Breaking News

ಭ್ರಷ್ಟರನ್ನು ರಸ್ತೆಗೆ ತರುತ್ತೇವೆಂದು ಮೋದಿ ಹೇಳಿದ್ದರು.:ಭಾರತ್ ಜೋಡೋ ಯಾತ್ರೆ ಟೀಕಿಸಿದ ಯತ್ನಾಳ್

ವಿಜಯಪುರ: ದೇಶದಲ್ಲಿ ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಕುರಿತು ಲೇವಡಿ ಮಾಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಪ್ರಧಾನಿ ಮೋದಿ ಅವರು ಹೇಳಿದಂತೆ ಸೋನಿಯಾ, ರಾಹುಲ್ ಕಾಂಗ್ರೆಸ್ ಮುಖಂಡರನ್ನು ಬೀದಿಗೆ ತಂದಿದ್ದಾರೆ ಎಂದರು. ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಬಿಜೆಪಿಯ ಮೇಲೆ ಯಾವ ಪರಿಣಾಮ ಸಹ ಬೀರುವುದಿಲ್ಲ. ಇದರಿಂದ ಇನ್ನೂ ಒಳ್ಳೆಯದ್ದೇ ಆಗಿದೆ. ಅವರ ಬಣ್ಣ ಬಯಲು‌ ಮಾಡಿದೆ …

Read More »

ಉದ್ಘಾಟನೆಯಾಗದ ಸ್ಮಾರ್ಟ್ ಸಿಟಿ ಮೀನು ಮಾರುಕಟ್ಟೆ

ಯಾವುದೇ ಕಾಮಗಾರಿಗಳಿಗಾಗಲಿ.. ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಆರಂಭದಲ್ಲಿ ಇರುವ ಉತ್ಸಾಹ ಕಾಮಗಾರಿ ಮುಗಿದ ಮೇಲೆ ಇರುವುದೇ ಇಲ್ಲ. ಇದಕ್ಕೆ ಧಾರವಾಡವೇನೂ ಹೊರತಾಗಿಲ್ಲ. ಕಾಮಗಾರಿಗೆ ಅನುಮೋದನೆ ದೊರೆತು, ಅದು ಮುಕ್ತಾಯವಾಗುವವರೆಗೂ ಅಧಿಕಾರಿಗಳು, ಜನಪ್ರತಿನಿಧಿಗಳು ನಿರಂತರವಾಗಿ ಅಲ್ಲಿಗೆ ಭೇಟಿ ನೀಡುತ್ತಲೇ‌ ಇರುತ್ತಾರೆ. ಯಾವಾಗ ಕಾಮಗಾರಿ ಮುಗಿಯುತ್ತದೋ, ಅವರು ಕೂಡ ಅಲ್ಲಿಗೆ ಬರುವುದನ್ನು ನಿಲ್ಲಿಸಿ ಬಿಡುತ್ತಾರೆ. ಇದಕ್ಕೆ ತಾಜಾ ಉದಾಹರಣೆ ಎಂದರೆ‌ ಹುಬ್ಬಳ್ಳಿಯಲ್ಲಿ ನಿರ್ಮಿಸಲಾಗಿರುವ ಮೀನು ಮಾರುಕಟ್ಟೆ. ಹುಬ್ಬಳ್ಳಿಯ ಗಣೇಶಪೇಟೆಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ …

Read More »

ಕಾಕತಿಯ ಲಕ್ಷ್ಮೀ ನಗರದಲ್ಲಿ ಬೆತ್ತಲೆಯಾಗಿ ಓಡಾಡುತ್ತಿದ್ದ ಮಾನಸಿಕ ಅಸ್ವಸ್ಥ

ಬೆಳಗಾವಿ ತಾಲೂಕಿನ ಕಾಕತಿಯ ಲಕ್ಷ್ಮೀ ನಗರದಲ್ಲಿ ಬೆತ್ತಲೆಯಾಗಿ ಓಡಾಡುತ್ತಿದ್ದ ಮಾನಸಿಕ ಅಸ್ವಸ್ಥನಿಗೆ ಡಿವೈನ್ ಹೆಲ್ಪಿಂಗ್ ಹ್ಯಾಂಡ್ಸ್ ಗ್ರೂಪ್‌ನ ಗಜಾನನ ಗವಾನೆ ಮಾನಸಿಕ ಅಸ್ವಸ್ಥನನ್ನು ಉಪಚರಿಸಿ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ಹೌದು ಇಂದು ಶನಿವಾರ ಬೆಳಗಾವಿ ತಾಲೂಕಿನ ಕಾಕತಿಯ ಲಕ್ಷ್ಮೀನಗರದಲ್ಲಿ ಮಾನಸಿಕ ಅಸ್ವಸ್ಥನೊಬ್ಬ ಬೆತ್ತಲೆಯಾಗಿ ಓಡಾಡುವ ಮೂಲಕ ಅವಾಂತರ ಎಸಗಿದ್ದಾನೆ. ಈ ವೇಳೆ ಡಿವೈನ್ ಹೆಲ್ಪಿಂಗ್ ಹ್ಯಾಂಡ್ಸ್ ಗ್ರೂಪ್ ನ ಗಜಾನನ ಗವಾನೆ ಅವರಿಗೆ ಆ ಭಾಗದ ಮಹಿಳೆಯರು ಹಾಗೂ …

Read More »

ಸವದತ್ತಿ ತಾಲೂಕಿನ ಕೆ.ಶಿವಾಪುರ ಗ್ರಾಮದಲ್ಲಿ ಸಂತೋಷ್ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ!

