Breaking News

ಡಾ. ಅಂಬೇಡ್ಕರ್ ರೂಪದ ಗಣೇಶ ಮೂರ್ತಿಗೆ ವಿರೋಧ

(ಕೊಪ್ಪಳ ಜಿಲ್ಲೆ): ಗಂಗಾವತಿಯ ಅಂಬೇಡ್ಕರ್ ನಗರದಲ್ಲಿ ವಿನಾಯಕ ಸ್ನೇಹವೃಂದ ಯುವಕ ಮಂಡಳಿ ಪ್ರತಿಷ್ಠಾಪಿಸಿರುವ ಡಾ. ಅಂಬೇಡ್ಕರ್ ರೂಪದ ಗಣೇಶ ಮೂರ್ತಿಗೆ ದಲಿತ ಒಕ್ಕೂಟಗಳು ವಿರೋಧ ವ್ಯಕ್ತಪಡಿಸಿವೆ. ಸಂಘಟಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಗುರುವಾರ ಪೊಲೀಸ್ ಠಾಣೆ ಮೆಟ್ಟಿಲೇರಿವೆ.   ‘ಅಂಬೇಡ್ಕರ್ ಅವರ ರೂಪ ಹೋಲುವ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ್ದು ಸರಿಯಲ್ಲ. ಇದರಿಂದ ಅವರ ಘನತೆಗೆ ಧಕ್ಕೆ ಉಂಟಾಗಿದೆ. ಮೂರ್ತಿಯನ್ನು ಕೊನೆಯದಾಗಿ ನೀರಿಗೆ ವಿಸರ್ಜನೆ ಮಾಡಲಾಗುತ್ತದೆ. ಇದು ಸಂವಿಧಾನ ಶಿಲ್ಪಿಗೆ ಮಾಡಿದ …

Read More »

ಮುರುಘಾ ಮಠದ ಆಡಳಿತಾಧಿಕಾರಿ ಹುದ್ದೆಯಿಂದ ಬಸವರಾಜನ್‌ ವಜಾ

ಚಿತ್ರದುರ್ಗ: ಷರತ್ತುಗಳನ್ನು ಉಲ್ಲಂಘಿಸಿ ಮಠ ಹಾಗೂ ಪೀಠಾಧಿಪತಿ ಘನತೆ, ಗೌರವಕ್ಕೆ ಧಕ್ಕೆ ತರಲು ಒಳಸಂಚು ರೂಪಿಸಿದ ಆರೋಪದ ಮೇರೆಗೆ ಮಾಜಿ ಶಾಸಕ ಎಸ್‌.ಕೆ.ಬಸವರಾಜನ್‌ ಅವರನ್ನು ಮುರುಘಾ ಮಠದ ಆಡಳಿತಾಧಿಕಾರಿ ಮತ್ತು ಎಸ್‌ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಹುದ್ದೆಯಿಂದ ವಜಾ ಮಾಡಲಾಗಿದೆ.   ಮಾರ್ಚ್‌ 7ರಂದು ಅವರು ಈ ಹುದ್ದೆಗೆ ನೇಮಕಗೊಂಡಿದ್ದರು. ಈ ವೇಳೆ ಬಸವರಾಜನ್‌ ಅವರಿಗೆ 8ಕ್ಕೂ ಹೆಚ್ಚು ಷರತ್ತುಗಳನ್ನು ವಿಧಿಸಲಾಗಿತ್ತು. 2007ರಲ್ಲಿಯೂ ಇವರನ್ನು ಇದೇ ಹುದ್ದೆಯಿಂದ ಕಿತ್ತುಹಾಕಲಾಗಿತ್ತು. ‘ಲಿಂಗಾಯತ-ವೀರಶೈವ ಮತ್ತು …

Read More »

