ಬಾಗಲಕೋಟೆ: ಚತುರ್ಥಿ ಪ್ರಯುಕ್ತ ಗಣೇಶ ಮೂರ್ತಿ ಪ್ರತಿಷ್ಠಾಪನಾ ಮೆರವಣೆಗೆ ಸಂದರ್ಭದಲ್ಲಿ ಯೋಧನೊಬ್ಬ ಮಸೀದಿಯೊಂದರ ಆವರಣಕ್ಕೆ ಬಣ್ಣ ಎರಚಿದ್ದು, ಪೊಲೀಸರು ಆತನನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ. ಆನಂದ ಕುದುರಿಕಾರ ಬಂಧಿತ ಯೋಧ. ಈತ ಮರಾಠಾ ಲೈನ್ ಇನ್ಫ್ಯಾಂಟ್ರಿ ಬೆಳಗಾವಿಯಲ್ಲಿ ಸೇವೆ ಸಲ್ಲಿಸುತ್ತಿದ್ದು, ರಜೆ ಮೇಲೆ ಊರಿಗೆ ಬಂದಿದ್ದಾಗ ಈ ಕೃತ್ಯವೆಸಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಬಾಗಲಕೋಟೆ ಪೊಲೀಸರು ಸೈನಿಕನನ್ನು ಬಂಧಿಸಿದ್ದಾರೆ. ಬಾಗಲಕೋಟೆ ನಗರದ ಕಿಲ್ಲಾ ಓಣಿಯಲ್ಲಿ …
Read More »ಪೊಲೀಸ್ ಪೇದೆ ಹುದ್ದೆಗೆ ಜೆಒಸಿ, ಐಟಿಐನವರೂ ಅರ್ಜಿ ಸಲ್ಲಿಸಬಹುದು!
ಮೈಸೂರು: ನಿರುದ್ಯೋಗಿ ಯುವಜನರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಇಷ್ಟು ದಿನ ಪೊಲೀಸ್ ಪೇದೆ ನೇಮಕಾತಿಗೆ ಕೇವಲ ಪಿಯುಸಿ ಪಾಸಾದವರು ಮಾತ್ರ ಅರ್ಜಿ ಸಲ್ಲಿಸಬಹುದಿತ್ತು. ಈಗ ಸರ್ಕಾರ ನಿಯಮಕ್ಕೆ ತಿದ್ದುಪಡಿ ತಂದಿದ್ದು, ಇನ್ನು ಮುಂದೆ ಡಿಪ್ಲೊಮಾ, ಜೆಒಸಿ ಮತ್ತು ಐಟಿಐ ಪಾಸಾದವರೂ ಅರ್ಜಿ ಸಲ್ಲಿಸಬಹುದಾಗಿದೆ. ಈ ಅಭ್ಯರ್ಥಿಗಳು ಕಡ್ಡಾಯವಾಗಿ ಒಂದು ಭಾಷೆ ಅಥವಾ ವಿಷಯದಲ್ಲಿ ತೇರ್ಗಡೆ ಹೊಂದಿರಬೇಕು ಎಂದು ಡಿಜಿಪಿ ಕಮಲ್ ಪಂತ್ ಆದೇಶಿಸಿದ್ದಾರೆ
Read More »ಎಡಿಜಿಪಿ ಅವರೇ ಯಾವ ದೇಶದಲ್ಲಿ ಇದ್ದೀವಿ ನಾವು; ಅಲೋಕ್ ಕುಮಾರ್ ಹೇಳಿಕೆಗೆ ಮುತಾಲಿಕ್ ಖಂಡನೆ
ಹುಬ್ಬಳ್ಳಿ: ಗಣೇಶೋತ್ಸವ ಮಂಟಪದಲ್ಲಿ ಸಾವರ್ಕರ್ ಫೋಟೋ ವಿಚಾರವಾಗಿ ಎಡಿಜಿಪಿ ಅಲೋಕ್ ಕುಮಾರ್ ಹೇಳಿಕೆ ನೀಡಿದ್ದು, ಸ್ಥಳೀಯ ಸಂಸ್ಥೆಗಳ ಅನುಮತಿ ಬೇಕು ಎಂದಿದ್ದರು. ಇದಕ್ಕೆ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಎಡಿಜಿಪಿ ಅವರೇ ಯಾವ ದೇಶದಲ್ಲಿ ಇದ್ದೀವಿ ನಾವು? ೭೫ ವರ್ಷಗಳಾಗಿವೆ ನಮಗೆ ಸ್ವಾತಂತ್ರ್ಯ ಬಂದು. ಸ್ವಾತಂತ್ರ್ಯ ಸಿಗಬೇಕಾದ್ರೆ ತಿಲಕ್, ಸಾವರ್ಕರ್ ಕಾರಣ ಎಂದು ಗೊತ್ತಿಲ್ವಾ? ಎಲ್ಲದಕ್ಕೂ ಪರ್ಮಿಷನ್ ತೆಗೆದುಕೊಳ್ಳಬೇಕಾ? ಎಂದು ಅಲೋಕ್ ಕುಮಾರ್ ಪ್ರಶ್ನೆ …
Read More »ಮುರುಘಾ ಶ್ರೀ’ಗಳಿಗೆ ಪೊಲೀಸರಿಂದ ‘ಲುಕ್ ಔಟ್ ನೋಟಿಸ್’ ಜಾರಿ |
ಚಿತ್ರದುರ್ಗ: ಬಾಲಕಿಯರ ಮೇಲೆ ಲೌಂಗಿಕ ದೌರ್ಜನ್ಯ ಆರೋಪದಲ್ಲಿ ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರ ವಿರುದ್ಧ ಪೋಕ್ಸೋ ( POSCO ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಇದೀಗ ಪೊಲೀಸರು ಮುರುಘಾಶ್ರೀಗಳಿಗೆ ಲುಕ್ ಔಟ್ ನೋಟಿಸ್ ( Lookout Notice ) ಜಾರಿಗೊಳಿಸಿದ್ದಾರೆ. ಈ ಸಂಬಂಧ ಮುರುಘಾ ಶ್ರೀಗಳಿಗೆ ಪೋಕ್ಸೋ ಕಾಯ್ದೆಯಡಿ ದಾಖಲಾದಂತ ಪ್ರಕರಣ ಸಂಬಂಧ ಡಿವೈಎಸ್ಪಿ ಅನಿಲ್ ಅವರು, ಲುಕ್ ಔಟ್ ನೋಟಿಸ್ ಅನ್ನು …