ಕೆ. ಶಿವಾಪುರ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಕೆ.ಶಿವಾಪುರ ಗ್ರಾಮದಲ್ಲಿ ಅಲ್ಲಾಯಪ್ ಮಸೀದಿಯ ಮುಂಭಾಗದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …

Read More »

ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಿ. ಆದರೆ ಡಾಲ್ಬಿಯನ್ನು ಉಪಯೋಗ ಮಾಡಬೇಡಿ ಎಂದ ಡಿಸಿಪಿ ರವೀಂದ್ರ ಗಡಾದಿ

ಮುಂಬರುವ ಕರ್ನಾಟಕ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಿ. ಆದರೆ ಡಾಲ್ಬಿಯನ್ನು ಉಪಯೋಗ ಮಾಡಬೇಡಿ ಎಂದು ಡಿಸಿಪಿ ರವೀಂದ್ರ ಗಡಾದಿ ಅವರು ಕನ್ನಡ ಸಂಘಟನೆಗಳಿಗೆ ಮನವಿ ಮಾಡಿಕೊಂಡರು. ಇಡೀ ರಾಜ್ಯದಲ್ಲಿಯೇ ನವೆಂಬರ್ 1ರಂದು ಬೆಳಗಾವಿಯಲ್ಲಿ ಅದ್ಧೂರಿಯಾಗಿ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಗುತ್ತದೆ. ಅಂದು ಬೆಳಗಾವಿಗೆ ರಾಜ್ಯದ ನಾನಾ ಮೂಲೆಗಳಿಂದ ಲಕ್ಷಾಂತರ ಜನರು ಆಗಮಿಸುತ್ತಾರೆ. ರಾಣಿ ಚನ್ನಮ್ಮಾಜಿ ವೃತ್ತದಲ್ಲಿ ಲಕ್ಷೋಪಲಕ್ಷ ಕನ್ನಡಿಗರು ಜಮಾಯಿಸಿ ಕನ್ನಡಮ್ಮನ ಜಾತ್ರೆಯಲ್ಲಿ ಮಿಂದೇಳುತ್ತಾರೆ. ಇನ್ನು ಅದ್ಧೂರಿ ರಾಜ್ಯೋತ್ಸವಕ್ಕೆ ಕ್ಷಣಗಣನೇ ಕೂಡ ಶುರುವಾಗಿದೆ. …

Read More »

ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ಕೊಳೆತ ಸ್ಥಿತಿಯಲ್ಲಿ ಯುವಕನೋರ್ವ ಶವ ಪತ್ತೆ

ಕೊಳೆತ ಸ್ಥಿತಿಯಲ್ಲಿ ಯುವಕನೋರ್ವ ಶವ ಪತ್ತೆಯಾಗಿರುವ ಘಟನೆ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ನಡೆದಿದೆ. ಸುನೀಲ ಸಾಳುಂಕೆ ಎಂಬ ಯುವಕನ ಶವ ಪತ್ತೆಯಾಗಿದೆ.ಕಳೆದ ರವಿವಾರ ಮುಂಜಾನೆ ರವಿವಾರದಂದು ಮುಂಜಾನೆ ಕೆಲಸಕ್ಕೆ ಹೋಗುತ್ತೇನೆ ಎಂದು ತಾಯಿಗೆ ಹೇಳಿ ಹೊಗಿದ್ದ ಸುನೀಲ ಇಂದು ಕರೋಶಿ ಗ್ರಾಮದ ಹೊರವಲಯದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.   ಸ್ಥಳಕ್ಕೆ ಚಿಕ್ಕೋಡಿ ಪೊಲೀಸ್’ರು ಭೇಟಿಯನ್ನು ನೀಡಿ ಪ್ರಕರಣದ ಕುರಿತು ತನಿಖೆಯನ್ನು ಕೈಗೆತ್ತಿಕೊಂಡಿದ್ದಾನೆ‌.ಚಿಕ್ಕೋಡಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More »

ಬಿಜೆಪಿ ಅಧಿಕಾರಕ್ಕೇರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: B.S.Y.