ಹಣಕ್ಕಾಗಿ ಸರ್ಕಾರಿ ನೌಕರಳ ಅಪಹರಣ: ನಾಲ್ವರ ಬಂಧನ

ವಿಜಯಪುರ: ಹಣದ ಆಸೆಗಾಗಿ ಸರ್ಕಾರಿ ಉದ್ಯೋಗಿನಿಯನ್ನು ಅಪಹರಣ ಮಾಡಿ 5 ಲಕ್ಷ ರೂ. ಗೆ ಬೇಡಿಕೆ ಇಟ್ಟಿದ್ದ ಪ್ರಕರಣದಲ್ಲಿ ಜಿಲ್ಲೆಯ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಾಗರ ಜುಮ್ಮನಗೋಳ, ಶಿವಾಜಿ ಉಪ್ಪಾರ, ಆಕಾಶ ವೀರಕರ, ಆದರ್ಶ ಕೊಟ್ಯಾಳ ಬಂಧಿತ ಆರೋಪಿಗಳು. ಇಂಡಿ ಪಟ್ಟಣದಲ್ಲಿ ಸರ್ಕಾರಿ ಇಲಾಖೆಯಲ್ಲಿ ಕೆಲಸ ಮಾಡುವ ವಿಜಯಪುರ ನಗರ ನಿವಾಸಿ ಲಕ್ಷ್ಮೀ ಜಗದೀಶ ಸೊನ್ನದ ಎಂಬ ನೌಕರಳು ಅಪಹರಣಕ್ಕೊಳಗಾದವರು. ಆ.22 ರಂದು ಕೆಲಸ ಮುಗಿಸಿ ವಿಜಯಪುರ ನಗರಕ್ಕೆ …

Read More »

ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ: ಮುರುಘಾ ಶ್ರೀಗಳಿಗೆ 14 ದಿನ ನ್ಯಾಯಾಂಗ ಬಂಧನ

ಚಿತ್ರದುರ್ಗ: ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕಳೆದ ರಾತ್ರಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್​ ನ್ಯಾಯಾಲಯದ ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ವಿವರ: ಗುರುವಾರ ತಡರಾತ್ರಿ ಪೊಲೀಸರು ಶ್ರೀಗಳನ್ನು ಬಂಧಿಸಿದ್ದು, ಕಾನೂನು ಪ್ರಕಾರ ವೈದ್ಯಕೀಯ ಪರೀಕ್ಷೆ ನಡೆಸಿದರು. ಇದಾದ ಬಳಿಕ ಚಿತ್ರದುರ್ಗ ಜಿಲ್ಲಾ ನ್ಯಾಯಾಧೀಶೆ ಕೋಮಲಾ ಅವರ ಮುಂದೆ ಹಾಜರುಪಡಿಸಲಾಗಿತ್ತು. ಕೋರ್ಟ್‌ ಶ್ರೀಗಳನ್ನು ಹದಿನಾಲ್ಕು ದಿನಗಳ ಕಾಲ …

Read More »

ಗಣಪನಿಗೂ ಬಂತು ಆಧಾರ್‌ ಕಾರ್ಡ್‌!: ಇದರಲ್ಲಿದೆ ವಿನಾಯಕನ ಜನ್ಮ ದಿನಾಂಕ, ವಿಳಾಸ!

ಜಾರ್ಖಂಡ್‌: ವಿಘ್ನ ನಿವಾರಕನ ಮೂರ್ತಿಯನ್ನು ಒಂದೊಂದು ಪ್ರದೇಶದಲ್ಲಿ ವಿಭಿನ್ನ ವಿನ್ಯಾಸದೊಂದಿಗೆ ರಚಿಸಿ ಗಣೇಶ ಚತುರ್ಥಿ ಆಚರಿಸಲಾಗುತ್ತದೆ. ಜಾರ್ಖಂಡ್‌ನ ಜೆಮ್‌ಶೇಡ್‌ಪುರದಲ್ಲಿ ಜನರು ಗಣೇಶನಿಗೆ ದೊಡ್ಡ ಗಾತ್ರದ ಆಧಾರ್‌ ಕಾರ್ಡ್‌ ಅನ್ನು ಸಿದ್ದಪಡಿಸಿ ಗಮನ ಸೆಳೆದಿದ್ದಾರೆ.   ಈ ಆಧಾರ್‌ ಕಾರ್ಡ್‌ನಲ್ಲಿರುವ ಬಾರ್‌ಕೋಡ್ ಅನ್ನು ಸ್ಕ್ಯಾನ್ ಮಾಡಿದಾಗ ಗಣೇಶನ ಚಿತ್ರಗಳ ಗೂಗಲ್ ಲಿಂಕ್ ಪರದೆಯ ಮೇಲೆ ತೆರೆಯುತ್ತದೆ. ಅದರಲ್ಲಿ ನಮೂದಿಸಲಾದ ವಿಳಾಸವು ಶ್ರೀ ಗಣೇಶ್ S/o ಮಹಾದೇವ್, ಕೈಲಾಶ್ ಪರ್ವತದ ತುದಿ, ಮಾನಸರೋವರ, ಕೈಲಾಸ …