Read More »ಮುರುಘಾ ಶ್ರೀ ವಿರುದ್ಧದ ಕೇಸ್ ಸಿಬಿಐಗೆ ವಹಿಸಿ: ಬೆಳಗಾವಿಯಲ್ಲಿ ರಾಜ್ಯ ಉಪ್ಪಾರ ಮಹಾಸಭಾ ಆಗ್ರಹ
ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಕೇಸ್‍ನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ ವತಿಯಿಂದ ಬೆಳಗಾವಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಶರಣರು ಹಾಗೂ ಇನ್ನಿತರರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿದೆ. ಈ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಅಲ್ಲದೇ ಇಬ್ಬರು ಅಪ್ರಾಪ್ತ ಬಾಲಕಿಯರಲ್ಲಿ …
Read More »ಘನತ್ಯಾಜ್ಯ ನಿರ್ವಹಣೆ: ಜಿಲ್ಲಾ ಮಟ್ಟದ ಸಭೆ: ಘನತ್ಯಾಜ್ಯ ವಿಲೇವಾರಿಗೆ ವೈಜ್ಞಾನಿಕ ಪದ್ಧತಿ ಅಳವಡಿಸಿ
ದಿನನಿತ್ಯ ಹಸಿ ಕಸ, ಒಣ ಕಸ, ಇ-ಕಸ, ಹಾನಿಕಾರಕ ಕಸ ಸೇರಿದಂತೆ ಹಲವಾರು ರೀತಿಯ ಕಸವನ್ನು ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದಿಸುತ್ತಿದ್ದೇವೆ. ಪ್ರಸ್ತುತ ಕಸ ವಿಲೇವಾರಿ ಒಂದು ಸವಾಲಿನ ಕೆಲಸವಾಗಿದೆ. ಇದನ್ನು ಸಮರ್ಪಕವಾಗಿ ನಿರ್ವಹಿಸವ ನಿಟ್ಟಿನಲ್ಲಿ ಎಲ್ಲ ಬಗೆಯ ಕಸಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಕೆಲಸಕ್ಕೆ ಎಲ್ಲ ಅಧಿಕಾರಿಗಳು ಕೈಜೋಡಿಸಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ ರಾಜ್ಯಮಟ್ಟದ ಸಮಿತಿ ಅಧ್ಯಕ್ಷರಾದ ಸುಭಾಷ್ ಆಡಿ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ …
Read More »K.S.R.T.C. ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ 8ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಚಾಲಕನ ನಿಯಂತ್ರಣ ತಪ್ಪಿ ಕೆಎಸ್‍ಆರ್‍ಟಿಸಿ ಬಸ್ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಗೋಕಾಕ್ ತಾಲೂಕಿನ ಕೊಳವಿ ಗ್ರಾಮದ ಬಳಿ ಸಂಭವಿಸಿದೆ. 17 ಜನ ಪ್ರಯಾಣಿಕರು ಈ ಕೆಎಸ್‍ಆರ್‍ಟಿಸಿ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದರು. ಏಕಾಏಕಿ ಬಸ್ ರಸ್ತೆ ಬಿಟ್ಟು ಕೆಳಗೆ ಇಳಿಯುತ್ತಿದ್ದಂತೆ ಪ್ರಯಾಣಿಕರು ತುಂಬಾ ವಿಚಲಿತರಾದರು. ಈ ವೇಳೆ ಬಸ್‍ನಲ್ಲಿ ಹ್ಯಾಂಡಲ್, ಕಿಡಕಿ ಆಂಗಲ್ ಬಡಿದು 8 ಪ್ರಯಾಣಿಕರಿಗೆ ಗಾಯವಾಗಿದೆ. ಓರ್ವ ಪ್ರಯಾಣಿಕರ ಕೈ ಮುರಿದಿದ್ದು, ಇನ್ನುಳಿದ ಪ್ರಯಾಣಿಕರಿಗೆ ಸಣ್ಣ …