ಬೆಂಗಳೂರು: ಇಂದಿನ ಕಾರ್ಯಕ್ರಮ ಮುಂದಿನ ದಿನಗಳಲ್ಲಿ ನಡೆಯುವ ವಿಜಯದ ಯಾತ್ರೆಯಾಗಿದೆ. ಮುಂದೆ ಬರುವ ವಿಧಾನಸಭೆ ಚುನಾವಣೆಯಲ್ಲಿ 150 ಸೀಟು ಗೆದ್ದು ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಅಧಿಕಾರಕ್ಕೇರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಮತ್ತೆ ಅಧಿಕಾರಕ್ಕೆ ಬರಲಿದ್ದೇವೆ: ನಗರದ ಅರಮನೆ ಮೈದಾನದಲ್ಲಿ ನಡೆದ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ …

Read More »

ಧಗಧಗನೆ ಉರಿದ ಖಾಸಗಿ ಬಸ್​.. ಮಕ್ಕಳು ಸೇರಿ 14 ಮಂದಿ ಸಜೀವ ದಹನ

ನಾಸಿಕ್​(ಮಹಾರಾಷ್ಟ್ರ): ನಾಸಿಕ್​ಗೆ ಸಂಚರಿಸುತ್ತಿದ್ದ ಖಾಸಗಿ ಬಸ್​ಗೆ ಬೆಂಕಿ ಹೊತ್ತಿಕೊಂಡು ಮಕ್ಕಳು ಸೇರಿದಂತೆ 14 ಜನರು ಸಜೀವ ದಹನವಾದ ದಾರುಣ ಘಟನೆ ಇಂದು ಬೆಳಗಿನ ಜಾವ 4.30 ರ ಸುಮಾರಿಗೆ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದುರ್ಘಟನೆಗೀಡಾದ ಖಾಸಗಿ ಬಸ್​ ನಾಸಿಕ್​ಗೆ ಪಯಣಿಸುತ್ತಿತ್ತು. ಈ ವೇಳೆ ಬಸ್​ಗೆ ಬೆಂಕಿ ಹೊತ್ತಿಕೊಂಡಿದೆ. ಪ್ರಯಾಣಿಕರು ನಿದ್ರೆಯಯಲ್ಲಿದ್ದ ಕಾರಣ ಬಸ್​​ಗೆ ಬೆಂಕಿ ಹೊತ್ತಿಕೊಂಡಿದ್ದು, ಯಾರೂ ಗಮನಿಸಿಲ್ಲ. ಬೆಂಕಿ ಇಡೀ ಬಸ್​ಗೆ ಹೊತ್ತಿಕೊಂಡಿದ್ದು, ಜನರು ಹೊರಬರಲಾಗದೇ ಜ್ವಾಲೆಗೆ ಸಿಲುಕಿ …

Read More »

10 ಲಕ್ಷದ ಸೂಟು ಬೂಟು ಧರಿಸುವ ಮೋದಿ ಬಡವರಾ, ಪ್ಯಾಂಟ್​ ಟೀಶರ್ಟ್​ ಧರಿಸುವ ರಾಹುಲ್​ ಗಾಂಧಿ ಬಡವರಾ?’

ಗಂಗಾವತಿ(ಕೊಪ್ಪಳ): ಮೋದಿ ಯಾವ ಊರಲ್ಲಿ, ಯಾವ ಹೋಟೆಲ್​​, ಯಾವ ರೈಲ್ವೆ ನಿಲ್ದಾಣದಲ್ಲಿ ಚಹಾ ಮಾರಿದ್ದರು ಎಂಬುದನ್ನು ಬಿಜೆಪಿಗರು ಬಹಿರಂಗ ಪಡಿಸುತ್ತಿಲ್ಲ. ಸುಳ್ಳಿನ ಕಂತೆ ಹೆಣೆಯುವುದರಲ್ಲಿ ಬಿಜೆಪಿಗರು ನಿಸ್ಸೀಮರು. ಸುಳ್ಳಿನಿಂದಲೇ ಜನರಿಗೆ ಮಂಕುಬೂದಿ ಎರಚುತ್ತಿದ್ದಾರೆ ಎಂದು ಮಾಜಿ ಸಚಿವ ಶಿವರಾಜ ತಂಗಡಗಿ ಆರೋಪಿಸಿದರು. ನಗರದಲ್ಲಿ ಭಾರತ್​ ಜೋಡೋ ಯಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, 10 ಲಕ್ಷ ರೂ. ಮೌಲ್ಯದ ಸೂಟು-ಬೂಟು ಧರಿಸುವವರು ಬಡವರೋ ಅಥವಾ ಅಗರ್ಭ ಶ್ರೀಮಂತರಾಗಿದ್ದರೂ …

Read More »

ಸುಳೇಭಾವಿ ಗ್ರಾಮದಲ್ಲಿ ಡಬಲ್ ಮರ್ಡರ್: ಆರು ಜನ ವಶಕ್ಕೆ

ಬೆಳಗಾವಿ: ಸುಳೇಭಾವಿ ಗ್ರಾಮದಲ್ಲಿ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು‌ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಎಂ. ಬಿ ಬೋರಲಿಂಗಯ್ಯ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿನ್ನೆ ರಾತ್ರಿ 6 ರಿಂದ 7 ಜನರ ತಂಡದಿಂದ ಇಬ್ಬರ ಹತ್ಯೆ ಮಾಡಲಾಗಿತ್ತು. ನಾನು ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆಳಗಾವಿ ಗ್ರಾಮೀಣ ಎಸಿಪಿ ಗಿರೀಶ್, ಮಾರಿಹಾಳ ಸಿಪಿಐ ನೇತೃತ್ವದಲ್ಲಿ …

Read More »