Read More »

ಹಣಕ್ಕಾಗಿ ಸರ್ಕಾರಿ ನೌಕರಳ ಅಪಹರಣ: ನಾಲ್ವರ ಬಂಧನ

ವಿಜಯಪುರ: ಹಣದ ಆಸೆಗಾಗಿ ಸರ್ಕಾರಿ ಉದ್ಯೋಗಿನಿಯನ್ನು ಅಪಹರಣ ಮಾಡಿ 5 ಲಕ್ಷ ರೂ. ಗೆ ಬೇಡಿಕೆ ಇಟ್ಟಿದ್ದ ಪ್ರಕರಣದಲ್ಲಿ ಜಿಲ್ಲೆಯ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಾಗರ ಜುಮ್ಮನಗೋಳ, ಶಿವಾಜಿ ಉಪ್ಪಾರ, ಆಕಾಶ ವೀರಕರ, ಆದರ್ಶ ಕೊಟ್ಯಾಳ ಬಂಧಿತ ಆರೋಪಿಗಳು. ಇಂಡಿ ಪಟ್ಟಣದಲ್ಲಿ ಸರ್ಕಾರಿ ಇಲಾಖೆಯಲ್ಲಿ ಕೆಲಸ ಮಾಡುವ ವಿಜಯಪುರ ನಗರ ನಿವಾಸಿ ಲಕ್ಷ್ಮೀ ಜಗದೀಶ ಸೊನ್ನದ ಎಂಬ ನೌಕರಳು ಅಪಹರಣಕ್ಕೊಳಗಾದವರು. ಆ.22 ರಂದು ಕೆಲಸ ಮುಗಿಸಿ ವಿಜಯಪುರ ನಗರಕ್ಕೆ …

Read More »

ಚೌತಿ ಮೆರವಣಿಗೆ ವೇಳೆ ಮಸೀದಿ ಆವರಣಕ್ಕೆ ಬಣ್ಣ ಎರಚಿದ ಯೋಧ; ಸೈನಿಕನ ಬಂಧನ, ಪ್ರಕರಣ ದಾಖಲು..

ಬಾಗಲಕೋಟೆ: ಚತುರ್ಥಿ ಪ್ರಯುಕ್ತ ಗಣೇಶ ಮೂರ್ತಿ ಪ್ರತಿಷ್ಠಾಪನಾ ಮೆರವಣೆಗೆ ಸಂದರ್ಭದಲ್ಲಿ ಯೋಧನೊಬ್ಬ ಮಸೀದಿಯೊಂದರ ಆವರಣಕ್ಕೆ ಬಣ್ಣ ಎರಚಿದ್ದು, ಪೊಲೀಸರು ಆತನನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ.   ಆನಂದ ಕುದುರಿಕಾರ ಬಂಧಿತ ಯೋಧ. ಈತ ಮರಾಠಾ ಲೈನ್ ಇನ್​ಫ್ಯಾಂಟ್ರಿ ಬೆಳಗಾವಿಯಲ್ಲಿ ಸೇವೆ ಸಲ್ಲಿಸುತ್ತಿದ್ದು, ರಜೆ ಮೇಲೆ ಊರಿಗೆ ಬಂದಿದ್ದಾಗ ಈ ಕೃತ್ಯವೆಸಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಬಾಗಲಕೋಟೆ ಪೊಲೀಸರು ಸೈನಿಕನನ್ನು ಬಂಧಿಸಿದ್ದಾರೆ. ಬಾಗಲಕೋಟೆ ನಗರದ ಕಿಲ್ಲಾ ಓಣಿಯಲ್ಲಿ …

Read More »

ಪೊಲೀಸ್ ಪೇದೆ ಹುದ್ದೆಗೆ ಜೆಒಸಿ, ಐಟಿಐನವರೂ ಅರ್ಜಿ ಸಲ್ಲಿಸಬಹುದು!