Read More »ಡಿಸೆಂಬರ್ ತಿಂಗಳಲ್ಲಿ 108 ಅಡಿ ಎತ್ತರದ ಕೆಂಪೇಗೌಡರ ಪ್ರತಿಮೆ ಅನಾವರಣ
ಬೆಂಗಳೂರು: ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು ನವೆಂಬರ್ ಅಂತ್ಯ ಅಥವಾ ಡಿಸೆಂಬರ್ ತಿಂಗಳಲ್ಲಿ “ಸ್ಟ್ಯಾಚು ಆಫ್ ಪ್ರಾಸ್ಪರಿಟಿ” (ಪ್ರಗತಿ ಪ್ರತಿಮೆ) ಅನಾವರಣಗೊಳ್ಳುವ ಸಾಧ್ಯತೆಯಿದೆ. ಅಂತಾರಾಷ್ಟ್ರೀಯ ಮಟ್ಟದ ಪ್ರವಾಸಿ ಕೇಂದ್ರವಾಗಿಸುವ ರೀತಿ ಕೆಂಪೇಗೌಡ ಪ್ರತಿಮೆ ಹಾಗೂ ಥೀಮ್ ಪಾರ್ಕ್ ನಿರ್ಮಾಣಕ್ಕೆ ರಾಜ್ಯ ಸರಕಾರ ಯೋಜನೆ ರೂಪಿಸಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಅವರು ಇಂದು 45 ದಿನಗಳ ಉದ್ಘಾಟನಾ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. …
Read More »ನವೆಂಬರ್ 2ರಂದು ಕೆಂಪೇಗೌಡರ ಪ್ರತಿಮೆ ಉದ್ಘಾಟನೆಗೆ ಮೋದಿ ಆಗಮನ: ಸಿಎಂ ಬೊಮ್ಮಾಯಿ ಮಾಹಿತಿ
ಬೆಂಗಳೂರು: ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಾಣ ಹಂತದಲ್ಲಿರುವ ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ನವೆಂಬರ್ 2 ರಂದು ಪ್ರಧಾನಿ ಮೋದಿ ಉದ್ಘಾಟನೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಾಡಪ್ರಭು ಕೆಂಪೇಗೌಡ ಥೀಮ್ ಪಾರ್ಕ್ ಅಭಿವೃದ್ಧಿ ಭೂಮಿ ಪೂಜೆಗೆ ತೆರಳಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೋಮ್‌ನಲ್ಲಿ ಅಲೆಗ್ಸಾಂಡರ್ ಗೆ ಅರಿಸ್ಟಾಟಲ್ ಪಾಠ ಹೇಳಿದ ಜಾಗವೆಂದು ಒಂದು ಕಲ್ಲಿಟ್ಟು ಇತಿಹಾಸ ಹೇಳುತ್ತಾರೆ. ಆದರೆ ನಮ್ಮಲ್ಲಿ ಅದಕ್ಕಿಂದ ದೊಡ್ಡ ಇತಿಹಾಸವಿದೆ. …
Read More »ರಾಜ್ಯಕ್ಕೆ ಉತ್ತರ ಪ್ರದೇಶ ಸಿಎಂ ಯೋಗಿ
ಬೆಂಗಳೂರು: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಒಂದು ದಿನದ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ನೆಲಮಂಗಲ ಬಳಿ ಇರುವ ಧರ್ಮಸ್ಥಳದ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿರುವ ಅವರು, ಕ್ಷೇಮವನ ಉದ್ಘಾಟನೆ ಮಾಡಿದ್ದಾರೆ. ರಾಜ್ಯಸಭಾ ಸದಸ್ಯರಾಗಿ ಹೊಸದಾಗಿ ನೇಮಕಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಅವರ ಮನವಿ ಮೇರೆಗೆ ಯುಪಿ ಸಿಎಂ ರಾಜ್ಯಕ್ಕೆ ಆಗಮಿಸಿದ್ದಾರೆ. ಬೆಳಗ್ಗೆ ಉತ್ತರ ಪ್ರದೇಶದಿಂದ ಹೊರಟು 11.30ಕ್ಕೆ ಬೆಂಗಳೂರಿನ …
Read More »