ಜಿಎಸ್‍ಟಿ ಬಗ್ಗೆ ದೇಶದಲ್ಲಿ ಸಾಕಷ್ಟು ಚರ್ಚೆ ನಡೆಯುತ್ತಿದೆ. ಕಾಂಗ್ರೆಸ್ ಸರ್ಕಾರದಲ್ಲಿಯೂ ಜಿಎಸ್‍ಟಿ ಇತ್ತು. ಇವತ್ತು ಇದೆ. ಆದರೆ ಕಾಂಗ್ರೆಸ್ ಎಷ್ಟು ಜಿಎಸ್‍ಟಿ ಹಾಕಬೇಕು ಎಂದು …
Read More »ಬೈಲಹೊಂಗಲ: ದರ್ಗಾದಲ್ಲಿಯೇ ಗಣೇಶ ಮೂರ್ತಿ ಪ್ರತಿಷ್ಠಾಪನೆ
ಬೈಲಹೊಂಗಲ (ಬೆಳಗಾವಿ ಜಿಲ್ಲೆ): ಪ್ರತಿಬಾರಿಯಂತೆ ಈ ವರ್ಷವೂ ಪಟ್ಟಣದ ದರ್ಗಾದಲ್ಲಿ ಹಿಂದೂ ಮುಸ್ಲಿಮರು ಸೇರಿಕೊಂಡು ವಿಘ್ನನಿವಾರಕನ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ. ಪಟ್ಟಣದ ಕಂಠಿ ಗಲ್ಲಿಯಲ್ಲಿರುವ ಆಲಕಟ್ಟಿ ಫಕ್ಕೀರಸ್ವಾಮಿ ದರ್ಗಾ ಕೋಮು ಸೌಹಾರ್ದಕ್ಕೆ ಸಾಕ್ಷಿಯಾಗಿ ನಿಂತಿದೆ. ಸಂಪ್ರದಾಯದಂತೆ ಬುಧವಾರ ಗಣಪನ ಮೂರ್ತಿಯನ್ನು ಹಿಂದೂ ಮುಸ್ಲಿಮ್ ಯುವಕರು ಮೆರವಣಿಗೆ ಮೂಲಕ ತಂದು ದರ್ಗಾದಲ್ಲಿ ಪ್ರತಿಸ್ಥಾಪನೆ ಮಾಡಿದರು. ಮುಸ್ಲಿಮರು ಗಣಪನಿಗೆ ಹೂವು ಮಾಲೆ ಹಾಕಿ, ಕಾಯಿ, ಕರ್ಪೂರ ಬೆಳಗಿದರು, ಹಿಂದೂಗಳು ಆರತಿ ಮಾಡಿ, ನೈವೇದ್ಯ …
Read More »ಚಿಕ್ಕೋಡಿಯಲ್ಲಿ ಆಸ್ತಿ ವಿಚಾರವಾಗಿ ಶಿಕ್ಷಕರ ನಡುವೆ ಜಗಳ: ಸಾಕ್ಷಿಗಾಗಿ ಮಕ್ಕಳನ್ನು ಠಾಣೆಗೆ ಕರೆತಂದ ಶಿಕ್ಷಕಿ
ಬೆಳಗಾವಿ: ಮಕ್ಕಳು ದೇವರ ಸಮಾನ. ಮಕ್ಕಳು ಯಾವತ್ತು ಸುಳ್ಳನ್ನ ಹೇಳುವುದಿಲ್ಲ. ಹಾಗಂತ ತಮ್ಮ ನಡುವಿನ ಜಗಳಕ್ಕೆ ಸಾಕ್ಷಿಯಾಗಿ ಹೇಳಲು ಶಾಲಾ ಶಿಕ್ಷಕಿಯೊಬ್ಬರು ಶಾಲಾ ಅವಧಿಯಲ್ಲಿಯೇ ಮಕ್ಕಳನ್ನು ಪೊಲೀಸ್ ಠಾಣೆಗೆ ಕರೆತಂದಿರುವ ಘಟನೆ ಚಿಕ್ಕೋಡಿ ಪಟ್ಟಣದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ರಾಮನಗರ ಬಡಾವಣೆಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು ಕ್ಷುಲ್ಲಕ ಕಾರಣಕ್ಕೆ ಗಲಾಟೆ ಮಾಡಿಕೊಂಡಿದ್ದಾರೆ. ಶಿಕ್ಷಕ ಆರ್. ಎನ್ ಮಡಿವಾಳರು ಹಾಗೂ ಶಿಕ್ಷಕಿ ಎಂ.ಕೆ ಜಂಬಗಿ ಶಾಲೆಯಲ್ಲಿ ವಿದ್ಯಾರ್ಥಿಗಳ ಮುಂದೆಯೇ …
Read More »ಮಂಗಳೂರಿನಲ್ಲಿಂದು ‘ನಮೋ’ ಹವಾ: ಪ್ರಧಾನಿ ಮೋದಿಯವರ ಕಾರ್ಯಕ್ರಮದ ಸಂಪೂರ್ಣ ವಿವರ ಹೀಗಿದೆ.
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಮಂಗಳೂರು ಭೇಟಿ ನೀಡಲಿದ್ದಾರೆ. ಕೊಚ್ಚಿನ್ನಿಂದ ವಿಶೇಷ ವಿಮಾನದ ಮೂಲಕ ಪ್ರಧಾನಿ ಮಧ್ಯಾಹ್ನ 12.55ರ ಸುಮಾರಿಗೆ ಮಂಗಳೂರು ವಿಮಾನ ನಿಲ್ದಾಣ ತಲುಪಲಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯ, ಕೇಂದ್ರ ಸಚಿವರು ಪ್ರಧಾನಿ ಮೋದಿಯವರನ್ನು ಸ್ವಾಗತಿಸಲಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಧ್ಯಾಹ್ನ 1.20ಕ್ಕೆ ಸೇನಾ ಹೆಲಿಕಾಪ್ಟರ್ ಮೂಲಕ ಪ್ರಧಾನಿ ಮೋದಿ ಪಣಂಬೂರುನಲ್ಲಿರುವ ಎನ್.ಎಂ.ಪಿ.ಎ ಹೆಲಿಪ್ಯಾಡ್ಗೆ ಬರಲಿದ್ದಾರೆ. ಮಧ್ಯಾಹ್ನ 1.30 ಗಂಟೆಗೆ …
Read More »