ಮೈಸೂರು: ನಿರುದ್ಯೋಗಿ ಯುವಜನರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಇಷ್ಟು ದಿನ ಪೊಲೀಸ್ ಪೇದೆ ನೇಮಕಾತಿಗೆ ಕೇವಲ ಪಿಯುಸಿ ಪಾಸಾದವರು ಮಾತ್ರ ಅರ್ಜಿ ಸಲ್ಲಿಸಬಹುದಿತ್ತು. ಈಗ ಸರ್ಕಾರ ನಿಯಮಕ್ಕೆ ತಿದ್ದುಪಡಿ ತಂದಿದ್ದು, ಇನ್ನು ಮುಂದೆ ಡಿಪ್ಲೊಮಾ, ಜೆಒಸಿ ಮತ್ತು ಐಟಿಐ ಪಾಸಾದವರೂ ಅರ್ಜಿ ಸಲ್ಲಿಸಬಹುದಾಗಿದೆ.   ಈ ಅಭ್ಯರ್ಥಿಗಳು ಕಡ್ಡಾಯವಾಗಿ ಒಂದು ಭಾಷೆ ಅಥವಾ ವಿಷಯದಲ್ಲಿ ತೇರ್ಗಡೆ ಹೊಂದಿರಬೇಕು ಎಂದು ಡಿಜಿಪಿ ಕಮಲ್ ಪಂತ್ ಆದೇಶಿಸಿದ್ದಾರೆ

Read More »

ಎಡಿಜಿಪಿ ಅವರೇ ಯಾವ ದೇಶದಲ್ಲಿ ಇದ್ದೀವಿ ನಾವು; ಅಲೋಕ್‌ ಕುಮಾರ್‌ ಹೇಳಿಕೆಗೆ ಮುತಾಲಿಕ್‌ ಖಂಡನೆ

ಹುಬ್ಬಳ್ಳಿ: ಗಣೇಶೋತ್ಸವ ಮಂಟಪದಲ್ಲಿ ಸಾವರ್ಕರ್‌ ಫೋಟೋ ವಿಚಾರವಾಗಿ ಎಡಿಜಿಪಿ ಅಲೋಕ್‌ ಕುಮಾರ್‌ ಹೇಳಿಕೆ ನೀಡಿದ್ದು, ಸ್ಥಳೀಯ ಸಂಸ್ಥೆಗಳ ಅನುಮತಿ ಬೇಕು ಎಂದಿದ್ದರು. ಇದಕ್ಕೆ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಎಡಿಜಿಪಿ ಅವರೇ ಯಾವ ದೇಶದಲ್ಲಿ ಇದ್ದೀವಿ ನಾವು? ೭೫ ವರ್ಷಗಳಾಗಿವೆ ನಮಗೆ ಸ್ವಾತಂತ್ರ್ಯ ಬಂದು. ಸ್ವಾತಂತ್ರ್ಯ ಸಿಗಬೇಕಾದ್ರೆ ತಿಲಕ್‌, ಸಾವರ್ಕರ್‌ ಕಾರಣ ಎಂದು ಗೊತ್ತಿಲ್ವಾ? ಎಲ್ಲದಕ್ಕೂ ಪರ್ಮಿಷನ್‌ ತೆಗೆದುಕೊಳ್ಳಬೇಕಾ? ಎಂದು ಅಲೋಕ್‌ ಕುಮಾರ್‌ ಪ್ರಶ್ನೆ …

Read More »

ಮುರುಘಾ ಶ್ರೀ’ಗಳಿಗೆ ಪೊಲೀಸರಿಂದ ‘ಲುಕ್ ಔಟ್ ನೋಟಿಸ್’ ಜಾರಿ |

ಚಿತ್ರದುರ್ಗ: ಬಾಲಕಿಯರ ಮೇಲೆ ಲೌಂಗಿಕ ದೌರ್ಜನ್ಯ ಆರೋಪದಲ್ಲಿ ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರ ವಿರುದ್ಧ ಪೋಕ್ಸೋ ( POSCO ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಇದೀಗ ಪೊಲೀಸರು ಮುರುಘಾಶ್ರೀಗಳಿಗೆ ಲುಕ್ ಔಟ್ ನೋಟಿಸ್ ( Lookout Notice ) ಜಾರಿಗೊಳಿಸಿದ್ದಾರೆ.     ಈ ಸಂಬಂಧ ಮುರುಘಾ ಶ್ರೀಗಳಿಗೆ ಪೋಕ್ಸೋ ಕಾಯ್ದೆಯಡಿ ದಾಖಲಾದಂತ ಪ್ರಕರಣ ಸಂಬಂಧ ಡಿವೈಎಸ್ಪಿ ಅನಿಲ್ ಅವರು, ಲುಕ್ ಔಟ್ ನೋಟಿಸ್ ಅನ್ನು …

Read More »